ಸೋಮವಾರ, ಏಪ್ರಿಲ್ 7, 2025

ಅನಾಮಧೇಯ ಮೃತ ವ್ಯಕ್ತಿ ವಾರಸುದಾರರ ಪತ್ತೆಗೆ ಮನವಿ

ಬಳ್ಳಾರಿ,ಏ.07(ಕರ್ನಾಟಕ ವಾರ್ತೆ): ಬಳ್ಳಾರಿ ರೈಲ್ವೆ ನಿಲ್ದಾಣ ವ್ಯಾಪ್ತಿಯ ಹೊಸಪೇಟೆ ಮತ್ತು ಮುನಿರಾಬಾದ್ ರೈಲು ನಿಲ್ದಾಣಗಳ ಮಧ್ಯ ರೈಲ್ವೇ ಕೆ.ಎಂ.ನA. 139/00 ನ ಆಪ್ ಲೈನ್ ರೈಲು ಹಳಿಯಲ್ಲಿ ಅಂದಾಜು 50 ವಷÀðದ ಅನಾಮಧೇಯ ವ್ಯಕ್ತಿಯು ಏ.02 ರಂದು ಮೃತಪಟ್ಟಿದ್ದು, ಮೃತನ ವಾರಸುದಾರರ ಬಗ್ಗೆ ತಿಳಿದಿರುವುದಿಲ್ಲ. ಮೃತನ ವಾರಸುದಾರರ ಪತ್ತೆಗೆ ಸಹಕರಿಸಬೇಕು ಎಂದು ಬಳ್ಳಾರಿ ರೈಲ್ವೇ ಪೋಲಿಸ್ ಠಾಣೆಯ ಪೊಲೀಸ್ ಉಪ-ನಿರೀಕ್ಷಕರು ಮನವಿ ಮಾಡಿದ್ದಾರೆ. ಚಹರೆ ಗುರುತು: ಎತ್ತರ 5.6 ಅಡಿ, ಕೋಲು ಮುಖ, ಗೋಧಿ ಮೈಬಣ್ಣ, ಸಾಧಾರಣ ಮೈಕಟ್ಟು, ಉದ್ದ ಮೂಗು, ಅಗಲವಾದ ಹಣೆ ಹೊಂದಿದ್ದು, ಮೃತನ ತಲೆಯ ಮೇಲೆ 02 ಇಂಚು ಬಿಳಿ ಮತ್ತು ಕಪ್ಪು ಮಿಶ್ರಿತ ಕೂದಲು, ಮುಖದಲ್ಲಿ ಸಣ್ಣ ಮೀಸೆ ಇರುತ್ತದೆ. ಮೇಲ್ಕಂಡ ಚಹರೆ ಗುರುತುಗಳುಳ್ಳ ಮೃತ ವ್ಯಕ್ತಿಯ ವಾರಸುದಾರರ ಬಗ್ಗೆ ಮಾಹಿತಿ ಇದ್ದಲ್ಲಿ ಬಳ್ಳಾರಿ ರೈಲ್ವೆ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರ ಮೊ. 9480802131, ರಾಯಚೂರು ರೈಲ್ವೆ ಪೊಲೀಸ್ ವೃತ್ತದ ಪೊಲೀಸ್ ವೃತ್ತ ನಿರೀಕ್ಷಕರ ಮೊ.9480800471 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ