ಶುಕ್ರವಾರ, ಏಪ್ರಿಲ್ 25, 2025

ಜೋಳ ಖರೀದಿ: ಹೆಚ್ಚುವರಿ ನೋಂದಣಿ ಮತ್ತು ಖರೀದಿ ಕೇಂದ್ರ ಆರಂಭ

ಬಳ್ಳಾರಿ,ಏ.25(ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ 2024-25 ನೇ ಸಾಲಿನ ಹಿಂಗಾರು ಋತುವಿನಲ್ಲಿ ಬೆಳೆದ ಜೋಳವನ್ನು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ನೇರವಾಗಿ ಖರೀದಿಸಲು ಈಗಾಗಲೇ ತೀರ್ಮಾನಿಸಲಾಗಿದ್ದು, ಪ್ರಸ್ತುತ ಇರುವ 10 ಖರೀದಿ ಕೇಂದ್ರಗಳ ಜೊತೆಗೆ 02 ಹೆಚ್ಚುವರಿ ನೋಂದಣಿ ಮತ್ತು ಖರೀದಿ ಕೇಂದ್ರ ತೆರೆಯಲಾಗಿದೆ. *ಹೆಚ್ಚುವರಿ ರೈತ ನೋಂದಣಿ ಮತ್ತು ಖರೀದಿ ಕೇಂದ್ರ:* ಸಿರುಗುಪ್ಪ ತಾಲ್ಲೂಕಿನ ಮುದ್ದಟನೂರು ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಮತ್ತು ಅರಳಿಗನೂರು ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ. ಬೆAಬಲ ಬೆಲೆ ಯೋಜನೆ ಬಗ್ಗೆ ರೈತರಿಗೆ ಯಾವುದೇ ಸಮಸ್ಯೆಗಳಿದ್ದರೆ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳಿ ನಿಯಮಿತದ ಜಿಲ್ಲಾ ವ್ಯವಸ್ಥಾಪಕರು ಹಾಗೂ ತಾಲ್ಲೂಕಿನ ತಹಸಿಲ್ದಾರ್, ಕೃಷಿ ಅಧಿಕಾರಿ, ಎ.ಪಿ.ಎಂ.ಸಿ ಕಾರ್ಯದರ್ಶಿ, ರೈತ ಸಂಪರ್ಕ ಕೇಂದ್ರಗಳನ್ನು ಸಂಪರ್ಕಿಸಬಹುದು. ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳಿ ನಿಯಮಿತದ ಸೈಯದ್ ವಸೀಮ್ ಪಾಷ (ಮೊ.9449864453) ಗೆ ಸಂಪರ್ಕಿಸಬಹುದು ಎಂದು ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರಾದ ಸಕೀನ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ