ಸೋಮವಾರ, ಏಪ್ರಿಲ್ 21, 2025

ವ್ಯಕ್ತಿ ಕಾಣೆ: ಪತ್ತೆಗೆ ಮನವಿ

ಬಳ್ಳಾರಿ,ಏ.21(ಕರ್ನಾಟಕ ವಾರ್ತೆ): ನಗರದ ಬಿ.ಎಂ.ಡಿ ಶಾಲಾ ಹಿಂಭಾಗದ ರೆಡ್ಡಿ ಬೀದಿಯ ವಾರ್ಡ್ ನಂ.12ರ ನಿವಾಸಿಯಾದ ಎಸ್.ಶಿವಪ್ರಾಕಶ್ ಎನ್ನುವ 47 ವರ್ಷದ ವ್ಯಕ್ತಿಯು ಮಾ.27 ರಂದು ಕಾಣೆಯಾಗಿದ್ದು, ಈ ಕುರಿತು ರೈಲ್ವೇ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ರೈಲ್ವೇ ಪೊಲೀಸ್ ಠಾಣೆಯ ಉಪ ನಿರೀಕ್ಷಕರು ತಿಳಿಸಿದ್ದಾರೆ. ಚಹರೆ ಗುರುತು: ಅಂದಾಜು 5.4 ಅಡಿ ಎತ್ತರ, ದುಂಡು ಮುಖ, ಗೋಧಿ ಮೈಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದು, ಎಡಗಣ್ಣಿನಲ್ಲಿ ಪೊರೆ ಬಂದಿರುತ್ತದೆ. ಕಾಣೆಯಾದ ಸಂದರ್ಭದಲ್ಲಿ ನೀಲಿ ಬಣ್ಣದ ಅಂಗಿ ಮತ್ತು ಕಪ್ಪು ಬಣ್ಣದ ಪ್ಯಾಂಟ್ ಧರಿಸಿರುತ್ತಾನೆ. ಕನ್ನಡ ಮತ್ತು ತೆಲುಗು ಭಾಷೆ ಮಾತನಾಡುತ್ತಾನೆ. ವ್ಯಕ್ತಿಯ ಬಗ್ಗೆ ಸುಳಿವು ಸಿಕ್ಕಲ್ಲಿ ರೈಲ್ವೇ ಪೊಲೀಸ್ ಠಾಣೆಯ ದೂ.08392-276063, ಪಿಎಸ್ ಮೊ.948082131 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ