ಬುಧವಾರ, ಏಪ್ರಿಲ್ 23, 2025

ಅನಾಮಧೇಯ ಮೃತ ವ್ಯಕ್ತಿಯ ವಾರಸುದಾರರ ಪತ್ತೆಗೆ ಮನವಿ

ಬಳ್ಳಾರಿ,ಏ.23(ಕರ್ನಾಟಕ ವಾರ್ತೆ): ನಗರದ ಗಡಗಿ ಚೆನ್ನಪ್ಪ ವೃತ್ತದ ರಾಯಲ್ ಹೋಟೆಲ್ ಮುಂಭಾಗದ ಅಂದಾಜು 30-35 ವಷÀðದ ಅನಾಮದೇಯ ವ್ಯಕ್ತಿಯು ಯಾವುದೋ ಖಾಯಿಲೆಯಿಂದ ಬಳಲುತ್ತಿದ್ದು, ಅನಾರೋಗ್ಯದಿಂದ ಏ.19 ರಂದು ಮೃತಪಟ್ಟಿದ್ದು, ಮೃತನ ವಾರಸುದಾರರು ತಿಳಿದಿರುವುದಿಲ್ಲ. ಮೃತನ ವಾರಸುದಾರರ ಪತ್ತೆಗೆ ಸಹಕರಿಸಬೇಕು ಎಂದು ಬ್ರೂಸ್‌ಪೇಟೆ ಪೋಲಿಸ್ ಠಾಣೆಯ ಠಾಣಾಧಿಕಾರಿ ಮನವಿ ಮಾಡಿದ್ದಾರೆ. ಚಹರೆ ಗುರುತು: ಎತ್ತರ 5.5 ಅಡಿ, ದುಂಡು ಮುಖ, ಎಣ್ಣೆಗೆಂಪುü ಮೈಬಣ್ಣ, ತೆಳುವಾದ ಮೈಕಟ್ಟು ಹೊಂದಿದ್ದು, ಮೃತನ ತಲೆಯ ಮೇಲೆ ಕಪ್ಪು ಕೂದಲು ಮತ್ತು ಮುಖದಲ್ಲಿ ಕಪ್ಪು ಮೀಸೆ, ಉದ್ದನೆಯ ಗಡ್ಡ ಇರುತ್ತದೆ. ಬಿಳಿ-ಕಪ್ಪು ಹಾಗೂ ತಿಳಿ ಹಳದಿ ಬಣ್ಣದ ಶರ್ಟ್ ಮತ್ತು ಕಪ್ಪು ಬಣ್ಣದ ಪ್ಯಾಂಟ್ ಧರಿಸಿರುತ್ತಾನೆ. ಈ ಮೇಲ್ಕಂಡ ಚಹರೆ ಗುರುತುಗಳುಳ್ಳ ಮೃತ ವ್ಯಕ್ತಿಯ ವಾರಸುದಾರರ ಬಗ್ಗೆ ಮಾಹಿತಿ ಸಿಕ್ಕಲ್ಲಿ ಬ್ರೂಸ್‌ಪೇಟೆ ಪೋಲಿಸ್ ಠಾಣೆ ದೂ.08392-272022, ಪಿಎಸ್‌ಐ ಮೊ.9480803081 ಅಥವಾ ಕಂಟ್ರೋಲ್ ರೂಂ ದೂ.08392-258100,258102 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ---------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ