ಸೋಮವಾರ, ಏಪ್ರಿಲ್ 7, 2025
ಡೆಂಗ್ಯು; ಒಂದೇ ದಿನ ಜ್ವರ ಬಂದರೂ ನಿರ್ಲಕ್ಷಿö್ಯಸಿವಂತಿಲ್ಲ: ಡಾ.ಆರ್.ಅಬ್ದುಲ್ಲಾ
ಬಳ್ಳಾರಿ,ಏ.07(ಕರ್ನಾಟಕ ವಾರ್ತೆ):
ಸಾರ್ವಜನಿಕರು ಒಂದೇ ದಿನವು ಜ್ವರ ಬಂದರೂ ನಿಲ್ಯಕ್ಷಿö್ಯಸಬಾರದು, ಡೆಂಗ್ಯೂ ಜ್ವರವಿರಬಹುದು. ಹಾಗಾಗಿ ಸಮೀಪದ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಪರೀಕ್ಷಿಸಿಕೊಳ್ಳಬೇಕು ಎಂದು ಜಿಲ್ಲಾ ರೋಗವಾಹಕ ಆಶ್ರೀತ ರೋಗಗಳ ನಿಯಂತ್ರಣಾಧಿಕಾರಿ ಡಾ.ಆರ್.ಅಬ್ದುಲ್ಲಾ ಅವರು ಹೇಳಿದರು.
ಸೋಮವಾರದಂದು, ಬಳ್ಳಾರಿಯ ಜಾಗೃತಿ ನಗರದಲ್ಲಿ ವೈದ್ಯಕೀಯ ತಂಡದೊAದಿಗೆ ಮನೆ ಭೇಟಿ ನೀಡಿ ಅವರು ಮಾತನಾಡಿದರು.
ಇತ್ತೀಚೆಗೆ ಜಿಲ್ಲೆಯಾದ್ಯಂತ ಸುರಿದ ಅಕಾಲಿಕ ಮಳೆಯಿಂದ ತಗ್ಗು ಗುಂಡಿಗಳು ಸೇರಿದಂತೆ ಅಲ್ಲಲ್ಲಿ ನೀರು ನಿಲ್ಲುವುದರಿಂದ ಡೆಂಗ್ಯು ಹರಡುವ ಈಡಿಸ್ ಇಜಿಪ್ಟೆöÊ ಸೊಳ್ಳೆಯ ಸಂತತಿ ಹೆಚ್ಚಾಗುವ ಸಾಧ್ಯತೆ ಇದೆ. ಅಲ್ಲದೆ ಡೆಂಗ್ಯು ಪ್ರಕರಣಗಳು ಕಂಡು ಬರುವ ಸಾಧ್ಯತೆಗಳಿದ್ದು ಎಚ್ಚರ ವಹಿಸಬೇಕು ಎಂದರು.
ನೀರು ನಿಲ್ಲದಂತೆ ನೋಡಿಕೊಳ್ಳುವುದರ ಜೊತೆಗೆ ಬಳಕೆಗಾಗಿ ನೀರು ತುಂಬುವ ಪರಿಕರಣಗಳನ್ನು ವಾರಕ್ಕೊಮ್ಮೆ ಸ್ವಚ್ಚಗೊಳಿಸಬೇಕು. ಯಾರಿಗಾದರೂ ಒಂದೇ ದಿನ ಜ್ವರ ಕಂಡು ಬಂದರೂ ಸಹ ವೈದ್ಯರ ಬಳಿ ಪರೀಕ್ಷಿಸಿ ಅಗತ್ಯ ಚಿಕಿತ್ಸೆ ಪಡೆಯಬೇಕು ಎಂದು ತಿಳಿಸಿದರು.
ಡೆಂಗ್ಯು ಸಂಬAಧಿತ ಜ್ವರವಾಗಿದ್ದರೆ ರೋಗಿಯು ಪ್ಲೇಟ್‌ಲೆಟ್ಸ್ಗಳ ಶೀಘ್ರ ಕುಸಿಯುವಿಕೆಯಿಂದ ಆರೋಗ್ಯ ಸಮಸ್ಯೆ ಎದುರಾಗಿ ರಕ್ತಸ್ರಾವದಂತಹ ಗಂಭಿರ ಸಮಸ್ಯೆ ಎದುರಿಸಬೇಕಾಗಬಹುದಾಗಿದೆ. ಹಾಗಾಗಿ ಯಾರಿಗಾದರೂ 3 ದಿನಗಳ ಕಡಿಮೆಯಾಗದ ಜ್ವರ, ವಿಪರೀತ ತಲೆನೋವು, ಕಣ್ಣುಗಳ ಹಿಂಭಾಗದಲ್ಲಿ ನೋವು, ಮಾಂಸಖAಡ ಮತ್ತು ಕೀಲುಗಳಲ್ಲಿ ವಿಪರೀತ ನೋವು ಕಾಣಿಸಿಕೊಂಡಲ್ಲಿ ನಿರ್ಲಕ್ಷಿಸಿದೇ ಹತ್ತಿರದ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಅಗತ್ಯ ಪರೀಕ್ಷೆ ಮಾಡಿಸುವುದರ ಮೂಲಕ ವೈದ್ಯರ ಸಲಹೆಯಂತೆ ಲಕ್ಷಣಗಳ ಆಧಾರದ ಮೇರೆಗೆ ಚಿಕಿತ್ಸೆ ಪಡೆಯಬೇಕು ಎಂದು ತಿಳಿಸಿದರು.
ಆಶ್ರಯ ಕಾಲೋನಿ ವೈದ್ಯಾಧಿಕಾರಿ ಡಾ.ಕಾಶಿಪ್ರಸಾದ್ ಅವರು ಮಾತನಾಡಿ, ಈಗಾಗಲೇ ಮನೆಗಳಿಗೆ ಭೇಟಿ ನೀಡುವಾಗ ಬಾಟಲ್‌ನಲ್ಲಿ ಲಾರ್ವಾ (ಸೊಳ್ಳೆಯ ಮರಿ) ಸಂಗ್ರಹಿಸಿಕೊAಡು ಜನತೆಗೆ ಪ್ರಾತ್ಯಕ್ಷಿಕೆಯನ್ನು ನೀಡಿ ಡ್ರಮ್, ಬ್ಯಾರಲ್, ನೀರಿನ ತೊಟ್ಟಿ, ಕಲ್ಲಿನ ಡೋಣಿ, ಹೂವಿನ ಕುಂಡಲ ಮುಂತಾದ ಪರಿಕರಗಳನ್ನು ವಾರಕ್ಕೊಮ್ಮೆ ಸ್ವಚ್ಛಗೊಳಿಸಲು ಹಾಗೂ ಮುಚ್ಚಳ ಮುಚ್ಚಿ ಬಟ್ಟೆ ಕಟ್ಟಬೇಕು ಎಂದು ತಿಳಿಸುವ ಕೆಲಸ ಮಾಡಲಾಗುತ್ತಿದೆ. ಬಳಕೆ ಮಾಡದ ನೀರು ಸಂಗ್ರಹಕಗಳಿಗೆ ಕೊಬ್ಬರಿ ಎಣ್ಣೆಯನ್ನು ಹಾಕುವ ಮೂಲಕ ಸೊಳ್ಳೆ ಉತ್ಪತ್ತಿ ತಡೆಯಬಹುದಾಗಿದೆ ಎಂದು ಅವರು ವಿವರಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ಹೆಚ್ ದಾಸಪ್ಪನವರ, ಕ್ಷೇತ್ರ ಅರೋಗ್ಯ ಶಿಕ್ಷಣಾಧಿಕಾರಿ ಶಾಂತಮ್ಮ, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ದಾನಕುಮಾರಿ, ಆಶಾ ಕಾರ್ಯಕರ್ತೆ ಭುವನೇಶ್ವರಿ, ಅಂಗನವಾಡಿ ಕಾರ್ಯಕರ್ತೆ ರತ್ನಾ ಸೇರಿದಂತೆ ಸಾರ್ವಜನಿಕರು ಉಪಸ್ಥಿತರಿದ್ದರು.
-----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)




ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ