ಶನಿವಾರ, ಮೇ 31, 2025

ಕೋಳೂರು: ಸರ್ಕಾರಿ ಆಯುರ್ವೇದ ಚಿಕಿತ್ಸಾಲಯದ ನೂತನ ಕಟ್ಟಡ ಉದ್ಘಾಟನೆ ನೆರವೇರಿಸಿದ ಶಾಸಕ ಜೆ.ಎನ್.ಗಣೇಶ್

ಬಳ್ಳಾರಿ,ಮೇ 31(ಕರ್ನಾಟಕ ವಾರ್ತೆ): ಕುರುಗೋಡು ತಾಲ್ಲೂಕಿನ ಕೋಳೂರು ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿದ ಸರ್ಕಾರಿ ಆಯುರ್ವೇದ ಚಿಕಿತ್ಸಾಲಯವನ್ನು ಕಂಪ್ಲಿ ಶಾಸಕ ಜೆ.ಎನ್.ಗಣೇಶ್ ಅವರು ಶನಿವಾರ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಯಾವುದೇ ಅಡ್ಡ ಪರಿಣಾಮಗಳಿಲ್ಲದ ಆಯುರ್ವೇದ ಚಿಕಿತ್ಸಾಲಯದ ಸೇವೆಗಳನ್ನು ಸಮರ್ಪಕವಾಗಿ ಸಾರ್ವಜನಿಕರು ಉಪಯೋಗಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಪ್ರತಿ ಖಾಯಿಲೆಗೂ ಆಯುರ್ವೇದ ವೈದ್ಯ ಪದ್ಧತಿಯಲ್ಲಿ ಉತ್ತಮವಾದ ಚಿಕಿತ್ಸೆ ಉಚಿತವಾಗಿ ಲಭ್ಯವಿದ್ದು, ಸಾರ್ವಜನಿಕರು ಚಿಕಿತ್ಸಾಲಯದ ಸೇವೆಯನ್ನು ಸದುಪಯೋಗ ಪಡೆಯಬೇಕು ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಕೋಳೂರು ಗ್ರಾಮ ಪಂಚಾಯತಿ ಅಧ್ಯಕ್ಷರಾದ ದೊಡ್ಡಬಸಮ್ಮ, ಉಪಾಧ್ಯಕ್ಷ ಚೆನ್ನಪ್ಪ, ಜಿಲ್ಲಾ ಆಯುಷ್ ಅಧಿಕಾರಿ ಡಾ.ಎಂ.ವಿರುಪಾಕ್ಷ, ಚಿಕಿತ್ಸಾಲಯದ ವೈದ್ಯಾಧಿಕಾರಿ ಡಾ.ಕೆ.ಪಿ.ಕಲ್ಯಾಣಿ ಸೇರಿದಂತೆ ಕೋಳೂರು ಗ್ರಾಮ ಪಂಚಾಯತಿಯ ಸರ್ವ ಸದಸ್ಯರು, ಗ್ರಾಮದ ಮುಖಂಡರು, ಸಾರ್ವಜನಿಕರು ಮತ್ತು ಚಿಕಿತ್ಸಾಲಯದ ಸಿಬ್ಬಂದಿ ವರ್ಗ ಇದ್ದರು. -----------

ತಂಬಾಕು ಉತ್ಪನ್ನಗಳಿಂದ ದೂರವಿರಿ: ಡಿಹೆಚ್‌ಓ ಡಾ.ಯಲ್ಲಾ ರಮೇಶ್ ಬಾಬು

ಬಳ್ಳಾರಿ,ಮೇ 31(ಕರ್ನಾಟಕ ವಾರ್ತೆ): ಸಾರ್ವಜನಿಕರು ತಂಬಾಕು ಉತ್ಪನ್ನಗಳ ಬಳಕೆಯಿಂದ ದೂರವಿರಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಅವರು ಹೇಳಿದರು. ವಿಶ್ವ ತಂಬಾಕು ರಹಿತ ದಿನಾಚರಣೆ ಅಂಗವಾಗಿ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಚೇರಿ ಮುಂಭಾಗದಲ್ಲಿ ಏರ್ಪಡಿಸಲಾಗಿದ್ದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ತಂಬಾಕು ಸುಮಾರು 7000 ರಾಸಾಯನಿಕ ಅಂಶಗಳಿAದ ಕೂಡಿದ್ದು, ತಂಬಾಕಿನ ಯಾವುದೇ ಪದಾರ್ಥಗಳನ್ನು ಸೇವಿಸುವುದರಿಂದ ಮನುಷ್ಯನ ಆರೋಗ್ಯದಲ್ಲಿ ಕಿಡ್ನಿಗಳ ವೈಫಲ್ಯ, ನರಗಳ ದೌರ್ಬಲ್ಯ, ಕ್ಯಾನ್ಸರ್‌ನಂತಹ ಮಾರಾಣಾಂತಿಕ ಖಾಯಿಲೆಗಳು ಉದ್ಭವಿಸುತ್ತವೆ ಎಂದು ಅವರು ತಿಳಿಸಿದರು. ತಂಬಾಕು ಉತ್ಪನ್ನಗಳ ಬಳಕೆಯನ್ನು ಗಣನೀಯವಾಗಿ ಕಡಿಮೆಗೊಳಿಸಲು ರಾಜ್ಯ ಸರ್ಕಾರವು ಅನೇಕ ಯೋಜನೆಗಳನ್ನು ರೂಪಿಸಿದೆ. ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಸೇವನೆ ನಿಷೇಧ, ಶಿಕ್ಷಣ ಸಂಸ್ಥೆಗಳ 100 ಮೀ. ಅಂತರದಲ್ಲಿ ತಂಬಾಕು ಮಾರಾಟ ನಿಷೇಧ, ಈ ನಿಯಮ ಉಲ್ಲಂಘಿಸಿದಲ್ಲಿ ಕೋಟ್ಪಾ-2003 ಕಾಯ್ದೆಯನ್ವಯ ದಂಡವು ವಿಧಿಸಲಾಗುತ್ತದೆ ಎಂದು ಹೇಳಿದರು. ಆರೋಗ್ಯ ಇಲಾಖೆಯ ತಂಬಾಕು ನಿಯಂತ್ರಣ ಕೋಶದ ಜೊತೆಗೂಡಿ ಅನೇಕ ಜನಜಾಗೃತಿ ಕಾರ್ಯಕ್ರಮ, ತರಬೇತಿ ಕಾರ್ಯಕ್ರಮ, ತಂಬಾಕು ಕೋಟ್ಪಾ-2003 ಕಾರ್ಯಾಚರಣೆ ಕೈಗೊಂಡು ತಂಬಾಕು ನಿಯಂತ್ರಣ ಮಾಡುವ ನಿರಂತರ ಕಾರ್ಯ ನಡೆಯುತ್ತಿದೆ ಎಂದು ತಿಳಿಸಿದರು. ಜಿಲ್ಲಾ ಸರ್ವೇಕ್ಷಣಾಧಿಕಾರಿ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಕಾರ್ಯಕ್ರಮ ಅಧಿಕಾರಿಗಳಾದ ಡಾ.ಮರಿಯಂಬಿ ವಿ.ಕೆ ಅವರು ಮಾತನಾಡಿ, ತಂಬಾಕು ಉತ್ಪನ್ನಗಳ ಬಳಕೆ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರವು ಈಗಾಗಲೇ ಕಟ್ಟುನಿಟ್ಟಿನ ಕ್ರಮ ವಹಿಸಿದೆ. ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಸೇವನೆಗೆ ರೂ.200 ರಿಂದ ರೂ.1000 ರವರೆಗೆ ದಂಡ ವಿಧಿಸಲು ಕಟ್ಟುನಿಟ್ಟಿನ ಸೂಚನೆ ಹೊರಡಿಸಿದ್ದು, ಸರ್ಕಾರದ ನಿಯಮಗಳನ್ನು ಪಾಲಿಸುವ ಮೂಲಕ ಬಳ್ಳಾರಿ ಜಿಲ್ಲೆಯನ್ನು ತಂಬಾಕು ಮುಕ್ತ ಜಿಲ್ಲೆಯನ್ನಾಗಿ ಮಾಡಲು ಕೈಜೋಡಿಸಬೇಕು ಎಂದು ಕರೆ ನೀಡಿದರು. ಇದೇ ವೇಳೆ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ್ ದಾಸಪ್ಪನವರ ಅವರು ಪ್ರತಿಜ್ಞಾವಿಧಿ ಭೋದಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಇಂದ್ರಾಣಿ, ವೈದ್ಯಾಧಿಕಾರಿಗಳಾದ ಡಾ.ಜಬೀನ್ ತಾಜ್, ಡಾ.ಶ್ರಾವಣಿ, ಅಧಿಕಾರಿಗಳಾದ ರಾಘವೇಂದ್ರ, ಗೋವಿಂದಪ್ಪ, ವಿರುಪಾಕ್ಷಿ, ಅಂಬದಾಸ್, ಶಿವಕುಮಾರ್, ತಿಪ್ಪೇಸ್ವಾಮಿ, ಖಾಸಿಂ, ಉಮಾ ಮಹೇಶ್ವರಿ, ಸವಿತಾ, ಶರತ್ ಬಾಬು, ಶಾಂತಮ್ಮ, ಸಿಂಧು, ನವೀನ್, ಅಜಯ್, ವೀರಭದ್ರ, ನೇತ್ರಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿಯ ಸಿಬ್ಬಂದಿ ಹಾಗೂ ಜಿಲ್ಲಾ ಸರ್ವೇಕ್ಷಣಾಧಿಕಾರಿ ಕಚೇರಿಯ ಸಿಬ್ಬಂದಿ, ಮಾನಸಿಕ ಆರೋಗ್ಯ ಕಾರ್ಯಕ್ರಮದ ಸಿಬ್ಬಂದಿ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಿಬ್ಬಂದಿ ಭಾಗವಹಿಸಿದ್ದರು. ------------

ಟ್ರಾಮಾ ಕೇರ್ ಆಸ್ಪತ್ರೆಯಲ್ಲಿ ‘ವಿಶ್ವ ತಂಬಾಕು ರಹಿತ ದಿನ’ ನಿಮಿತ್ತ ಜಾಗೃತಿ

ಬಳ್ಳಾರಿ,ಮೇ 31(ಕರ್ನಾಟಕ ವಾರ್ತೆ): ‘ವಿಶ್ವ ತಂಬಾಕು ರಹಿತ ದಿನಾಚರಣೆ’ ಅಂಗವಾಗಿ ನಗರದ ಟ್ರಾಮಾ ಕೇರ್ ಆಸ್ಪತ್ರೆಯ ಆವರಣದಲ್ಲಿ ಶನಿವಾರ ತಂಬಾಕು ಉತ್ಪನ್ನಗಳ ಬಳಕೆಯಿಂದಾಗುವ ದುಷ್ಪರಿಣಾಮ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸಲಾಯಿತು. ಸುಮಾರು ಒಂದು ತಿಂಗಳಿನಿAದ ಆಸ್ಪತ್ರೆಗೆ ಹೊರ ಮತ್ತು ಒಳರೋಗಿಗಳ ಭೇಟಿ ಬರುವ ಸಾರ್ವಜನಿಕರು ಹೊಂದಿದ್ದ ತಂಬಾಕು ಉತ್ಪನ್ನಗಳನ್ನು ವಶಪಡಿಸಿಕೊಳ್ಳಲಾಗುತ್ತಿತ್ತು. ಈ ಸಂದರ್ಭದಲ್ಲಿ ಟ್ರಾಮಾ ಕೇರ್ ಆಸ್ಪತ್ರೆಯ ಅಧೀಕ್ಷಕ ಡಾ.ಶಿವನಾಯ್ಕ ಸೇರಿದಂತೆ ಆಸ್ಪತ್ರೆಯ ಸಿಬ್ಬಂದಿ ಹಾಗೂ ಇತರರು ಇದ್ದರು. --------------

ಸರ್ಕಾರಿ ಪಾಲಿಟೆಕ್ನಿಕ್ ಡಿಪ್ಲೋಮಾ ಪ್ರಥಮ ವರ್ಷಕ್ಕೆ ಪ್ರವೇಶಾತಿಗೆ ಆಫ್‌ಲೈನ್ ಮೂಲಕ ಅರ್ಜಿ ಆಹ್ವಾನ

ಬಳ್ಳಾರಿ,ಮೇ 31(ಕರ್ನಾಟಕ ವಾರ್ತೆ): ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ 2025-26ನೇ ಸಾಲಿಗೆ ಪ್ರಥಮ ಸೆಮಿಸ್ಟರ್ ಡಿಪ್ಲೋಮಾ ಕೋರ್ಸ್ ಪ್ರವೇಶಾತಿಗೆ ಆಫ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ಕಾಲೇಜಿನಲ್ಲಿ ಪಡೆದುಕೊಂಡು ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿದ ಅರ್ಜಿಗಳನ್ನು ಪಾಲಿಟೆಕ್ನಿಕ್‌ನ ಪ್ರಾಂಶುಪಾಲರ ಕಚೇರಿಗೆ ಜೂನ್ 02 ಸಂಜೆ 05 ಗಂಟೆಯವರೆಗೆ ಸಲ್ಲಿಸಬಹುದು. ಜೂನ್ 03 ರಂದು ಬೆಳಿಗ್ಗೆ 11 ಗಂಟೆಗೆ ತಾತ್ಕಾಲಿಕ ಮೆರಿಟ್ ಪಟ್ಟಿ ಪ್ರಕಟ, ಅಂದು ಸಂಜೆ 04 ರ ವರೆಗೆ ತಿದ್ದುಪಡಿಗೆ ಅವಕಾಶ, ಸಂಜೆ 05 ಗಂಟೆಯವರೆಗೆ ಅಂತಿಮ ಮೆರಿಟ್ ಪಟ್ಟಿ ಪ್ರಕಟಿಸಲಾಗುವುದು. ಜೂನ್ 04 ರಿಂದ ಪ್ರವೇಶ ಪ್ರಕ್ರಿಯೆ ಪ್ರಾರಂಭವಾಗಲಿದೆ. ಹೆಚ್ಚಿನ ಮಾಹಿತಿಗಾಗಿ ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜ್ ನ ಪ್ರಾಚಾರ್ಯರ ಕಚೇರಿ ಅಥವಾ ದೂ.08392-242228 ಗೆ ಸಂಪರ್ಕಿಸಬಹುದು ಎಂದು ಸರ್ಕಾರಿ ಪಾಲಿಟೆಕ್ನಿಕ್ ನ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -------------

ದೇಸಿ ತಳಿ ಬೆಳೆಗಳ ಸಂರಕ್ಷಣೆ: ರೈತರು ವಿವರ ನಮೂದಿಸಲು ಮನವಿ

ಬಳ್ಳಾರಿ,ಮೇ 31(ಕರ್ನಾಟಕ ವಾರ್ತೆ): ರಾಜ್ಯ ಸರ್ಕಾರವು 2025 ರ ಆಯವ್ಯಯದಲ್ಲಿ ಘೋಷಿತ ಕಾರ್ಯಕ್ರಮವಾದ ದೇಶಿ ತಳಿಗಳ ಸಂರಕ್ಷಣೆ ಮತ್ತು ಉತ್ತೇಜನ ಕಾರ್ಯಕ್ರಮದಡಿ ದೇಶಿ ತಳಿಗಳನ್ನು ಸಂರಕ್ಷಿಸುತ್ತಿರುವ ರೈತರ ಸಮೀಕ್ಷೆ ಕೈಗೊಳ್ಳಲಾಗುತ್ತಿದ್ದು, ದೇಶಿ ತಳಿಗಳನ್ನು ಬೆಳೆದು ಸಂರಕ್ಷಿಸುತ್ತಿರುವ ಜಿಲ್ಲೆಯ ರೈತರು ಹತ್ತಿರದ ರೈತ ಸಂಪರ್ಕ ಕೇಂದ್ರದಲ್ಲಿ ತಾವು ಬೆಳೆಯುವ ದೇಶಿ ತಳಿಗಳ ವಿವರವನ್ನು ನೋಂದಾಯಿಸಬೇಕು. ಕಣ್ಮರೆಯಾಗುತ್ತಿರುವ ಹಾಗೂ ನಶಿಸಿ ಹೋಗುತ್ತಿರುವ ಸ್ಥಳೀಯ ಬೆಳೆಗಳ ತಳಿಗಳನ್ನು ಸಂಗ್ರಹಿಸುವ ಮತ್ತು ಸಂರಕ್ಷಿಸುವ ಉದ್ದೇಶಕ್ಕೆ ಕೈ ಜೋಡಿಸಬೇಕು. ಕೃಷಿ ಇಲಾಖೆಯ ಅಧಿಕೃತ ಪೋರ್ಟಲ್ ನಲ್ಲಿ ನೋಂದಣಿ ಕಡ್ಡಾಯವಾಗಿದೆ. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳನ್ನು ಸಂಪರ್ಕಿಸಬೇಕು ಎಂದು ಜಂಟಿ ಕೃಷಿ ನಿರ್ದೇಶಕ ಕೆ.ಎಂ. ಸೋಮಸುಂದರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. --------------

ವಿದ್ಯಾರ್ಥಿ ಬಸ್ ಪಾಸ್‌ಗೆ ಅರ್ಜಿ ಆಹ್ವಾನ

ಬಳ್ಳಾರಿ,ಮೇ 31(ಕರ್ನಾಟಕ ವಾರ್ತೆ): ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಬಳ್ಳಾರಿ ವಿಭಾಗದ ವತಿಯಿಂದ 2025-26ನೇ ಸಾಲಿನ ವಿದ್ಯಾರ್ಥಿ ಬಸ್ ಪಾಸ್ ಪಡೆಯಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ಇನಾಯತ್ ಬಾಗ್‌ಬಾನ್ ತಿಳಿಸಿದ್ದಾರೆ. ವಿದ್ಯಾರ್ಥಿ ಬಸ್ ಪಾಸ್ ವಿತರಣೆಯನ್ನು ಸಂಪೂರ್ಣವಾಗಿ ಗಣಕೀಕೃತಗೊಳಿಸಲು ಸರ್ಕಾರದ ನಿರ್ದೇಶನವಿದ್ದು, ಕಳೆದ ಸಾಲಿನಂತೆ ಪ್ರಸಕ್ತ ಸಾಲಿನಲ್ಲಿಯೂ ಸಹ ಸಂಪೂರ್ಣ ಗಣಕೀಕೃತವಾಗಿ ವಿದ್ಯಾರ್ಥಿ ಪಾಸ್‌ಗಳನ್ನು ವಿತರಣೆ ಮಾಡಲಾಗುವುದು. ಈ ಸಂಬAಧ ಶಾಲಾ-ಕಾಲೇಜು ವಿದ್ಯಾರ್ಥಿಗಳು ಪಾಸ್‌ಗಳನ್ನು ಆನ್ ಲೈನ್ ಮೂಲಕ ಸೇವಾಸಿಂಧು ಪೋರ್ಟಲ್ (URL-sevasindhu.karnataka.gov.in) ಮೂಲಕ ಅರ್ಜಿ ಸಲ್ಲಿಸಿ, ಕರ್ನಾಟಕ-ಒನ್ [ಏ-oಟಿe] ಕೇಂದ್ರಗಳ ಮುಖಾಂತರ ಪಾಸ್ ಪಡೆಯಲು ಅವಕಾಶ ನೀಡಲಾಗಿದೆ. ಬಳ್ಳಾರಿ ವಿಭಾಗದ ವ್ಯಾಪ್ತಿಯ ಬಳ್ಳಾರಿ ನಗರದಲ್ಲಿ 02 ಕೇಂದ್ರ ಮತ್ತು ಸಿರುಗುಪ್ಪ, ಕುರುಗೋಡು, ಕಂಪ್ಲಿ, ಸಂಡೂರು ಭಾಗದಲ್ಲಿ ಅಧೀಕೃತ ಕರ್ನಾಟಕ-ಒನ್ ಕೇಂದ್ರಗಳಲ್ಲಿ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಬಸ್ ಪಾಸ್ ವಿತರಣೆ ಮಾಡಲು ಗುರುತಿಸಿಲಾಗಿದೆ. ಕರ್ನಾಟಕ-1 ಕೇಂದ್ರಗಳ ವಿವರ: ಬಳ್ಳಾರಿ ನಗರದ ಗಡಿಗಿ ಚೆನ್ನಪ್ಪ ವೃತ್ತದ ಮಹಾನಗರ ಪಾಲಿಕೆ ಕಚೇರಿಯ ಪಕ್ಕದ ಕಟ್ಟಡ(ಪ್ರಸ್ತುತ ಹಳೇ ತಾಲ್ಲೂಕು ಕಚೇರಿ ಹಿಂಭಾಗದ ಭೂಮಿ ಕೇಂದ್ರ), ರಾಯಲ್ ಸರ್ಕಲ್ ನ ಹೊಸ ಕಾರ್ಪೋರೇಷನ್ ಬಿಲ್ಡಿಂಗ್ ಕರ್ನಾಟಕ-ಒನ್ ಕೇಂದ್ರ(ಪ್ರಸ್ತುತ ಕಪ್ಪಗಲ್ ರಸ್ತೆ). ಸಿರುಗುಪ್ಪ ಪಟ್ಟಣದ ಆದೋನಿ ರಸ್ತೆಯ ಕರ್ನಾಟಕ-ಒನ್ ಕೇಂದ್ರ (ಪ್ರಸ್ತುತ 8ನೇ ವಾರ್ಡ್ ಪಾರ್ವತಿ ನಗರ), ಕುರುಗೋಡು ಪಟ್ಟಣದ ಖಾದಿ ಭಂಡಾರ ಕಟ್ಟಡದ ಕರ್ನಾಟಕ-ಒನ್ ಕೇಂದ್ರ (ಪ್ರಸ್ತುತ ಸರ್ಕಾರಿ ಪ್ರೌಢಶಾಲೆ ಹತ್ತಿರದ ಬಸ್ ನಿಲ್ದಾಣದ ಎದುರು), ಕಂಪ್ಲಿ ಪಟ್ಟಣದ ಚಂದ್ರಕಲಾ ಟಾಕೀಸ್ ಹತ್ತಿರದ ಕರ್ನಾಟಕ-ಒನ್ ಕೇಂದ್ರ ಮತ್ತು ಸಂಡೂರು ಪಟ್ಟಣದ ಪುರಸಭೆ ಬಸ್ ನಿಲ್ದಾಣ ಎದುರುಗಡೆಯ ಶ್ರೀನಿವಾಸ ಕಾಂಪ್ಲೆಕ್ಸ್ನ ಕರ್ನಾಟಕ-ಒನ್ ಕೇಂದ್ರ. ಈ ಮೇಲಿನ ಕೇಂದ್ರಗಳಲ್ಲಿ ಜೂನ್ 02 ರಿಂದ ವಿದ್ಯಾರ್ಥಿ ಬಸ್ ಪಾಸ್ ಪಡೆಯಬಹುದಾಗಿದೆ. ಅರ್ಜಿ ಸಲ್ಲಿಸುವ ವಿಧಾನ: ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್‌ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಆನ್‌ಲೈನ್ ಸೇವಾಸಿಂಧು ಪೋರ್ಟಲ್ ಐಡಿ (URL-sevasindhu.karnataka.gov.in) ಆಗಿದ್ದು, ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ. ವಿದ್ಯಾರ್ಥಿಗಳು ಕರ್ನಾಟಕ-ಒನ್, ಗ್ರಾಮ-ಒನ್ ಮತ್ತು ಬೆಂಗಳೂರು-ಒನ್ ಕೇಂದ್ರಗಳಿಗೆ ಭೇಟಿ ನೀಡಿ ಅಲ್ಲಿನ ಸಿಬ್ಬಂದಿಗಳ ಮೂಲಕವು ಅರ್ಜಿ ಸಲ್ಲಿಸಬಹುದಾಗಿದೆ. ಈ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಲು ಸರ್ಕಾರದ ಆದೇಶದಂತೆ ರೂ.30/- ಸೇವಾ ಶುಲ್ಕವನ್ನು ಕೇಂದ್ರಗಳ ಸಿಬ್ಬಂದಿಗಳು ಪಡೆಯಲು ಅವಕಾಶವಿದೆ. ಸ್ಯಾಟ್ಸ್, ಯುಯುಸಿಎಂಎಸ್, ಪಿಯುಇ ಸಂಖ್ಯೆಯನ್ನು ಹೊಂದಿರದ ವಿದ್ಯಾರ್ಥಿಗಳು ವಾಸಸ್ಥಳ ವಿಳಾಸ ಹಾಗೂ ಇತರೆ ಮಾಹಿತಿ ಬಗ್ಗೆ ವಿದ್ಯಾ ಸಂಸ್ಥೆಯ ಮುಖ್ಯಸ್ಥರಿಂದ ಧೃಡೀಕರಣ ಪತ್ರ ಪಡೆದು ಕಡ್ಡಾಯವಾಗಿ ಸಲ್ಲಿಸಬೇಕು. ವಿದ್ಯಾರ್ಥಿ ಬಸ್ ಪಾಸ್ ವಿತರಿಸಲು ಗರಿಷ್ಠ ಪ್ರಯಾಣ ಮಿತಿ 60 ಕಿ.ಮೀ ಆಗಿರುತ್ತದೆ. ವಿದ್ಯಾರ್ಥಿ ರಿಯಾಯಿತಿ ಬಸ್ ಪಾಸ್ ದರಗಳ ವಿವರ: ಪ್ರಾಥಮಿಕ ಶಾಲೆ (10 ತಿಂಗಳು): ಸಾಮಾನ್ಯ ವಿದ್ಯಾರ್ಥಿಗಳಿಗೆ ರೂ.150, ಎಸ್‌ಸಿ ಮತ್ತು ಎಸ್‌ಟಿ ವಿದ್ಯಾರ್ಥಿಗಳಿಗೆ ರೂ.150. ಪ್ರೌಢ ಶಾಲೆ ಬಾಲಕರು (10 ತಿಂಗಳು): ಸಾಮಾನ್ಯ ವಿದ್ಯಾರ್ಥಿಗಳಿಗೆ ರೂ.750 ಮತ್ತು ಪ್ರೌಢಶಾಲೆ ಬಾಲಕಿಯರು ಸಾಮಾನ್ಯ ವಿದ್ಯಾರ್ಥಿಗಳಿಗೆ ರೂ.550, ಎಸ್‌ಸಿ ಮತ್ತು ಎಸ್‌ಟಿ ವಿದ್ಯಾರ್ಥಿಗಳಿಗೆ ರೂ.150. ಕಾಲೇಜು ಮತ್ತು ಡಿಪ್ಲೋಮಾ (10 ತಿಂಗಳು): ಸಾಮಾನ್ಯ ವಿದ್ಯಾರ್ಥಿಗಳಿಗೆ ರೂ.1,050, ಎಸ್‌ಸಿ ಮತ್ತು ಎಸ್‌ಟಿ ವಿದ್ಯಾರ್ಥಿಗಳಿಗೆ ರೂ.150. ಐಟಿಐ (12 ತಿಂಗಳು): ಸಾಮಾನ್ಯ ವಿದ್ಯಾರ್ಥಿಗಳಿಗೆ ರೂ.1,310, ಎಸ್‌ಸಿ ಮತ್ತು ಎಸ್‌ಟಿ ವಿದ್ಯಾರ್ಥಿಗಳಿಗೆ ರೂ.160. ವೃತ್ತಿಪರ ಕೋರ್ಸ್ಗಳು (10 ತಿಂಗಳು): ಸಾಮಾನ್ಯ ವಿದ್ಯಾರ್ಥಿಗಳಿಗೆ ರೂ.1,550, ಎಸ್‌ಸಿ ಮತ್ತು ಎಸ್‌ಟಿ ವಿದ್ಯಾರ್ಥಿಗಳಿಗೆ ರೂ.150. ಸಂಜೆ ಕಾಲೇಜು ಮತ್ತು ಪಿ.ಹೆಚ್.ಡಿ(10 ತಿಂಗಳು): ಸಾಮಾನ್ಯ ವಿದ್ಯಾರ್ಥಿಗಳಿಗೆ ರೂ.1,350, ಎಸ್‌ಸಿ ಮತ್ತು ಎಸ್‌ಟಿ ವಿದ್ಯಾರ್ಥಿಗಳಿಗೆ ರೂ.150. ಈ ಮೇಲಿನ ದರದಂತೆ ವಿದ್ಯಾರ್ಥಿಯು ಕೆ-ಒನ್ ಪಾಸ್ ಕೌಂಟರ್‌ಗಳಲ್ಲಿ ಪಾವತಿಸಿ ವಿದ್ಯಾರ್ಥಿ ಬಸ್ ಪಾಸ್‌ಗಳನ್ನು ಪಡೆಯಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -----------

ಫ್ಯಾಶನ್ ಡಿಸೈನ್ ಪದವಿ ಕೋರ್ಸ್ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

ಬಳ್ಳಾರಿ,ಮೇ 31(ಕರ್ನಾಟಕ ವಾರ್ತೆ): ನಗರದ ಸಿದ್ಧ ಉಡುಪು ಸಂಶೋಧನೆ ತರಬೇತಿ ವಿನ್ಯಾಸ ಮತ್ತು ಅಭಿವೃದ್ಧಿ ಕೇಂದ್ರ (ಜಿ.ಆರ್.ಟಿ.ಡಿ.ಸಿ) ಸಂಸ್ಥೆಯಲ್ಲಿ 2025-26 ನೇ ಸಾಲಿಗೆ ಬಿ.ಎಸ್ಸಿ ಪ್ರಥಮ ವರ್ಷದ ಫ್ಯಾಶನ್ ಡಿಸೈನ್ ಪದವಿ ಕೋರ್ಸ್ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಪ್ರವೇಶಾತಿಗೆ ಯಾವುದೇ ದ್ವಿತೀಯ ಪಿ.ಯು.ಸಿ (ಕಲೆ, ವಾಣಿಜ್ಯ, ವಿಜ್ಞಾನ, ಶಿಕ್ಷಣ ಮತ್ತು ಯಾವುದೇ ಡಿಪ್ಲೋಮಾ) ವಿಭಾಗದಲ್ಲಿ ತೇರ್ಗಡೆ ಹೊಂದಿರುವ ವಿದ್ಯಾರ್ಥಿಗಳು ಅರ್ಹರಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ನಗರದ ನಲ್ಲಚೇರುವು ಪ್ರದೇಶದ ಮೊದಲನೇ ರೈಲ್ವೇ ಗೇಟ್ ಹತ್ತಿರದ ಜಿಲ್ಲಾ ಕ್ರೀಡಾಂಗಣ ಮೈದಾನ ರಸ್ತೆಯ ಜಿ.ಆರ್.ಟಿ.ಡಿ.ಸಿ ಕಾಲೇಜಿನ ಪ್ರಾಚಾರ್ಯರ ಕಚೇರಿ ಅಥವಾ ಮೊ.9741264655, 9844862576, 9844474235, 8123126127 ಗೆ ಸಂಪರ್ಕಿಸಬಹುದು ಎಂದು ಕಾಲೇಜಿನ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ------------

ಉಚಿತ ಸ್ಪರ್ಧಾತ್ಮಕ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ

ಬಳ್ಳಾರಿ,ಮೇ 31(ಕರ್ನಾಟಕ ವಾರ್ತೆ): ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿನ ಯು.ಪಿ.ಎಸ್.ಸಿ ನಾಗರಿಕ ಸೇವೆ ಮತ್ತು ಬ್ಯಾಂಕಿAಗ್ ಪಿ.ಒ ಸ್ಫರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಪರೀಕ್ಷಾ ಪೂರ್ವ ತರಬೇತಿ ನೀಡಲಾಗುತ್ತಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲೆಯ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ) ಗೆ ಸೇರಿದ ಅಭ್ಯರ್ಥಿಗಳು ಇಲಾಖೆಯ ವೆಬ್‌ಸೈಟ್ https://bcwd.karnataka.gov.in ಅಥವಾ sevasindhuservices.karnataka.gov.in ಗೆ ಬೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಜೂನ್ 15 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ.080392-275751, ಸಹಾಯವಾಣಿ ಸಂ. 8050770006, 8050370006 ಸಂಪರ್ಕಿಸಬಹುದು ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. --------------

ಜೂನ್ 03 ರಂದು ವಸತಿ ಶಾಲೆ ಆಯ್ಕೆಗೆ ಕೌನ್ಸಲಿಂಗ್ ಪ್ರಕ್ರಿಯೆ

ಬಳ್ಳಾರಿ,ಮೇ 31(ಕರ್ನಾಟಕ ವಾರ್ತೆ): ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ ಮತ್ತು ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ಪ್ರಸಕ್ತ ಸಾಲಿನ 6ನೇ ತರಗತಿ ದಾಖಲಾತಿಗೆ ಈಗಾಗಲೇ ಪ್ರವೇಶ ಪರೀಕ್ಷೆ ನಡೆದಿದ್ದು, ಆಯ್ಕೆಯಾದ ವಿದ್ಯಾರ್ಥಿಗಳಿಗೆ ಜೂನ್ 03 ರಂದು ಕೌನ್ಸಲಿಂಗ್ ಪ್ರಕ್ರಿಯೆ ಏರ್ಪಡಿಸಲಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ವಿಠೋಬಾ ಹೊನಕಾಂಡೆ ಅವರು ತಿಳಿಸಿದ್ದಾರೆ. ನಗರದ ಹೊಸಪೇಟೆ ರಸ್ತೆಯ ಅಲ್ಲಿಪುರದ ಬಿಐಟಿಎಂ ಕಾಲೇಜು ಹತ್ತಿರ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆಯಲ್ಲಿ ಜೂ 03 ರಂದು ಬೆಳಿಗ್ಗೆ 10 ಗಂಟೆಗೆ 6ನೇ ತರಗತಿ ಪ್ರವೇಶ ಪರೀಕ್ಷೆಯಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಕೌನ್ಸಲಿಂಗ್ ಮೂಲಕ ಪ್ರವೇಶದ ಸೀಟ್‌ನ್ನು (ವಸತಿ ಶಾಲೆಯನ್ನು) ಆಯ್ಕೆ ಮಾಡಿಕೊಳ್ಳಬಹುದಾಗಿದೆ. ಕೌನ್ಸಲಿಂಗ್‌ಗೆ ಬೇಕಾದ ದಾಖಲೆಗಳು: ಆಧಾರ್‌ಕಾರ್ಡ್, ವಿದ್ಯಾರ್ಥಿಯ 5 ಭಾವಚಿತ್ರ, 5ನೇ ತರಗತಿ ಅಂಕಪಟ್ಟಿ, ಹಾಲ್ ಟಿಕೆಟ್ (ಪ್ರವೇಶ ಪತ್ರ), ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ವಿಶೇಷ ಕೋಟಾದಲ್ಲಿ ಆಯ್ಕೆಯಾದ ಪ್ರಮಾಣ ಪತ್ರ ಸೇರಿದಂತೆ ಎಲ್ಲಾ ದಾಖಲೆಗಳನ್ನು ದ್ವಿ ಪ್ರತಿಯ ಝೆರಾಕ್ಸ್ಗಳನ್ನು ಹಾಜರುಪಡಿಸಬೇಕು. ಹೆಚ್ಚಿನ ಮಾಹಿತಿಗಾಗಿ ನಗರದ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ(ಸಿ.ಬಿ.ಎಸ್.ಇ) ಮತ್ತು ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರ ಮೊ.9844040035, ಸಂಡೂರು ತಾಲ್ಲೂಕಿನ ತೋರಣಗಲ್ಲು ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರ ಮೊ.9480933730, ಕಂಪ್ಲಿ ಮತ್ತು ಕುರುಗೋಡು ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರ ಮೊ.7353346069 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ------------

ಶುಕ್ರವಾರ, ಮೇ 30, 2025

“ಬೇಸಿಗೆ ಶಿಬಿರ” ಸಮಾರೋಪದಲ್ಲಿ ಎಳೆನಾಗಪ್ಪ ಹೇಳಿಕೆ | ಮಕ್ಕಳಲ್ಲಿನ ಪ್ರತಿಭೆಗಳು ಹೊರಹೊಮ್ಮಲಿ

ಬಳ್ಳಾರಿ,ಮೇ 30(ಕರ್ನಾಟಕ ವಾರ್ತೆ): ಮಕ್ಕಳಲ್ಲಿರುವ ಅನೇಕ ರೀತಿಯ ಪ್ರತಿಭೆಗಳನ್ನು ಗುರುತಿಸಲು ಬೇಸಿಗೆ ಶಿಬಿರಗಳು ಅವಶ್ಯಕವಾಗಿದ್ದು, ಜಿಲ್ಲಾ ಹಾಗೂ ರಾಜ್ಯ ಮಟ್ಟದಲ್ಲಿ ಭಾಗವಹಿಸಲು ಅನುಕೂಲಕರವಾಗಲಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಎಳೆನಾಗಪ್ಪ ಹೇಳಿದರು. ಗುರುವಾರ ನಗರದ ಕಂಟೋನ್ ಮೆಂಟ್ ನ ಶಾಂತಿಧಾಮ ಆವರಣದ ಸರ್ಕಾರಿ ಬಾಲಕಿಯರ ಬಾಲಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಜ್ಯ ಬಾಲಭವನ ಸೊಸೈಟಿ ಬೆಂಗಳೂರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇವರ ಸಂಯುಕ್ತಾಶ್ರಯದಲ್ಲಿ ಮೇ 15 ರಿಂದ 29 ರವರೆಗೆ 05 ರಿಂದ 16 ವರ್ಷದ ಒಳಗಿನ ಮಕ್ಕಳಿಗೆ 15 ದಿನಗಳ ಕಾಲ ಸೃಜನಾತ್ಮಕ ಹಾಗೂ ಕ್ರಿಯಾತ್ಮಕ ಚಟುವಟಿಕೆಗಳಾದ ಚಿತ್ರಕಲೆ, ಕರಕುಶಲೆ, ಸಮೂಹ ನೃತ್ಯ, ಸಮೂಹ ಗೀತೆ, ಕರಾಟೆ, ಯೋಗ ಇತ್ಯಾದಿ ಒಳಗೊಂಡAತೆ ಆಯೋಜಿಸಿದ್ದ “ಬೇಸಿಗೆ ಶಿಬಿರ” ಕಾರ್ಯಗಾರದ ಸಮಾರೋಪದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರಾದ ವಿಜಯಲಕ್ಷಿö್ಮ ಮೈದೂರು ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಮಕ್ಕಳಲ್ಲಿ ವಿವಿಧ ಕಲೆಗಳ ಪ್ರತಿಭೆಯಿದ್ದು, ಅದನ್ನು ಸೂಕ್ತ ರೀತಿಯಲ್ಲಿ ಹೊರ ತರುವ ಕಾರ್ಯವಾಗಬೇಕು. ಇದಕ್ಕೆ ಬೆಂಗಳೂರಿನ ಬಾಲಭವನ ಸೊಸೈಟಿ ವತಿಯಿಂದ ಪ್ರತಿ ವರ್ಷ ಅನುದಾನ ಬಿಡುಗಡೆ ಮಾಡುತ್ತಿರುವುದರಿಂದ ಮಕ್ಕಳಿಗೆ ಪ್ರೋತ್ಸಾಹದಾಯಕವಾಗಿದೆ ಎಂದು ಹೇಳಿದರು. ಪ್ರತಿ ವರ್ಷ ಮಕ್ಕಳಿಗೆ “ಬೇಸಿಗೆ ಶಿಬಿರ” ಕಾರ್ಯಕ್ರಮ ಹಮ್ಮಿಕೊಳ್ಳುವುದರಿಂದ ಮಕ್ಕಳಲ್ಲಿ ಆತ್ಮವಿಶ್ವಾಸ ಮೂಡಿಸುತ್ತದೆ ಎಂದು ಅವರು ಅಭಿಪ್ರಾಯ ಪಟ್ಟರು. ಇದೇ ಸಂದರ್ಭದಲ್ಲಿ ಜಿಲ್ಲಾ ಮಟ್ಟದ ಬೇಸಿಗೆ ಶಿಬಿರ ಕಾರ್ಯಗಾರದಲ್ಲಿ ಭಾಗವಹಿಸಿದ ಎಲ್ಲಾ ಮಕ್ಕಳಿಗೆ ಪ್ರಶಂಸೆ ಪತ್ರ ನೀಡಲಾಯಿತು. ಈ ಸಂದರ್ಭದಲ್ಲಿ ಸರ್ಕಾರಿ ಬುದ್ದಿಮಾಂಧ್ಯ ಬಾಲಕರ ಬಾಲಮಂದಿರದ ಅಧೀಕ್ಷಕ ಹೆಚ್.ಡಿ. ಗುರುಬಸವ, ಸರ್ಕಾರಿ ಬಾಲಕಿಯರ ಬಾಲಮಂದಿರದ ಪರಿವೀಕ್ಷಣಾಧಿಕಾರಿ ನಾಗವೇಣಿ, ಮಕ್ಕಳ ಕಲ್ಯಾಣ ಸಮಿತಿಯ ಸದಸ್ಯರಾದ ಕಲಾವತಿ, ಗಂಗಮ್ಮ, ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾಗಿ ಕೆ.ದೊಡ್ಡಬಸಪ್ಪ, ಸುರೇಶ, ಭೀಮಲಿಂಗ, ಶ್ರೀಜಾ, ಜಗನ್ನಾಥ ಸೇರಿದಂತೆ ಸರ್ಕಾರಿ ಬಾಲಕರ ಮತ್ತು ಬಾಲಕಿಯರ ಬಾಲಮಂದಿರದ ಮಕ್ಕಳು ಹಾಗೂ ಇತರರು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಬಾಲಕಿಯರ ಬಾಲಮಂದಿರದ ಮಕ್ಕಳಾದ ತುಳಸಿ ಮತ್ತು ದೇವಮ್ಮ ತಂಡ ಪ್ರಾರ್ಥನೆ ಗೀತೆ ನೆರವೇರಿಸಿದರು. ಜಿಲ್ಲಾ ಸಂಯೋಜಕ ಮಂಜುನಾಥ ಡಿ.ಜಿ ಸ್ವಾಗತಿಸಿದರು. ಜಿಲ್ಲಾ ಬಾಲಭವನ ಸೊಸೈಟಿಯ ಕಚೇರಿ ಸಹಾಯಕ ಜೀರ್ ಮಲ್ಲಿಕಾರ್ಜುನ ಅವರು ವಂದಿಸಿದರು. ------------

ಪರಿಶಿಷ್ಟ ಜಾತಿ ಒಳ ಮೀಸಲಾತಿ ವರ್ಗೀಕರಣ ಸಮೀಕ್ಷೆ ಕಾರ್ಯ

ಜೂನ್ 01 ರವರೆಗೆ ವಿಶೇಷ ಶಿಬಿರ ಬಳ್ಳಾರಿ,ಮೇ 30(ಕರ್ನಾಟಕ ವಾರ್ತೆ): ನ್ಯಾಯಮೂರ್ತಿ ಡಾ.ಹೆಚ್.ಎನ್.ನಾಗಮೋಹನ ದಾಸ್ ಅವರ ಏಕ ಸದಸ್ಯ ವಿಚಾರಣಾ ಆಯೋಗದ ನಿರ್ದೇಶನದಂತೆ ಪರಿಶಿಷ್ಟ ಜಾತಿ ಒಳ ಮೀಸಲಾತಿ ವರ್ಗೀಕರಣ ಸಮೀಕ್ಷೆ ಕಾರ್ಯದಲ್ಲಿ ಈಗಾಗಲೇ ಮನೆ ಮನೆ ಸಮೀಕ್ಷೆ ಕಾರ್ಯ ಪ್ರಗತಿಯಲ್ಲಿದ್ದು, ಮನೆ-ಮನೆ ಸಮೀಕ್ಷೆಯಲ್ಲಿ ಕೈಬಿಟ್ಟು ಹೋದಂತಹ ಪರಿಶಿಷ್ಟ ಜಾತಿಯ ಕುಟುಂಬಗಳಿದ್ದಲ್ಲಿ ತಮ್ಮ ವ್ಯಾಪ್ತಿಯ ಮತಗಟ್ಟೆಗಳಲ್ಲಿ ಜೂನ್ 01 ರವರೆಗೆ ನಡೆಯುವ ವಿಶೇಷ ಶಿಬಿರದಲ್ಲಿ ಗಣತಿದಾರರು ಉಪಸ್ಥಿತರಿರುತ್ತಾರೆ. ಹಾಗಾಗಿ ತಮ್ಮ ತಮ್ಮ ಬೂತ್‌ಗಳಿಗೆ ಭೇಟಿ ನೀಡಿ ಅಲ್ಲಿ ಗಣತಿದಾರರೊಂದಿಗೆ ತಮ್ಮ ಜಾತಿ ಮತ್ತು ಉಪಜಾತಿಗಳ ವಿವರ ನೀಡಿ ಸಮೀಕ್ಷೆಯಲ್ಲಿ ನೋಂದಾಯಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಮೊ.8310291951 ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಬಿ.ಮಲ್ಲಿಕಾರ್ಜುನ ಅವರು ತಿಳಿಸಿದ್ದಾರೆ. ------------

ಕೃಷಿ ಇಲಾಖೆ: ರೈತರು ಹಸಿರೆಲೆ ಗೊಬ್ಬರ ಬೆಳೆದು ತಮ್ಮ ಜಮೀನುಗಳಿಗೆ ಸೇರಿಸಿ

ಬಳ್ಳಾರಿ,ಮೇ 30(ಕರ್ನಾಟಕ ವಾರ್ತೆ): ಪ್ರಸ್ತಕ ಸಾಲಿನ ಮುಂಗಾರು ಹಂಗಾಮು ಪ್ರಾರಂಭವಾಗುತ್ತಿರುವುದರಿAದ ರೈತರು ಬೇಸಿಗೆ ಹಂಗಾಮಿನಲ್ಲಿ ಬೆಳೆದ ಭತ್ತದ ಬೆಳೆಯ ಕೊಯಿಲಿನ ನಂತರ ಮಾಗಿ ಉಳುಮೆ ಮಾಡಿ, ಹಸಿರೆಲೆ ಗೊಬ್ಬರ ಬೆಳೆದು ತಮ್ಮ ಜಮೀನುಗಳಿಗೆ ಸೇರಿಸಬೇಕು ಎಂದು ಜಂಟಿ ಕೃಷಿ ನಿರ್ದೇಶಕ ಸೋಮಸುಂದರ್ ಅವರು ತಿಳಿಸಿದ್ದಾರೆ. ಹಸಿರೆಲೆ ಗೊಬ್ಬರ ಒಂದು ಪ್ರಮುಖ ಕೃಷಿ ತಂತ್ರಜ್ಞಾನವಾಗಿದ್ದು, ಇದು ಮಣ್ಣಿನ ಆರೋಗ್ಯವನ್ನು ಸುಧಾರಿಸಲು ಮತ್ತು ಬೆಳೆಗಳ ಉತ್ಪಾದಕತೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಹಸಿರೆಲೆ ಗೊಬ್ಬರವು ಮಣ್ಣಿಗೆ ಸಾವಯವ ಪದಾರ್ಥಗಳನ್ನು ಸೇರಿಸುವ ಮೂಲಕ ಮಣ್ಣಿನ ಫಲವತ್ತತೆಯನ್ನು ಹೆಚ್ಚಿಸುತ್ತದೆ. ಇದು ಮಣ್ಣಿನ ರಚನೆಯನ್ನು ಸುಧಾರಿಸುತ್ತದೆ. ನೀರನ್ನು ಹಿಡಿದಿಡಲು ಸಹಾಯ ಮಾಡುತ್ತದೆ ಮತ್ತು ಸಸ್ಯಗಳಿಗೆ ಅಗತ್ಯವಿರುವ ಪೋಷಕಾಂಶಗಳನ್ನು ಒದಗಿಸುತ್ತದೆ. ಹಸಿರೆಲೆ ಗೊಬ್ಬರವು ಮಣ್ಣಿನ ಫಲವತ್ತತೆಯನ್ನು ಹೆಚ್ಚಿಸುತ್ತದೆ. ಸಸ್ಯಗಳಿಗೆ ಅಗತ್ಯವಿರುವ ಪೋಷಕಾಂಶಗಳನ್ನು ಒದಗಿಸಲು ಸಹಾಯ ಮಾಡುತ್ತದೆ. ಹಸಿರೆಲೆ ಗೊಬ್ಬರವು ಮಣ್ಣಿಗೆ ನೈಟ್ರೋಜನ್, ಫಾಸ್ಫರಸ್ ಮತ್ತು ಪೊಟ್ಯಾಶ್ ನಂತಹ ಪೋಷಕಾಂಶಗಳನ್ನು ಸೇರಿಸುತ್ತದೆ ಮತ್ತು ಬೆಳೆಗಳ ಬೆಳವಣಿಗೆಗೆ ಸಹಾಯ ಮಾಡುತ್ತದೆ. ಒಂದು ಎಕರೆ ಪ್ರದೇಶದಲ್ಲಿ ಸೆಣಬು ಬೆಳೆಯುವುದರಿಂದ 8 ಟನ್ ಗಳಷ್ಟು ಸಾವಯವ ಗೊಬ್ಬರವನ್ನು ಭೂಮಿಗೆ ಸೇರಿಸಬಹುದು. ಅದೇ ರೀತಿ ಒಂದು ಎಕರೆ ಪ್ರದೇಶದಲ್ಲಿ ಡಹೇನ್ಚಾ ಬೆಳೆಯುವುದರಿಂದ 6 ಟನ್ ಗಳಷ್ಟು ಸಾವಯವ ಗೊಬ್ಬರವನ್ನು ಭೂಮಿಗೆ ಸೇರಿಸಬಹುದು. ಬೇಸಿಗೆ ಹಂಗಾಮಿನ ಭತ್ತದ ಬೆಳೆಯ ಕಟಾವಿನ ನಂತರ ಸೆಣಬು ಅಥವಾ ಡಹೇನ್ಚಾ ಬೀಜಗಳನ್ನು ಹೊಲಕ್ಕೆ ಉದಿರಿಸಿದಾಗ ಭೂಮಿಯಲ್ಲಿರುವ ತೇವಾಂಶವನ್ನು ಉಪಯೋಗಿಸಿಕೊಂಡು ಬೆಳೆಯುತ್ತದೆ. ಸುಮಾರು 40 ರಿಂದ 45 ದಿನಗಳ ನಂತರ (ಹೂಹಾಡುವುಕ್ಕಿಂತ ಮುಂಚೆ) ನೆಲಕ್ಕೆ ಸೆರಿಸಿದರೆ, ಕೊಳೆತು ಸಾವಯವ ಗೊಬ್ಬರವಾಗುತ್ತದೆ. ಹಾಗಾಗಿ ರೈತರು ಕಡಿಮೆ ಖರ್ಚು ಮಾಡಿ ಹಸಿರೆಲೆಗೊಬ್ಬರವನ್ನು ತಮ್ಮ ಜಮೀನುಗಳಿಗೆ ಸೇರಿಸಿ ಹೆಚ್ಚಿನ ಇಳುವರಿಯನ್ನು ಪಡೆದುಕೊಂಡು ತಮ್ಮ ಆರ್ಥಿಕ ಮಟ್ಟವನ್ನು ಹೆಚ್ಚಿಸಿಕೊಳ್ಳಬಹುದು ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. --------------

ಜೂ.05 ರಂದು ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮ

ಬಳ್ಳಾರಿ,ಮೇ 30(ಕರ್ನಾಟಕ ವಾರ್ತೆ): ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಬಳ್ಳಾರಿ ಪ್ರಾದೇಶಿಕ ಕಚೇರಿ ವತಿಯಿಂದ ಜೂನ್ 05 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮAದಿರದಲ್ಲಿ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಇವರ ಸಂಯುಕ್ತಾಶ್ರಯಲ್ಲಿ ಆಯೋಜಿಸಲಾಗುತ್ತಿದ್ದು, ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸುವ ಕಾರ್ಯಕ್ರಮವಾಗಿದೆ ಎಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಬಳ್ಳಾರಿ ಪ್ರಾದೇಶಿಕ ಕಚೇರಿಯ ಪರಿಸರ ಅಧಿಕಾರಿ ತಿಳಿಸಿದ್ದಾರೆ. -----------

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ: ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

ಬಳ್ಳಾರಿ,ಮೇ 30(ಕರ್ನಾಟಕ ವಾರ್ತೆ): ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ 2025-26 ನೇ ಶೈಕ್ಷಣಿಕ ಸಾಲಿಗೆ ವಿದ್ಯಾರ್ಥಿಗಳ ಪ್ರವೇಶ ಪಡೆಯಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಪಿ.ಯು.ಸಿ., ಡಿಪ್ಲೋಮೋ, ಐ.ಟಿ.ಐ ಹಾಗೂ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಮಾತ್ರ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಆನ್‌ಲೈನ್ ವೆಬ್‌ಸೈಟ್ https://shp.karnataka.gov.in ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಜೂನ್ 28 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಕಚೇರಿ ಅಥವಾ ದೂ.08395-200125/224 ಹಾಗೂ ತಾಲ್ಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳ ಮೊ.ಬಳ್ಳಾರಿ-8310321101, ಸಂಡೂರು-9036925966/ 86605755061, ಸಿರುಗುಪ್ಪ-9148889975 ಗೆ ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ------------

ಜೂ.01 ರಂದು ವಿದ್ಯುತ್ ವ್ಯತ್ಯಯ

ಬಳ್ಳಾರಿ,ಮೇ 30(ಕರ್ನಾಟಕ ವಾರ್ತೆ): ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-2 ರ ವ್ಯಾಪ್ತಿಯಲ್ಲಿ ಕಬ್ಬಿಣದ ವಿದ್ಯುತ್ ಕಂಬಗಳ ಬದಲಾವಣೆ ಕಾರ್ಯ ಕೈಗೊಳ್ಳುತ್ತಿರುವುರಿಂದÀ ಜೂ.01 ರಂದು ಬೆಳಿಗ್ಗೆ 8.30 ಗಂಟೆಯಿAದ ಸಂಜೆ 06 ಗಂಟೆಯವರೆಗೆ ಎಫ್ -73 ಫೀಡರ್‌ನ ಬಸವನಕುಂಟೆ, ಕೋಟೆ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಮತ್ತು ವಿದ್ಯುತ್ ಗ್ರಾಹಕರು ಸಹಕರಿಸಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. --------------

ಬಳ್ಳಾರಿ: ಎಲ್ಲಾ ಮೋಟಾರ್ ಬೈಕ್ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ

ಬಳ್ಳಾರಿ,ಮೇ 29(ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಎಲ್ಲಾ ಮೋಟಾರ್ ಬೈಕ್ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಡಾ.ಶೋಭಾರಾಣಿ ವಿ.ಜೆ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಈ ಕುರಿತು ಪ್ರಕಟಣೆ ಹೊರಡಿಸಿರುವ ಅವರು, ಭಾರತೀಯ ಮೋಟಾರು ವಾಹನ ಕಾಯ್ದೆ 1989 ಹಾಗೂ ಕರ್ನಾಟಕ ಮೋಟಾರ್ ವಾಹನ ನಿಯಮ ಪ್ರಕಾರ ಪ್ರತಿಯೊಬ್ಬ ಮೋಟಾರ್ ಸೈಕಲ್ ವಾಹನ ಸವಾರ (Rider) ಹಾಗೂ ಹಿಂಬದಿ ಸವಾರನು (Pillion Rider) ತಮ್ಮ ಸುರಕ್ಷತೆಗಾಗಿ ಹೆಲ್ಮೆಟ್ ಧರಿಸುವುದು ಕಡ್ಡಾಯವಾಗಿದೆ. ಜಿಲ್ಲೆಯಲ್ಲಿ ಇತ್ತೀಚೆಗೆ ರಸ್ತೆ ಅಪಘಾತಗಳಲ್ಲಿ ತಲೆಗೆ ತೀವ್ರಗಾಯಗಳಾಗಿ ಸಾವಿಗೀಡಾಗಿರುತ್ತಿರುವುದು ಕಂಡುಬರುತ್ತಿದ್ದು, ಹಾಗಾಗಿ ಪ್ರತಿಯೊಬ್ಬ ಸಾರ್ವಜನಿಕರು ವಾಹನ ಚಲಾಯಿಸುವಾಗ ಸವಾರ ಮತ್ತು ಹಿಂಬದಿ ಸವಾರ ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. ವಾಹನ ಚಲಾಯಿಸುವ ತಮ್ಮ ಕುಟುಂಬದ ಎಲ್ಲಾ ಸದಸ್ಯರು, ಶಾಲಾ-ಕಾಲೇಜು ವಿದ್ಯಾರ್ಥಿ, ವಿದ್ಯಾರ್ಥಿನಿಯರು ಕಡ್ಡಾಯವಾಗಿ ಐ.ಎಸ್.ಐ ಮಾರ್ಕ್ ಹೊಂದಿದ ಹೆಲ್ಮೆಟ್ ‌ನ್ನು ಧರಿಸಬೇಕು. ಮುಖ್ಯವಾಗಿ ರಸ್ತೆ ಸುರಕ್ಷತಾ ಕ್ರಮಗಳನ್ನು ಕಟ್ಟು ನಿಟ್ಟಾಗಿ ಅನುಸರಿಸಬೇಕು. ಪ್ರಸ್ತುತ ಜಿಲ್ಲೆಯ ಎಲ್ಲಾ ಸಾರ್ವಜನಿಕ ರಸ್ತೆಯಲ್ಲಿ ಪೊಲೀಸ್ ಇಲಾಖೆಯಿಂದ ಈ ಬಗ್ಗೆ ವಿಶೇಷ ಕಾರ್ಯಾಚರಣೆ ಕೈಗೊಳ್ಳಲಾಗುತ್ತಿದ್ದು, ಒಂದು ವೇಳೆ ಹೆಲ್ಮೆಟ್ ಧರಿಸದೇ ವಾಹನ ಚಲಾಯಿಸುವುದು ಕಂಡು ಬಂದಲ್ಲಿ ಅಂತಹವರ ವಿರುದ್ಧ ಕಾನೂನಿನನ್ವಯ ಪ್ರಕರಣ ದಾಖಲಿಸಿ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ. ======

ಗುರುವಾರ, ಮೇ 29, 2025

ವಿಜಯನಗರ ಶ್ರೀ ಕೃಷ್ಣದೇವರಾಯ ವಿವಿಯಲ್ಲಿ ‘ಕುವೆಂಪು ಸಾಹಿತ್ಯದಲ್ಲಿ ವೈಚಾರಿಕತೆ’ ಉಪನ್ಯಾಸ | ಕುವೆಂಪು ರಚಿಸಿದ ಸಾಹಿತ್ಯದ ಎಲ್ಲಾ ಪ್ರಕಾರಗಳಲ್ಲಿ ಸರ್ವೋದಯ ತತ್ವ ಅಡಗಿದೆ: ಡಾ.ಸಿ. ಕೊಟ್ರೇಶ್

ಬಳ್ಳಾರಿ,ಮೇ 29(ಕರ್ನಾಟಕ ವಾರ್ತೆ): ಕುವೆಂಪು ರಚಿಸಿದ ಸಾಹಿತ್ಯದ ಎಲ್ಲಾ ಪ್ರಕಾರಗಳಲ್ಲಿ ಸರ್ವೋದಯ ತತ್ವವಿದೆ. ಪ್ರಜಾಪ್ರಭುತ್ವ ಮೌಲ್ಯಗಳನ್ನು ಎತ್ತಿ ಹಿಡಿಯುವದರ ಮೂಲಕ ಸಮನ್ವಯ ಮತ್ತು ಪೂರ್ಣದೃಷ್ಠಿಯ ಹರಿಕಾರರಾಗಿದ್ದಾರೆ. ಅವರ ವೈಚಾರಿಕತೆ ಮತ್ತು ವೈಜ್ಞಾನಿಕ ದೃಷ್ಠಿಕೋನವನ್ನು ಎಲ್ಲರೂ ಅನುಸರಿಸಬೇಕು ಎಂದು ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಸಿ. ಕೊಟ್ರೇಶ ಅವರು ಹೇಳಿದರು. ಇಲ್ಲಿಯ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಡಾ.ಬಿ.ಆರ್. ಅಂಬೇಡ್ಕರ್ ಸಭಾಂಗಣದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಬಳ್ಳಾರಿ ಜಿಲ್ಲಾ ಘಟಕ ಹಾಗೂ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ, ಕನ್ನಡ ಅಧ್ಯಯನ ವಿಭಾಗದ ಸಂಯುಕ್ತಾಶ್ರಯದಲ್ಲಿ ‘ದಿ.ಕೆ.ವಿ.ತಿರುಪಾಲಪ್ಪ ಸ್ಮಾರಕ ದತ್ತಿ ಕಾರ್ಯಕ್ರಮ’ದಡಿ ಬುಧವಾರ ಏರ್ಪಡಿಸಿದ್ದ ‘ಕುವೆಂಪು ಸಾಹಿತ್ಯದಲ್ಲಿ ವೈಚಾರಿಕತೆ’ ಉಪನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ವಿಜ್ಞಾನ ಮತ್ತು ಧರ್ಮವು ಕುವೆಂಪು ಅವರ ಸಾಹಿತ್ಯದ ವೈಚಾರಿಕತೆಯಾಗಿದೆ. ಮನುಜ ಮತ-ವಿಶ್ವ ಪಥ, ಸರ್ವೋದಯ ಪೂರ್ಣ ದೃಷ್ಟಿ ಸಮನ್ವಯತೆಯನ್ನು ಕುವೆಂಪು ಅವರ ಸಾಹಿತ್ಯದ ಮೂಲಕ ಕೊಟ್ಟ ನಿದರ್ಶನಗಳಾಗಿವೆ. ಇವುಗಳನ್ನು ಅರಗಿಸಿಕೊಂಡು ಬೆಳೆದಷ್ಟೂ ಕನ್ನಡ ಸಾಹಿತ್ಯವು ಇನ್ನು ಹೆಚ್ಚು ಶ್ರೀಮಂತವಾಗುತ್ತದೆ ಎಂದು ಹೇಳಿದರು. ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಅಧ್ಯಕ್ಷ ಡಾ.ನಿಷ್ಠಿ ರುದ್ರಪ್ಪ ಅವರು ಮಾತನಾಡಿ, ಕನ್ನಡ ಸಾಹಿತ್ಯ ಪರಿಷತ್ತು ಹಲವಾರು ವರ್ಷಗಳ ಇತಿಹಾಸ ಹೊಂದಿದೆ. ಅಖಿಲ ಭಾರತ ಸಮ್ಮೇಳನ ಕನ್ನಡ ಸಾಹಿತ್ಯವನ್ನು ನೆನಪು ಮಾಡಿಕೊಳ್ಳುವ ನಿಟ್ಟಿನಲ್ಲಿ ಈ ಕಾರ್ಯಕ್ರಮವನ್ನು ಅಯೋಜಿಸಲಾಗುತ್ತಿದೆ ಎಂದರು. ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ಎಂ.ಮುನಿರಾಜು ಮಾತನಾಡಿ, ಕುವೆಂಪು ಅವರು ಯಾವುದೇ ಅಧಿಕಾರ ಸ್ಥಾನಮಾನಕ್ಕೆ ಆಸೆ ಪಟ್ಟಿರಲಿಲ್ಲ. ವಿದ್ಯಾರ್ಥಿಗಳು ಅವರಂತೆ ಮನೋಭಾವನೆಯನ್ನು ಬೆಳಸಿಕೊಳ್ಳಬೇಕು. ಹೈದರಾಬಾದ್ ಕರ್ನಾಟಕದಲ್ಲಿ ಪೋಷಕರು ತಮ್ಮ ಮಕ್ಕಳ ಶಿಕ್ಷಣಕ್ಕೆ ಮಹತ್ವ ನೀಡಬೇಕು. ಮುಂಬರುವ ದಿನಗಳಲ್ಲಿ ದಿ.ಕೆ.ವಿ. ತಿರುಪಾಲಪ್ಪ ಸ್ಮಾರಕ ಕನ್ನಡ ಭವನ ನಿರ್ಮಾಣ ಮಾಡುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ವಿ.ವಿ ಯ ಅಕಾಡೆಮಿಕ್ ಕೌನ್ಸಿಲ್‌ನ ಮಾಜಿ ಸದಸ್ಯ ವೆಂಕಟೇಶ ಹೆಗಡೆ, ವಿವಿಯ ಸಿಂಡಿಕೇಟ್ ಮಾಜಿ ಸದಸ್ಯ ಜಯಪ್ರಕಾಶ್ ಗೌಡ, ಕಲಾ ನಿಕಾಯದ ಡೀನರಾದ ಪ್ರೊ.ಎನ್ ಶಾಂತಾನಾಯ್ಕ್, ಇಂಗ್ಲೀಷ್ ವಿಭಾಗದ ಮುಖ್ಯಸ್ಥ ಪ್ರೊ.ರಾಬರ್ಟ ಜೋಷ್, ಕನ್ನಡ ವಿಭಾಗದ ಮುಖ್ಯಸ್ಥ ಡಾ.ಜಿ.ಕೆ.ಸಂತೋಷ್ ವೇದಿಕೆ ಮೇಲೆuಟಿಜeಜಿiಟಿeಜ ಉಪಸ್ಥಿತರಿದ್ದರು. ವಿವಿಯ ಕನ್ನಡ ಅಧ್ಯಯನ ವಿಭಾಗದ ಉಪನ್ಯಾಸಕ ಡಾ.ಕೆ.ಎಸ್ ಶಿವಪ್ರಕಾಶ ನಿರೂಪಿಸಿದರು. ಡಾ.ರಂಗನಾಥ ಎನ್ ವಂದಿಸಿದರು. ವಿವಿಧ ನಿಕಾಯಗಳ ಡೀನರು, ವಿವಿಧ ವಿಭಾಗಗಳ ಮುಖ್ಯಸ್ಥರು, ಸಂಯೋಜಕರು, ಬೋಧಕರು, ಸಂಶೋಧನಾ ವಿದ್ಯಾರ್ಥಿಗಳು, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಹಾಜರಿದ್ದರು. -----------

ಕಿವುಡು ಮಕ್ಕಳ ವಸತಿಯುತ ಶಾಲಾ ದಾಖಲಾತಿಗೆ ಅರ್ಜಿ ಆಹ್ವಾನ

ಬಳ್ಳಾರಿ,ಮೇ 29(ಕರ್ನಾಟಕ ವಾರ್ತೆ): ನಗರದ ಕಂಟೋನ್‌ಮೆAಟ್‌ನ ಶಾಂತಿಧಾಮ ಆವರಣದ ಸರ್ಕಾರಿ ಕಿವುಡು ಮತ್ತು ಮೂಕ ಮಕ್ಕಳ ಪಾಠಶಾಲೆಯಲ್ಲಿ 2025-26ನೇ ಸಾಲಿಗೆ 1ನೇ ತರಗತಿಯಿಂದ 08 ನೇ ತರಗತಿಯವರೆಗೆ ವಸತಿಯುತ ಶಾಲಾ ದಾಖಲಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಸರ್ಕಾರಿ ಕಿವುಡು ಮಕ್ಕಳ ಶಾಲೆಯ ಅಧೀಕ್ಷಕ ಹೆಚ್.ಗೋವಿಂದಪ್ಪ ಅವರು ತಿಳಿಸಿದ್ದಾರೆ. ಈ ಶಾಲೆಯಲ್ಲಿ ಕಿವುಡು ಮತ್ತು ಮೂಕ ಬಾಲಕರಿಗೆ ಉಚಿತವಾಗಿ ವಿಶೇಷ ಶಿಕ್ಷಣವನ್ನು ನೀಡಲಾಗುತ್ತಿದ್ದು, 6 ವರ್ಷದಿಂದ 14 ವರ್ಷದ ಶ್ರವಣದೋಷ ಮಕ್ಕಳು ದಾಖಲಾತಿ ಪಡೆಯಬಹುದು. ಶಾಲೆಯಲ್ಲಿ ಮಕ್ಕಳಿಗೆ ಉಚಿತವಾಗಿ ಊಟ ಮತ್ತು ವಸತಿ, ಪಠ್ಯ ಪುಸ್ತಕ, ಸಮವಸ್ತç ಸೌಲಭ್ಯಗಳೊಂದಿಗೆ ಮಾತಿನ ತರಬೇತಿ, ಶ್ರವಣ ತರಬೇತಿ, ಭಾಷೆ ಕಲಿಕೆ, ಕಂಪ್ಯೂಟರ್ ತರಗತಿ, ಸ್ಮಾರ್ಟ್ ಕ್ಲಾಸ್, ಸೈನ್ಸ್ ಲ್ಯಾಬ್, ವಿಶೇಷ ಶಿಕ್ಷಕರಿಂದ ವಿಷಯ ಭೋದನೆ, ಮಾರ್ಚ್ಫಸ್ಟ್, ಸಾಮೂಹಿಕ ನೃತ್ಯ, ಕ್ರೀಡೆ ಹಾಗೂ ಸಹಪಠ್ಯ ಚಟುವಟಿಕೆಗಳನ್ನು ಕಲಿಸಿಕೊಡಲಾಗುತ್ತದೆ. ಶಾಲೆಗೆ ಶ್ರವಣದೋಷ ಮಕ್ಕಳನ್ನು ದಾಖಲಿಸಲು ಇಚ್ಛಿಸುವ ತಂದೆ, ತಾಯಿ ಮತ್ತು ಪೋಷಕರು ಅಗತ್ಯ ದಾಖಲೆ ಸಲ್ಲಿಸಿ ಪ್ರವೇಶಾತಿ ಪಡೆಯಬಹುದು. ಬೇಕಾದ ದಾಖಲೆಗಳು: ಶಾಲೆ ಪ್ರವೇಶ ಅರ್ಜಿ (ಉಚಿತವಾಗಿ ನೀಡಲಾಗುವುದು), ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಜನ್ಮ ದಿನಾಂಕ ಪ್ರಮಾಣ ಪತ್ರ, ತಂದೆ ಮತ್ತು ತಾಯಿಯ ಆಧಾರ್ ಕಾರ್ಡ್ ಪ್ರತಿ, ವಿದ್ಯಾರ್ಥಿಯ ಆಧಾರ್ ಕಾರ್ಡ್, ಅಂಗವಿಕಲ ಪ್ರಮಾಣ ಪತ್ರ, ಯುಡಿಐಡಿ ಕಾರ್ಡ್ ಮತ್ತು ಬ್ಯಾಂಕ್ ಪಾಸ್ ಪುಸ್ತಕ ಸೇರಿದಂತೆ ಇತರೆ ದೃಢೀಕೃತ ದಾಖಲಾತಿಗಳನ್ನು ಅರ್ಜಿಯೊಂದಿಗೆ ಲಗತ್ತಿಸಬೇಕು. ಹೆಚ್ಚಿನ ಮಾಹಿತಿಗಾಗಿ ಸರ್ಕಾರಿ ಕಿವುಡು ಮಕ್ಕಳ ಪಾಠಶಾಲೆಯ ಅಧೀಕ್ಷಕರ ಕಚೇರಿ ಅಥವಾ ದೂ.08392-297138 ಹಾಗೂ ಅಧೀಕ್ಷಕ ಗೋವಿಂದಪ್ಪ (ಮೊ.9008485380), ಶಿಕ್ಷಕ ರವಿ ಸಿ.ಕೆ(ಮೊ.9902106670), ಬಳ್ಳಾರಿ ಎಂಆರ್‌ಡಬ್ಲೂö್ಯ ರಾಣಿ(ಮೊ.8880875620), ಸಂಡೂರು ಎಂಆರ್‌ಡಬ್ಲೂö್ಯ ಕರಿಬಸಜ್ಜ(ಮೊ.9632052270) ಮತ್ತು ಸಿರುಗುಪ್ಪ ಎಂಆರ್‌ಡಬ್ಲೂö್ಯ ಸಾಬೇಶ(8880875620) ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ------------

ತೋಟಗಾರಿಕೆ ಇಲಾಖೆ: ಹನಿ ನೀರಾವರಿ ಘಟಕಕ್ಕೆ ಸಹಾಯಧನ ಪಡೆಯಲು ಅರ್ಜಿ ಆಹ್ವಾನ

ಬಳ್ಳಾರಿ,ಮೇ 29(ಕರ್ನಾಟಕ ವಾರ್ತೆ): ತೋಟಗಾರಿಕೆ ಇಲಾಖೆ ವತಿಯಿಂದ 2025-26 ನೇ ಸಾಲಿಗೆ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ತೋಟಗಾರಿಕೆ ಬೆಳೆ ಬೆಳೆಯುವ ರೈತರಿಗೆ ಹನಿ ನೀರಾವರಿ ಘಟಕಕ್ಕೆ ಸಹಾಯಧನ ನೀಡಲು ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ತಿಳಿಸಿದ್ದಾರೆ. ಎಲ್ಲಾ ವರ್ಗದ ರೈತರಿಗೆ ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ವಯ 5 ಹೆಕ್ಟೇರ್ ಪ್ರದೇಶಕ್ಕೆ ಸಹಾಯಧನ ವಿತರಿಸಲು ಅವಕಾಶವಿದ್ದು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ರೈತರಿಗೆ ಹಾಗೂ ಇತರೆ ವರ್ಗದ ರೈತರಿಗೆ 2 ಹೆಕ್ಟೇರ್ ಪ್ರದೇಶಕ್ಕೆ ಶೇ.90 ರ ಸಹಾಯಧನ ಕಲ್ಪಿಸಲಾಗುವುದು. 2 ಹೆಕ್ಟೇರ್ ನಿಂದ 5 ಹೆಕ್ಟೇರ್ ವರೆಗೂ ಶೇ.45 ರ ಸಹಾಯಧನ ಕಲ್ಪಿಸಲಾಗುವುದು. ಖಾಯಂ ನೀರಾವರಿ ಸೌಲಭ್ಯವಿರುವ ಹಾಗೂ ತೋಟಗಾರಿಕೆ ಬೆಳೆ ಹೊಂದಿರುವ ರೈತರು ಅಗತ್ಯ ದಾಖಲಾತಿಗಳೊಂದಿಗೆ ತೋಟಗಾರಿಕೆ ಇಲಾಖೆ ಕಚೇರಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿಗಳು ಹಾಗೂ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -------------

ಬಳ್ಳಾರಿ: ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

ಬಳ್ಳಾರಿ,ಮೇ 29(ಕರ್ನಾಟಕ ವಾರ್ತೆ): ಬಳ್ಳಾರಿ ತಾಲ್ಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ 2025-26 ನೇ ಸಾಲಿಗೆ (ಪಿ.ಯು.ಸಿ, ಐ.ಟಿ.ಐ, ಡಿಪ್ಲೋಮೋ ವಿದ್ಯಾರ್ಥಿಗಳಿಗೆ ಮಾತ್ರ) ಪ್ರವೇಶ ಪಡೆಯಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 2ಬಿ, 3ಎ, 3ಬಿ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಹಾಗೂ ಇತರೆ ಜನಾಂಗದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಅಗತ್ಯ ದಾಖಲೆಗಳೊಂದಿಗೆ ಆನ್‌ಲೈನ್ ವೆಬ್‌ಸೈಟ್ http://bcwd.karnataka.gov.in/ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಜೂನ್ 20 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ನಗರದ ಕಂಟೋನ್ ಮೆಂಟ್ ನ ಎಲ್.ಎಲ್.ಸಿ. ಕಾಲೋನಿಯ ಡಿಸ್ನಿ ಫಂಕ್ಷನ್‌ಹಾಲ್ ಎದುರುಗಡೆಯ ತಾಲ್ಲೂಕು ಹಿಂದುಳಿದ ವರ್ಗಗಳ ಕಾರ್ಯಾಲಯ ಅಥವಾ ದೂ.08392-294492 ಗೆ ಸಂಪರ್ಕಿಸಬಹುದು ಎಂದು ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ------------

ತೋಟಗಾರಿಗೆ ಇಲಾಖೆ: ತಾಳೆ ಬೆಳೆ ಯೋಜನೆಯಡಿ ಅರ್ಜಿ ಆಹ್ವಾನ

ಬಳ್ಳಾರಿ,ಮೇ 29(ಕರ್ನಾಟಕ ವಾರ್ತೆ): ತೋಟಗಾರಿಕೆ ಇಲಾಖೆ ವತಿಯಿಂದ ಕೇಂದ್ರ ಪುರಸ್ಕೃತ ಖಾದ್ಯ ತೈಲ ಅಭಿಯಾನ-ತಾಳೆ ಬೆಳೆ ಯೋಜನೆಯಡಿ ತಾಳೆ ಬೆಳೆ ಬೆಳೆಯಲು ಆಸಕ್ತಿಯುಳ್ಳ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ತಿಳಿಸಿದ್ದಾರೆ. ನೀರಿನ ಸೌಲಭ್ಯ ಹೊಂದಿರುವ ಫಲಾನುಭವಿಗಳಿಗೆ ಹೊಸ ಪ್ರದೇಶ ವಿಸ್ತರಣೆ ಪ್ರತಿ ಹೆಕ್ಟರ್ ಗೆ ರೂ.20 ಸಾವಿರದಂತೆ ಸಹಾಯಧನ ನೀಡಲಾಗುತ್ತದೆ. ಈ ಹಿಂದೆ ಅಭಿವೃದ್ಧಿ ಪಡಿಸಲಾದ ತಾಳೆ ಬೆಳೆ ತೋಟಗಳ ಮೊದಲನೇ, ಎರಡನೇ, ಮೂರನೇ ಮತ್ತು ನಾಲ್ಕನೇ ವರ್ಷದ ನಿರ್ವಹಣೆಗೆ ಪ್ರತಿ ಹೆಕ್ಟರ್ ರೂ.5250/- ಮೊತ್ತದ ರಾಸಾಯನಿಕ ಮತ್ತು ಸಾವಯವ ಗೊಬ್ಬರ ನೀಡಲಾಗುತ್ತದೆ. ಕನಿಷ್ಠ 1 ಹೆಕ್ಟರ್ ತಾಳೆ ಬೆಳೆ ಪ್ರದೇಶವನ್ನು ಕೈಗೊಂಡಿರುವ ಫಲಾನುಭವಿಗಳಿಗೆ 15 ಹೆಚ್.ಪಿ ಸಾಮಾರ್ಥ್ಯದ ಡೀಸೆಲ್, ವಿದ್ಯುತ್ ಚಾಲಿತ ಪಂಪ್‌ಸೆಟ್ ಕೊಳ್ಳಲು ಸಾಮಾನ್ಯ ರೈತರಿಗೆ ಒಟ್ಟು ಖರ್ಚಿನ ಶೇ.50 ರಷ್ಟು ಪ್ರತಿ ಘಟಕಕ್ಕೆ ಗರಿಷ್ಟ ರೂ.22,500 ರಂತೆ ಸಹಾಯಧನ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ಅತೀ ಸಣ್ಣ ಮತ್ತು ಸಣ್ಣ ರೈತ ಫಲಾನುಭವಿಗಳಿಗೆ ಪ್ರತಿ ಘಟಕಕ್ಕೆ ಗರಿಷ್ಟ ರೂ.27 ಸಾವಿರಸಹಾಯಧನ ನೀಡಲಾಗುವುದು. ತಾಳೆ ಬೆಳೆಯುವ ರೈತರು ಮೊದಲ ನಾಲ್ಕು ವರ್ಷದವರೆಗೆ ತಾಳೆ ಬೆಳೆಯಲ್ಲಿ ತೋಟಗಾರಿಕೆ ಬೆಳೆಗಾಳ ಅಂತರ ಬೇಸಾಯ ಕೈಗೊಂಡಲ್ಲಿ ಪ್ರತಿ ಹೆಕ್ಟರ್ ಗೆ ರೂ.5 ಸಾವಿರ ಸಹಾಯಧನ ನೀಡಲಾಗುವುದು. ಕನಿಷ್ಠ ಒಂದು ಎಕರೆ ಪ್ರದೇಶದಲ್ಲಿ ಇಳುವರಿ ನೀಡುತ್ತಿರುವ ತಾಳೆ ತೋಟದಲ್ಲಿ ಕೊಳವೆ ಬಾವಿ ಅಳವಡಿಸಿದ ರೈತರಿಗೆ ರೂ.50 ಸಾವಿರ ಮೊತ್ತಕ್ಕೆ ಸಹಾಯಧನ ನೀಡಲು ಅವಕಾಶವಿದೆ. ತಾಳೆ ಬೆಳೆ ಕೃಷಿಗೆ ಅಗತ್ಯವಿರುವ ಯಂತ್ರೋಪಕರಣಗಳ ಖರೀದಿಗೆ ಶೇಕಡವಾರು ಸಹಾಯಧನ ವಿತರಿಸಲು ಅವಕಾಶವಿದೆ. ಎರೆಹುಳು ಘಟಕಕ್ಕೆ ಶೇ.50 ರಂತೆ 15 ಸಾವಿರ ರೂ. ಮತ್ತು ನೀರು ಕೊಯ್ಲು ಘಟಕಕ್ಕೆ ಶೇ.50 ರಂತೆ 75 ಸಾವಿರ ರೂ.ಗಳ ಸಹಾಯಧನ ವಿತರಿಸಲು ಅವಕಾಶ ಇದೆ. ಆಸಕ್ತ ರೈತರು ಅಗತ್ಯ ದಾಖಲಾತಿಗಳೊಂದಿಗೆ ತೋಟಗಾರಿಕೆ ಇಲಾಖೆ ಕಚೇರಿಗೆ ಭೇಟಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿಗಳು ಹಾಗೂ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. --------------

ಸಂಡೂರು: ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

ಬಳ್ಳಾರಿ,ಮೇ 29(ಕರ್ನಾಟಕ ವಾರ್ತೆ): ಸಂಡೂರು ತಾಲ್ಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ 2025-26 ನೇ ಸಾಲಿಗೆ (ಪಿ.ಯು.ಸಿ, ಐ.ಟಿ.ಐ, ಡಿಪ್ಲೋಮೋ ವಿದ್ಯಾರ್ಥಿಗಳಿಗೆ ಮಾತ್ರ) ಪ್ರವೇಶ ಪಡೆಯಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 2ಬಿ, 3ಎ, 3ಬಿ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಹಾಗೂ ಇತರೆ ಜನಾಂಗದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಸಂಡೂರು ಪಟ್ಟಣದ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯ ಮತ್ತು ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಅಗತ್ಯ ದಾಖಲೆಗಳೊಂದಿಗೆ ಆನ್‌ಲೈನ್ ವೆಬ್‌ಸೈಟ್ http://bcwd.karnataka.gov.in/ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಜೂನ್ 20 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಂಡೂರು ಪಟ್ಟಣದ ವಾಲ್ಮೀಕಿ ವತ್ತದ ತಾಲ್ಲೂಕು ಹಿಂದುಳಿದ ವರ್ಗಗಳ ಕಾರ್ಯಾಲಯ ಅಥವಾ ದೂ.08395-295180 ಗೆ ಸಂಪರ್ಕಿಸಬಹುದು ಎಂದು ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ವೀರಭದ್ರಯ್ಯ ಹಿರೇಮಠ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ------------

ರಕ್ತದಾನದಿಂದ ಜೀವ ಉಳಿಸಬಹುದು: ಡಿಹೆಚ್ಒ ಡಾ.ಯಲ್ಲಾ ರಮೇಶ್ ಬಾಬು

ಬಳ್ಳಾರಿ,ಮೇ 28(ಕರ್ನಾಟಕ ವಾರ್ತೆ): ಸ್ವಯಂ ಪ್ರೇರಿತ ರಕ್ತದಾನದಿಂದ ಜನರ ಜೀವ ಉಳಿಸಬಹುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಅವರು ಹೇಳಿದರು. ಬುಧವಾರದಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ರಕ್ತ ಸುರಕ್ಷತಾ ಟಾಸ್ಕ್ ಪೋರ್ಸ್ ಸಮಿತಿ ಹಾಗೂ ಏಡ್ಸ್ ನಿಯಂತ್ರಣ ಘಟಕ ಹಾಗೂ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ದೇವಿನಗರ, ಯೋಗ ತರಬೇತಿ ಕೇಂದ್ರ ಪಾರ್ವತಿನಗರ, ಎಸ್‌ಪಿ ಸರ್ಕಲ್ ಆಟೋ ಚಾಲಕರ ಸಂಘ ಇವರ ಸಹಯೋಗದಲ್ಲಿ ಸ್ಪಂದನ ಬ್ಲಡ್‌ಬ್ಯಾಂಕ್ ವತಿಯಿಂದ ದೇವಿನಗರದಲ್ಲಿ ಹಮ್ಮಿಕೊಂಡಿದ್ದ ಸ್ವಯ ಪ್ರೇರಿತ ರಕ್ತದಾನ ಶಿಬಿರದಲ್ಲಿ ದಾನ ಮಾಡಿದ ರಕ್ತದಾನಿಗಳಿಗೆ ಅಭಿನಂದಿಸಿ ಅವರು ಮಾತನಾಡಿದರು. ಜೀವಂತವಿರುವಾಗಲೇ ತಮ್ಮ ದೇಹದಿಂದ ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ, ಜಾತಿ ಧರ್ಮಗಳ ಎಲ್ಲೆಯಿಲ್ಲದೆ, ಗಂಡು-ಹೆಣ್ಣು ಎಂಬ ಭೇದವಿಲ್ಲದೆ ದಾನ ಮಾಡಬಹುದಾದ ಮತ್ತು ಇನ್ನೊಬ್ಬರ ಜೀವ ಉಳಿಸಲು ಸಹಾಯಕವಾಗುವುದೆಂದರೆ ಅದು ಮನುಷ್ಯನ ರಕ್ತವಾಗಿದೆ ಎಂದರು. ಒಬ್ಬರಿಂದ ಪಡೆದ ರಕ್ತವನ್ನು ಹೊಲ್ ಬ್ಲಡ್, ಪ್ಲೇಟ್‌ಲೆಟ್ಸ್, ಪ್ಲಾಸ್ಮಾ, ಪ್ಯಾಕಡ್ ಸೆಲ್ಸ್, ಎಂಬ ನಾಲ್ಕು ರೂಪದಲ್ಲಿ ವ್ಯಕ್ತಿಯ ಜೀವ ಉಳಿಸಲು ಬಳಸಬಹುದಾಗಿದ್ದು, ಪ್ರಸ್ತುತ ದಿನಗಳಲ್ಲಿ ರಕ್ತದ ಅವಶ್ಯಕತೆಯಿರುವುದರಿಂದ 18 ವರ್ಷ ಮೇಲ್ಪಟ್ಟ ಆರೋಗ್ಯವಂತ ಪ್ರತಿಯೊಬ್ಬರೂ ರಕ್ತದಾನ ಮಾಡುವ ಮೂಲಕ ಹಲವಾರು ಜನರ ಜೀವ ಉಳಿಸುವ ಕಾರ್ಯದಲ್ಲಿ ಭಾಗಿಯಾಗಬೇಕು ಎಂದು ತಿಳಿಸಿದರು. 45 ಕೆಜಿ ಮೇಲ್ಪಟ್ಟ ಹಾಗೂ 12.5 ಗ್ರಾಮ್‌ಗಿಂತ ಹೆಚ್ಚು ಹಿಮೋಗ್ಲೊಬಿನ್ ಇರುವ 18 ವರ್ಷ ಮೇಲ್ಪಟ್ಟ ಮಹಿಳೆಯರು ಪ್ರತಿ ನಾಲ್ಕು ತಿಂಗಳಿಗೊಮ್ಮೆ, ಪುರುಷರು ಪ್ರತಿ ಮೂರು ತಿಂಗಳಿಗೊಮ್ಮೆ, ರಕ್ತದಾನ ಮಾಡುವ ಮೂಲಕ ರಕ್ತಹೀನತೆಯಿಂದ ಬಳಲುವ ಗರ್ಭಿಣಿ ಸ್ತ್ರೀಯರಿಗೆ, ಶಸ್ತ್ರಚಿಕಿತ್ಸಾ ಹೆರಿಗೆ ವೇಳೆ ಮತ್ತು ಅಪಘಾತಗಳು, ತುರ್ತು ಶಸ್ತ್ರಚಿಕಿತ್ಸೆಗಳ ಸಂದರ್ಭಕ್ಕಾಗಿ ಹಾಗೂ ಕ್ಯಾನ್ಸರ್ ರೋಗಿಗಳಿಗೆ ಥ್ಯಾಲಿಸೀಮಿಯಾ, ಹಿಮೋಫಿಲಿಯಾ ಮುಂತಾದ ರೋಗಿಗಳ ಜೀವವನ್ನು ಉಳಿಸಲು ಸಹಾಯಕವಾಗಲಿದೆ ಎಂದರು. ಜಿಲ್ಲಾ ರೋಗವಾಹಕ ಆಶ್ರೀತ ರೋಗಗಳ ನಿಯಂತ್ರಣಾದಿಕಾರಿ ಡಾ.ಆರ್.ಅಬ್ದುಲ್ಲಾ ಅವರು ಮಾತನಾಡಿ ಸೊಳ್ಳೆ ಕಚ್ಚುವಿಕೆಯಿಂದ ಹರಡುವ ಡೆಂಗ್ಯುದಂತಹ ಕಾಯಿಲೆಗೆ ಒಳಗಾಗಿ ಪ್ಲೇಟ್‌ಲೇಟ್ಸ್‌ ಕೊರತೆಯಾದಾಗ ರಕ್ತ ಅಲ್ಲಿ ಪ್ರಮುಖ ಪಾತ್ರವಹಿಸುತ್ತದೆ ಎಂದರು. ರಕ್ತವನ್ನು ಕೃತಕವಾಗಿ ಸೃಷ್ಟಿಸಲು ಸಾಧ್ಯವಿಲ್ಲ. ರಕ್ತವೇ ದೇಹದ ಜೀವನಾಡಿಯಾಗಿದ್ದು, ರಕ್ತಕ್ಕೆ ಪರ್ಯಾಯವಾದ ವಸ್ತು ಇಲ್ಲದೆ ಇರುವುದರಿಂದ ಇನ್ನೊಬ್ಬ ವ್ಯಕ್ತಿಯ ರಕ್ತದಾನದ ಮೂಲಕ ಮಾತ್ರ ರಕ್ತ ಪಡೆಯಬಹುದಾಗಿದೆ. ರಕ್ತದಾನ ಮಾಡುವ ಮೂಲಕ ದಾನಿಗಳು ತಮ್ಮ ಆರೋಗ್ಯ ಉಲ್ಲಾಸಮಯವಾಗಿಸಿಟ್ಟುಕೊಳ್ಳುವುದರ ಜೊತೆಗೆ ಇನ್ನೊಬರ ಜೀವ ಉಳಿಸಲು ಮುಂದೆ ಬರಬೇಕೆಂದು ವಿನಂತಿಸಿದರು. ಈ ಸಂದರ್ಭದಲ್ಲಿ ದೇವಿನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಸುಧಾರಾಣಿ, ಬ್ಲಡ್‌ಬ್ಯಾಂಕ್ ವೈದ್ಯರಾದ ಡಾ.ಪ್ರಕಾಶ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ಹೆಚ್ ದಾಸಪ್ಪನವರ, ಯೋಗ ಕೇಂದ್ರದ ಪ್ರಕಾಶ, ಮಹಿಳಾ ಮುಖಂಡರಾದ ಸುಮಾರೆಡ್ಡಿ, ರತ್ನ, ಸಿಬ್ಬಂದಿಯವರಾದ ಶ್ವೇಥಾ, ರಾಮಕೃಷ್ಣ, ಪ್ರಶಾಂತ್, ಕೇಶವ, ಅಂಬರೀಶ್ ಸೇರಿದಂತೆ ಆಶಾ ಕಾರ್ಯಕರ್ತೆಯರು, ದಾನಿಗಳು ಉಪಸ್ಥಿತರಿದ್ದರು. =======

ಬುಧವಾರ, ಮೇ 28, 2025

ಕೃಷಿ ಇಲಾಖೆ: ರೈತರು ಡಿಎಪಿ ಗೊಬ್ಬರಕ್ಕೆ ಪರ್ಯಾಯವಾಗಿ ಸಂಯುಕ್ತ ರಸಗೊಬ್ಬರ ಬಳಸಿ

ಬಳ್ಳಾರಿ,ಮೇ 28(ಕರ್ನಾಟಕ ವಾರ್ತೆ): ರೈತರು ಬೆಳೆಗಳಲ್ಲಿ ಗುಣಮಟ್ಟದ ಇಳುವರಿ ಪಡೆಯಲು ಡಿಎಪಿ ಗೊಬ್ಬರದ ಬದಲಾಗಿ ಸಂಯುಕ್ತ ರಸಗೊಬ್ಬರ ಬಳಸಬೇಕು ಎಂದು ಜಂಟಿ ಕೃಷಿ ನಿರ್ದೇಶಕ ಸೋಮಸುಂದರ್ ಅವರು ತಿಳಿಸಿದ್ದಾರೆ. ಸಸ್ಯಗಳ ಬೆಳವಣಿಗೆ ಮತ್ತು ಅಭಿವೃದ್ಧಿಗೆ ಹದಿನೇಳು ಪೋಷಕಾಂಶಗಳ ಅಗತ್ಯವಿರುತ್ತದೆ. ಇವುಗಳಲ್ಲಿ ಇಂಗಾಲ, ಜಲಜನಕ ಮತ್ತು ಆಮ್ಲಜನಕವು ಸ್ವಾಭಾವಿಕವಾಗಿ ದೊರೆಯಲಿದ್ದು, ಗಾಳಿ ಮತ್ತು ನೀರಿನ ಮೂಲಕ ಸಸ್ಯಗಳಿಗೆ ಲಭ್ಯವಾಗುತ್ತವೆ. ಉಳಿದ ಹದಿನಾಲ್ಕು ಪೋಷಕಾಂಶಗಳಲ್ಲಿ ಸಾರಜನಕ, ರಂಜಕ, ಪೊಟ್ಯಾಷ್ ಹೆಚ್ಚಿನ ಪ್ರಮಾಣದಲ್ಲಿ ಬೇಕಿದ್ದು, ಇವುಗಳನ್ನು ಪ್ರಧಾನ ಪೋಷಕಾಂಶಗಳೆAದು ಹೇಳಲಾಗುತ್ತದೆ. ಕಾಲ್ಸಿಯಂ, ಮೆಗ್ನೆಷಿಯಂ, ಗಂಧಕ, ಕಬ್ಬಿಣ, ಜಿಂಕ್, ಬೋರಾನ್, ತಾಮ್ರ, ಮ್ಯಾಂಗನೀಸ್, ಮಾಲಿಬಿನಂ. ಕ್ಲೋರಿನ್ ಮತ್ತು ನಿಕ್ಲ್ ಕಡಿಮೆ ಪ್ರಮಾಣದಲ್ಲಿ ಬೇಕಿದ್ದು ಇವುಗಳನ್ನು ಲಘು ಪೋಷಕಾಂಶಗಳೆAದು ವಿಂಗಡಿಸಲಾಗಿದೆ. ಇವುಗಳಲ್ಲಿ ಯಾವುದೇ ಒಂದು ಪೋಷಕಾಂಶದ ಕೊರತೆಯಾದರೂ ಸಸ್ಯಗಳ ಬೆಳವಣಿಗೆ ಮತ್ತು ಅಭಿವೃದ್ಧಿಯ ಮೇಲೆ ಪರಿಣಾಮಬೀರಿ ಇಳುವರಿ ಕುಂಠಿತವಾಗುತ್ತದೆ. ಪ್ರಧಾನ ಪೋಷಕಾಂಶಗಳು ಮತ್ತು ಲಘು ಪೋಷಕಾಂಶಗಳಿಗೆ ಭೂಮಿಯೇ ಮುಖ್ಯ ಅಧಾರ. ಮಣ್ಣಿನಿಂದ ಈ ಎಲ್ಲಾ ಪೋಷಕಾಂಶಗಳು ಬೆಳೆಗಳಿಗೆ ಬೇಕಾದ ಪ್ರಮಾಣದಲ್ಲಿ ದೊರೆಯುವುದಿಲ್ಲವಾದ್ದರಿಂದ ಬಾಹ್ಯವಾಗಿ ನೀಡುವುದು ಅನಿವಾರ್ಯ. ಬೆಳೆಗಳಿಗೆ ಬೇಕಾಗುವ ಈ ಬಾಹ್ಯ ಪೋಷಕಾಂಶಗಳನ್ನು ಸಾವಯವ (ಕೊಟ್ಟಿಗೆ ಗೊಬ್ಬರ, ಹಸಿರೆಲೆ ಗೊಬ್ಬರ, ಹಿಂಡಿ ಇತ್ಯಾದಿ) ಮತ್ತು ರಸಗೊಬ್ಬರಗಳಿಂದ ಒದಗಿಸಬೇಕು. *ರೈತರು ಅನುಸರಿಸಬೇಕಾದ ಕ್ರಮ:* ರೈತರು ಕೇವಲ ಒಂದು ಅಥವಾ ಎರಡು ಪೋಷಕಾಂಶ ಒದಗಿಸುವ ಯೂರಿಯಾ ಹಾಗೂ ಡಿ.ಎ.ಪಿ.ಯನ್ನು ರೂಢಿಗತವಾಗಿ ಬಳಸುತ್ತಿದ್ದು, ಇವುಗಳಲ್ಲಿ ಸಾರಜನಕ ಮತ್ತು ರಂಜಕದ ಅಂಶ ಮಾತ್ರವಿರುತ್ತದೆ. ಆದರೆ, ಬೆಳೆಗಳಿಗೆ ಬರ ಮತ್ತು ರೋಗ ನಿರೋಧಕ ಶಕ್ತಿ ನೀಡಿ ಕಾಳಿನ ತೂಕ ಹೆಚ್ಚಿಸಲು ಅತ್ಯಂತ ಅವಶ್ಯಕವಾಗಿರುವ ಪೊಟ್ಯಾಷ್ ಲಭ್ಯವಿರುವುದಿಲ್ಲ. ಮಾರುಕಟ್ಟೆಯಲ್ಲಿ ವಿವಿಧ ಶ್ರೇಣಿಯ (ಗ್ರೇಡ್) ಸಾರಜನಕ, ರಂಜಕ ಮತ್ತು ಪೊಟ್ಯಾಷ್ಯುಕ್ತ ಬಹಳಷ್ಟು ರಸಗೊಬ್ಬರಗಳು ಲಭ್ಯವಿದ್ದು, ಶಿಫಾರಸ್ಸಿನಂತೆ ವಿವಿಧ ರಸಗೊಬ್ಬರಗಳ ಸಂಯೋಜನೆಯೊAದಿಗೆ ಬಳಸಬಹುದು. ಶಿಫಾರಸ್ಸಿನಂತೆ ಬೆಳೆಗಳಿಗೆ ಸಾರಜನಕ:ರಂಜಕ:ಪೊಟ್ಯಾಷ್ ರಸಗೊಬ್ಬರಗಳನ್ನು 4:2:1 ರ ಅನುಪಾತದಲ್ಲಿ ಬಳಸಬೇಕು. ಆದರೆ ಇತ್ತೀಚಿನ ವರ್ಷಗಳಲ್ಲಿ ರೈತರು ಬಳಸುತ್ತಿರುವ ರಸಗೊಬ್ಬರಗಳ ಅನುಪಾತವು ಜಿಲ್ಲೆಯಲ್ಲಿ 9:5:1 ಆಗಿದೆ. ಹಾಗಾಗಿ ರೈತರು ಸಮತೋಲನಾತ್ಮಕ ರಸಗೊಬ್ಬರಗಳ ಬಳಕೆ ಮಾಡಬೇಕು. ರೈತರು ರಸಗೊಬ್ಬರವನ್ನು ಕೇವಲ ಒಂದೇ ಸಂಸ್ಥೆಯ ಅಥವಾ ಒಂದೇ ರಸಗೊಬ್ಬರಕ್ಕೆ ಆದ್ಯತೆ ನೀಡದೇ, ಡಿ.ಎ.ಪಿ ರಸಗೊಬ್ಬರಕ್ಕೆ ಪರ್ಯಾಯವಾಗಿ ಗಂಧಕ ಒದಗಿಸುವ 20:20:0:13 ಹಾಗೂ ಪೊಟ್ಯಾಷ್ ಒದಗಿಸುವ ಇತರೆ ಸಂಯುಕ್ತ ರಸಗೊಬ್ಬರಗಳಾದ 15:15:15, 10.26.26, 12:32:16, 17:17:17, 19:19:19, ಇತ್ಯಾದಿ ರಸಗೊಬ್ಬರಗಳನ್ನೂ ಸಹ ಬಳಸಬಹುದಾಗಿದೆ. ಮುಖ್ಯವಾಗಿ ಮಣ್ಣು ಪರೀಕ್ಷೆ ಆಧಾರದ ಮೇಲೆ ರಸಗೊಬ್ಬರಗಳನ್ನು ಬಳಸಬೇಕು. ಬೆಳೆಗಳಿಗೆ ಅವಶ್ಯಕ ಅವಧಿಯಲ್ಲಿ ರಸಗೊಬ್ಬರಗಳನ್ನು ಬಳಸುವುದು. ಹೆಚ್ಚಿನ ಪ್ರಮಾಣದಲ್ಲಿ ಸಾವಯವ ಗೊಬ್ಬರಗಳನ್ನು ಬಳಸುವುದು ಇನ್ನೂ ಸೂಕ್ತವಾಗಿದೆ. ಹೆಚ್ಚಿನ ಮಾಹಿತಿಗಾಗಿ ರೈತರು ತಮ್ಮ ಸಮೀಪದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ------------

ಮೇ 30 ರಂದು ನೇರ ಸಂದರ್ಶನ

ಬಳ್ಳಾರಿ,ಮೇ 28(ಕರ್ನಾಟಕ ವಾರ್ತೆ): ನಗರದ ಎಸ್.ಪಿ ವೃತ್ತದ ಪಾರ್ವತಿ ನಗರ ಬಡಾವಣೆಯ 1ನೇ ಮಹಡಿ ಅಭಿಕಾಂಪ್ಲೆಕ್ಸ್ನ ಡೋರ್ ನಂ-12ನ ಎಯು ಸ್ಮಾಲ್ ಫೈನಾನ್ಸ್ ಬ್ಯಾಂಕ್ ಲಿಮಿಟೆಡ್ ನಲ್ಲಿ ಮೇ 30 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 01 ಗಂಟೆಯವರೆಗೆ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ತಿಳಿಸಿದ್ದಾರೆ. ಇಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದು, ಈ ನೇರ ಸಂದರ್ಶನದಲ್ಲಿ ಭಾಗವಹಿಸಲು ಯಾವುದೇ ಶುಲ್ಕ ಇರುವುದಿಲ್ಲ. ಆಸಕ್ತ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಭಾಗವಹಿಸಿ, ಇದರ ಸದುಪಯೋಗ ಪಡೆದುಕೊಳ್ಳಬೇಕು. ಪುರುಷರಿಗೆ ಮಾತ್ರ ಅವಕಾಶ. ಸಂದರ್ಶನದಲ್ಲಿ ಭಾಗವಹಿಸುವ ಅಭ್ಯರ್ಥಿಗಳು ತಮ್ಮ ಆಧಾರ್ ಕಾರ್ಡ್ ಪ್ರತಿ ಮತ್ತು ಸ್ವ-ವಿವರ (ಬಯೋಡೇಟಾ) ಗಳೊಂದಿಗೆ ಅಂದು ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಅಥವಾ ಮೊ.9742718891, 9663263086, 9900827768, 636040809 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. --------------

ಅತಿಥಿ ಶಿಕ್ಷಕರ, ಉಪನ್ಯಾಸಕರ ಆಯ್ಕೆ: ಜೂ.01 ರಂದು ಪ್ರವೇಶ ಪರೀಕ್ಷೆ

ಬಳ್ಳಾರಿ,ಮೇ 28(ಕರ್ನಾಟಕ ವಾರ್ತೆ): ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಹಾಗೂ ಕಾಲೇಜು ಮತ್ತು ಮೌಲನಾ ಆಜಾದ್ ಮಾದರಿ ಮಾದರಿ ಶಾಲೆಗಳಲ್ಲಿ ಖಾಲಿ ಇರುವ ಅತಿಥಿ ಶಿಕ್ಷಕ ಮತ್ತು ಅತಿಥಿ ಉಪನ್ಯಾಸಕರನ್ನು ತಾತ್ಕಾಲಿಕವಾಗಿ ಆಯ್ಕೆ ಮಾಡಲು ಜೂ.01 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 01 ಗಂಟೆಯವರೆಗೆ ಅಲ್ಲಿಪುರದ ಹೊಸಪೇಟೆ ರಸ್ತೆಯ ಬಿಐಟಿಎಂ ಕಾಲೇಜು ಹತ್ತಿರದ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆಯಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ ನಿಗದಿಪಡಿಸಲಾಗಿದೆ. ಅತಿಥಿ ಶಿಕ್ಷಕರ ಮತ್ತು ಉಪನ್ಯಾಸಕರ ಹುದ್ದೆಗೆ ಈಗಾಗಲೇ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಕಚೇರಿಗೆ ಭೇಟಿ ನೀಡಿ ಪರೀಕ್ಷೆಯ ಪ್ರವೇಶ ಪತ್ರ ಪಡೆದುಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮAದಿರ ಹತ್ತಿರದ ಮೌಲನಾ ಆಜಾದ್ ಭವನದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಚೇರಿ(ದೂ.08392-200125/224) ಗೆ ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ವಿಠೋಬಾ ಹೊನಕಾಂಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -------------

ಹೆಚ್ಚು ಬಾರಿ ರಕ್ತದಾನ ಮಾಡಿದವರಿಗೆ ಸನ್ಮಾನ: ಅರ್ಜಿ ಆಹ್ವಾನ

ಬಳ್ಳಾರಿ,ಮೇ 28(ಕರ್ನಾಟಕ ವಾರ್ತೆ): ಭಾರತೀಯ ರೆಡ್‌ಕ್ರಾಸ್ ಸಂಸ್ಥೆ, ರಾಜ್ಯ ಶಾಖೆ ಬೆಂಗಳೂರು ವತಿಯಿಂದ ಜೂ.14 ರಂದು “ವಿಶ್ವ ರಕ್ತದಾನಿಗಳ ದಿನಾಚಾರಣೆ” ಅಂಗವಾಗಿ 25 ಕ್ಕಿಂತ ಹೆಚ್ಚು ಬಾರಿ ರಕ್ತದಾನ ಮಾಡಿದವರಿಗೆ ಕರ್ನಾಟಕ ರಾಜ್ಯ ರೆಡ್‌ಕ್ರಾಸ್ ಸಂಸ್ಥೆಯಿAದ ಸನ್ಮಾನ ಮಾಡಲಾಗುತ್ತಿದ್ದು, ಜಿಲ್ಲೆಯ ಅರ್ಹ ರಕ್ತದಾನಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಬಳ್ಳಾರಿ ಶಾಖೆಯ ಕಾರ್ಯದರ್ಶಿ ಎಂ.ಎ.ಷಕೀಬ್ ತಿಳಿಸಿದ್ದಾರೆ. ಆಸಕ್ತ 25 ಕ್ಕಿಂತ ಹೆಚ್ಚು ಬಾರಿ ರಕ್ತದಾನ ಮಾಡಿದ ವ್ಯಕ್ತಿಗಳು ತಮ್ಮ ರಕ್ತದಾನ ಮಾಡಿದ ಪ್ರಮಾಣ ಪತ್ರಗಳ ಜೆರಾಕ್ಸ್ ಪ್ರತಿಯನ್ನು ನಗರದ ಜಿಲ್ಲಾ ನ್ಯಾಯಾಲಯ ರಸ್ತೆಯ ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಬಳ್ಳಾರಿ ಜಿಲ್ಲಾ ಶಾಖೆಗೆ ಮೇ 30 ಸಂಜೆ 05 ಗಂಟೆಯೊಳಗಾಗಿ ಅರ್ಜಿ ಸಲ್ಲಿಸಬಹುದು. ಈ ಹಿಂದೆ ಸನ್ಮಾನ ಮಾಡಿರುವ ವ್ಯಕ್ತಿಗಳು ಅರ್ಹರಾಗಿರುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಮೊ.9886173411 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ------------

ಮೇ 29 ರಂದು ವಿದ್ಯುತ್ ವ್ಯತ್ಯಯ

ಬಳ್ಳಾರಿ,ಮೇ 28(ಕರ್ನಾಟಕ ವಾರ್ತೆ): ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-2 ರ ವ್ಯಾಪ್ತಿಯಲ್ಲಿ ವಿದ್ಯುತ್ ಲೈನುಗಳ ನಿರ್ವಹಣೆ ಕಾರ್ಯ ಕೈಗೊಳ್ಳುತ್ತಿರುವುದರಿಂದ ಮೇ 29 ರಂದು ಬೆಳಿಗ್ಗೆ 09 ಗಂಟೆಯಿAದ ಸಂಜೆ ಮಧ್ಯಾಹ್ನ 02 ಗಂಟೆಯವರೆಗೆ ಎಫ್-8 ನ ಬಸವೇಶ್ವರ ನಗರ, ಎಂ.ಅರ್.ವಿ ಲೇಔಟ್, ಸದ್ಗುರು ಕಾಲೋನಿ, ರೇಣುಕಾಚಾರ್ಯ ನಗರ, ಅಲ್ಲಂ ಲೇಔಟ್, ಬಿ.ಎಂ.ಎಸ್ ಲೇಔಟ್, ತಿರುಮಲ ಲೇಔಟ್, ಹರಿಪ್ರಿಯ ನಗರ, ಸುಷ್ಮಸ್ವರಾಜ್ ಕಾಲೋನಿಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಮತ್ತು ವಿದ್ಯುತ್ ಗ್ರಾಹಕರು ಸಹಕರಿಸಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -------------

ವ್ಯಕ್ತಿ ಕಾಣೆ; ಪತ್ತೆಗೆ ಮನವಿ

ಬಳ್ಳಾರಿ,ಮೇ 28(ಕರ್ನಾಟಕ ವಾರ್ತೆ): ಬಳ್ಳಾರಿ ತಾಲ್ಲೂಕಿನ ಪರಮದೇವನಹಳ್ಳಿ ಗ್ರಾಮದ ಭುಜ್ಜಮ್ಮ ಕಟ್ಟೆ ಹತ್ತಿರದ 02 ನೇ ವಾರ್ಡ್ ನ ನಿವಾಸಿಯಾದ ನಾಗರಾಜ.ಎಂ ಎನ್ನುವ 38 ವರ್ಷದ ವ್ಯಕ್ತಿ ಮೇ 18 ರಂದು ಕಾಣೆಯಾಗಿರುವ ಕುರಿತು ಪಿ.ಡಿ ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಅವರು ಮನವಿ ಮಾಡಿದ್ದಾರೆ. ಚಹರೆ ಗುರುತು: ಅಂದಾಜು 5.5 ಅಡಿ ಎತ್ತರ, ದುಂಡು ಮುಖ, ಎಣ್ಣೆಗೆಂಪು ಮೈಬಣ್ಣ, ಸಾಧಾರಣ ಮೈಕಟ್ಟು ಹೊಂದಿರುತ್ತಾನೆ. ಕಾಣೆಯಾದ ಸಂದರ್ಭದಲ್ಲಿ ಬಿಳಿ ಬಣ್ಣದ ಅಂಗಿ ಮತ್ತು ಬಿಳಿ ಬಣ್ಣದ ಲುಂಗಿ ಧರಿಸಿರುತ್ತಾನೆ. ವ್ಯಕ್ತಿಯ ಬಗ್ಗೆ ಸುಳಿವು ಸಿಕ್ಕಲ್ಲಿ ಪಿ.ಡಿ ಹಳ್ಳಿ ಪೊಲೀಸ್ ಠಾಣೆಯ ದೂ.08392-265010 ಮತ್ತು ಪಿ.ಎಸ್.ಐ ರವರ ಮೊ.9480803052, ಪಿ.ಡಿ.ಹಳ್ಳಿ ವೃತ್ತದ ಸಿಪಿಐ ಕಚೇರಿ ದೂ.08392-276461 ಅಥವಾ ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ ದೂ. 08392-258100/102, ಬಳ್ಳಾರಿ ಎಸ್.ಪಿ ರವರ ಕಚೇರಿ ದೂ.08392-258400, ಸಿರುಗುಪ್ಪ ಡಿ.ಎಸ್.ಪಿ ರವರ ಕಚೇರಿ ದೂ.08392-276000 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -------------

ಬಳ್ಳಾರಿ: ಶೇ.84 ರಷ್ಟು ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷೆ ಪೂರ್ಣ | ವಲಸೆ ಹೋದ, ಇನ್ನುಳಿದ ಪರಿಶಿಷ್ಟ ಜಾತಿ ಕುಟುಂಬಗಳ ಮಾಹಿತಿ ನೀಡಿ: ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ

ಬಳ್ಳಾರಿ,ಮೇ 27(ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಈಗಾಗಲೇ ನಡೆಯುತ್ತಿರುವ ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷೆಯಲ್ಲಿ ಆಯಾ ನಗರ, ತಾಲ್ಲೂಕು ಮತ್ತು ಗ್ರಾಮಗಳಿಂದ ಕೆಲಸದ ನಿಮಿತ್ತ ಬೇರೆಡೆ ವಲಸೆ ಹೋಗಿರುವ ಪರಿಶಿಷ್ಟ ಕುಟುಂಬಗಳ ಮಾಹಿತಿ ನೀಡಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಹೇಳಿದರು. ಮಂಗಳವಾರ, ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷೆ-2025 ಕುರಿತಂತೆ ಸಮುದಾಯದ ಮುಖಂಡರು, ವಿವಿಧ ಸಂಘ-ಸAಸ್ಥೆಗಳ ಪದಾಧಿಕಾರಿಗಳೊಂದಿಗೆ ಏರ್ಪಡಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 2025 ರಂತೆ ಪರಿಶಿಷ್ಟ ಜಾತಿ ಅಂದಾಜು ವಿವರದಂತೆ ಜಿಲ್ಲೆಯಲ್ಲಿ 61,037 ಪರಿಶಿಷ್ಟ ಜಾತಿಗಳ ಕುಟುಂಬಗಳಲ್ಲಿ ಒಟ್ಟು 3,04,468 ಪರಿಶಿಷ್ಟ ಜಾತಿ ಜನಸಂಖ್ಯೆ ಇದೆ. ಸಮೀಕ್ಷೆಯಲ್ಲಿ ಈಗಾಗಲೇ 57385 ಕುಟುಂಬಗಳು ಪೂರ್ಣಗೊಂಡಿವೆ. ಅದರಲ್ಲಿ ಪರಿಶಿಷ್ಟ ಜಾತಿಯ ಒಟ್ಟು 2,56,753 ಜನಸಂಖ್ಯೆ ಸರ್ವೇ ಮಾಡಲಾಗಿದೆ. ಶೇ.84 ರಷ್ಟು ಪ್ರಗತಿಯಾಗಿದ್ದು, ಇನ್ನುಳಿದ ವಲಸೆ ಹೋಗಿರುವ ಕುಟುಂಬಗಳ ಮಾಹಿತಿ ಅಥವಾ ಇನ್ನು ಸಮೀಕ್ಷೆಯಲ್ಲಿ ಭಾಗಿಯಾಗದವರ ಆಯಾ ಸಮುದಾಯದ ಮುಖಂಡರುಗಳು ಮಾಹಿತಿ ನೀಡಬೇಕು ಎಂದು ತಿಳಿಸಿದರು. ಈಗಾಗಲೇ ಜಿಲ್ಲೆಯಲ್ಲಿ ಇತರೆ ಕೆಲಸಕ್ಕಾಗಿ ವಲಸೆ ಹೋದರವರನ್ನು ಸಮುದಾಯದ ಮುಖಂಡರು ಸಂಪರ್ಕಿಸಿ ಅವರಿಗೆ ಮಾಹಿತಿ ಒದಗಿಸಬೇಕು. ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷೆಯಲ್ಲಿ ತಪ್ಪದೇ ಭಾಗವಹಿಸುವಂತೆ ತಿಳಿಸಬೇಕು. ಇದು ರಾಜ್ಯ ಸರ್ಕಾರವು ನೀಡಿರುವ ಉತ್ತಮ ಅವಕಾಶವಾಗಿದ್ದು, ತಪ್ಪದೇ ಸಮೀಕ್ಷೆಯಲ್ಲಿ ಒಳಪಡುವಂತೆ ನಿರ್ದೇಶನ ಮಾಡಬೇಕು ಎಂದು ಜಿಲ್ಲಾಧಿಕಾರಿಯವರು ಸೂಚಿಸಿದರು. ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಬಿ.ಮಲ್ಲಿಕಾರ್ಜುನ ಅವರು ಮಾತನಾಡಿ, ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷೆಯಲ್ಲಿ ಮನೆ-ಮನೆ ಭೇಟಿಯು ಮೇ 29 ರವರೆಗೆ ನಡೆಯಲಿದ್ದು, ಎರಡು ದಿನಗಳ ಕಾಲಾವಕಾಶವಿದ್ದು, ಈ ಸಂದರ್ಭದಲ್ಲಿ ಸಮುದಾಯದ ಮುಖಂಡರು ಹಾಗೂ ವಿವಿಧ ಸಂಘ-ಸAಸ್ಥೆಗಳ ಪದಾಧಿಕಾರಿಗಳು ತಮ್ಮ ನೆರೆಹೊರೆಯವರ ಕುಟುಂಬಗಳು ವಲಸೆ ಹೋಗಿದ್ದಲ್ಲಿ ಅಂತಹ ಕುಟುಂಬಗಳ ಮಾಹಿತಿಯನ್ನು ಸಮೀಕ್ಷಾದಾರರಿಗೆ ಗುರುತಿಸಿ ನೀಡಬೇಕು. ಇದಕ್ಕೆ ಸಮುದಾಯದ ಮುಖಂಡರುಗಳು ಸಹಕರಿಸಬೇಕು ಎಂದು ಹೇಳಿದರು. ಅದೇರೀತಿಯಾಗಿ ಮೇ 30 ರಿಂದ ಜೂನ್ 01 ರವರೆಗೆ ಮೂರು ದಿನಗಳ ಕಾಲ ವಿಶೇಷ ಶಿಬಿರಗಳು ನಡೆಯಲಿದ್ದು, ಅಲ್ಲಿ ಸಮೀಕ್ಷಾ ಬ್ಲಾಕ್ ವ್ಯಾಪ್ತಿಯಲ್ಲಿ ಹೊರಗುಳಿದ ಪರಿಶಿಷ್ಟ ಜಾತಿ ಕುಟುಂಬಗಳು ಸಮೀಕ್ಷೆಯಲ್ಲಿ ಒಳಪಡಿಸಲಾಗುವುದು. ಹಾಗಾಗಿ ಹೊರಗುಳಿದ ಪರಿಶಿಷ್ಟ ಜಾತಿಯ ಕುಟುಂಬಗಳು ತಮ್ಮ-ತಮ್ಮ ವ್ಯಾಪ್ತಿಯ ಬೂತ್ ಗಳಲ್ಲಿ ಅಂದು ನಡೆಯುವ ಶಿಬಿರಗಳಲ್ಲಿ ತಪ್ಪದೇ ಹೋಗಿ ಸಮೀಕ್ಷಾ ಕಾರ್ಯದಲ್ಲಿ ಭಾಗವಹಿಸಿ ಮಾಹಿತಿ ನೀಡಬೇಕು. ಒಂದು ವೇಳೆ ಅಲ್ಲಿಯೂ ಭಾಗವಹಿಸದೇ ಇದ್ದಲ್ಲಿ ಅನ್‌ಲೈನ್ ಮೂಲಕ ಸ್ವಯಂ ಘೋಷಣೆ ಪ್ರಕ್ರಿಯೆಯು ಈಗಾಗಲೇ ನಡೆಯುತ್ತಲಿದೆ. ಲಿಂಕ್ ಮೂಲಕ ಸಮೀಕ್ಷೆಯಲ್ಲಿ ಮಾಹಿತಿ ನೀಡಬಹುದು ಎಂದರು. ಮನೆ-ಮನೆ ಭೇಟಿ ಸಮೀಕ್ಷಾ ಕಾರ್ಯದಲ್ಲಿ ಇನ್ನುಳಿದ ಎರಡು ದಿನಗಳಲ್ಲಿ ಶಿಕ್ಷಕರು ಇನ್ನಷ್ಟು ಹೆಚ್ಚಿನ ಶ್ರಮವಹಿಸಿ ಸಮೀಕ್ಷಾ ಕಾರ್ಯ ಇನ್ನಷ್ಟು ಪೂರ್ಣಗೊಳಿಸಬೇಕು ಎಂದು ತಿಳಿಸಿದ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು, ಈ ಕುರಿತು ಬಿಇಒ ಗಳು ಶಿಕ್ಷಕರಿಗೆ ನಿರ್ದೇಶನ ನೀಡಲು ಸೂಚಿಸಿದರು. ಇದೇ ಸಂದರ್ಭದಲ್ಲಿ ಪರಿಶಿಷ್ಟ ಜಾತಿಗಳ ವಿವಿಧ ಸಮುದಾಯದ ಮುಖಂಡರು, ವಿವಿಧ ಸಂಘ-ಸAಸ್ಥೆಗಳ ಪದಾಧಿಕಾರಿಗಳು ಸಮೀಕ್ಷಾ ಕಾರ್ಯ ಪೂರ್ಣಗೊಳಿಸಲು ತಾಂತ್ರಿಕ ಸಮಸ್ಯೆ ಹಾಗೂ ಇತರೆ ಸಮಸ್ಯೆಗಳನ್ನು ಸಭೆಯ ಗಮನಕ್ಕೆ ತಂದರು. ಇದೇ ಸಂದರ್ಭದಲ್ಲಿ ಸಲಹೆ ನೀಡಿದರು. ಸಭೆಯಲ್ಲಿ ಡಾ.ಬಾಬು ಜಗನ್ ಜೀವನ್ ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ, ಸಹಾಯಕ ಆಯುಕ್ತ ಪಿ.ಪ್ರಮೋದ್ ಸೇರಿದಂತೆ ಪರಿಶಿಷ್ಟ ಜಾತಿಗಳ ವಿವಿಧ ಸಮುದಾಯದ ಮುಖಂಡರು, ವಿವಿಧ ಸಂಘ-ಸAಸ್ಥೆಗಳ ಪದಾಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು. ---------------

ಮಂಗಳವಾರ, ಮೇ 27, 2025

ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯಲ್ಲಿ ಡಿಸಿ ಪ್ರಶಾಂತ್ ಕುಮಾರ್ ಮಿಶ್ರಾ ಸೂಚನೆ | ಜನನ ಮತ್ತು ಮರಣ ನೋಂದಣಿ ವಿಳಂಬವಾಗಬಾರದು

ಬಳ್ಳಾರಿ,ಮೇ 27(ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಜನನ ಮತ್ತು ಮರಣ ನೋಂದಣಿ ಪ್ರಕ್ರಿಯೆಯು ಯಾವುದೇ ಕಾರಣಕ್ಕೂ ವಿಳಂಬವಾಗದೇ ನಿಗದಿತ ಸಮಯದಲ್ಲಿ ಜರುಗಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಹೇಳಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್ ವಿಡಿಯೋ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಬೆಳೆ ಕಟಾವು ಪ್ರಯೋಗಗಳ ಪ್ರಗತಿ ಪರಿಶೀಲನೆ, ಬೆಳೆ ಕ್ಷೇತ್ರ ಮರು ಹೊಂದಾಣಿಕೆ ಮತ್ತು ಜನನ-ಮರಣ ನಾಗರೀಕ ನೋಂದಣಿ ಪದ್ಧತಿಯ ಕುರಿತ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಜನನ ಘಟನೆಗಳ ಪ್ರಮಾಣವು ವಾರ್ಷಿಕ ಅಂದಾಜು 30 ಸಾವಿರವಿದೆ. ಪ್ರತಿ ತಿಂಗಳು, ಪ್ರತಿ ಆಸ್ಪತ್ರೆಗಳಲ್ಲಿ ಎಷ್ಟು ಜನನ ಘಟನೆಗಳು ಸಂಭವಿಸುತ್ತಿವೆ ಹಾಗೂ ಎಷ್ಟು ಮಂದಿ ಜನನ ಪ್ರಮಾಣ ಪಡೆದುಕೊಳ್ಳುತ್ತಿದ್ದಾರೆ ಎಂಬುದನ್ನು ಪರಿಶೀಲಿಸಿ, ಮಾಹಿತಿ ಸಂಗ್ರಹಿಸಬೇಕು. ಈ ಕುರಿತು ಆಯಾ ತಾಲ್ಲೂಕು ತಹಶೀಲ್ದಾರರ ನೇತೃತ್ವದಲ್ಲಿ ತಾಲೂಕು ಮಟ್ಟದ ಜನನ ಮತ್ತು ಮರಣ ಸಮನ್ವಯ ಸಮಿತಿ ಸಭೆಗಳನ್ನು ನಿಯಮಿತವಾಗಿ ಜರುಗಿಸಬೇಕು ಎಂದು ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು. ಅದೇರೀತಿಯಾಗಿ ಮರಣ ಘಟನೆಗಳನ್ನು ಹೇಗೆ ಗಣತಿ ಮಾಡುತ್ತೀರಿ ಎಂದು ವಿಚಾರಿಸಿದ ಜಿಲ್ಲಾಧಿಕಾರಿಗಳು, ಮರಣ ಘಟನೆಗಳು ಕೇವಲ ಆಸ್ಪತ್ರೆಗಳಲ್ಲಿ ಸಂಭವಿಸಿದರೆ ಗೊತ್ತಾಗುತ್ತದೆ, ಆದರೆ ಸಮುದಾಯದಲ್ಲಿ ನಡೆದ ಮರಣ ಘಟನೆಗಳನ್ನು ಸಹ ತಪ್ಪದೇ ಗಣತಿ ಮಾಡಬೇಕು ಎಂದು ಸಂಬAಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಎನ್.ಕೆ.ಪತ್ರಿಬಸಪ್ಪ ಅವರು ಮಾತನಾಡಿ, 2025 ರ ಜನವರಿಯಿಂದ ಏಪ್ರಿಲ್ ರವರೆಗೆ ಜಿಲ್ಲೆಯಲ್ಲಿ ಜನನ ನೋಂದಣಿ ವಿವರ ಕುರಿತಂತೆ ಗಂಡು-4,827, ಹೆಣ್ಣು-4,361 ಸೇರಿ ಒಟ್ಟು 9,188 ಘಟನೆಗಳು ನೋಂದಣಿಯಾಗಿವೆ. ಅದೇರೀತಿಯಾಗಿ 2025 ರ ಜನವರಿಯಿಂದ ಏಪ್ರಿಲ್ ರವರೆಗೆ ಜಿಲ್ಲೆಯಲ್ಲಿ ಮರಣ ನೋಂದಣಿ ವಿವರ ಕುರಿತಂತೆ ಗಂಡು-2,608, ಹೆಣ್ಣು-1,775 ಮತ್ತು ಲಿಂಗತ್ವ ಅಲ್ಪಸಂಖ್ಯಾತರು-1 ಸೇರಿದಂತೆ ಒಟ್ಟು 4,384 ಘಟನೆಗಳು ನೋಂದಣಿಯಾಗಿವೆ ಎಂದು ಸಭೆಗೆ ತಿಳಿಸಿದರು. ಜನನ ಘಟನೆಗಳು 21 ದಿನಗಳೊಳಗಾಗಿ ಸಂಭವಿಸಿದ್ದರೆ ಉಚಿತವಾಗಿ ಪ್ರಮಾಣ ಪತ್ರ ಪಡೆಯಬಹುದು. ಘಟನೆ ಸಂಭವಿಸಿ 21 ದಿನದಿಂದ 30 ದಿನಗಳೊಳಗಿದ್ದರೆ ಪ್ರಮಾಣ ಪತ್ರ ಪಡೆಯಲು ರೂ.20 ಪಾವತಿಸಬೇಕು. 30 ದಿನಗಳ ನಂತರ ಪಡೆಯುವಂತಿದ್ದಲ್ಲಿ ರೂ.50 ಪಾವತಿಸಬೇಕು ಎಂದು ಮಾಹಿತಿ ತಿಳಿಸಿದರು. ಜಿಲ್ಲಾಧಿಕಾರಿಗಳು ಮಾತನಾಡಿ, ಜನನ ಮತ್ತು ಮರಣ ಪ್ರಮಾಣ ವಿತರಣೆಯಲ್ಲಿ ಸಾರ್ವಜನಿಕರನ್ನು ವಿನಾಃಕಾರಣ ಅಲೆದಾಡಿಸುವಂತಿಲ್ಲ. ಮುಖ್ಯವಾಗಿ ಸುಳ್ಳು ಪ್ರಮಾಣ ಪತ್ರ ವಿತರಣೆ ಮಾಡುವಂತಿಲ್ಲ ಎಂದು ತಿಳಿಸಿದರು. ಕೃಷಿ ಗಣತಿ ಕಾರ್ಯದಲ್ಲಿ ಸಹ ಈವರೆಗೆ ಜಿಲ್ಲೆಯಲ್ಲಿ ಬಿತ್ತನೆಯಾಗಿರುವುದು ಮತ್ತು ಬಿತ್ತನೆಯಾಗದಿರುವುದರ ಕುರಿತು ವಿವಿಧ ನಮೂನೆಗಳಲ್ಲಿ ಪ್ರಯೋಗದ ಮಾಹಿತಿಯನ್ನು ಆಯಾ ತಾಲ್ಲೂಕುಗಳ ತಹಶೀಲ್ದಾರರು ತಪ್ಪದೇ ನಮೂದಿಸಬೇಕು ಎಂದು ಎಲ್ಲಾ ತಾಲ್ಲೂಕು ತಹಶೀಲ್ದಾರರಿಗೆ ತಿಳಿಸಿದರು. ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ವಿಜಯ್ ಕುಮಾರ್, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಸಂತೋಷ್ ಸಪ್ಪಂಡಿ, ಸಂಡೂರು ತಾಲ್ಲೂಕು ತಹಶೀಲ್ದಾರ ಅನೀಲ್ ಕುಮಾರ್ ಸೇರಿದಂತೆ ಕೃಷಿ, ಆರೋಗ್ಯ ಇಲಾಖೆಯ ಅಧಿಕಾರಿಗಳು ಮತ್ತು ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು, ತಾಲ್ಲೂಕು ತಹಶೀಲ್ದಾರರು ಉಪಸ್ಥಿತರಿದ್ದರು. -------------

ಕನ್ನಡೇತರರಿಗೆ/ಅನ್ಯಭಾಷಿಕರಿಗೆ ಕನ್ನಡ ಕಲಿಸುವ ತರಬೇತಿ: ಅರ್ಜಿ ಆಹ್ವಾನ

ಬಳ್ಳಾರಿ,ಮೇ 27(ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿರುವ ಕೇಂದ್ರೋದ್ಯಮಗಳು, ಬ್ಯಾಂಕ್‌ಗಳು, ಕೇಂದ್ರ ಸರ್ಕಾರಿ ಕಚೇರಿಗಳು, ವಸತಿ ಸಮುಚ್ಚಯಗಳಲ್ಲಿರುವ ಕನ್ನಡೇತರರು, ಅನ್ಯಭಾಷಿಕರಿಗೆ ಕನ್ನಡ ಕಲಿಸುವ ತರಬೇತಿ ನೀಡಲಾಗುತ್ತಿದ್ದು, ಆಸಕ್ತರು ಅರ್ಜಿ ಸಲ್ಲಿಸಿ ನೋಂದಾಯಿಸಿಕೊಳ್ಳಬಹುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಅವರು ತಿಳಿಸಿದ್ದಾರೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರ ವತಿಯಿಂದ ಕನ್ನಡೇತರರಿಗೆ ಕನ್ನಡ ಕಲಿಸುವ ಪ್ರಯತ್ನವನ್ನು ಹಲವು ವರ್ಷಗಳಿಂದ ನಿರಂತರವಾಗಿ ಕೈಗೊಳ್ಳುತ್ತಿದ್ದು, 2025-26ನೇ ಸಾಲಿನಲ್ಲಿ ಇನ್ನಷ್ಟು ವ್ಯಾಪಕಗೊಳಿಸಲು ಪ್ರಾಧಿಕಾರವು ವೈಜ್ಞಾನಿಕ ಪಠ್ಯಕ್ರಮವನ್ನು ರೂಪಿಸಿ ತರಬೇತಿ ಹೊಂದಿದ ಶಿಕ್ಷಕರನ್ನು ಆಯೋಜಿಸುವ ಮೂಲಕ ವೃತ್ತಿಪರತೆಯನ್ನು ಒದಗಿಸಲಿದೆ. ಕನ್ನಡ ಕಲಿಸುವ ತರಬೇತಿಯನ್ನು 3 ತಿಂಗಳ ಅವಧಿಯಲ್ಲಿ ವಾರಕ್ಕೆ 3 ದಿನದಂತೆ ಪ್ರತಿದಿನ 01 ಗಂಟೆ ತರಬೇತಿಯನ್ನು ನಗರದ ಡಾ. ರಾಜ್‌ಕುಮಾರ್ ರಸ್ತೆಯ ಸಾಂಸ್ಕೃತಿಕ ಸಮುಚ್ಚಯದ ಹೊಂಗಿರಣ ಸಭಾಂಗಣದಲ್ಲಿ ನೀಡಲಾಗುತ್ತದೆ. ಆಸಕ್ತ ಕನ್ನಡೇತರರು ತಮ್ಮ ಸ್ವ-ವಿವರದೊಂದಿಗೆ ಜೂ.06 ರೊಳಗಾಗಿ ಅರ್ಜಿಯನ್ನು ಡಾ.ರಾಜ್‌ಕುಮಾರ್ ರಸ್ತೆಯ ಸಾಂಸ್ಕೃತಿಕ ಸಮುಚ್ಚಯದ
ಯ ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂ.08392-275182 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ------------

ಮಿಲಿಟರಿ ಬಾಲಕಿಯರ ವಸತಿ ನಿಲಯದ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

ಬಳ್ಳಾರಿ,ಮೇ 27(ಕರ್ನಾಟಕ ವಾರ್ತೆ): ಧಾರವಾಡ ಶಹರದ ಸಪ್ತಾಪೂರ ರಸ್ತೆಯಲ್ಲಿರುವ ಮಿಲಿಟರಿ ಬಾಲಕಿಯರ ವಸತಿ ನಿಲಯದಲ್ಲಿ 2025-26ನೇ ಶೈಕ್ಷಣಿಕ ವರ್ಷಕ್ಕಾಗಿ ಬಳ್ಳಾರಿ ಜಿಲ್ಲೆಯ ಗ್ರಾಮಾಂತರ ಪ್ರದೇಶ ಹಾಗೂ ರಾಜ್ಯದ ಇತರ ಜಿಲ್ಲೆಗಳಲ್ಲಿರುವ ಯುದ್ದದಲ್ಲಿ ಮಡಿದ ಯೋಧರ ಮತ್ತು ಮಾಜಿ ಸೈನಿಕರ ಹೆಣ್ಣು ಮಕ್ಕಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಬಾಲಕಿಯರ ವಿದ್ಯಾರ್ಥಿನಿಲಯದಲ್ಲಿ 5 ನೇ ತರಗತಿಯಿಂದ ಪಿಯುಸಿ - 2 ರ ವಿದ್ಯಾರ್ಥಿಗಳಿಗೆ ಪ್ರವೇಶ ನೀಡಲಾಗುತ್ತದೆ. ವಸತಿ ನಿಲಯದಲ್ಲಿ ವಾಸ್ತವ್ಯ ಮತ್ತು ಊಟೋಪಚಾರಗಳು ಉಚಿತವಾಗಿದ್ದು, ಮಾಜಿ ಸೈನಿಕರ ಹೆಣ್ಣು ಮಕ್ಕಳು ಈ ಸೌಲಭ್ಯದ ಉಪಯೋಗ ಪಡೆಯಬಹುದಾಗಿದೆ. ವಸತಿ ನಿಲಯದಲ್ಲಿ ಧಾರವಾಡ ನಗರದಲ್ಲಿರುವ ವಿದ್ಯಾ ಸಂಸ್ಥೆಗಳಲ್ಲಿ ಪ್ರವೇಶ ಪಡೆದ ವಿದ್ಯಾರ್ಥಿನಿಯರಿಗೆ ಮಾತ್ರ ನಿಲಯದಲ್ಲಿ ಪ್ರವೇಶ ನೀಡಲಾಗುವುದು. ಅರ್ಜಿಗಳನ್ನು ಜಂಟಿ ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಉದಯ ಹಾಸ್ಟೆಲ್ ಸರ್ಕಲ್ ಸೈನಿಕ ವಿಶ್ರಾಂತಿ ಗೃಹ ಆವರಣ, ಧಾರವಾಡ ಇಲ್ಲಿ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ಮೇ 31 ರೊಳಗಾಗಿ ಮರಳಿ ಇದೇ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಅಥವಾ ದೂ.0836-2440176 ಗೆ ಸಂಪರ್ಕಿಸಬಹುದು ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. --------------

ಕಂಪ್ಲಿ: ವಿದ್ಯುತ್ ಸಂಬAಧಿತ ದೂರುಗಳಿದ್ದಲ್ಲಿ ಸಂಪರ್ಕಿಸಿ

ಬಳ್ಳಾರಿ,ಮೇ 27(ಕರ್ನಾಟಕ ವಾರ್ತೆ): ಕಂಪ್ಲಿ ಜೆಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್ ಸಂಬAಧಿಸಿದAತೆ ದೂರುಗಳಿದ್ದಲ್ಲಿ ಕಂಪ್ಲಿ ವ್ಯಾಪ್ತಿಯ ಪವರ್‌ಮ್ಯಾನ್ ಗಳ ಮೊಬೈಲ್ ಸಂಖ್ಯೆಗೆ ಗ್ರಾಹಕರು ಸಂಪರ್ಕಿಸಬಹುದು ಎಂದು ಕಂಪ್ಲಿ ಜೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ. ಮಾನ್ಸೂನ್ ಮಳೆಗಾಲ ಇರುವುದರಿಂದ ಮೋಟಾರ್ ಐಪಿ ಸೆಟ್ ಮಾರ್ಗಗಳ ವಿದ್ಯುತ್ ಲೈನ್ ಸಮಸ್ಯೆಗಳಿದ್ದಾಗ ಲೈನ್ ಮ್ಯಾನ್‌ಗಳು ಸರಿಪಡಿಸಿ ನಂತರ ಅನಿರೀಕ್ಷಿತವಾಗಿ ವಿದ್ಯುತ್ ಸರಬರಾಜು ಮಾಡುವ ಅವಕಾಶ ತುಂಬಾ ಇದ್ದು, ಹಾಗಾಗಿ ರೈತ ಬಾಂಧವರು ಕರೆಂಟ್ ಇರುವುದಿಲ್ಲ ಎಂದು ತಿಳಿದು ಯಾವುದೇ ವಿದ್ಯುತ್ ಕಂಬ, ಲೈನ್ ಮತ್ತು (ಟಿಸಿ) ಪರಿವರ್ತಕಗಳನ್ನು ಮುಟ್ಟಬಾರದು. ಮಳೆಗಾಲದಲ್ಲಿ ವಿದ್ಯುತ್‌ಗೆ ಸಂಬAದಿಸಿದ ಉಪಕರಣಗಳಿಂದ ದೂರವಿರಬೇಕು. ಹೊಲಗಳಲ್ಲಿನ ಬೋರ್‌ವೆಲ್‌ಗಳನ್ನು ಆನ್ ಮತ್ತು ಆಫ್ ಮಾಡುವಾಗ ಬಾಕ್ಸ್/ಸ್ಟಾರ್ಟರ್ ಗಳನ್ನು ಮುಟ್ಟುವಾಗ ಜಾಗ್ರತೆವಹಿಸಬೇಕು. ಹೊಲ ಮತ್ತು ತೋಟಗಳಲ್ಲಿ ಬೋರ್‌ಗೆ ಎಳೆದುಕೊಂಡು ಹೋಗಿರುವ ವೈಯರ್‌ಗಳ ಮೇಲೆ ನಿಗಾ ವಹಿಸಬೇಕು. ಮುಂಗಾರು ಮಳೆಗಾಲ ಆರಂಭವಾಗುತ್ತಿರುವುದರಿAದ ವಿದ್ಯುತ್ ಅವಘಢಗಳು ಸಂಭವಿಸುವ ಸಾಧ್ಯತೆ ಇದ್ದು ಅದಕ್ಕೆ ಸುರಕ್ಷತೆ, ಎಚ್ಚರಿಕೆ ಮತ್ತು ಜಾಗೃತೆಯಿಂದ ಕೆಲಸ ಮಾಡಬೇಕು ಎಂದು ಅವರು ತಿಳಿಸಿದ್ದಾರೆ. *ಕಂಪ್ಲಿ ಗ್ರಾಮೀಣ ಶಾಖೆ:* ಮಹಾಂತೇಶ್ (ಜೆಇ)-9448397533: ಸಣಾಪುರ ಗ್ರಾಪಂ ವ್ಯಾಪ್ತಿಯ ಲೀಲಾವತಿಕ್ಯಾಂಪ್, ಬುಜ್ಜಮ್ಮ ಕ್ಯಾಂಪ್, ನಂ.2-ಮುದ್ದಾಪುರ, ಕೊಂಡಯ್ಯ ಕ್ಯಾಂಪ್ ಗ್ರಾಮಗಳಿಗೆ ತ್ರಿಮೂರ್ತಿ-9901340196. ಸಣಾಪುರ, ರಾಮದೇವರ ಕ್ಯಾಂಪ್, ಬಸವೇಶ್ವರ ಕ್ಯಾಂಪ್, ಅರಳಹಳ್ಳಿ(ಮಟ್ಟಿ), ಮಾರೆಮ್ಮ ಕ್ಯಾಂಪ್ ಗ್ರಾಮಗಳಿಗೆ ಕುಮಾರಗೌಡ-9743852118. ಮಣ್ಣೂರು ಕ್ಯಾಂಪ್, ನಂ 1 ಇಟಗಿ ಗ್ರಾಮಗಳಿಗೆ ನÁಗರಾಜ-9731289464. ಹಂಪಾದೇವನಹಳ್ಳಿ ಗ್ರಾಪಂ ವ್ಯಾಪ್ತಿಯ ಜಾನೂರು, ಚಿಕ್ಕಜಾಯಿಗನೂರು, ಹಂಪಾದೇವನಹಳ್ಳಿ-ನಿAಗಪ್ಪ(9901873538). ಗೋನಾಳು, ಜೀರಿಗನೂರು, ಕುಂಬಾರ ಕ್ಯಾಂಪ್-ಶಿವಕುಮಾರ(9663561112). ಜೌಕು-ಶಿವರಾಜ(8073452890). ದೇವಸಮುದ್ರ ಗ್ರಾಪಂ ವ್ಯಾಪ್ತಿಯ ದೇವಸಮುದ್ರ-ಶಾಂತ ಕುಮರ(9148257670). ಕೃಷ್ಣ ನಗರ ಕ್ಯಾಂಪ್-ಭರತ್(8105429255). *ಕAಪ್ಲಿ ಶಾಖೆ:* ವಿನೋದ ಕುಮಾರ್ (ಎಇ)-9480844965. ರಾಮಸಾಗರ ಗ್ರಾಪಂ ವ್ಯಾಪ್ತಿಯ ರಾಮಸಾಗರ- ಮಲ್ಲಯ್ಯ(6361171496), ಹರಿಪ್ರಸಾದ್(9535267881), ತಿಮ್ಮಪ್ಪ(8970261726). ನಂ.10-ಮುದ್ದಾಪುರ ಗ್ರಾಪಂ ವ್ಯಾಪ್ತಿಯ ನಂ.10 ಮುದ್ದಾಪುರ- ಉಮೇಶ(9480845105), ಮಲ್ಲಿಕಾರ್ಜುನ(8150039213). ಕಣಿವೆತಿಮ್ಮಲಾಪುರ- ಮಾರೆಣ್ಣ(940845159). ಬೆಳಗೋಡುಹಾಳು- ವೆಂಕಟೇಶ(8088326535). *ಮೆಟ್ರಿ ಶಾಖೆ:* ಮೊಹಮ್ಮದ್ ಸಮಿವುಲ್ಲಾ (ಜೆಇ)-9480844996. ಮೆಟ್ರಿ ಗ್ರಾಪಂ ವ್ಯಾಪ್ತಿಯ ಮೆಟ್ರಿ-ಶೇಕ್ಷಾವಲಿ(9480845124), ಚಿನ್ನಾಪುರ- ದ್ಯಾವಣ್ಣ(9742251964), ಉಪ್ಪಾರಹಳ್ಳಿ- ರವಿಕುಮಾರ(9008391215). ದೇವಲಾಪುರ ಗ್ರಾಪಂ ವ್ಯಾಪ್ತಿಯ ದೇವಲಾಪುರ- ರೆಹಮತವುಲ್ಲಾ(9480845122), ಸೋಮಲಾಪುರ- ಹೊನ್ನೂರಸ್ವಾಮಿ(9113916252). ಸುಗ್ಗೇನಹಳ್ಳಿ ಗ್ರಾಪಂ ವ್ಯಾಪ್ತಿಯ ಸುಗ್ಗೇನಹಳ್ಳಿ-ಗೋಪಾಲ(9482260671), ಮಾವಿನಹಳ್ಳಿ- ಗುರುಪ್ರಸಾದ(7337859377), ಹೊನ್ನಳ್ಳಿ, ಶ್ರೀರಾಮರಂಗಾಪುರ-ನAದೀಶ(9036506401, 9036506401). ಜೆಸ್ಕಾಂನ ಪಾಳಿಯ ಸಿಬ್ಬಂದಿಯವರು ಗ್ರಾಹಕರ ದೂರುಗಳಿಗೆ ತ್ವರಿತವಾಗಿ ಸ್ಪಂದಿಸಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ----------

ಮೇ 29 ರಿಂದ ವಿಕಸಿತ ಕೃಷಿ ಸಂಕಲ್ಪ ಅಭಿಯಾನ; “ವಿಜ್ಞಾನಿಗಳ ನಡೆ ರೈತರ ಕಡೆ” ಕಾರ್ಯಕ್ರಮ

ಬಳ್ಳಾರಿ,ಮೇ 27(ಕರ್ನಾಟಕ ವಾರ್ತೆ): ನವದೆಹಲಿಯ ಭಾರತೀಯ ಕೃಷಿ ಅನುಸಂಧಾನ ಪರಿಷತ್ತು ಹಾಗೂ ಅದರ ವಿವಿಧ ಅಂಗ ಸಂಸ್ಥೆಗಳು, ಕೃಷಿ ವಿಶ್ವವಿದ್ಯಾಲಯಗಳು, ಕೃಷಿ ವಿಜ್ಞಾನ ಕೇಂದ್ರಗಳು, ಕೃಷಿ ಇಲಾಖೆ ಮತ್ತು ತೋಟಗಾರಿಕೆ ಇಲಾಖೆಯ ಸಹಯೋಗದೊಂದಿಗೆ ಈ ಮುಂಗಾರು ಹಂಗಾಮಿನಲ್ಲಿ ಕೃಷಿಕರಿಗೆ ವಿವಿಧ ಕೃಷಿ ತಾಂತ್ರಿಕತೆಗಳು ಲಭ್ಯವಾಗುವಂತೆ ಮೇ 29 ರಿಂದ ಜೂನ್ 12 ರವರೆಗೆ ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಕೃಷಿ ಸಂಶೋಧನೆ ಮತ್ತು ರೈತ ಸಮುದಾಯದ ನಡುವಿನ ಅಂತರವನ್ನು ಕಡಿಮೆ ಮಾಡುವುದು ಈ ಅಭಿಯಾನದ ಉದ್ದೇಶವಾಗಿದೆ. ಕೃಷಿ ಜ್ಞಾನವನ್ನು ನೇರವಾಗಿ ರೈತರ ಜಮೀನುಗಳಿಗೆ ಕೊಂಡೊಯ್ಯುವ ಮೂಲಕ ಈ ಅಭಿಯಾನವನ್ನು ಭಾರತ ಸರ್ಕಾರದ ಭಾರತೀಯ ಕೃಷಿ ಸಂಶೋಧನಾ ಅನುಸಂಧಾನ ಪರಿಷತ್‌ನ ವಿಜ್ಞಾನಿಗಳು ಹಾಗೂ ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳನ್ನು ಒಳಗೊಂಡ ಎರಡು ಮತ್ತು ಮೂರು ತಂಡಗಳ ಮೂಲಕ ಕಾರ್ಯಗತಗೊಳಿಸಲಾಗುತ್ತಿದೆ. ಈ ವಿನೂತನ ಕಾರ್ಯಕ್ರಮದಲ್ಲಿ ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳು ರೈತರ ಬಳಿ ತೆರಳಿ, ಜಿಲ್ಲೆಯ ಎಲ್ಲ ರೈತರಿಗೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಮಾಹಿತಿ ನೀಡುವರು. ಇಲ್ಲಿ ರೈತರನ್ನು ಒಗ್ಗೂಡಿಸಿ ನೂತನ ತಂತ್ರಜ್ಞಾನಗಳು, ಹೊಸ ತಳಿಗಳು ಮತ್ತು ಬೀಜಗಳು, ನಿಖರವಾದ ಹವಾಮಾನದ ಮಾಹಿತಿ ಮತ್ತು ಸರ್ಕಾರದ ನಾನಾ ಲಾಭದಾಯಕ ಯೋಜನೆಗಳು, ಕೃಷಿಯಲ್ಲಿ ಹೆಚ್ಚಿನ ಲಾಭವನ್ನು ಹೇಗೆ ಪಡೆಯಬಹುದು ಎಂಬ ಬಗ್ಗೆ ಮಾಹಿತಿ ನೀಡಲಾಗುತ್ತದೆ. ರೈತರು ನೀಡುವ ಪ್ರತಿಕ್ರಿಯೆಗಳನ್ನು ಸಂಗ್ರಹಿಸಿ ಅವರ ಹೊಸ ಆವಿಷ್ಕಾರಗಳನ್ನು ಸಂಶೋಧನೆ ಮತ್ತು ಪ್ರಸಾರ ಚಟುವಟಿಕೆಗಳಲ್ಲಿ ಬಳಸಲಾಗುತ್ತದೆ. ಬೆಳೆ, ಮಣ್ಣು ಮತ್ತು ಲಭ್ಯವಿರುವ ಸಂಪನ್ಮೂಲಗಳ ಆಧಾರದ ಮೇಲೆ ತಜ್ಞರಿಂದ ಸಲಹೆ ನೀಡಲಾಗುತ್ತದೆ. ಜೊತೆಗೆ ಸರ್ಕಾರದ ಯೋಜನೆಗಳ ಲಾಭ ಪಡೆಯುವ ವಿಧಾನಗಳ ಕುರಿತು ಸಂಪೂರ್ಣ ಮಾಹಿತಿ ನೀಡಲಾಗುತ್ತದೆ. ಜಿಲ್ಲೆಯ ಆಯಾ ಹೋಬಳಿಯ ರೈತ ಸಂಪರ್ಕ ಕೇಂದ್ರಗಳ ಮೂಲಕ ವಿಕಸಿತ ಕೃಷಿ ಸಂಕಲ್ಪ ಅಭಿಯಾನದ ತಂಡ ಭೇಟಿ ನೀಡುವ ಬಗ್ಗೆ ಅಲ್ಲಿಯ ರೈತರಿಗೆ ಮುಂಚಿತವಾಗಿ ಮಾಹಿತಿ ನೀಡಲಾಗುತ್ತದೆ. ವಿಕಸಿತ ಕೃಷಿ ಸಂಕಲ್ಪ ಅಭಿಯಾನದ ತಂಡ ಆಯಾ ಗ್ರಾಮಗಳಿಗೆ ಬಂದಾಗ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ರೈತರ ಸಮಸ್ಯೆಗಳಿಗೆ ಪರಿಹಾರ ಕಂಡುಕೊAಡು ಕಾರ್ಯಕ್ರಮದ ಲಾಭ ಪಡೆದು ಕೃಷಿಯನ್ನು ಲಾಭದಾಯಕವಾಗಿಸಿಕೊಳ್ಳಬಹುದು ಎಂದು ಬಳ್ಳಾರಿಯ ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಹಾಗೂ ಮುಖ್ಯಸ್ಥರಾದ ಡಾ.ಪಾಲಯ್ಯ.ಪಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. --------------

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ: ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

ಬಳ್ಳಾರಿ,ಮೇ 27(ಕರ್ನಾಟಕ ವಾರ್ತೆ): ಸಂಡೂರು ತಾಲ್ಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಪ್ರವೇಶ ಪಡೆಯಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಪ್ರವರ್ಗ-1, 2ಎ, 2ಬಿ, 3ಎ, 3ಬಿ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಹಾಗೂ ಇತರೆ ಜನಾಂಗದ ವಿದ್ಯಾರ್ಥಿಗಳು 6 ರಿಂದ 10 ನೇ ತರಗತಿಯವರೆಗೆ 2025-26 ನೇ ಸಾಲಿನ ಮೆಟ್ರಿಕ್ ಪೂರ್ವ ಬಾಲಕ/ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಅರ್ಜಿ ಸಲ್ಲಿಸಬಹುದು. ಸಂಡೂರು ತಾಲ್ಲೂಕಿನ ಸಂಡೂರು ಟೌನ್, ಚೋರನೂರು, ಬೊಮ್ಮಘಟ್ಟ ಇಲ್ಲಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿನಿಲಯ ಮತ್ತು ಸಂಡೂರು ಟೌನ್, ದರೋಜಿ ಇಲ್ಲಿ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ ಅಗತ್ಯ ದಾಖಲೆಗಳೊಂದಿಗೆ ಆನ್‌ಲೈನ್ ವೆಬ್‌ಸೈಟ್ http://bcwd.karnataka.gov.in/ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಜೂನ್ 16 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಂಡೂರು ಪಟ್ಟಣದ ವಾಲ್ಮೀಕಿ ವತ್ತದ ತಾಲ್ಲೂಕು ಹಿಂದುಳಿದ ವರ್ಗಗಳ ಕಾರ್ಯಾಲಯ ಅಥವಾ ದೂ.08395-295180 ಗೆ ಸಂಪರ್ಕಿಸಬಹುದು ಎಂದು ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ವೀರಭದ್ರಯ್ಯ ಹಿರೇಮಠ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ------------

ಬಳಕೆಯಾದ ಪ್ಲಾಸ್ಟಿಕ್ ವಸ್ತುಗಳನ್ನು ಸೂಕ್ತ ವಿಲೇವಾರಿ ಮಾಡಲು ಜಿಪಂ ಸಿಇಒ ಸಲಹೆ | ಜೂ.05 ರಂದು ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಪ್ಲಾಸ್ಟಿಕ್ ಮಾಲಿನ್ಯ ಕೊನೆಗೊಳಿಸಲು ಜಾಗೃತಿ ಅಭಿಯಾನ: ಮಹಮ್ಮದ್ ಹ್ಯಾರಿಸ್ ಸುಮೈರ್

ಬಳ್ಳಾರಿ,ಮೇ 26(ಕರ್ನಾಟಕ ವಾರ್ತೆ): ಪ್ರತಿ ವರ್ಷ ಜೂನ್ 5 ರಂದು ವಿಶ್ವ ಪರಿಸರ ದಿನವನ್ನು ಆಚರಿಸಲಾಗುತ್ತದೆ. “ಜಾಗತಿಕವಾಗಿ ಪ್ರಾಸ್ಟಿಕ್ ಮಾಲಿನ್ಯವನ್ನು ಕೊನೆಗೊಳಿಸುವುದು" ಎಂಬ ಘೋಷವಾಕ್ಯದೊಂದಿಗೆ ಪ್ಲಾಸ್ಟಿಕ್ ಮಾಲಿನ್ಯವನ್ನು ಕೊನೆಗೊಳಿಸುವ ಮಹತ್ವವನ್ನು ತಿಳಿಸುವ ಉದ್ದೇಶದೊಂದಿಗೆ ಮೇ 22 ರಿಂದ ಜೂನ್ 05 ರವರೆಗೆ ಪೂರ್ವ ಅಭಿಯಾನವನ್ನು ಎಲ್ಲಾ ಗ್ರಾಮ ಪಂಚಾಯತಗಳಲ್ಲಿ ಹಮ್ಮಿಕೊಳ್ಳಲಾಗುವುದು ಎಂದು ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರಿಸ್ ಸುಮೈರ್ ಅವರು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆಯು ಸ್ವಚ್ಛ ಭಾರತ್ ಮಿಷನ್ (ಗ್ರಾ) ಯೋಜನೆಯ ಘನ ತ್ಯಾಜ್ಯ ನಿರ್ವಹಣಾ ಪ್ರಯತ್ನಗಳ ಪ್ರಮುಖ ಭಾಗವಾಗಿದ್ದು, ಈ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಜೂನ್ 05 ರ ವರೆಗೆ ಜಾಗೃತಿ ಅಭಿಯಾನದಲ್ಲಿ ಪ್ಲಾಸ್ಟಿಕ್ ತ್ಯಾಜ್ಯದಿಂದ ಆಗುವ ದುಷ್ಪರಿಣಾಮಗಳು ಹಾಗೂ ಇದರ ನಿರ್ಮೂಲನೆ ಮಾಡುವ ಸಂಬಂಧ ವಿವಿಧ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ವಿವಿಧ ಕಾರ್ಯಕ್ರಮ/ಚಟುವಟಿಕೆ ಶ್ರಮದಾನ, ಸಂವಾದ ಸಭೆಗಳನ್ನು ಆಯೋಜನೆ ಮಾಡಿ ಜನರಲ್ಲಿ ಜಾಗೃತಿ ಮೂಡಿಸುವುದಾಗಿದೆ. ಈ ಅಭಿಯಾನದಲ್ಲಿ ವಿಶೇಷವಾಗಿ ಜಲಮೂಲಗಳ ಸುತ್ತು- ಮುತ್ತ ಸ್ವಚ್ಚಗೊಳಿಸುವುದು. ಗ್ರಾಮದಲ್ಲಿ ಬ್ಲಾಕ್ ಸ್ಪಾಟ್ (ಕಸ ಎಸೆಯುವ ಸ್ಥಳ) ಗುರುತಿಸಿ ಸ್ವಚ್ಚಗೊಳಿಸುವುದು. ಚರಂಡಿ ಸ್ವಚ್ಛಗೊಳಿಸುವುದು, ಅದರಲ್ಲಿ ಪ್ಲಾಸ್ಟಿಕ್ ಮತ್ತು ಇತರೆ ವಸ್ತುಗಳನ್ನು ಎಸೆಯದಂತೆ ತಿಳಿಸುವುದು. ಏಕ ಬಳಕೆಯ ಪ್ಲಾಸ್ಟಿಕ್ ವಸ್ತು, ಕವರ್ ಗಳನ್ನು ಉತ್ಪಾದಿಸುವ, ಮಾರಾಟ ಮಾಡುವ, ಗ್ರಾಹಕರಿಗೆ ನೀಡುವ ಅಂಗಡಿ ಹೊಟೇಲ್, ಬೇಕರಿ, ಇತರೆ ವಾಣಿಜ್ಯ ಮಳಿಗೆಗಳಿಗೆ ತಪಾಸಣೆ ಮಾಡುವುದು. ಬಳಕೆಯಾದ ಪ್ಲಾಸ್ಟಿಕ್ ವಸ್ತುಗಳನ್ನು ಸೂಕ್ತ ವಿಲೇವಾರಿ ಮಾಡುವುಂತೆ ಪ್ರೇರೆಣೆ, ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹಣೆಯ ಮಾಡಿ ವಿಂಗಡಿಸಿ ವೈಜ್ಞಾನಿಕ ವಿಲೇವಾರಿ ಮಾಡುವುದಾಗಿದೆ. ಅಭಿಯಾನದಲ್ಲಿ ಗ್ರಾಮ ಪಂಚಾಯತಿಯ ಚುನಾಯಿತ ಪ್ರತಿನಿಧಿಗಳು, ಯುವಕರು, ಮಹಿಳಾ ಸ್ವಸಹಾಯ ಸಂಘದ ಸದಸ್ಯರು, ಗ್ರಾಮ ನೀರು ಮತ್ತು ನೈರ್ಮಲ್ಯ ಸಮಿತಿ ಸದಸ್ಯರು ಮತ್ತು ಸ್ವಯಂ ಸೇವಕರು, ಗ್ರಾಮದ ಮುಖಂಡರು ಅಭಿಯಾನದಲ್ಲಿ ಭಾಗವಹಿಸಿ ಪ್ಲಾಸ್ಟಿಕ್ ಮುಕ್ತ ಗ್ರಾಮಗಳನ್ನಾಗಿ ರೂಪಿಸಲು ಸಹಕರಿಸಲು ಅವರು ಮನವಿ ಮಾಡಿದ್ದಾರೆ. =======

ಸೋಮವಾರ, ಮೇ 26, 2025

ಮೇ 31 ರ ವರೆಗೆ ವಿಶೇಷ ಲಸಿಕಾ ಅಭಿಯಾನ | ಮಗುವಿನ ವಯಸ್ಸಿಗನುಸಾರವಾಗಿ ತಪ್ಪದೇ ಲಸಿಕೆ ಹಾಕಿಸಿ: ಡಿಹೆಚ್‌ಓ ಡಾ.ಯಲ್ಲಾ ರಮೇಶ್ ಬಾಬು

ಬಳ್ಳಾರಿ,ಮೇ 26(ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಮೇ 26 ರಿಂದ 31 ರವರೆಗೆ ಒಂದು ವಾರ ವಿಶೇಷ ಲಸಿಕಾ ಅಭಿಯಾನ ನಡೆಯುತ್ತಿದ್ದು, ಮಗುವಿನ ಬಾಲ್ಯದಲ್ಲಿ ಬರಬಹುದಾದಂತಹ 12 ಮಾರಕ ರೋಗಗಳನ್ನು ತಡೆಗಟ್ಟಲು ಮಗುವಿನ ವಯಸ್ಸಿಗನುಸಾರವಾಗಿ ತಪ್ಪದೇ ಲಸಿಕೆ ಹಾಕಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಅವರು ಕರೆ ನೀಡಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಮಿಲ್ಲರ್‌ಪೇಟೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಶೇಷಾವಲಿ ದರ್ಗಾ ಬಡಾವಣೆಯ ಅಂಗನವಾಡಿ ಕೇಂದ್ರದಲ್ಲಿ ಮೇ 31 ರ ವರೆಗೆ ನಡೆಯುವ ವಿಶೇಷ ಲಸಿಕಾ ಅಭಿಯಾನದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಮಗುವಿನ ಜನನದ ನಂತರ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಬಾಲಕ್ಷಯ ತಡೆಗಟ್ಟಲು ಬಿಸಿಜಿ, ಪೋಲಿಯೋ ರೋಗ ತಡೆಗಟ್ಟಲು ಪೋಲಿಯೋ ಹನಿ, ಕಾಮಾಲೆ ರೋಗ ತಡೆಗಟ್ಟಲು ಹೆಪಟೈಟೀಸ್ ಹಾಗೂ ನವಜಾತ ಶಿಶುವಿನ ದೇಹದ ಒಳಗಡೆ ಆಂತರಿಕ ರಕ್ತಸ್ರಾವ ಸಾಧ್ಯತೆ ತಡೆಗಟ್ಟಲು ವಿಟಮಿನ್-ಕೆ ಚುಚ್ಚುಮದ್ದನ್ನು ಮೊದಲ ದಿನವೇ ನೀಡಲಾಗುತ್ತಿದೆ. ನಂತರ ವಯಸ್ಸಿಗೆ ಅನುಸಾರವಾಗಿ ಮಾರಕ ರೋಗಗಳನ್ನು ತಡೆಗಟ್ಟಲು ಒಂದು ವರ್ಷದೊಳಗಿನ ಎಲ್ಲಾ ಲಸಿಕೆಗಳನ್ನು ಉಚಿತವಾಗಿ ಹಾಕಲಾಗುತ್ತಿದೆ. ಪಾಲಕರು ತಮ್ಮ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಮಗುವಿಗೆ ಹಾಕಿಸಬೇಕಾದ ಲಸಿಕೆಗಳನ್ನು ತಪ್ಪದೇ ಹಾಕಿಸಬೇಕು ಎಂದರು. ಈಗಾಗಲೇ ಪ್ರತಿ ಗುರುವಾರ ಎಲ್ಲಾ ಗ್ರಾಮ, ವಾರ್ಡ್ಗಳಲ್ಲಿ ಲಸಿಕೆ ಹಾಕಲಾಗುತ್ತಿದ್ದು, ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಪ್ರತಿ ದಿನ ಲಸಿಕೆ ಹಾಕಲಾಗುತ್ತಿದೆ. ಮಗು ಲಸಿಕೆ ವಂಚಿತರಾಗಬಾರದೆAಬ ಹಿನ್ನಲೆಯಲ್ಲಿ ಸರ್ಕಾರವು ಏಪ್ರಿಲ್, ಮೇ, ಜೂನ್ ಮೂರು ತಿಂಗಳ ಕಾಲ ನಿಗಧಿತ ಅವಧಿಯಲ್ಲಿ ಲಸಿಕೆ ಪಡೆಯದ ಹಾಗೂ ಒಂದು ಲಸಿಕೆಯನ್ನು ಪಡೆಯದೇ ಇರುವ ಮಕ್ಕಳನ್ನು ಗುರ್ತಿಸಿ ಲಸಿಕೆ ಹಾಕುವ ಕಾರ್ಯವನ್ನು ಮೇ 26 ರಿಂದ 31 ರ ವರೆಗೆ ಮಾಡಲಾಗುತ್ತಿದೆ ಎಂದು ತಿಳಿಸಿದರು. ಇತ್ತೀಚೆಗೆ ಕೆಲವು ಪ್ರದೇಶಗಳಲ್ಲಿ ಕಂಡುಬರುತ್ತಿರುವ ದಡಾರ ಪ್ರಕರಣಗಳ ನಿಯಂತ್ರಣಕ್ಕಾಗಿ ಮಗುವಿನ ವಯಸ್ಸು 9 ತಿಂಗಳು ತುಂಬಿದ ನಂತರ ಹಾಗೂ ಒಂದುವರೆ ವರ್ಷ ವಯಸ್ಸಿನಲ್ಲಿ ಎರಡು ಬಾರಿ ಲಸಿಕೆ ಹಾಕಿಸುವ ಮೂಲಕ ದಡಾರ ತಡೆಗಟ್ಟಬಹುದು ಎಂದರು. ಮಗುವಿನ ಒಂದುವರೆ ತಿಂಗಳು, ಎರಡುವರೆ ತಿಂಗಳು ಹಾಗೂ ಮೂರುವರೆ ತಿಂಗಳ ವಯಸ್ಸಿನಲ್ಲಿ ಕ್ರಮವಾಗಿ ಗಂಟಲು ಮಾರಿ, ನಾಯಿಕೆಮ್ಮು, ಧನುರ್ವಾಯು ರೋಟ ವೈರಸ್, ಹೆಚ್ ಇನ್‌ಫ್ಲೂö್ಯಯೆಂಜಾ, ಕಾಮಾಲೆ ಗಾಗಿ ಪೆಂಟಾವೈಲೆAಟ್ ಲಸಿಕೆ, ರೋಟಾವೈರಸ್ ಅತಿಸಾರಬೇದಿ ಗೆ ನಿಮೋಕಾಕಲ್ ಲಸಿಕೆ ಹಾಕಲಾಗುತ್ತದೆ. ಅದೇರೀತಿಯಾಗಿ ಮಗುವಿನ ಒಂಬತ್ತು ತಿಂಗಳು ವಯಸ್ಸು ತುಂಬಿದ ನಂತರ ಮೆದುಳು ಜ್ವರ ರೋಗಕ್ಕೆ ಜಾಪನೀಸ್ ಎನ್ಸ÷್ಪಲಿಟಿಸ್ ಲಸಿಕೆ, ದಡಾರ ರೂಬೇಲ್ಲಾ ರೋಗಕ್ಕೆ ಮಿಸಲ್ಸ್ ರೂಬೆಲ್ಲಾ ಲಸಿಕೆ, ಹಾಗೂ ಸಂಜೆಯ ಹೊತ್ತು ಕಂಡುಬರುವ ಇರುಳುಗಣ್ಣು ರೋಗಕ್ಕೆ ವಿಟಾಮಿನ್-ಎ ಅನ್ನಾಂಗ ದ್ರಾವಣ ನೀಡಲಾಗುತ್ತಿದ್ದು, ತಪ್ಪದೇ ಹಾಕಿಸಬೇಕು ಎಂದು ಅವರು ಹೇಳಿದರು. ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಹನುಮಂತಪ್ಪ ಅವರು ಮಾತನಾಡಿ, ಲಸಿಕೆ ನೀಡುವಲ್ಲಿ ಸಾರ್ವಜನಿಕರ ಅಭಿಪ್ರಾಯ ಮತ್ತು ಅನಿಸಿಕೆಗಳನ್ನು ಕ್ರೂಢೀಕರಿಸಿ ತಪ್ಪು ನಂಬಿಕೆಗಳ ಕುರಿತು ಜಾಗೃತಿ ನೀಡಲಾಗುತ್ತಿದ್ದು, ಗಾಳಿಸುದ್ದಿ ನಂಬಿ ಲಸಿಕೆ ಬೇಡವೆನ್ನುವವರಿಗೆ ವ್ಯಾಪಕವಾಗಿ ಮನೆ ಭೇಟಿ ಮೂಲಕ ಗುಂಪು ಸಭೆ, ಸಮುದಾಯ ಮುಖಂಡರ ಮೂಲಕ ಮಾಹಿತಿ ಒದಗಿಸಿ ಅವರಲ್ಲಿಯ ತಪ್ಪು ನಂಬಿಕೆಗಳನ್ನು ಹೋಗಲಾಡಿಸಿ ಎಲ್ಲಾ ಲಸಿಕೆಗಳನ್ನು ಹಾಕಿಸಬೇಕು ಎಂದು ಅವರು ಹೇಳಿದರು. ಈ ಸಂದರ್ಭದಲ್ಲಿ ವಿಶ್ವ ಆರೋಗ್ಯ ಸಂಸ್ಥೆ ಬಳ್ಳಾರಿ ವಲಯ ಪ್ರತಿನಿಧಿ ಆರ್.ಎಸ್.ಶ್ರೀಧರ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ಹೆಚ್ ದಾಸಪ್ಪನವರ, ಕ್ಷೇತ್ರ ಲಸಿಕಾ ಮೇಲ್ವಿಚಾರಕ ಕೋಟೇಶ್ವರಾವ್, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ರಾಜೇಶ್ವರಿ, ಆಶಾಕಾರ್ಯಕರ್ತೆ ತಾಯಮ್ಮ, ಅಂಗನವಾಡಿ ಕಾರ್ಯಕರ್ತೆ ಪುಷ್ಪ ಸೇರಿದಂತೆ ತಾಯಂದಿರು ಉಪಸ್ಥಿತರಿದ್ದರು. ------------

ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಬಳ್ಳಾರಿ,ಮೇ 26(ಕರ್ನಾಟಕ ವಾರ್ತೆ): ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ 2025ನೇ ಸಾಲಿನ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ಶೇ.90 ಕ್ಕಿಂತ ಹೆಚ್ಚಿನ ಅಂಕ ಪಡೆದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಆನ್ ಲೈನ್ ವೆಬ್ ಸೈಟ್ hಣಣಠಿs://ಞsgeಚಿಟಿeತಿs.bಟogsಠಿoಣ.ಛಿom ಗೆ ಭೇಟಿ ನೀಡಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಮೇ 31 ಕೊನೆಯ ದಿನ. ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬೇಕು ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷ ಹಾಗೂ ಜಿಲ್ಲಾಧ್ಯಕ್ಷರೂ ಆದ ಎಂ.ಎ.ಆಸೀಫ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -------------

ಬಳ್ಳಾರಿ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆ ಚುರುಕು | ಕೃಷಿ ಇಲಾಖೆಯಿಂದ ಬಿತ್ತನೆ ಬೀಜ ಪೂರೈಕೆಗೆ ಕ್ರಮ

ಬಳ್ಳಾರಿ,ಮೇ 26(ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಈ ಬಾರಿ ಮುಂಗಾರು ಪೂರ್ವದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಕೃಷಿ ಚಟುವಟಿಕೆಗಳು ಚುರುಕು ಪಡೆದುಕೊಂಡಿವೆ. ಮಳೆಯು ರೈತ ಸಮುದಾಯದಲ್ಲಿ ಮಂದಹಾಸ ಮೂಡಿಸಿದೆ. ಇದಕ್ಕೆ ಪೂರಕವಾಗಿ ಕೃಷಿ ಇಲಾಖೆಯು ರಿಯಾಯಿತಿ ದರದಲ್ಲಿ ಬಿತ್ತನೆ ಬೀಜ ಪೂರೈಸಲು ಸಜ್ಜಾಗಿದೆ. ಉತ್ತಮ ಮಳೆ ಹಿನ್ನಲೆ ರೈತರು ಕೃಷಿ ಭೂಮಿ ಹದಗೊಳಿಸುವ ಕಾರ್ಯಗಳಲ್ಲಿ ತೊಡಗಿದ್ದಾರೆ. ರಂಟೆ-ಕುAಟೆ ಹೊಡೆಯುವುದು, ರೋಟವೇಟರ್, ಎತ್ತುಗಳ ನೇಗಲು ಹೊಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ವಾರ್ಷಿಕ 599.5 ಮಿ.ಮೀ ವಾಡಿಕೆ ಮಳೆಯಿದ್ದು, ಕಳೆದ ವರ್ಷ ಮೇ 20 ರವರೆಗೆ 53.6 ಮಿ.ಮೀ ಮಳೆಯಾಗಿದೆ. ಪ್ರಸ್ತುತ ವರ್ಷ 88.4 ಮಿ.ಮೀ ಮಳೆಯಾಗಿ ಸುಮಾರು ಶೇ.64 ರಷ್ಟು ಮಳೆ ಹೆಚ್ಚಾಗಿ ಸುರಿದಿದೆ. ಮುಂಗಾರು ಹಂಗಾಮಿಗೆ ಜಿಲ್ಲೆಯಲ್ಲಿ 1,63,753 ಹೆಕ್ಟೇರ್ ಪ್ರದೇಶ ಬಿತ್ತನೆಯಾಗುವ ಗುರಿ ಹೊಂದಿದ್ದು, ಭತ್ತ 89,000 ಹೆ., ಮೆಕ್ಕೆಜೋಳ 20,000 ಹೆ., ಹತ್ತಿ 35,000 ಹೆ., ತೊಗರಿ 4,500 ಹೆ., ಜೋಳ 5,000 ಹೆ., ಶೇಂಗ 2,500 ಹೆ., ತೃಣಧಾನ್ಯಗಳು 2,300 ಹೆ., ಸೂರ್ಯಕಾಂತಿ 1,000 ಹೆ., ಮತ್ತು ಕಬ್ಬು 1000 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗುವ ನಿರೀಕ್ಷೆ ಹೊಂದಲಾಗಿದೆ. ಕೃಷಿ ಇಲಾಖೆ ಜಿಲ್ಲೆಯ 13 ರೈತ ಸಂಪರ್ಕ ಕೇಂದ್ರ ಮತ್ತು 02 ಹೆಚ್ಚುವರಿ ಕೇಂದ್ರ ಸೇರಿ ಒಟ್ಟು 15 ಕೇಂದ್ರಗಳ ಮೂಲಕ ವಿವಿಧ ಬೆಳೆಯ ಬಿತ್ತನೆ ಬೀಜಗಳನ್ನು ಸಹಾಯಧನದಡಿ ವಿತರಿಸಲು ವ್ಯವಸ್ಥೆ ಮಾಡಿಕೊಂಡಿದೆ. ಜಿಲ್ಲೆಯಲ್ಲಿ ಬಿತ್ತನೆ ಬೀಜ ಹಾಗೂ ರಸಗೊಬ್ಬರದ ದಾಸ್ತಾನು ಸಮರ್ಪಕವಾಗಿದ್ದು, ರೈತರು ಬಿತ್ತನೆ ಬೀಜ ಮತ್ತು ರಸಗೊಬ್ಬರಗಳ ಆಭಾವದ ಬಗ್ಗೆ ಯಾವುದೇ ಅತಂಕಕ್ಕೆ ಒಳಗಾಗುವ ಅಗತ್ಯವಿಲ್ಲ. ಮುಂಗಾರು ಹಂಗಾಮಿಗೆ ಒಟ್ಟು 1,08,100 ಮೆಟ್ರಿಕ್ ಟನ್ ರಸಗೊಬ್ಬರ ಬೇಡಿಕೆಯಿದ್ದು, ಪ್ರಸ್ತುತ 40,228 ಮೆಟ್ರಿಕ್ ಟನ್ ರಸಗೊಬ್ಬರ ದಾಸ್ತಾನಿದೆ. ಹಂತ ಹಂತವಾಗಿ ಬೇಡಿಕೆ ಅನುಗುಣವಾಗಿ ಉಳಿದ ರಸಗೂಬ್ಬರ ಕಾಲಕಾಲಕ್ಕೆ ಸರಬರಾಜು ಆಗಲಿದೆ. ಜಿಲ್ಲೆಗೆ ಮುಂಗಾರು ಹಂಗಾಮಿನಲ್ಲಿ ಒಟ್ಟು 11766 ಕ್ವಿಂಟಾಲ್ ಬಿತ್ತನೆ ಬೀಜದ ಬೇಡಿಕೆ ಇದ್ದು, 11800 ಕ್ವಿಂಟಾಲ್ ಲಭ್ಯವಿದೆ. ಜಿಲ್ಲೆಯಲ್ಲಿ ಕೃಷಿ ಪರಿಕರಗಳ ಪರಿವೀಕ್ಷರ ತಂಡಗಳನ್ನು ರಚಿಸಿ ಬಿತ್ತನೆ ಬೀಜ, ರಸಗೊಬ್ಬರ ಮತ್ತು ಕೀಟನಾಶಕಗಳ ಗುಣಮಟ್ಟ ಹಾಗೂ ಬೆಲೆ ನಿಯಂತ್ರಣಕ್ಕೆ ಕ್ರಮವಹಿಸಲಾಗಿದೆ. ಕೃಷಿ ಪರಿಕರ ಮಾರಾಟಗಾರರು ಗುಣಮಟ್ಟದ ಬಿತ್ತನೆ ಬೀಜ, ರಸಗೊಬ್ಬರ ಮತ್ತು ಕೀಟನಾಶಕಗಳನ್ನೇ ಮಾರಾಟ ಮಾಡಬೇಕು ತಪ್ಪಿದಲ್ಲಿ ಕಾನೂನು ರೀತ್ಯ ಕಠಿಣ ಕ್ರಮ ಜರುಗಿಸಲಾಗುವುದು. *ರಸಗೊಬ್ಬರ ಬೇಡಿಕೆ (ಏಪ್ರಿಲ್ ನಿಂದ ಸೆಪ್ಟೆಂಬರ್ ವರೆಗೆ) ಮತ್ತು ದಾಸ್ತಾನು (ಮೇ 20 ರಂತೆ):* ಡಿಎಪಿ: 15,237 ಮೆಟ್ರಿಕ್ ಟನ್ ಬೇಡಿಕೆ ಇದ್ದು, 2735.9 ಮೆಟ್ರಿಕ್ ಟನ್ ದಾಸ್ತಾನಿದೆ. ಎಂಒಪಿ: 2,293 ಮೆಟ್ರಿಕ್ ಟನ್ ಬೇಡಿಕೆ ಇದ್ದು, 2615.2 ಮೆಟ್ರಿಕ್ ಟನ್ ದಾಸ್ತಾನಿದೆ. ಕಾಂಪ್ಲೆಕ್ಸ್: 45,580 ಮೆಟ್ರಿಕ್ ಟನ್ ಬೇಡಿಕೆ ಇದ್ದು, 20880.9 ಮೆಟ್ರಿಕ್ ಟನ್ ದಾಸ್ತಾನಿದೆ. ಯೂರಿಯಾ: 44,350 ಮೆಟ್ರಿಕ್ ಟನ್ ಬೇಡಿಕೆ ಇದ್ದು, 13,491.8 ಮೆಟ್ರಿಕ್ ಟನ್ ದಾಸ್ತಾನಿದೆ. ಎಸ್‌ಎಸ್‌ಪಿ: 542 ಮೆಟ್ರಿಕ್ ಟನ್ ಬೇಡಿಕೆ ಇದ್ದು, 504.2 ಮೆಟ್ರಿಕ್ ಟನ್ ದಾಸ್ತಾನಿದೆ. ಒಟ್ಟು: 1,08,102 ಮೆಟ್ರಿಕ್ ಟನ್ ಬೇಡಿಕೆ ಇದ್ದು, 40228.3 ಮೆಟ್ರಿಕ್ ಟನ್ ದಾಸ್ತಾನಿದೆ. *ಬಿತ್ತನೆ ಬೀಜ ಬೇಡಿಕೆ ಮತ್ತು ದಾಸ್ತಾನು:* ಭತ್ತ: 4,000 ಕ್ವಿಂಟಾಲ್ ಬೇಡಿಕೆ ಇದ್ದು, 4,300 ಕ್ವಿಂಟಾಲ್ ದಾಸ್ತಾನಿದೆ. ಮೆಕ್ಕೆಜೋಳ: 3,600 ಕ್ವಿಂಟಾಲ್ ಬೇಡಿಕೆ ಇದ್ದು, 4,000 ಕ್ವಿಂಟಾಲ್ ದಾಸ್ತಾನಿದೆ. ತೊಗರಿ: 660 ಕ್ವಿಂಟಾಲ್ ಬೇಡಿಕೆ ಇದ್ದು, 660 ಕ್ವಿಂಟಾಲ್ ದಾಸ್ತಾನಿದೆ. ನೆಲಕಡಲೆ: 2,800 ಕ್ವಿಂಟಾಲ್ ಬೇಡಿಕೆ ಇದ್ದು, 3,000 ಕ್ವಿಂಟಾಲ್ ದಾಸ್ತಾನಿದೆ. ಜೋಳ: 210 ಕ್ವಿಂಟಾಲ್ ಬೇಡಿಕೆ ಇದ್ದು, 210 ಕ್ವಿಂಟಾಲ್ ದಾಸ್ತಾನಿದೆ. ಒಟ್ಟು 11,766 ಕ್ವಿಂಟಾಲ್ ಬೇಡಿಕೆ ಇದ್ದು, 11,800 ಕ್ವಿಂಟಾಲ್ ದಾಸ್ತಾನಿದೆ. ರೈತರು ಅಧಿಕೃತ ಪರಿಕರ ಮಾರಾಟಗಾರರಿಂದಲೇ ಬಿತ್ತನೆ ಬೀಜ, ರಸಗೊಬ್ಬರ, ಕೀಟನಾಶಕ ಮತ್ತು ಇತರೆ ಕೃಷಿ ಪರಿಕರಗಳನ್ನು ಖರೀದಿಸಬೇಕು. - ಟಿ.ಸೋಮಸುಂದರ್, ಜಂಟಿ ಕೃಷಿ ನಿರ್ದೇಶಕ. ------------

ಮೇ 28 ರಂದು ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಪ್ರಗತಿ ಪರಿಶೀಲನಾ ಸಭೆ

ಬಳ್ಳಾರಿ,ಮೇ 26(ಕರ್ನಾಟಕ ವಾರ್ತೆ): ರಾಷ್ಟಿçÃಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ಜಿಲ್ಲೆಯ ಎಲ್ಲಾ ಸಾರ್ವಜನಿಕ ಪ್ರದೇಶಗಳಲ್ಲಿ ‘ಸಿಗರೇಟ್ ಮತ್ತು ಇತರೆ ತಂಬಾಕು ಉತ್ಪನ್ನಗಳ ಅಧಿನಿಯಮ(ಕೋಟ್ಪಾ)-2003’ ರ ಕಾನೂನನ್ನು ಪರಿಣಾಮಕಾರಿಯಾಗಿ ಜಾರಿಗೆ ಕುರಿತಂತೆ ಚರ್ಚಿಸಲು ಮೇ 28 ರಂದು ಸಂಜೆ 04 ಗಂಟೆಗೆ ನಗರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ “ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಪ್ರಗತಿ ಪರಿಶೀಲನಾ ಸಭೆ” ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಅಧ್ಯಕ್ಷರೂ ಆಗಿರುವ ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್ ಅವರು ತಿಳಿಸಿದ್ದಾರೆ. --------------

ನಗರಡೋಣ ವಿಜಯ ಭಾಸ್ಕರ್ ಅವರಿಗೆ ಪಿಎಚ್‌ಡಿ ಪದವಿ

ಬಳ್ಳಾರಿ,ಮೇ 26(ಕರ್ನಾಟಕ ವಾರ್ತೆ): ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ನಿರ್ವಾಹಣಾಶಾಸ್ತç ಅಧ್ಯಯನ ವಿಭಾಗದ ವಿದ್ಯಾರ್ಥಿಯಾಗಿದ್ದ ನಗರಡೋಣ ವಿಜಯ ಭಾಸ್ಕರ್ ಅವರಿಗೆ ಪಿಎಚ್‌ಡಿ ಪದವಿ ಲಭಿಸಿದೆ. ವಿಶ್ವವಿದ್ಯಾಲಯದ ನಿರ್ವಹಣಾ ಶಾಸ್ತç ಅಧ್ಯಯನ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ.ಜಿ.ಅರುಣ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ಸಿದ್ಧಪಡಿಸಿದ “ಫೈನಾನ್ಸಿಯಲ್ ಇನ್ಕೂ÷್ಲಶನ್ ಆಂಡ್ ಇನ್ಕೂ÷್ಲಸಿವ್ ಗ್ರೋತ್-ಎ ಸ್ಟಡಿವಿತ್ ಸ್ಪೆಷಲ್ ರೆಫರೆನ್ಸ್ ಟು ಕರ್ನಾಟಕ ಗ್ರಾಮೀಣ ಬ್ಯಾಂಕ್ ಇನ್ ಬಳ್ಳಾರಿ ಅಂಡ್ ಕೊಪ್ಪಳ ಡಿಸ್ಟಿçಕ್ಟ್” ಎಂಬ ಮಹಾಪ್ರಬಂಧಕ್ಕೆ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯವು ಪಿಎಚ್‌ಡಿ ಪದವಿ ಪ್ರದಾನ ಮಾಡಿದೆ ಎಂದು ವಿವಿ ಪ್ರಕಟಣೆ ತಿಳಿಸಿದೆ. ------------

ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ನ್ಯಾ.ರಾಜೇಶ್ ಎನ್.ಹೊಸಮನೆ | ಜೀನ್ಸ್ ಗಾರ್ಮೆಂಟ್ ಕಾರ್ಮಿಕರು ಜಾಗೃತರಾಗಿ ಸರ್ಕಾರದ ಸೌಲಭ್ಯ ಪಡೆದುಕೊಳ್ಳಬೇಕು

ಬಳ್ಳಾರಿ,ಮೇ 26(ಕರ್ನಾಟಕ ವಾರ್ತೆ): ಜೀನ್ಸ್ ಗಾರ್ಮೆಂಟ್ ಕಾರ್ಮಿಕರು ಜಾಗೃತರಾಗಿ ಸರ್ಕಾರದ ಸೌಲಭ್ಯ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ ಅವರು ಹೇಳಿದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜೀನ್ಸ್ ಗಾರ್ಮೆಂಟ್ ಕಮ್ಯೂನಿಟಿ ಡೆವೆಲಪ್‌ಮೆಂಟ್ ಅಸೋಸಿಯೇಷನ್, ರೀಚ್ ಸಂಸ್ಥೆ, ಕಾನೂನು ಇಲಾಖೆ, ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಮಕ್ಕಳ ಮತ್ತು ರಕ್ಷಣಾ ಘಟಕ ಇವರ ಸಂಯುಕ್ತಾಶ್ರಯದಲ್ಲಿ ನಗರದ ಬಿಡಿಎಸ್ ತರಬೇತಿ ಕೇಂದ್ರದಲ್ಲಿ ಇತ್ತೀಚೆಗೆ ನಡೆದ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. 8 ಗಂಟೆಗಳ ದುಡಿಮೆಗಾಗಿ ನಡೆದ ಕಾರ್ಮಿಕರ ಹೋರಾಟದ ಭಾಗವಾಗಿ ಇಂದು ಜಗತ್ತಿನಾದ್ಯಂತ 194 ರಾಷ್ಟçಗಳಲ್ಲಿ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮ ಆಚರಿಸಲಾಗುತ್ತಿದೆ ಎಂದರು. ಕಾರ್ಮಿಕರಿಗೆ ಗೌರವಯುತ ಬದುಕು ನೀಡಲು, ಕಾರ್ಮಿಕರ ಕಲ್ಯಾಣಕ್ಕಾಗಿ ಹಲವಾರು ಹಕ್ಕುಗಳನ್ನು ಜಾರಿಗೆ ತರಲಾಯಿತು. ನಮ್ಮ ದೇಶದ ಸಂವಿಧಾನದಡಿ ಕಾರ್ಮಿಕರಿಗೆ ಹಲವಾರು ಹಕ್ಕುಗಳನ್ನು ನೀಡಲಾಗಿದೆ. ಸಮಾನ ಕೆಲಸಕ್ಕೆ ಸಮಾನ ವೇತನ, ಕನಿಷ್ಠ ವೇತನ ಕಾಯಿದೆ, ಮಹಿಳೆಯರಿಗೆ ವಿಶೇಷ ಸೌಲಭ್ಯಗಳನ್ನು ನೀಡಲಾಗಿದೆ. ಇಂದು ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲಿ ಸಮಾನವಾಗಿ ದುಡಿಯುತ್ತಿದ್ದಾರೆ. ಮಹಿಳೆ ಕಾರ್ಮಿಕರು ಮಾನಸಿಕವಾಗಿ ಹೆಚ್ಚು ಸದೃಢರಾಗಿದ್ದು, ಬಲಿಷ್ಠರಾಗುವ ಮೂಲಕ ಅಸಂಘಟಿತ ವಲಯದಲ್ಲಿನ ಮಹಿಳಾ ಕಾರ್ಮಿಕರು ತಮ್ಮ ಹಕ್ಕುಗಳನ್ನು ಪಡೆಯಲು ಹಾಗೂ ಸರ್ಕಾರದ ಸೌಲಭ್ಯಗಳನ್ನು ಪಡೆಯಲು ಮುಂದಾಗಬೇಕು ಎಂದು ಹೇಳಿದರು. ಬಳ್ಳಾರಿ ಜಿಲ್ಲೆಯಲ್ಲಿ ಮಹಿಳಾ ಕಾರ್ಮಿಕರಿಗೆ ವಿಶೇಷವಾಗಿ ಜೀನ್ಸ್ ಗಾರ್ಮೆಂಟ್ ಗಳಲ್ಲಿ ದುಡಿಯುವ ಮಹಿಳಾ ಕಾರ್ಮಿಕರು ಕಾರ್ಮಿಕ ಇಲಾಖೆಯಲ್ಲಿ ನೋಂದಣೆಯಾಗಿ ಸರ್ಕಾರದ ಸೌಲಭ್ಯ ಪಡೆಯಲು ಜಾಗೃತರಾಗಬೇಕು ಎಂದು ಕರೆ ನೀಡಿದರು. ಜಿಲ್ಲಾ ಕಾರ್ಮಿಕ ಅಧಿಕಾರಿ ಸಿದ್ದಪ್ಪ ಖೈನೂರ ಅವರು ಮಾತನಾಡಿ, ಕಾರ್ಮಿಕ ಇಲಾಖೆಯು ಅಸಂಘಟಿತ ವಲಯದಲ್ಲಿ ದುಡಿಯುವವರಿಗಾಗಿ ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯನ್ನು ಸ್ಥಾಪಿಸಿದೆ. ಈ ಮಂಡಳಿಯಲ್ಲಿ ನೋಂದಣಿಯಾಗುವ ಕಾರ್ಮಿಕರಿಗೆ ಇಲಾಖೆಯು ಹಲವಾರು ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ನೀಡುತ್ತದೆ ಎಂದು ತಿಳಿಸಿದರು. ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆಯಡಿ ಅಸಂಘಟಿತ ವಲಯಗಳಲ್ಲಿ ಬರುವ ಟೈಲರಿಂಗ್ ಮಾಡುವ ಕಾರ್ಮಿಕರು ನೋಂದಣಿಯಾಗಿ ಸೌಲಭ್ಯಗಳನ್ನು ಪಡೆಯಬಹುದು ಎಂದು ತಿಳಿಸಿದ ಅವರು, ಇಲಾಖೆಯ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು. ಜಿಲ್ಲಾ ಬಾಲಕಾರ್ಮಿಕ ಯೋಜನಾಧಿಕಾರಿ ಮೌನೇಶ್ ಅವರು ಮಾತನಾಡಿ, ಕೈಗಾರಿಕೆಗಳು ಸೇರಿದಂತೆ ಜೀನ್ಸ್ ಉತ್ಪಾದನಾ ಯೂನಿಟ್‌ಗಳಲ್ಲಿ ಬಾಲಕಾರ್ಮಿಕರನ್ನು ದುಡಿಸಿಕೊಳ್ಳುವುದು ಕಾನೂನು ಅಪರಾಧವಾಗಿದ್ದು, ಪೋಷಕರು ತಮ್ಮ ಮಕ್ಕಳನ್ನು ಶಿಕ್ಷಣವಂತರಾನ್ನಾಗಿಸಬೇಕು. 14 ವಯಸ್ಸಿನ ಮಕ್ಕಳಿಗೆ ಸರ್ಕಾರವು ಉಚಿತ ಮತ್ತು ಕಡ್ಡಾಯ ಶಿಕ್ಷಣ ನೀಡುತ್ತಿದ್ದು, ಈ ನಿಟ್ಟಿನಲ್ಲಿ ಎಲ್ಲಾ ಕಾರ್ಮಿಕರು ತಮ್ಮ ಮಕ್ಕಳಿಗೆ ಶಿಕ್ಷಣ ನೀಡಲು ಸರ್ಕಾರದ ಯೋಜನೆಗಳನ್ನು ಬಳಸಿಕೊಳ್ಳುವಂತೆ ಮಾಹಿತಿ ನೀಡಿದರು. ಜಿಲ್ಲಾ ಕಾರ್ಮಿಕ ಇನ್ಸ್ಪೆಕ್ಟರ್ ರಮೇಶ್ ಅವರು ಕಾರ್ಮಿಕ ಇಲಾಖೆಯಲ್ಲಿ ಸೌಲಭ್ಯ ಪಡೆಯಲು ಅನುಸರಿಸಬೇಕಾದ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಇದೇ ವೇಳೆ ಗಾರ್ಮೆಂಟ್ ಮಹಿಳಾ ಕಾರ್ಮಿಕರಿಗೆ ಕಾರ್ಮಿಕ ಇಲಾಖೆಯಿಂದ ನೋಂದಣಿಯಾದವರಿಗೆ ಟೈಲರಿಂಗ್ ಕಾರ್ಡ್ ಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ರೀಚ್ ಸಂಸ್ಥೆಯ ಜಿ.ಎನ್.ಸಿಂಹ, ಜೀನ್ಸ್ ಗಾರ್ಮೆಂಟ್ ಕಮ್ಯೂನಿಟಿ ಡೆವೆಲಪ್‌ಮೆಂಟ್ ಅಸೋಸಿಯೇಷನ್‌ನ ಅಧ್ಯಕ್ಷೆ ಸುನೀತಾ, ಅಸೋಸಿಯೇಷನ್ ನ ಪದಾಧಿಕಾರಿಗಳಾದ ಜಾನ್ ಸುಧಾಕರ್, ರೆಹಮಾನ್, ಸತ್ಯನಾರಾಯಣ, ಗೌಷ್, ರೀಚ್ ಸಂಸ್ಥೆಯ ಜಿಲ್ಲಾ ಸಂಯೋಜಕ ಹನುಮಂತಪ್ಪ, ಪದಾಧಿಕಾರಿಗಳಾದ ಲಕ್ಮೀದೇವಿ, ಬಸಮ್ಮ, ಡಾ.ರ‍್ರಿಸ್ವಾಮಿ.ಹೆಚ್ ಸೇರಿದಂತೆ ಜೀನ್ಸ್ ಗಾರ್ಮೆಂಟ್ ಯೂನಿಟ್ ಗಳಲ್ಲಿ ಕೆಲಸ ಮಾಡುವ ಮಹಿಳಾ ಕಾರ್ಮಿಕರು ಭಾಗವಹಿಸಿದ್ದರು. -------------