ಶುಕ್ರವಾರ, ಮೇ 2, 2025

ಮೇ 04 ರಂದು ಶ್ರೀ ಭಗೀರಥ ಜಯಂತಿ ಕಾರ್ಯಕ್ರಮ

ಬಳ್ಳಾರಿ,ಮೇ 02(ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ಶ್ರೀ ಭಗೀರಥ ಜಯಂತಿ ಕಾರ್ಯಕ್ರಮವನ್ನು ಮೇ 04 ರಂದು ಮಧ್ಯಾಹ್ನ 12.30 ಗಂಟೆಗೆ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮAದಿರದಲ್ಲಿ ಆಯೋಜಿಸಲಾಗಿದೆ. ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಉಸ್ತುವಾರಿ ಸಚಿವ ಬಿ.ಝಡ್.ಜಮೀರ್ ಅಹ್ಮದ್ ಖಾನ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಅಧ್ಯಕ್ಷತೆ ವಹಿಸುವರು. ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಹಾಗೂ ಶಾಸಕ ಜೆ.ಎನ್ ಗಣೇಶ್, ಸಂಸದರಾದ ಈ.ತುಕಾರಾಂ, ಕೆ.ರಾಜಶೇಖರ ಬಸವರಾಜ ಹಿಟ್ನಾಳ್, ಡಾ.ಸೈಯದ್ ನಾಸೀರ್ ಹುಸೇನ್, ಶಾಸಕರಾದ ಬಿ.ನಾಗೇಂದ್ರ, ವಿಧಾನಪರಿಷತ್ ಶಾಸಕರಾದ ಡಾ.ಚಂದ್ರಶೇಖರ್ ಬಿ.ಪಾಟೀಲ, ಶಾಸಕರಾದ ಬಿ.ಎಂ.ನಾಗರಾಜ, ಈ.ಅನ್ನಪೂರ್ಣ, ವಿಧಾನಪರಿಷತ್ ಶಾಸಕರಾದ ಶಶೀಲ್ ನಮೋಶಿ, ವೈ.ಎಂ.ಸತೀಶ್, ಡಾ.ಬಾಬು ಜಗಜೀವನ್‌ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ, ಮಹಾನಗರ ಪಾಲಿಕೆಯ ಮಹಾಪೌರರಾದ ಮುಲ್ಲಂಗಿ ನಂದೀಶ್, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯಲು, ಜಿಲ್ಲಾ ಭಗೀರಥ ಉಪ್ಪಾರ ಸಂಘದ ಅಧ್ಯಕ್ಷ ಹನುಮೇಶ್ ಉಪ್ಪಾರ ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಅಮಾತಿ ಬಸವರಾಜ ಅವರು ಜಯಂತಿ ಕುರಿತು ವಿಶೇಷ ಉಪನ್ಯಾಸ ನೀಡುವರು. ಕಾರ್ಯಕ್ರಮದಲ್ಲಿ ಬಳ್ಳಾರಿಯ ಬಿ.ಕಾಸೀಂ ಅಲಿ ಅವರ ತಂಡದಿAದ ಭಕ್ತಿ ಸಂಗೀತ ಇರಲಿದೆ. *ಮೆರವಣಿಗೆ:* ಜಯಂತಿ ಅಂಗವಾಗಿ ಅಂದು ಬೆಳಿಗ್ಗೆ 10 ಗಂಟೆಗೆ ನಗರದ ಮುನ್ಸಿಪಲ್ ಕಾಲೇಜು ಮೈದಾನದಿಂದ ಮೆರವಣಿಗೆ ನಡೆಯಲಿದೆ. ಮೆರವಣಿಗೆಯು ಮುನ್ಸಿಪಲ್ ಕಾಲೇಜು ಮೈದಾನದಿಂದ ಆರಂಭಗೊAಡು ಗಡಿಗಿ ಚೆನ್ನಪ್ಪ ವೃತ್ತ-ಬೆಂಗಳೂರು ರಸ್ತೆ-ಹಳೆ ಬ್ರೂಸ್ ಪೇಟೆ ಪೊಲೀಸ್ ಠಾಣೆ ರಸ್ತೆ-ತೇರು ಬೀದಿ-ಹೆಚ್.ಆರ್.ಗವಿಯಪ್ಪ ವೃತ್ತ- ಡಾ.ಜೋಳದರಾಶಿ ದೊಡ್ಡನಗೌಡ ರಂಗಮAದಿರದವರೆಗೆ ನಡೆಯಲಿದೆ. ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ.ವಿ.ಜೆ., ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರೀಸ್ ಸುಮೈರ್, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಎನ್.ಝುಬೇರ್, ಮಹಾನಗರ ಪಾಲಿಕೆ ಆಯುಕ್ತರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಸೇರಿದಂತೆ ಇತರರು ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ. -----------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ