ಶನಿವಾರ, ಮೇ 3, 2025

ಮೇ 05 ರಂದು ಜಿಲ್ಲಾ ಮಟ್ಟದ ದಿಶಾ ಸಮಿತಿ ಸಭೆ

ಬಳ್ಳಾರಿ,ಮೇ 03(ಕರ್ನಾಟಕ ವಾರ್ತೆ): ಜಿಲ್ಲಾ ಪಂಚಾಯತ್ ವತಿಯಿಂದ ಜಿಲ್ಲಾ ಅಭಿವೃದ್ಧಿ ಸಮನ್ವಯ ಉಸ್ತುವಾರಿ ಸಮಿತಿ “ದಿಶಾ” ಸಮಿತಿಯ ಸಭೆಯನ್ನು ಮೇ 05 ರಂದು ಬೆಳಿಗ್ಗೆ 10 ಗಂಟೆಗೆ ಸಂಡೂರು ತಾಲ್ಲೂಕಿನ ನಂದಿಹಳ್ಳಿ ಸ್ನಾತಕೋತ್ತರ ಕೇಂದ್ರದ ಸಭಾಂಗಣದಲ್ಲಿ ನಡೆಸಲು ನಿಗದಿಪಡಿಸಲಾಗಿದೆ. ಬಳ್ಳಾರಿ ಲೋಕಸಭಾ ಕ್ಷೇತ್ರದ ಸಂಸದರು ಹಾಗೂ ಜಿಲ್ಲಾ ಮಟ್ಟದ ದಿಶಾ ಸಮಿತಿಯ ಅಧ್ಯಕ್ಷರೂ ಆದ ಈ.ತುಕಾರಾಮ್ ಅವರು ಸಭೆಯ ಅಧ್ಯಕ್ಷತೆ ವಹಿಸುವರು. ಸಭೆಗೆ ಸಂಬAಧಪಟ್ಟ ಇಲಾಖಾ ಅಧಿಕಾರಿಗಳು ಅಗತ್ಯಪೂರ್ಣ ಮಾಹಿತಿಯೊಂದಿಗೆ ತಪ್ಪದೇ ಹಾಜರಾಗಬೇಕು. *ಅಹವಾಲು ಸ್ವೀಕಾರ:* ಮೇ 05 ರಂದು ಬೆಳಿಗ್ಗೆ 09.30 ಗಂಟೆಗೆ ಸಂಸದರಾದ ಈ.ತುಕಾರಾಮ್ ಅವರು ಸಂಡೂರು ತಾಲ್ಲೂಕು ತಹಶೀಲ್ದಾರರ ಕಚೇರಿಯಲ್ಲಿ ಕೇಂದ್ರ ಮತ್ತು ಕೇಂದ್ರ ಪುರಸ್ಕೃತ ಹಾಗೂ ಇತರೆ ಯೋಜನೆಗಳ ಕುರಿತಂತೆ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವರು. ಅಧಿಕಾರಿಗಳು ತಪ್ಪದೇ ಹಾಜರಿರಬೇಕು ಎಂದು ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಹಾಗೂ ದಿಶಾ ಸಮಿತಿಯ ಸದಸ್ಯ ಕಾರ್ಯದರ್ಶಿಯೂ ಆದ ಅವರು ತಿಳಿಸಿದ್ದಾರೆ.
-----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ