ಬುಧವಾರ, ಮೇ 7, 2025
ಮೇ 09 ರಂದು ಪ್ರತಿಷ್ಠಿತ ಖಾಸಗಿ ಶಾಲೆಗಳ ದಾಖಲಾತಿಗೆ ಪ್ರವೇಶ ಪರೀಕ್ಷೆ
ಬಳ್ಳಾರಿ,ಮೇ 07 (ಕರ್ನಾಟಕ ವಾರ್ತೆ):
ಪರಿಶಿಷ್ಟ ವರ್ಗಗಗಳ ಕಲ್ಯಾಣ ಇಲಾಖೆಯ ವತಿಯಿಂದ 2025-26ನೇ ಸಾಲಿಗೆ 5 ನೇ ತರಗತಿಯಲ್ಲಿ ಶೇ.60 ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ 6 ನೇ ತರಗತಿಗೆ ಪ್ರತಿಷ್ಠಿತ ಖಾಸಗಿ ಶಾಲೆಗಳ ಪ್ರವೇಶಾತಿಗೆ ಮೇ 09 ರಂದು ಬೆಳಿಗ್ಗೆ 11 ಗಂಟೆಯಿAದ ಮಧ್ಯಾಹ್ನ 1 ರವರೆಗೆ ನಗರದ ಅಂಚೆ ಕಚೇರಿ ಪಕ್ಕದ ಸರ್ಕಾರಿ ಬಾಲಕೀಯರ ಜೂನಿಯರ್ ಕಾಲೇಜಿನಲ್ಲಿ ಅರ್ಹತಾ ಪ್ರವೇಶ ಪರೀಕ್ಷೆ ನಡೆಸಲಾಗುತ್ತದೆ ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.
ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳು ಆಯಾ ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ಪ್ರವೇಶ ಪತ್ರ ಪಡೆದು, ಮೇ 09 ರಂದು ಬೆಳಿಗ್ಗೆ 10 ಗಂಟೆಗೆ ಪರೀಕ್ಷಾ ಕೇಂದ್ರದಲ್ಲಿ ಹಾಜರಿರಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ ಅಥವಾ ದೂ.08392-242453, ಮೊ.9986302091 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ