ಶುಕ್ರವಾರ, ಮೇ 16, 2025

ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ: 1ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

ಬಳ್ಳಾರಿ,ಮೇ 16(ಕರ್ನಾಟಕ ವಾರ್ತೆ): ಸಿರುಗುಪ್ಪ ತಾಲ್ಲೂಕಿನ ತೆಕ್ಕಲಕೋಟೆಯ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಯ 2025-26ನೇ ಸಾಲಿನ 01 ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ ಎಂದು ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಅವರು ತಿಳಿಸಿದ್ದಾರೆ. ಆಸಕ್ತ ಅರ್ಹ ವಿದ್ಯಾರ್ಥಿಗಳು ಮೇ 15 ರಿಂದ ಮೇ 31 ರ ವರೆಗೆ ಅರ್ಜಿ ಸಲ್ಲಿಸಬಹುದು. ಅರ್ಜಿಗಳನ್ನು ಸಿರುಗುಪ್ಪ ತಾಲ್ಲೂಕಿನ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಕಚೇರಿ ಮತ್ತು ತೆಕ್ಕಲಕೋಟೆಯ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಯಲ್ಲಿ ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಸಿರುಗುಪ್ಪ ತಾಲ್ಲೂಕಿನ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಕಚೇರಿ ದೂ.08396-222003 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ