ಗುರುವಾರ, ಮೇ 15, 2025

ಮೇ 16 ರಂದು ವಿದ್ಯುತ್ ವ್ಯತ್ಯಯ

ಬಳ್ಳಾರಿ,ಮೇ 15(ಕರ್ನಾಟಕ ವಾರ್ತೆ): ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-2 ರ ವ್ಯಾಪ್ತಿಗೆ ಬರುವ 110/11ಕೆ.ವಿ ಸೋಮಸಮುದ್ರ ವಿದ್ಯುತ್ ಉಪ-ಕೇಂದ್ರದ ನಿರ್ವಹಣೆ ಕಾಮಗಾರಿ ಕೈಗೊಳ್ಳುತ್ತಿರುವುರಿಂದÀ ಮೇ 16 ರಂದು ಬೆಳಿಗ್ಗೆ 07 ಗಂಟೆಯಿAದ ಸಂಜೆ 06 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ. *ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು:* ಎಫ್-6 ವ್ಯಾಪ್ತಿಯ ತಾಳೂರು ರೋಡ್, ಸ್ನೇಹ ಕಾಲೋನಿ, ಶ್ರೀನಗರ, ರೇಣುಕಾ ನಗರ, ಭಗತ್‌ಸಿಂಗ್ ನಗರ, ಕನ್ನಡ ನಗರ, ಮಹಾನಂದಿ ಕೊಟ್ಟಂ, ಪಾರ್ವತಿ ನಗರ, ಎಸ್.ಪಿ.ಸರ್ಕಲ್, ಶಾಸ್ತಿçà ನಗರ, ಬ್ಯಾಂಕ್ ಕಾಲೋನಿ, ಬಸವನಕುಂಟೆ, ಸಿರುಗುಪ್ಪ ರೋಡ್, ರಾಮ ನಗರ, ಹಾವಂಬಾವಿ, ಜಿಲ್ಲಾ ಕೋರ್ಟ್ ಸಂಕೀರ್ಣ. ಎಫ್-10 ವ್ಯಾಪ್ತಿಯ ಅಶೋಕ ನಗರ, ಹಾವಂಭಾವಿ, ಟಿ.ಎಂ.ಜಿ ಲೇಔಟ್ , ರಾಮ ನಗರ, ಜಯನಗರ, ಗಾಯತ್ರಿ ನಗರ, ಭುವನಗಿರಿ ಕಾಲೋನಿ, ವೀರನಗೌಡ ಕಾಲೋನಿ, ಗಣೇಶ ನಗರ ಸೇರಿದಂತೆ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದ್ದು, ವಿದ್ಯುತ್ ಗ್ರಾಹಕರು ಮತ್ತು ಸಾರ್ವಜನಿಕರು ಸಹಕರಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ