ಶನಿವಾರ, ಮೇ 17, 2025

ಮೇ 18 ರಂದು ವಿದ್ಯುತ್ ವ್ಯತ್ಯಯ

ಬಳ್ಳಾರಿ,ಮೇ 17(ಕರ್ನಾಟಕ ವಾರ್ತೆ): ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-1 ರ ವ್ಯಾಪ್ತಿಗೆ ಬರುವ 110/11ಕೆವಿ ಸೌತ್ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳುತ್ತಿರುವುದರಿಂದ ಮೇ 18 ರಂದು ಬೆಳಿಗ್ಗೆ 07 ಗಂಟೆಯಿAದ ಸಂಜೆ 05 ಗಂಟೆಯವರೆಗೆ ಎಫ್-23 ಮತ್ತು ಎಫ್-24 ರ ವ್ಯಾಪ್ತಿಯ ಹೆಚ್.ಆರ್.ಗವಿಯಪ್ಪ ವೃತ್ತ, ತೇರು ಬೀದಿ, ಜೈನ್ ಮಾರ್ಕೆಟ್, ಕಾಳಮ್ಮ ರಸ್ತೆ, ಲಾರಿ ಟಮಿರ್ನಲ್, ರಂಗ ಮಂದಿರ, ಹೊಸ ಬಸ್ ನಿಲ್ದಾಣ, ಬಂಡಿಮೊಟ್, ಗೊಲ್ಲರಹಟ್ಟಿ, ಮಾರುತಿ ಕಾಲೋನಿ, ಬಾಪೂಜಿ ನಗರ, ಕುರಿ ಕಮೇಲ, ಕಮೇಲ ರಸ್ತೆ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ