ಗುರುವಾರ, ಮೇ 8, 2025
ಎಸ್‌ಎಸ್‌ಎಲ್‌ಸಿ ಪರೀಕ್ಷೆ-2: ನೋಂದಣಿಗೆ ಆಹ್ವಾನ
ಬಳ್ಳಾರಿ,ಮೇ 08(ಕರ್ನಾಟಕ ವಾರ್ತೆ):
2025ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ರಲ್ಲಿ ಉತ್ತೀರ್ಣರಾಗದ ವಿದ್ಯಾರ್ಥಿಗಳು ಮೇ 26 ರಿಂದ ಜೂನ್ 02 ರವರೆಗೆ ನಡೆಯಲಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 ರ ಪರೀಕ್ಷೆಗೆ ನೋಂದಾಯಿಸಿಕೊಳ್ಳಬಹುದು.
ಜಿಲ್ಲೆಯ 04 ತಾಲ್ಲೂಕುಗಳಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 ನಡೆಯಲಿವೆ. ಪ್ರಥಮ ಬಾರಿಗೆ ಪರೀಕ್ಷೆಗೆ ನೋಂದಣಿಯಾಗುವ ವಿದ್ಯಾರ್ಥಿಗಳಿಗೆ ಶುಲ್ಕ ಪಾವತಿಯಿಂದ ವಿನಾಯಿತಿ ಇದ್ದು, ವಿದ್ಯಾರ್ಥಿಗಳು ಮೇ 10 ರೊಳಗಾಗಿ ನೋಂದಾಯಿಸಿಕೊಳ್ಳಬಹುದು ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಬಿ.ಉಮಾದೇವಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ