ಸೋಮವಾರ, ಮೇ 19, 2025

ಬಳ್ಳಾರಿ: ಮೇ 20 ರಂದು ದೈನಂದಿನ ಬಸ್‌ಗಳ ಕಾರ್ಯಾಚರಣೆಯಲ್ಲಿ ವ್ಯತ್ಯಯ

ಬಳ್ಳಾರಿ,ಮೇ 19(ಕರ್ನಾಟಕ ವಾರ್ತೆ): ರಾಜ್ಯ ಸರ್ಕಾರವು 2 ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಮೇ 20 ರಂದು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ‘ಪ್ರಗತಿಯತ್ತ ಕರ್ನಾಟಕ ಸಮರ್ಪಣೆ ಸಂಕಲ್ಪ’ ಸಮಾವೇಶ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮಕ್ಕೆ ಬಳ್ಳಾರಿ ವಿಭಾಗದಿಂದ ಒಟ್ಟು 225 ಬಸ್ಸುಗಳನ್ನು ಜಿಲ್ಲಾಡಳಿತದ ಆದೇಶದ ಮೇರೆಗೆ ಸಾಂಧರ್ಬಿಕ ಒಪ್ಪಂದದ ಮೇಲೆ ಒದಗಿಸಲಾಗುತ್ತಿದ್ದು, ದೈನಂದಿನ ಬಸ್‌ಗಳ ಕಾರ್ಯಾಚರಣೆಯಲ್ಲಿ ವ್ಯತ್ಯಯವಾಗಲಿವೆ. ಕಾರ್ಯಕ್ರಮದಲ್ಲಿ ರಾಜ್ಯದ ಮುಖ್ಯಮಂತ್ರಿಯವರಿAದ ಹಕ್ಕುಪತ್ರ ಮತ್ತು ವಿವಿಧ ಸವಲತ್ತುಗಳ ವಿತರಣೆ ಮಾಡಲಿದ್ದು, ಜಿಲ್ಲೆಯ ಎಲ್ಲಾ ತಾಲ್ಲೂಕುಗಳಿಂದ ಫಲಾನುಭವಿಗಳನ್ನು ಸಮಾವೇಶಕ್ಕೆ ಕರೆದೊಯ್ಯಲಾಗುತ್ತಿದ್ದು, ಈ ನಿಟ್ಟಿನಲ್ಲಿ ಮೇ 20 ರಂದು ಬಳ್ಳಾರಿ, ಸಿರುಗುಪ್ಪ, ತೆಕ್ಕಲಕೋಟೆ, ಕುರುಗೋಡು, ಕುಡತಿನಿ, ಕಂಪ್ಲಿ ಮತ್ತು ಸಂಡೂರು ವಿಭಾಗದಿಂದ ವಿವಿಧ ಸ್ಥಳಗಳಿಗೆ ತೆರಳುವ ಬಸ್ಸುಗಳ ದೈನಂದಿನ ಅನುಸೂಚಿಗಳ ಕಾರ್ಯಾಚರಣೆಯಲ್ಲಿ ವ್ಯತ್ಯಯವಾಗಲಿವೆ. ಸಾರ್ವಜನಿಕ ಪ್ರಯಾಣಿಕರು ಸಹಕರಿಸಬೇಕು ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ಕೋರಿದ್ದಾರೆ. ---------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ