ಸೋಮವಾರ, ಮೇ 19, 2025

ಮೇ 20 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೊಸಪೇಟೆಗೆ ಆಗಮನ | ‘ಪ್ರಗತಿಯತ್ತ ಕರ್ನಾಟಕ-ಸಮರ್ಪಣೆಯ ಸಂಕಲ್ಪ’ ಕಾರ್ಯಕ್ರಮದಲ್ಲಿ ಭಾಗಿ

ಬಳ್ಳಾರಿ,ಮೇ 19(ಕರ್ನಾಟಕ ವಾರ್ತೆ): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೇ 20 ರಂದು ಹೊಸಪೇಟೆ ನಗರಕ್ಕೆ ಆಗಮಿಸಲಿದ್ದು, ಕಂದಾಯ ಇಲಾಖೆ ಮತ್ತು ವಿಜಯನಗರ ಜಿಲ್ಲಾಡಳಿತದ ವತಿಯಿಂದ ಆಯೋಜಿಸಲಾಗಿರುವ ಪ್ರಗತಿಯತ್ತ ಕರ್ನಾಟಕ ಸಮರ್ಪಣೆ ಸಂಕಲ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಬೆಳಿಗ್ಗೆ 9 ಗಂಟೆಗೆ ಬೆಂಗಳೂರಿನ ಹೆಚ್.ಎ.ಎಲ್. ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಹೊರಡುವ ಅವರು, 9.50 ಕ್ಕೆ ಬಳ್ಳಾರಿ ಜಿಲ್ಲೆಯ ತೋರಣಗಲ್ಲಿನ ಜಿಂದಾಲ್ ಏರ್‌ಸ್ಟಿçಪ್‌ಗೆ ಆಗಮಿಸುವರು. ಬೆಳಿಗ್ಗೆ 11.15ಕ್ಕೆ ಜಿಂದಾಲ್ ಏರ್‌ಸ್ಟಿçಪ್ ನಿಂದ ಹೆಲಿಕಾಪ್ಟರ್ ಮೂಲಕ ಹೊರಟು, 11:30ಕ್ಕೆ ಹೊಸಪೇಟೆ ನಗರದ ಭಟ್ಟರಹಳ್ಳಿ ಆಂಜನೇಯ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಹೆಲಿಪ್ಯಾಡ್‌ಗೆ ಬಂದಿಳಿಯುವರು. ನಂತರ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಕಂದಾಯ ಇಲಾಖೆ ಮತ್ತು ವಿಜಯನಗರ ಜಿಲ್ಲಾಡಳಿತ ವತಿಯಿಂದ ಜರುಗಲಿರುವ ‘ಪ್ರಗತಿಯತ್ತ ಕರ್ನಾಟಕ - ಸಮರ್ಪಣೆ ಸಂಕಲ್ಪ’, ಎರಡು ವರ್ಷಗಳ ಜನಪರ ಸಾಧನೆಯ ಸಮರ್ಪಣೆ ಮತ್ತಷ್ಟು ಜನಪರ ಸೇವೆಯ ಪ್ರತಿಜ್ಞೆ ಒಂದು ಲಕ್ಷ ಕುಟುಂಬಗಳಿಗೆ ನೆಮ್ಮದಿ ಕಂದಾಯ ಗ್ರಾಮ ಹಕ್ಕು ಪತ್ರ ಸಮರ್ಪಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಭಟ್ಟರಹಳ್ಳಿ ಆಂಜನೇಯ ಸ್ವಾಮಿ ದೇವಸ್ಥಾನದ ಆವರಣದ ಪ್ಯಾಡ್‌ನಲ್ಲಿ ಹೆಲಿಕ್ಯಾಪ್ಟರ್ ಮೂಲಕ 03:15 ಕ್ಕೆ ಜಿಂದಾಲ್ ಏರ್‌ಸ್ಟಿçಪ್ ತೋರಣಗಲ್ಲು ತಲುಪಿ 03:20 ಕ್ಕೆ ವಿಶೇಷ ವಿಮಾನದಲ್ಲಿ ಹೆಚ್‌ಎಎಲ್ ವಿಮಾನ ನಿಲ್ದಾಣ ತಲುಪಲಿದ್ದಾರೆ. -----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ