ಗುರುವಾರ, ಮೇ 15, 2025
ಆಸ್ತಿ ತೆರಿಗೆ ಪಾವತಿ: ಜೂ.30 ರವರೆಗೆ ಅವಧಿ ವಿಸ್ತರಣೆ
ಬಳ್ಳಾರಿ,ಮೇ 15(ಕರ್ನಾಟಕ ವಾರ್ತೆ):
ಬಳ್ಳಾರಿ ಮಹಾನಗರಪಾಲಿಕೆ ವ್ಯಾಪ್ತಿಯ ಸಾರ್ವಜನಿಕರು ಆಸ್ತಿ ತೆರಿಗೆ ಪಾವತಿ ಮೇಲಿನ ಶೇ.5 ರ ರಿಯಾಯಿತಿಯ ಅವಧಿಯನ್ನು ಜೂನ್ 30 ರವರೆಗೆ ವಿಸ್ತರಿಸಲಾಗಿದೆ. ಈ ಅವಕಾಶವನ್ನು ಸದುಪಯೋಗಪಡೆದುಕೊಂಡು ನಿಗಧಿತ ಅವಧಿಯಲ್ಲಿ ತೆರಿಗೆ ಪಾವತಿಸಿ ಬಳ್ಳಾರಿ ನಗರದ ಅಭಿವೃದ್ಧಿಗೆ ಸಹಕರಿಸಬೇಕು.
ಅದೇರೀತಿಯಾಗಿ ಇ-ಖಾತಾ ಅಭಿಯಾನವನ್ನು ಸಹ ಆಗಸ್ಟ್ 10 ರವರೆಗೆ ವಿಸ್ತರಿಸಿರುವುದರಿಂದ ಈವರೆಗೂ ಇ-ಖಾತಾ ಪಡೆದುಕೊಳ್ಳದೇ ಇರುವ ನಾಗರಿಕರು ಈ ಅವಕಾಶ ಸದುಪಯೋಗ ಪಡೆಕೊಳ್ಳಬೇಕು ಎಂದು ಬಳ್ಳಾರಿ ಮಹಾನಗರ ಪಾಲಿಕೆ ಕಚೇರಿಯು ಪ್ರಕಟಣೆಯಲ್ಲಿ ತಿಳಿಸಿದೆ.
------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ