ಗುರುವಾರ, ಮೇ 15, 2025

ಮೃತ ವ್ಯಕ್ತಿ ವಾರಸುದಾರರ ಪತ್ತೆಗೆ ಮನವಿ

ಬಳ್ಳಾರಿ,ಮೇ 15(ಕರ್ನಾಟಕ ವಾರ್ತೆ): ತಾಲ್ಲೂಕಿನ ಶ್ರೀಧರಗಡ್ಡೆ ಗ್ರಾಮದಿಂದ ಬಳ್ಳಾರಿ ನಗರದ ಕಡೆ ಹೋಗುವ ರಸ್ತೆಯಲ್ಲಿ ಸುಮಾರು 40 ವಷÀðದ ಅನಾಮಧೇಯ ವ್ಯಕ್ತಿಯು ನಿರ್ಲ್ಯಕ್ಷತನದಿಂದ ಬೈಕ್ ಚಾಲನೆ ಮಾಡಿ ನಿಯಂತ್ರಣ ತಪ್ಪಿ ಬಿದ್ದು ಗಾಯಗೊಂಡಿದ್ದು, ಮೇ 14 ರಂದು ಟ್ರಾಮಾಕೇರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದು, ಮೃತನ ವಾರಸುದಾರರ ಬಗ್ಗೆ ತಿಳಿದಿರುವುದಿಲ್ಲ. ಈ ಕುರಿತು ಬಳ್ಳಾರಿ ಸಂಚಾರಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತನ ವಾರಸುದಾರರ ಪತ್ತೆಗೆ ಸಹಕರಿಸಬೇಕು ಎಂದು ಠಾಣಾಧಿಕಾರಿ ಮನವಿ ಮಾಡಿದ್ದಾರೆ. ಚಹರೆ ಗುರುತು: ಎತ್ತರ 5 ಅಡಿ, ಕಪ್ಪು ಮೈಬಣ್ಣ, ದೃಢವಾದ ಮೈಕಟ್ಟು ಹೊಂದಿದ್ದು, ತಲೆಯಲ್ಲಿ ಕಪ್ಪು ಬಿಳಿ ಕೂದಲು, ಕಪ್ಪು ಬಳಿ ಗಡ್ಡ ಬಿಟ್ಟಿರುತ್ತಾನೆ. ಬಿಳಿ ಕಟ್ ಬನಿಯನ್, ಬಿಳಿ ಬಣ್ಣದ ಶರ್ಟ್ ಮತ್ತು ಬಲ ಕೈಯಲ್ಲಿ ದಾರ ಇರುತ್ತದೆ. ಮೇಲ್ಕಂಡ ಚಹರೆ ಗುರುತುಗಳುಳ್ಳ ಮೃತ ವ್ಯಕ್ತಿಯ ವಾರಸುದಾರರ ಬಗ್ಗೆ ಮಾಹಿತಿ ಇದ್ದಲ್ಲಿ ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ ದೂ.08392-258100, 258102 ಅಥವಾ ಬಳ್ಳಾರಿ ನಗರ ಡಿವೈಎಸ್‌ಪಿ ದೂ.08392-272322, ಬಳ್ಳಾರಿ ಸಂಚಾರಿ ಪೊಲೀಸ್ ಠಾಣೆಯ ದೂ.08392-275722, ಸಂಚಾರಿ ಪೊಲೀಸ್ ಠಾಣೆಯ ಪಿ.ಐ ಮೊ.9480803048 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ