ಶುಕ್ರವಾರ, ಮೇ 16, 2025

ಮೃತ ವ್ಯಕ್ತಿ ವಾರಸುದಾರರ ಪತ್ತೆಗೆ ಮನವಿ

ಬಳ್ಳಾರಿ,ಮೇ 16(ಕರ್ನಾಟಕ ವಾರ್ತೆ): ನಗರದ ಅನಂತಪುರ ಬೈಪಾಸ್ ರಸ್ತೆಯಲ್ಲಿ ಚೌಧರಿ ಅಂಗಡಿ ಹತ್ತಿರ ಸುಮಾರು 35 ರಿಂದ 40 ವರ್ಷದ ಅನಾಮಧೇಯ ವ್ಯಕ್ತಿಯು ಮೇ 15 ರಂದು ಮೃತಪಟ್ಟಿದ್ದು, ಮೃತನ ವಾರಸುದಾರರು ತಿಳಿದಿರುವುದಿಲ್ಲ. ಈ ಕುರಿತು ಬಳ್ಳಾರಿ ಗ್ರಾಮೀಣ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತನ ವಾರಸುದಾರರ ಪತ್ತೆಗೆ ಸಹಕರಿಸಬೇಕು ಎಂದು ಪೊಲೀಸ್ ಠಾಣಾಧಿಕಾರಿ ಮನವಿ ಮಾಡಿದ್ದಾರೆ. ಚಹರೆ ಗುರುತು: ಎತ್ತರ 5.4 ಅಡಿ, ಕೋಲು ಮುಖ, ಗೋಧಿ ಮೈಬಣ್ಣ, ತೆಳ್ಳನೆ ಮೈಕಟ್ಟು ಹೊಂದಿದ್ದು, ತಲೆಯಲ್ಲಿ 2-3 ಇಂಚು ಬಿಳಿ ಮಿಶ್ರಿತ ಕಪ್ಪು ಕೂದಲು, ಕರುಚಲು ಗಡ್ಡ ಬಿಟ್ಟಿರುತ್ತಾನೆ. ಅರಿಶಿಣ ಬಣ್ಣದ ಹಾಫ್ ಟೀ-ಶರ್ಟ್ ಮತ್ತು ಕಪ್ಪು ಬಣ್ಣದ ಪ್ಯಾಂಟ್ ಧರಿಸಿದ್ದು, ಬಲಗೈ ತೋಳಿನ ಮೇಲೆ ಓಂ ಅಂತ ಹಚ್ಚೆ ಗುರುತು ಹಾಗೂ ಕೈಯಲ್ಲಿ ಸ್ಟೀಲ್ ಕಡಗ, ಎಡಗೈ ಉಂಗುರ ಬೆರಳಿಗೆ ಸಿಲ್ವರ್ ಬಣ್ಣದ ಲೋಹದ ಉಂಗುರ ಇರುತ್ತದೆ. ಈ ಮೇಲ್ಕಂಡ ಚಹರೆ ಗುರುತುಗಳುಳ್ಳ ಮೃತ ವ್ಯಕ್ತಿಯ ವಾರಸುದಾರರ ಬಗ್ಗೆ ಮಾಹಿತಿ ಸಿಕ್ಕಲ್ಲಿ ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ ದೂ.08392-258100, 258102 ಅಥವಾ ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆಯ ದೂ.08392-276461, ಪಿ.ಐ ಮೊ.9480803049 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ