ಮಂಗಳವಾರ, ಮೇ 6, 2025
ವ್ಯಕ್ತಿ ನಾಪತ್ತೆ: ಪತ್ತೆಗೆ ಮನವಿ
ಬಳ್ಳಾರಿ,ಮೇ 06(ಕರ್ನಾಟಕ ವಾರ್ತೆ):
ಕುರುಗೋಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಾಗಪ್ಪ ಎನ್ನುವ 77 ವರ್ಷದ ವ್ಯಕ್ತಿಯು ಮಾ.27 ರಂದು ಕಾಣೆಯಾಗಿರುವ ಕುರಿತು ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಠಾಣಾಧಿಕಾರಿ ಮನವಿ ಮಾಡಿದ್ದಾರೆ.
ವ್ಯಕ್ತಿಯ ಚಹರೆ ಗುರುತು:
ಎತ್ತರ 6 ಅಡಿ, ಕೋಲು ಮುಖ, ಸಾಧಾರಣ ಕಪ್ಪು ಮೈಬಣ್ಣ, ದೃಢವಾದ ಮೈಕಟ್ಟು ಹೊಂದಿದ್ದು, ಕಾಣೆಯಾದ ಸಂದರ್ಭದಲ್ಲಿ ತುಂಬು ತೋಳಿನ ಹಸಿರು ಗೀರುಗಳುಳ್ಳ ಬಿಳಿ ಬಣ್ಣದ ಅಂಗಿ, ಖಾಕಿ ಬಣ್ಣದ ಪ್ಯಾಂಟ್ ಧರಿಸಿರುತ್ತಾನೆ. ಕನ್ನಡ, ತೆಲುಗು ಮತ್ತು ಹಿಂದಿ ಭಾಷೆ ಮಾತನಾಡುತ್ತಾನೆ.
ಕಾಣೆಯಾದ ವ್ಯಕ್ತಿಯ ಬಗ್ಗೆ ಸುಳಿವು ಸಿಕ್ಕಲ್ಲಿ ಕುರುಗೋಡು ಪೊಲೀಸ್ ಠಾಣೆಯ ಪಿಎಸ್‌ಐ ದೂ.08393-263433, ಮೊ.9480803051, ಸಿಪಿಐ ಮೊ.9480803039 ಮತ್ತು ಬಳ್ಳಾರಿ ಎಸ್‌ಪಿ ಕಚೇರಿ ದೂ.08392-258400 ಗೆ ಸಂಪರ್ಕಿಸಿ ಮಾಹಿತಿ ನೀಡಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
--------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ