ಗುರುವಾರ, ಮೇ 8, 2025

ಬಳ್ಳಾರಿ: ವಿವಿಧ ಗ್ರಾಮ ಪಂಚಾಯಿತಿ ತೆರವಾದ ಸ್ಥಾನಗಳಿಗೆ ಉಪ ಚುನಾವಣಾ ವೇಳಾಪಟ್ಟಿ ಪ್ರಕಟ

ಬಳ್ಳಾರಿ,ಮೇ 08(ಕರ್ನಾಟಕ ವಾರ್ತೆ): ಬಳ್ಳಾರಿ ಜಿಲ್ಲೆಯ ವಿವಿಧ ತಾಲ್ಲೂಕುಗಳ ಗ್ರಾಮ ಪಂಚಾಯಿತಿಯಲ್ಲಿ ವಿವಿಧ ಕಾರಣಗಳಿಂದ ತೆರವಾದ ಸ್ಥಾನಗಳಿಗೆ ಉಪ ಚುನಾವಣೆ ನಡೆಸಲು ಚುನಾವಣಾ ವೇಳಾಪಟ್ಟಿ ಪ್ರಕಟಿಸಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಆದೇಶಿಸಿದ್ದಾರೆ. ನಾಮಪತ್ರಗಳನ್ನು ಸಲ್ಲಿಸಲು ಮೇ 14 ರಂದು ಕೊನೆಯ ದಿನವಾಗಿರುತ್ತದೆ. ಮೇ 15 ರಂದು ನಾಮ ಪತ್ರಗಳನ್ನು ಪರಿಶೀಲಿಸುವ ದಿನವಾಗಿರುತ್ತದೆ. ಉಮೇದುವಾರಿಕೆಯನ್ನು ಹಿಂತೆಗೆದುಕೊಳ್ಳಲು ಮೇ 17 ಕೊನೆಯ ದಿನವಾಗಿರುತ್ತದೆ. ಮತದಾನವು ಮೇ 25 ರಂದು ನಡೆಯಲಿದೆ. ಮೇ 28 ರಂದು ಉಪಚುನಾವಣೆ ಪ್ರಕ್ರಿಯೆ ಮುಕ್ತಾಯಗೊಳ್ಳಲಿದೆ. *ಖಾಲಿ ಇರುವ ಗ್ರಾಪಂ ವಿವರ ಮತ್ತು ಸ್ಥಾನ:* ಕಂಪ್ಲಿ ತಾಲ್ಲೂಕಿನ ದೇವಸಮುದ್ರ-1(ಸಾಮಾನ್ಯ ಮಹಿಳೆ), ದೇವಲಾಪುರ-1(ಸಾಮಾನ್ಯ). ಸಿರುಗುಪ್ಪ ತಾಲ್ಲೂಕಿನ ರಾವಿಹಾಳು-1(ಅನುಸೂಚಿತ ಪಂಗಡ ಮಹಿಳೆ) ಬಿ.ಎಂ.ಸೂಗೂರು-2(ಸಾಮಾನ್ಯ ಮತ್ತು ಸಾಮಾನ್ಯ ಮಹಿಳೆ) ಮತ್ತು ಸಂಡೂರು ತಾಲ್ಲೂಕಿನ ಮೆಟ್ರಿಕಿ-1(ಅನುಸೂಚಿತ ಪಂಗಡ ಮಹಿಳೆ) ಸೇರಿ ಒಟ್ಟು 6 ಗ್ರಾಮಪಂಚಾಯತಿಗಳಿಗೆ ಉಪ ಚುನಾವಣೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಅವರು ತಿಳಿಸಿದ್ದಾರೆ. ---------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ