ಶುಕ್ರವಾರ, ಮೇ 16, 2025
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ: ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ
ಬಳ್ಳಾರಿ,ಮೇ 16(ಕರ್ನಾಟಕ ವಾರ್ತೆ):
ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ 2025-26 ನೇ ಸಾಲಿನ ಮೆಟ್ರಿಕ್ ಪೂರ್ವ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳಲ್ಲಿ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಅವರು ತಿಳಿಸಿದ್ದಾರೆ.
ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 2ಬಿ, 3ಎ, 3ಬಿ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗ, ಇತರೆ ಜನಾಂಗಕ್ಕೆ ಸೇರಿದ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿಯು ಪ್ರವರ್ಗ-1, ಎಸ್.ಸಿ ಮತ್ತು ಎಸ್.ಟಿ ಗೆ ರೂ.2.50 ಲಕ್ಷ ಹಾಗೂ ಪ್ರವರ್ಗ-2ಎ, 2ಬಿ, 3ಎ, 3ಬಿಗೆ ರೂ.1 ಲಕ್ಷ ಒಳಗಿರಬೇಕು.
ಅರ್ಹ ಆಸಕ್ತ ವಿದ್ಯಾರ್ಥಿಗಳು hಣಣಠಿs://shಠಿ.ಞಚಿಡಿಟಿಚಿಣಚಿಞಚಿ.gov.iಟಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು.
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಜೂನ್ 16 ಕೊನೆಯ ದಿನವಾಗಿರುತ್ತದೆ.
ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್‌ಸೈಟ್ hಣಣಠಿs://bಛಿತಿಜ.ಞಚಿಡಿಟಿಚಿಣಚಿಞಚಿ.gov.iಟಿ ನ್ನು ನೋಡಬಹುದು.
ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ bಛಿತಿಜheಟಠಿಟiಟಿe@gmಚಿiಟ.ಛಿom ಗೆ ಇ-ಮೇಲ್ ಮುಖಾಂತರ ಅಥವಾ ಜಿಲ್ಲಾ/ತಾಲ್ಲೂಕು ಅಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸಬಹುದು.
ಹೆಚ್ಚಿನ ಮಾಹಿತಿಗಾಗಿ ನಗರದ ಜೋಳದರಾಶಿ ದೊಡ್ಡನಗೌಡ ರಂಗಮAದಿರ ಹತ್ತಿರದ ಡಿ.ದೇವರಾಜು ಅರಸು ಭವನದ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿಗಳ ಕಚೇರಿ ಹಾಗೂ ಸಹಾಯವಾಣಿ ಸಂಖ್ಯೆ 8050770004/ 8050770005 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ