ಶನಿವಾರ, ಮೇ 3, 2025
ಅನಾಮಧೇಯ ಮೃತ ವ್ಯಕ್ತಿ ವಾರಸುದಾರರ ಪತ್ತೆಗೆ ಮನವಿ
ಬಳ್ಳಾರಿ,ಮೇ 03(ಕರ್ನಾಟಕ ವಾರ್ತೆ):
ಬಳ್ಳಾರಿ ಗ್ರಾಮೀಣ ವ್ಯಾಪ್ತಿಯ ಹದ್ದಿನಗುಂಡು ಗ್ರಾಮದ ಹತ್ತಿರ ಸುಮಾರು 60 ರಿಂದ 65 ವಷÀðದ ಅನಾಮದೇಯ ವ್ಯಕ್ತಿಯು ಯಾವುದೋ ಖಾಯಿಲೆಯಿಂದ ಬಳಲುತ್ತಿದ್ದು, ಅನಾರೋಗ್ಯದಿಂದ ಏ.27 ರಂದು ಮೃತಪಟ್ಟಿದ್ದು, ಮೃತನ ವಾರಸುದಾರರು ತಿಳಿದಿರುವುದಿಲ್ಲ. ಈ ಕುರಿತು ಬಳ್ಳಾರಿ ಗ್ರಾಮೀಣ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತನ ವಾರಸುದಾರರ ಪತ್ತೆಗೆ ಸಹಕರಿಸಬೇಕು ಎಂದು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಮನವಿ ಮಾಡಿದ್ದಾರೆ.
ಚಹರೆ ಗುರುತು:
ಎತ್ತರ 5.5 ಅಡಿ, ದುಂಡು ಮುಖ, ಕಪ್ಪು ಮೈಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದು, ಮೃತನ ತಲೆಯ ಮದ್ಯದಲ್ಲಿ ಬೋಳು ಇದ್ದು, ತಲೆ ಸುತ್ತಲೂ ಸುಮಾರು 5 ಇಂಚು ಬಿಳಿ ಕೂದಲು ಇರುತ್ತದೆ.
ಬಿಳಿ ಬಣ್ಣದ ತುಂಬು ತೋಳಿನ ಬನಿಯನ್ ಮತ್ತು ಮೃತ ದೇಹದ ಪಕ್ಕದಲ್ಲಿ ಕಪ್ಪು ಮತ್ತು ಬಿಳಿ ಚೌಕಳಿ ಡೈಜೈನಿನ ಕಾಟನ್ ಲುಂಗಿ ಬಿದ್ದಿರುತ್ತದೆ. ಬಲಗೈ ಮಣಿಕಟ್ಟುಗೆ ಕೆಂಪು ದಾರ ಇರುತ್ತದೆ.
ಈ ಮೇಲ್ಕಂಡ ಚಹರೆ ಗುರುತುಗಳುಳ್ಳ ಮೃತ ವ್ಯಕ್ತಿಯ ವಾರಸುದಾರರ ಬಗ್ಗೆ ಮಾಹಿತಿ ಇದ್ದಲ್ಲಿ ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ ದೂ.08392-258100, 258102 ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆಯ ದೂ.08392-276461, ಪಿ.ಐ ಮೊ.9480803049 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ