ಶುಕ್ರವಾರ, ಮೇ 30, 2025
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ: ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
ಬಳ್ಳಾರಿ,ಮೇ 30(ಕರ್ನಾಟಕ ವಾರ್ತೆ):
ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ 2025-26 ನೇ ಶೈಕ್ಷಣಿಕ ಸಾಲಿಗೆ ವಿದ್ಯಾರ್ಥಿಗಳ ಪ್ರವೇಶ ಪಡೆಯಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಪಿ.ಯು.ಸಿ., ಡಿಪ್ಲೋಮೋ, ಐ.ಟಿ.ಐ ಹಾಗೂ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಮಾತ್ರ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಆನ್‌ಲೈನ್ ವೆಬ್‌ಸೈಟ್ https://shp.karnataka.gov.in ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಜೂನ್ 28 ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಕಚೇರಿ ಅಥವಾ ದೂ.08395-200125/224 ಹಾಗೂ ತಾಲ್ಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳ ಮೊ.ಬಳ್ಳಾರಿ-8310321101, ಸಂಡೂರು-9036925966/ 86605755061, ಸಿರುಗುಪ್ಪ-9148889975 ಗೆ ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ