ಶುಕ್ರವಾರ, ಮೇ 30, 2025
ಪರಿಶಿಷ್ಟ ಜಾತಿ ಒಳ ಮೀಸಲಾತಿ ವರ್ಗೀಕರಣ ಸಮೀಕ್ಷೆ ಕಾರ್ಯ
ಜೂನ್ 01 ರವರೆಗೆ ವಿಶೇಷ ಶಿಬಿರ
ಬಳ್ಳಾರಿ,ಮೇ 30(ಕರ್ನಾಟಕ ವಾರ್ತೆ):
ನ್ಯಾಯಮೂರ್ತಿ ಡಾ.ಹೆಚ್.ಎನ್.ನಾಗಮೋಹನ ದಾಸ್ ಅವರ ಏಕ ಸದಸ್ಯ ವಿಚಾರಣಾ ಆಯೋಗದ ನಿರ್ದೇಶನದಂತೆ ಪರಿಶಿಷ್ಟ ಜಾತಿ ಒಳ ಮೀಸಲಾತಿ ವರ್ಗೀಕರಣ ಸಮೀಕ್ಷೆ ಕಾರ್ಯದಲ್ಲಿ ಈಗಾಗಲೇ ಮನೆ ಮನೆ ಸಮೀಕ್ಷೆ ಕಾರ್ಯ ಪ್ರಗತಿಯಲ್ಲಿದ್ದು, ಮನೆ-ಮನೆ ಸಮೀಕ್ಷೆಯಲ್ಲಿ ಕೈಬಿಟ್ಟು ಹೋದಂತಹ ಪರಿಶಿಷ್ಟ ಜಾತಿಯ ಕುಟುಂಬಗಳಿದ್ದಲ್ಲಿ ತಮ್ಮ ವ್ಯಾಪ್ತಿಯ ಮತಗಟ್ಟೆಗಳಲ್ಲಿ ಜೂನ್ 01 ರವರೆಗೆ ನಡೆಯುವ ವಿಶೇಷ ಶಿಬಿರದಲ್ಲಿ ಗಣತಿದಾರರು ಉಪಸ್ಥಿತರಿರುತ್ತಾರೆ. ಹಾಗಾಗಿ ತಮ್ಮ ತಮ್ಮ ಬೂತ್‌ಗಳಿಗೆ ಭೇಟಿ ನೀಡಿ ಅಲ್ಲಿ ಗಣತಿದಾರರೊಂದಿಗೆ ತಮ್ಮ ಜಾತಿ ಮತ್ತು ಉಪಜಾತಿಗಳ ವಿವರ ನೀಡಿ ಸಮೀಕ್ಷೆಯಲ್ಲಿ ನೋಂದಾಯಿಸಿಕೊಳ್ಳಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಮೊ.8310291951 ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಬಿ.ಮಲ್ಲಿಕಾರ್ಜುನ ಅವರು ತಿಳಿಸಿದ್ದಾರೆ.
------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ