ಗುರುವಾರ, ಮೇ 8, 2025

ಮೃತ ವ್ಯಕ್ತಿ ವಾರಸುದಾರರ ಪತ್ತೆಗೆ ಮನವಿ

ಬಳ್ಳಾರಿ,ಮೇ 08(ಕರ್ನಾಟಕ ವಾರ್ತೆ): ನಗರದ ಅಲ್ಲೀಪುರ ನೀರು ಸಂಗ್ರಹಗಾರ ಹತ್ತಿರ ಸುಮಾರು 25 ರಿಂದ 30 ವಷÀðದ ಅನಾಮಧೇಯ ವ್ಯಕ್ತಿಯು ಆಕಸ್ಮಿಕವಾಗಿ ಕಾಲುಜಾರಿ ನೀರಿನಲ್ಲಿ ಬಿದ್ದು ಮುಳುಗಿ ಮೇ 07 ರಂದು ಮೃತಪಟ್ಟಿದ್ದು, ಮೃತನ ವಾರಸುದಾರರು ತಿಳಿದಿರುವುದಿಲ್ಲ. ಈ ಕುರಿತು ಬಳ್ಳಾರಿ ಗ್ರಾಮೀಣ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತನ ವಾರಸುದಾರರ ಪತ್ತೆಗೆ ಸಹಕರಿಸಬೇಕು ಎಂದು ಪೊಲೀಸ್ ಸಬ್ ಇನ್ಸೆ÷್ಪಕ್ಟರ್ ಮನವಿ ಮಾಡಿದ್ದಾರೆ. ಚಹರೆ ಗುರುತು: ಎತ್ತರ 5.6 ಅಡಿ, ಗೋಧಿ ಮೈಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದು, ಕಪ್ಪು ಕೂದಲು, ಗಡ್ಡ ಬಿಟ್ಟಿರುತ್ತಾನೆ. ಕಪ್ಪು ಬಣ್ಣದ ಹಾಫ್ ಟೀ-ಶರ್ಟ್ ಮತ್ತು ತಿಳಿ ಪಿಂಕ್ ಬಣ್ಣದ ಫಾರ್ಮಲ್ ಪ್ಯಾಂಟ್ ಧರಿಸಿದ್ದು, ಪ್ಯಾಂಟ್‌ಗೆ ಬೆಲ್ಟ್ ಇರುತ್ತದೆ. ಈ ಮೇಲ್ಕಂಡ ಚಹರೆ ಗುರುತುಗಳುಳ್ಳ ಮೃತ ವ್ಯಕ್ತಿಯ ವಾರಸುದಾರರ ಬಗ್ಗೆ ಮಾಹಿತಿ ಸಿಕ್ಕಲ್ಲಿ ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ ದೂ.08392-258100, 258102 ಅಥವಾ ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆಯ ದೂ.08392-276461, ಪಿ.ಐ ಮೊ.9480803049 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ