ಬುಧವಾರ, ಮೇ 14, 2025

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ: ಶಾಲಾ ಆದ್ಯತೆ ನಮೂದಿಸಲು ಅವಕಾಶ

ಬಳ್ಳಾರಿ,ಮೇ 14(ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ (ಆಂಗ್ಲ ಮಾಧ್ಯಮ) ಶಾಲೆ ಮತ್ತು ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ(ಸಿಬಿಎಸ್‌ಸಿ) ಶಾಲೆಗಳಿಗೆ 2025-26 ನೇ ಸಾಲಿನಲ್ಲಿ 6ನೇ ತರಗತಿ ದಾಖಲಾತಿಗೆ ಸಂಬAಧಿಸಿದAತೆ ಈಗಾಗಲೇ ಸಾಮಾನ್ಯ ಪ್ರವೇಶ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳು ತಾವು ಪ್ರವೇಶ ಪಡೆಯಲು ಇಚ್ಛಿಸುವ ಜಿಲ್ಲೆಯಲ್ಲಿನ ಶಾಲೆಗಳ ಆದ್ಯತೆಯನ್ನು ನಮೂದಿಸಲು ಮೇ 17 ರ ವರೆಗೆ ಅವಕಾಶ ಕಲ್ಪಿಸಲಾಗಿದೆ. ವಿದ್ಯಾರ್ಥಿಗಳು ಶಾಲೆಗಳ ಶಾಲೆಗಳ ಆದ್ಯತೆ ನಮೂದಿಸಲು ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧಿಕೃತ ಜಾಲತಾಣ http://dom.karnataka.gov.in ಗೆ ಭೇಟಿ ನೀಡಬೇಕು. ಈಗಾಗಲೇ ವಿದ್ಯಾರ್ಥಿಗಳ ಪೋಷಕರ ಮೊಬೈಲ್ ಸಂಖ್ಯೆಗೆ ಎಸ್‌ಎಂಎಸ್ ಮತ್ತು ವಾಟ್ಸ್ಆಪ್ ಮೂಲಕ ಮಾಹಿತಿ ರವಾನಿಸಲಾಗಿದೆ. ಹಾಗಾಗಿ ಪ್ರವೇಶ ಪರೀಕ್ಷೆ ಬರೆದ ವಿದ್ಯಾರ್ಥಿಗಳು ತಪ್ಪದೇ ಶಾಲೆಗಳ ಆದ್ಯತೆ ನಮೂದಿಸಬೇಕು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ವಿಠೋಬಾ ಹೊನಕಾಂಡೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ