ಸೋಮವಾರ, ಮೇ 19, 2025
ವ್ಯಕ್ತಿ ಕಾಣೆ; ಪತ್ತೆಗೆ ಮನವಿ
ಬಳ್ಳಾರಿ,ಮೇ 19(ಕರ್ನಾಟಕ ವಾರ್ತೆ):
ಸಂಡೂರು ಪಟ್ಟಣದ ಶ್ರೀಶೈಲ ವಿದ್ಯಾಕೇಂದ್ರದ ಹತ್ತಿರದ 18ನೇ ವಾರ್ಡ್ನ ನಿವಾಸಿಯಾದ ಕೆ.ದರ್ಶನ್ ಎನ್ನುವ 38 ವರ್ಷದ ವ್ಯಕ್ತಿ ಮೇ 16 ರಂದು ಕಾಣೆಯಾಗಿರುವ ಕುರಿತು ಸಂಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಪೊಲೀಸ್ ಠಾಣಾಧಿಕಾರಿ ಮನವಿ ತಿಳಿಸಿದ್ದಾರೆ.
ಚಹರೆ ಗುರುತು:
ಅಂದಾಜು 5.2 ಅಡಿ ಎತ್ತರ, ದುಂಡು ಮುಖ, ಗೋಧಿ ಮೈಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದು, ಕನ್ನಡ, ಮರಾಠಿ, ಇಂಗ್ಲೀಷ್, ತೆಲುಗು, ಹಿಂದಿ ಭಾಷೆ ಮಾತನಾಡುತ್ತಾನೆ.
ಕಾಣೆಯಾದ ಸಂದರ್ಭದಲ್ಲಿ ಗೋಧಿ ಬಣ್ಣದ ಟೀ ಶರ್ಟ್, ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿದ್ದು, ಬಲ ಕಿವಿಯಲ್ಲಿ ಸಿಲ್ವರ್ ಟೈಪ್ ನ ರಿಂಗ್ ಧರಿಸಿರುತ್ತಾನೆ.
ವ್ಯಕ್ತಿಯ ಬಗ್ಗೆ ಸುಳಿವು ಸಿಕ್ಕಲ್ಲಿ ಸಂಡೂರು ಪೊಲೀಸ್ ಠಾಣೆಯ ಪಿ.ಎಸ್.ಐ ಮೊ.9480803061, 8548080429 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ