ಶುಕ್ರವಾರ, ಮೇ 16, 2025
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ: ಫಟ್ಬಾಲ್ ತರಬೇತುದಾರರ ಆಯ್ಕೆಗೆ ಅರ್ಜಿ ಆಹ್ವಾನ
ಬಳ್ಳಾರಿ,ಮೇ 16(ಕರ್ನಾಟಕ ವಾರ್ತೆ):
ಖೇಲೋ ಇಂಡಿಯಾ ಯೋಜನೆ ಅಡಿ ರಾಜ್ಯದಲ್ಲಿ 31 ಜಿಲ್ಲೆಗಳಲ್ಲಿ ಸಣ್ಣ ಖೇಲೋ ಇಂಡಿಯಾ ಕೇಂದ್ರಗಳನ್ನು ಪ್ರಾರಂಭಿಸಲು ಮಂಜೂರಾತಿ ನೀಡಿದ್ದು, ಬಳ್ಳಾರಿ ಜಿಲ್ಲೆಯ ಫುಟ್ಬಾಲ್ ಖೇಲೋ ಇಂಡಿಯಾ ಕೇಂದ್ರಕ್ಕೆ ತರಬೇತುದಾರರ ಆಯ್ಕೆಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಕೆ.ಗ್ರೇಸಿ ಅವರು ತಿಳಿಸಿದ್ದಾರೆ.
ರಾಷ್ಟç ಮಟ್ಟದ ಫುಟ್ಬಾಲ್ ಕ್ರೀಡಾಪಟುಗಳು, ಎನ್‌ಐಎಸ್, ಡಿಪ್ಲೋಮಾ ಇನ್ ಫುಟ್ಬಾಲ್ ಆಟ ಅಥವಾ ಎಂ.ಪಿ.ಇಡಿ ಫುಟ್‌ಬಾಲ್ ಆಟದಲ್ಲಿ ವಿಶೇಷತೆ ಮತ್ತು ರಾಷ್ಟಿçÃಯ ಪದಕ ವಿಜೇತ, ರಾಜ್ಯ ಪದಕ ವಿಜೇತ, ರಾಷ್ಟಿçÃಯ ಮಟ್ಟದಲ್ಲಿ ಪ್ರಾತಿನಿಧ್ಯ ವಹಿಸಿದ ರಾಜ್ಯದವರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದು,
ಆಸಕ್ತ ಅರ್ಹ ಫುಟ್ಬಾಲ್ ತರಬೇತುದಾರರು ಅರ್ಜಿ ಪಡೆದು ಭರ್ತಿ ಮಾಡಿ ಮೇ 26 ರೊಳಗಾಗಿ ಕಚೇರಿಗೆ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ನಗರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಗೆ ಭೇಟಿ ನೀಡಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ