ಶನಿವಾರ, ಮೇ 31, 2025
ಸರ್ಕಾರಿ ಪಾಲಿಟೆಕ್ನಿಕ್ ಡಿಪ್ಲೋಮಾ ಪ್ರಥಮ ವರ್ಷಕ್ಕೆ ಪ್ರವೇಶಾತಿಗೆ ಆಫ್‌ಲೈನ್ ಮೂಲಕ ಅರ್ಜಿ ಆಹ್ವಾನ
ಬಳ್ಳಾರಿ,ಮೇ 31(ಕರ್ನಾಟಕ ವಾರ್ತೆ):
ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ 2025-26ನೇ ಸಾಲಿಗೆ ಪ್ರಥಮ ಸೆಮಿಸ್ಟರ್ ಡಿಪ್ಲೋಮಾ ಕೋರ್ಸ್ ಪ್ರವೇಶಾತಿಗೆ ಆಫ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಯನ್ನು ಕಾಲೇಜಿನಲ್ಲಿ ಪಡೆದುಕೊಂಡು ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿದ ಅರ್ಜಿಗಳನ್ನು ಪಾಲಿಟೆಕ್ನಿಕ್‌ನ ಪ್ರಾಂಶುಪಾಲರ ಕಚೇರಿಗೆ ಜೂನ್ 02 ಸಂಜೆ 05 ಗಂಟೆಯವರೆಗೆ ಸಲ್ಲಿಸಬಹುದು.
ಜೂನ್ 03 ರಂದು ಬೆಳಿಗ್ಗೆ 11 ಗಂಟೆಗೆ ತಾತ್ಕಾಲಿಕ ಮೆರಿಟ್ ಪಟ್ಟಿ ಪ್ರಕಟ, ಅಂದು ಸಂಜೆ 04 ರ ವರೆಗೆ ತಿದ್ದುಪಡಿಗೆ ಅವಕಾಶ, ಸಂಜೆ 05 ಗಂಟೆಯವರೆಗೆ ಅಂತಿಮ ಮೆರಿಟ್ ಪಟ್ಟಿ ಪ್ರಕಟಿಸಲಾಗುವುದು. ಜೂನ್ 04 ರಿಂದ ಪ್ರವೇಶ ಪ್ರಕ್ರಿಯೆ ಪ್ರಾರಂಭವಾಗಲಿದೆ.
ಹೆಚ್ಚಿನ ಮಾಹಿತಿಗಾಗಿ ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜ್ ನ ಪ್ರಾಚಾರ್ಯರ ಕಚೇರಿ ಅಥವಾ ದೂ.08392-242228 ಗೆ ಸಂಪರ್ಕಿಸಬಹುದು ಎಂದು ಸರ್ಕಾರಿ ಪಾಲಿಟೆಕ್ನಿಕ್ ನ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ