ಶುಕ್ರವಾರ, ಮೇ 23, 2025

ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ: ಅರ್ಜಿ ಆಹ್ವಾನ

ಬಳ್ಳಾರಿ,ಮೇ 23(ಕರ್ನಾಟಕ ವಾರ್ತೆ): ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಕೇಂದ್ರ ಸರ್ಕಾರದ ಬುಡಕಟ್ಟು ಮಂತ್ರಾಲಯ ಇಲಾಖೆಯಡಿ “ಧರ್ತಿ ಆಬ ಜಂಜಾಟಿಯ ಗ್ರಾಮ ಉತ್ಕರ್ಷ ಅಭಿಯಾನ” ಕಾರ್ಯಕ್ರಮದಡಿ ಜಿಲ್ಲಾ ಮಟ್ಟದಲ್ಲಿ ಅರಣ್ಯ ಹಕ್ಕು ಕೋಶವನ್ನು ಸ್ಥಾಪಿಸಲು ಹಾಗೂ ಕೋಶಗಳಲ್ಲಿ ಕಾರ್ಯನಿರ್ವಹಿಸಲು ಅರ್ಹ ಪದವೀಧರರಿಂದ ಅರ್ಜಿ ಆಹ್ವಾನಿಸಲಾಗಿದೆ. 5 ವರ್ಷಗಳ ಕಂಪ್ಯೂಟರ್ ಜ್ಞಾನ ಅನುಭವ ಹೊಂದಿರುವ ಒಬ್ಬ ಕೋ-ಆರ್ಡಿನೇಟರ್ ಹಾಗೂ 3 ವರ್ಷ ಕಾರ್ಯ ಅನುಭವ ಇರುವ ಒಬ್ಬ ಎಮ್‌ಐಎಸ್ ಅಸಿಸ್ಟಂಟ್ ರನ್ನು ಹೊರಗುತ್ತಿಗೆ ಆಧಾರದ ಮೇಲೆ ಯೋಜನೆಯು ಪೂರ್ಣಗೊಳ್ಳುವವರೆಗೆ ನೇಮಕಾತಿ ಮಾಡಿಕೊಳ್ಳಲಾಗುವುದು. ಅರ್ಜಿ ಸಲ್ಲಿಸಲು ಮೇ 30 ಕೊನೆಯ ದಿನ. ಆಸಕ್ತ ಅಭ್ಯರ್ಥಿಗಳು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಗೆ ಭೇಟಿ ನೀಡಿ ಅರ್ಜಿ ಪಡೆದು ಸಲ್ಲಿಸಬಹುದು. ಹೆಚ್ಚಿನ ಮಾಹಿಗಾಗಿ ದೂ.08392-242453 ಗೆ ಸಂಪರ್ಕಿಸಬಹುದು ಎಂದು ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ