ಬುಧವಾರ, ಮೇ 14, 2025

ಮೀನುಗಾರಿಕೆ ಇಲಾಖೆ: ಮನೆ ನಿರ್ಮಾಣಕ್ಕೆ ಸಹಾಯಧನ ಪಡೆಯಲು ಅರ್ಜಿ ಆಹ್ವಾನ

ಬಳ್ಳಾರಿ,ಮೇ 14(ಕರ್ನಾಟಕ ವಾರ್ತೆ): ಮೀನುಗಾರಿಕೆ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನ ವಸತಿರಹಿತ ಮೀನುಗಾರರಿಗೆ ಸರ್ಕಾರದ ಮತ್ಸಾö್ಯಶ್ರಯ ಯೋಜನೆಯಡಿ ಮನೆಗಳನ್ನು ನಿರ್ಮಿಸಲು ಸಹಾಯಧನ ನೀಡಲಾಗುತ್ತಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಬಳ್ಳಾರಿ ಜಿಲ್ಲೆಯ ಕಂಪ್ಲಿ ವಿಧಾನಸಭಾ ಕ್ಷೇತ್ರಕ್ಕೆ 25 ಮನೆ, ಸಿರುಗುಪ್ಪ ವಿಧಾನಸಭಾ ಕ್ಷೇತ್ರಕ್ಕೆ 25 ಮನೆ, ಬಳ್ಳಾರಿ ಗ್ರಾಮಾಂತರ ವಿಧಾನಸಭಾ ಕ್ಷೇತ್ರಕ್ಕೆ 25 ಮನೆ, ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರಕ್ಕೆ 25 ಮನೆ ಮತ್ತು ಸಂಡೂರು ವಿಧಾನಸಭಾ ಕ್ಷೇತ್ರಕ್ಕೆ 25 ಮನೆಗಳು ಸೇರಿ ಒಟ್ಟು ಜಿಲ್ಲೆಗೆ 125 ಮನೆಗಳನ್ನು ಹಂಚಿಕೆ ಮಾಡಲಾಗಿದೆ. ಅರ್ಜಿಗಳನ್ನು ಆಯಾ ತಾಲ್ಲೂಕಿನ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿ (ಬಳ್ಳಾರಿ, ಸಿರುಗುಪ್ಪ, ಕಂಪ್ಲಿ ವಿಧಾನಸಭಾ ಕ್ಷೇತ್ರ) ಮತ್ತು ಸಂಡೂರು ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಗಳಲ್ಲಿ ಪಡೆದುಕೊಳ್ಳಬಹುದು. ಭರ್ತಿ ಮಾಡಿ ಅರ್ಜಿಗಳಲ್ಲಿ ಇದೇ ಕಚೇರಿಗೆ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಜೂನ್ 30 ಕೊನೆಯ ದಿನವಾಗಿದೆ ಎಂದು ಮೀನುಗಾರಿಕೆ ಉಪ ನಿರ್ದೇಶಕ ಶಿವಣ್ಣ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. --------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ