ಶನಿವಾರ, ಮೇ 17, 2025

ಕುಡತಿನಿ: ಸರ್ಕಾರಿ ಐಟಿಐ ಪ್ರವೇಶಕ್ಕೆ ಅರ್ಜಿ ಆಹ್ವಾನ

ಬಳ್ಳಾರಿ,ಮೇ 17(ಕರ್ನಾಟಕ ವಾರ್ತೆ): ಕುಡತಿನಿಯ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ 2025-26ನೇ ಸಾಲಿಗೆ ವಿವಿಧ ವೃತ್ತಿಗಳ ಪ್ರವೇಶಕ್ಕಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಕುಡತಿನಿಯ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರಾದ ಖುದ್ರತ್ ಅಲಿ ಹೆಚ್ ಲೈನ್ ಅವರು ತಿಳಿಸಿದ್ದಾರೆ. ಇ/ಎಂ, ಜೋಡಣೆಗಾರ, ವಿದ್ಯುತ್‌ಕರ್ಮಿ, ಚರಕಿಗಾರ ಪ್ರವೇಶಕ್ಕೆ ಮೆರಿಟ್ ಕಮ್ ರಿಸವೇಶನ್ ಆಧಾರದ ಮೇಲೆ ದಾಖಲಾತಿ ಹೊಂದಬಹುದು. ಬೇಕಾಗುವ ದಾಖಲೆ: ಆಧಾರ್ ಕಾರ್ಡ್, ಹೈದ್ರಾಬಾದ್ ಕರ್ನಾಟಕ (371ಜೆ), ಎಸ್.ಎಸ್.ಎಲ್.ಸಿ ಅಂಕಪಟ್ಟಿ, ವರ್ಗಾವಣೆ ಪ್ರಮಾಣ ಪತ್ರ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಕನ್ನಡ ಮತ್ತು ಗ್ರಾಮೀಣ ಪ್ರಮಾಣ ಪತ್ರ ಹಾಗೂ ಇತರೆ ದಾಖಲೆಗಳು. ಎಸ್.ಎಸ್.ಎಲ್.ಸಿ ಉತ್ತೀರ್ಣರಾದ ಅರ್ಹ ಆಸಕ್ತ ಅಭ್ಯರ್ಥಿಗಳು ಮೇ 28 ರೊಳಗಾಗಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಕುಡತಿನಿಯ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಅಥವಾ ಮೊ.9449248055, 9480939802 ಗೆ ಸಂಪರ್ಕಿಸಬಹುದು ಎಂದು ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ