ಬುಧವಾರ, ಮೇ 21, 2025

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ: ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

ಬಳ್ಳಾರಿ,ಮೇ 21(ಕರ್ನಾಟಕ ವಾರ್ತೆ): ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಹೊಸದಾಗಿ ಪ್ರವೇಶ ಬಯಸುವ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 2ಬಿ, 3ಎ, 3ಬಿ ಮತ್ತು ಪರಿಶಿಷ್ಟ ಜಾತಿ-ಪರಿಶಿಷ್ಟ ವರ್ಗದ ಪಿಯುಸಿ, ಐಟಿಐ ಮತ್ತು ಡಿಪ್ಲೋಮೋ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ 2025-26ನೇ ಸಾಲಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಆಸಕ್ತ ವಿದ್ಯಾರ್ಥಿಗಳು https://shp.karnataka.gov.in ಗೆ ಭೇಟಿ ನೀಡಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಜೂನ್ 20 ಕೊನೆಯ ದಿನವಾಗಿದೆ. ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್‌ಸೈಟ್ https://bcwd.karnataka.gov.in ನ್ನು ನೋಡಬಹುದು. ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ ಸಹಾಯವಾಣಿ ಸಂಖ್ಯೆ 8050770005 ಮತ್ತು 8050770004 ಅಥವಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಮತ್ತು ತಾಲ್ಲೂಕು ಅಧಿಕಾರಿಗಳ ಕಚೇರಿಗೆ ಅಗತ್ಯ ದಾಖಲೆಗಳೊಂದಿಗೆ ಭೇಟಿ ನೀಡಿ ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ