ಶುಕ್ರವಾರ, ಮೇ 23, 2025

ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ: ವಸತಿ ನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ

ಬಳ್ಳಾರಿ,ಮೇ 23(ಕರ್ನಾಟಕ ವಾರ್ತೆ): ಸಂಡೂರು ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಯಶವಂತನಗರದ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಗೆ 1 ನೇ ತರಗತಿ ಮತ್ತು 6 ನೇ ತರಗತಿಯ ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಂದ ಪ್ರಸಕ್ತ ಸಾಲಿಗೆ ವಸತಿ ನಿಲಯ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಇದೇ ವಸತಿ ಶಾಲೆಯಲ್ಲಿ ಪಡೆದು ಭರ್ತಿ ಮಾಡಿ ಜೂ 06 ರೊಳಗಾಗಿ ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂ.08395-200073 ಗೆ ಸಂಪರ್ಕಿಸಬಹುದು ಎಂದು ಸಂಡೂರು ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ