ಸೋಮವಾರ, ಜೂನ್ 30, 2025

ಕುರುಗೋಡು: ವಸತಿ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಬಳ್ಳಾರಿ,ಜೂ.30(ಕರ್ನಾಟಕ ವಾರ್ತೆ): ಕುರುಗೋಡು ಪುರಸಭೆ ವ್ಯಾಪ್ತಿಯಲ್ಲಿ 2025-26ನೇ ಸಾಲಿಗೆ ಪ್ರಧಾನಮಂತ್ರಿ ಆವಾಸ್ (ನಗರ) 2.0 ಯೋಜನೆಯಡಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಯಡಿ ಒಂಟಿ ಮಹಿಳೆಯರು, ಅಂಗವಿಕಲರು, ಹಿರಿಯ ನಾಗರಿಕರು, ತೃತೀಯಲಿಂಗಿಗಳು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ಹಿಂದುಳಿದ, ಅಲ್ಪಸಂಖ್ಯಾತ ವರ್ಗ, ಸ್ವಚ್ಚತಾ ಕಾರ್ಮಿಕರು, ಪಿಎಂ ಸ್ವಾನಿಧಿ ಯೋಜನೆಯಡಿ ಗುರುತಿಸಲ್ಪಟ್ಟ ಬೀದಿ ವ್ಯಾಪಾರಿಗಳು ಮತ್ತು ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯಡಿ ಗುರುತಿಸಿದ ಕುಶಲಕರ್ಮಿಗಳು, ಅಂಗನವಾಡಿ ಕಾರ್ಯಕರ್ತರು, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು, ಕೈಗಾರಿಕರು, ವಲಸೆ ಬಂದ ಕುಟುಂಬದವರು ಅರ್ಜಿ ಸಲ್ಲಿಸಬಹುದು. ಆನ್‌ಲೈನ್ ವೆಬ್‌ಸೈಟ್ https://pmay-urban.gov.in ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಜುಲೈ 15 ಅರ್ಜಿ ಸಲ್ಲಿಸಲು ಕೊನೆಯ ದಿನ. *ಬೇಕಾದ ದಾಖಲೆ:* ಆಧಾರ್ ಕಾರ್ಡ್ (ಮನೆಯ ಯಜಮಾನ/ನಿ ಹಾಗೂ ತಂದೆ/ತಾಯಿಯ ಮತ್ತು ಪಡಿತರ ಚೀಟಿಯಲ್ಲಿರುವಂತೆ) ಮತ್ತು ಕುಟುಂಬ ಸದಸ್ಯರ ಆಧಾರ್ ಕಾರ್ಡ್ಗಳು. ವಸತಿ ರಹಿತರಾದಲ್ಲಿ ನಿವೇಶನಕ್ಕೆ ಸಂಭAದಿಸಿದ ದಾಖಲೆಗಳು (ಹಕ್ಕು ಪತ್ರ, ಕ್ರಯ ಪತ, ದಾನ ಪತ್ರ, ಉಡುಗೋರೆ ಪತ್ರ, ಖಾತಾ ನಕಲು ಫಾರಂ-3). ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಪಡಿತರ ಚೀಟಿ, ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ, ನಿಗದಿತ ನಮೂನೆ (Annexure-2A/2B/2C) ಯಲ್ಲಿ “Self Undertaking” ಸಲ್ಲಿಸುವುದು. ಮೊಬೈಲ್ ಸಂಖ್ಯೆ, ಪ್ಯಾನ್ ಕಾರ್ಡ್ (ಲಭ್ಯವಿದ್ದಲ್ಲಿ ಮಾತ್ರ). ಅವಧಿ ಮೀರಿ ಬಂದತಹ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಕುರುಗೋಡು ಪುರಸಭೆ ಕಾರ್ಯಾಲಯ ಕಚೇರಿಗೆ ಸಂಪರ್ಕಿಸಬಹುದು ಎಂದು ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. --------------

ವ್ಯಕ್ತಿ ಕಾಣೆ; ಪತ್ತೆಗೆ ಮನವಿ

ಬಳ್ಳಾರಿ,ಜೂ.30(ಕರ್ನಾಟಕ ವಾರ್ತೆ): ತಾಲ್ಲೂಕಿನ ಸಂಗನಕಲ್ಲು ಗ್ರಾಮದ 4ನೇ ವಾರ್ಡ್ನ ಭೋವಿ ಕಾಲೋನಿಯ ನಿವಾಸಿಯಾದ ವಿ.ಗೋವಿಂದರಾಜ ಎನ್ನುವ 30 ವರ್ಷದ ವ್ಯಕ್ತಿಯು ಜೂ.14 ರಂದು ಕಾಣೆಯಾಗಿರುವ ಕುರಿತು ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಪೊಲೀಸ್ ಠಾಣಾಧಿಕಾರಿ ತಿಳಿಸಿದ್ದಾರೆ. ಚಹರೆ: ಅಂದಾಜು 5.8 ಅಡಿ ಎತ್ತರ, ಕೋಲು ಮುಖ, ಎಣ್ಣೆಗೆಂಪು ಮೈಬಣ್ಣ, ತೆಳ್ಳನೆಯ ಮೈಕಟ್ಟು ಹೊಂದಿದ್ದು, ಬಾಂಡ್ಲಿ ತಲೆಯ ಹಿಂದೆ ಕಪ್ಪು ಕೂದಲು ಮತ್ತು ಬಲಗಾಲು ಸ್ವಲ್ಪ ದಪ್ಪ ಇರುತ್ತದೆ. ಕಾಣೆಯಾದ ಸಂದರ್ಭದಲ್ಲಿ ನೀಲಿ ಬಣ್ಣದ ತುಂಬುತೋಳಿನ ಅಂಗಿ ಮತ್ತು ಕಂದು ಬಣ್ಣದ ಪ್ಯಾಂಟ್ ಮತ್ತು ಟೋಪಿ ಧರಿಸಿರುತ್ತಾನೆ. ಕನ್ನಡ ಮತ್ತು ತೆಲುಗು ಭಾಷೆ ಮಾತನಾಡುತ್ತಾನೆ. ಮೇಲ್ಕಂಡ ಚಹರೆ ಗುರುತುಗಳುಳ್ಳ ವ್ಯಕ್ತಿಯ ಬಗ್ಗೆ ಮಾಹಿತಿ ಸಿಕ್ಕಲ್ಲಿ ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆಯ ದೂ.08392-276461, ಮೊ.9480803049 ಅಥವಾ ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ.08392-258100 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -------------

ಮೃತ ಅನಾಮಧೇಯ ವ್ಯಕ್ತಿ ವಾರಸುದಾರರ ಪತ್ತೆಗೆ ಮನವಿ

ಬಳ್ಳಾರಿ,ಜೂ.30(ಕರ್ನಾಟಕ ವಾರ್ತೆ): ನಗರದ ರಾಧಿಕಾ ಸಿನಿಮಾ ಮಂದಿರ ಹತ್ತಿರ ಸುಮಾರು 60 ವರ್ಷದ ಅನಾಮಧೇಯ ವ್ಯಕ್ತಿಯು ಯಾವುದೋ ಖಾಯಿಲೆಯಿಂದ ಅಸ್ವಸ್ಥವಾಗಿ ಮಲಗಿದ್ದು ಜೂ.24 ರಂದು ಸಾರ್ವಜನಿಕರು ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುತ್ತಾನೆ. ಮೃತನ ವಾರಸುದಾರರು ತಿಳಿದಿರುವುದಿಲ್ಲ. ಈ ಕುರಿತು ಬ್ರೂಸ್‌ಪೇಟೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತನ ವಾರಸುದಾರರ ಪತ್ತೆಗೆ ಸಹಕರಿಸಬೇಕು ಎಂದು ಪೊಲೀಸ್ ಠಾಣಾಧಿಕಾರಿ ಮನವಿ ಮಾಡಿದ್ದಾರೆ. ಚಹರೆ ಗುರುತು: ಎತ್ತರ 5.5 ಅಡಿ, ದುಂಡು ಮುಖ, ಎಣ್ಣೆಗೆಂಪು ಮೈಬಣ್ಣ, ತೆಳುವಾದ ಮೈಕಟ್ಟು ಹೊಂದಿದ್ದು, ತಲೆಯಲ್ಲಿ ಬಿಳಿ ಕೂದಲು ಮತ್ತು ಮುಖದಲ್ಲಿ ಬಿಳಿ ಗಡ್ಡ, ಮೀಸೆ ಹೊಂದಿರುತ್ತಾನೆ. ನೀಲಿ ಬಣ್ಣದ ಚಡ್ಡಿ ಧರಿಸಿರುತ್ತಾನೆ. ಈ ಮೇಲ್ಕಂಡ ಚಹರೆ ಗುರುತುಗಳುಳ್ಳ ಮೃತ ವ್ಯಕ್ತಿಯ ವಾರಸುದಾರರ ಬಗ್ಗೆ ಮಾಹಿತಿ ಸಿಕ್ಕಲ್ಲಿ ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ ದೂ.08392-258100, 258102 ಅಥವಾ ಬ್ರೂಸ್‌ಪೇಟೆ ಪೊಲೀಸ್ ಠಾಣೆಯ ದೂ.08392-272022, ಪಿ.ಐ ಮೊ.9480803045, ಪಿಎಸ್‌ಐ ಮೊ.9480803081 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -------------

ಶುಕ್ರವಾರ, ಜೂನ್ 27, 2025

ಮೀನು ಸಾಕಾಣಿಕೆಯಿಂದ ಆರ್ಥಿಕ ಅಭಿವೃದ್ಧಿ: ಜಿಪಂ ಉಪಕಾರ್ಯದರ್ಶಿ ಗಿರಿಜಾ ಶಂಕರ್

ಬಳ್ಳಾರಿ,ಜೂ.27(ಕರ್ನಾಟಕ ವಾರ್ತೆ): ಮಹಿಳೆಯರು ಬಿಡುವಿನ ಸಮಯದಲ್ಲಿ ತಮ್ಮ ಕೃಷಿ ಚಟುವಟಿಕೆ ಜೊತೆಗೆ ಕೃಷಿ ಹೊಂಡದಲ್ಲಿ ಮೀನು ಸಾಕಾಣಿಕೆ ಮಾಡುವುದರಿಂದ ತಮ್ಮ ಕುಟುಂಬ ಆರ್ಥಿಕ ಅಭಿವೃದ್ಧಿಯಾಗುವುದು ಎಂದು ಜಿಲ್ಲಾ ಪಂಚಾಯತ್‌ನ ಉಪ ಕಾರ್ಯದರ್ಶಿ ಗಿರಿಜಾ ಶಂಕರ ಅವರು ಹೇಳಿದರು. ರಾಷ್ಟಿçÃಯ ಗ್ರಾಮೀಣ ಜೀವನೋಪಾಯ ಅಭಿಯಾನದಡಿ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯ ಆವರಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ಸ್ವ ಸಹಾಯ ಸಂಘದ ಮಹಿಳೆಯರಿಗೆ 10 ದಿನಗಳ ಉಚಿತ ಮೀನು ಸಾಕಾಣಿಕೆ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಮಿನುಗಾರಿಕೆ ಇಲಾಖೆಯ ಉಪ ನಿರ್ದೇಶಕ ಶಿವಣ್ಣ ಅವರು ಮಾತನಾಡಿ, ಮೀನು ಆರೋಗ್ಯಕ್ಕೆ ಉತ್ತಮ ಆಹಾರವಾಗಿದ್ದು, ಪ್ರತಿಯೊಂದು ದೇಹದಲ್ಲಿರುವ ಕೊಲೆಸ್ಟಾçಲ್‌ನ್ನು ಸಮತೋಲನದಲ್ಲಿ ಇಡುತ್ತದೆ. ಇದನ್ನು ಔಷಧಿ ತಯಾರಿಕೆಯಲ್ಲಿ ಉಪಯೋಗಿಸುತ್ತಾರೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್‌ನ ಯೋಜನಾ ನಿರ್ದೇಶಕ ಭೀಮಪ್ಪ.ಕೆ ಲಾಳಿ, ವಿನೋದ ಕುಮಾರ.ಸಿ., ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯ ನಿರ್ದೇಶಕ ರಾಜೆಸಾಬ್.ಎಚ್ ಎರಿಮನಿ, ಜಿಲ್ಲಾ ಪಂಚಾಯತ್‌ನ ಎನ್‌ಆರ್‌ಎಲ್‌ಎಂ ಸಿಬ್ಬಂದಿಗಳಾದ ರಾಜೇಂದ್ರ, ವಿಜಯ ಕುಮಾರ, ರಘುವರ್ಮ, ಉಪನ್ಯಾಸಕರಾದ ದಿನೇಶ್, ಸಿದ್ದಲಿಂಗಮ್ಮ, ಸಂತೋಷ ಕುಮಾರ್ ಸೇರಿದಂತೆ ಮಹಿಳಾ ಶಿಭಿರಾರ್ಥಿಗಳು ಇನ್ನಿತರರು ಉಪಸ್ಥಿತರಿದ್ದರು. ---------------

ಕುರೇಕುಪ್ಪ: ವಸತಿ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಬಳ್ಳಾರಿ,ಜೂ.27(ಕರ್ನಾಟಕ ವಾರ್ತೆ): ಕುರೇಕುಪ್ಪ ಪುರಸಭೆ ವ್ಯಾಪ್ತಿಯಲ್ಲಿ 2025-26ನೇ ಸಾಲಿಗೆ ಪ್ರಧಾನಮಂತ್ರಿ ಆವಾಸ್ (ನಗರ) 2.0 ಯೋಜನೆಯಡಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಯಡಿ ಒಂಟಿ ಮಹಿಳೆಯರು, ಅಂಗವಿಕಲರು, ಹಿರಿಯ ನಾಗರಿಕರು, ತೃತೀಯಲಿಂಗಿಗಳು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ಹಿಂದುಳಿದ, ಅಲ್ಪಸಂಖ್ಯಾತ ವರ್ಗ, ಸ್ವಚ್ಚತಾ ಕಾರ್ಮಿಕರು, ಪಿಎಂ ಸ್ವಾನಿಧಿ ಯೋಜನೆಯಡಿ ಗುರುತಿಸಲ್ಪಟ್ಟ ಬೀದಿ ವ್ಯಾಪ್ಯಾರಿಗಳು ಮತ್ತು ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯಡಿ ಗುರುತಿಸಿದ ಕುಶಲಕರ್ಮಿಗಳು, ಅಂಗನವಾಡಿ ಕಾರ್ಯಕರ್ತರು, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು, ಕೈಗಾರಿಕರು, ವಲಸೆ ಬಂದ ಕುಟುಂಬದವರು ಅರ್ಜಿ ಸಲ್ಲಿಸಬಹುದು. ಆನ್‌ಲೈನ್ ವೆಬ್‌ಸೈಟ್ hಣಣಠಿs://ಠಿmಚಿಥಿ-uಡಿbಚಿಟಿ.gov.iಟಿ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಜುಲೈ 15 ಅರ್ಜಿ ಸಲ್ಲಿಸಲು ಕೊನೆಯ ದಿನ. *ಬೇಕಾದ ದಾಖಲೆ:* ಆಧಾರ್ ಕಾರ್ಡ್ (ಮನೆಯ ಯಜಮಾನ/ನಿ ಹಾಗೂ ತಂದೆ/ತಾಯಿಯ ಮತ್ತು ಪಡಿತರ ಚೀಟಿಯಲ್ಲಿರುವಂತೆ) ಮತ್ತು ಕುಟುಂಬ ಸದಸ್ಯರ ಆಧಾರ್ ಕಾರ್ಡ್ಗಳು. ವಸತಿ ರಹಿತರಾದಲ್ಲಿ ನಿವೇಶನಕ್ಕೆ ಸಂಭAದಿಸಿದ ದಾಖಲೆಗಳು (ಹಕ್ಕು ಪತ್ರ, ಕ್ರಯ ಪತ, ದಾನ ಪತ್ರ, ಉಡುಗೋರೆ ಪತ್ರ, ಖಾತಾ ನಕಲು ಫಾರಂ-3). ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಪಡಿತರ ಚೀಟಿ, ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ, ನಿಗದಿತ ನಮೂನೆ (ಂಟಿಟಿexuಡಿe-2A/2ಃ/2ಅ) ಯಲ್ಲಿ “Seಟಜಿ Uಟಿಜeಡಿಣಚಿಞiಟಿg” ಸಲ್ಲಿಸುವುದು. ಮೊಬೈಲ್ ಸಂಖ್ಯೆ, ಪ್ಯಾನ್ ಕಾರ್ಡ್ (ಲಭ್ಯವಿದ್ದಲ್ಲಿ ಮಾತ್ರ). ಅವಧಿ ಮೀರಿ ಬಂದತಹ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಕುರೇಕುಪ್ಪ ಪುರಸಭೆ ಕಾರ್ಯಾಲಯ ಗೆ ಸಂಪರ್ಕಿಸಬಹುದು ಎಂದು ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ಎಂದು ತಿಳಿಸಿದ್ದಾರೆ. ----------

ಜೂ.29 ರಂದು ಬಳ್ಳಾರಿ ಗ್ರಾಮೀಣ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ

ಬಳ್ಳಾರಿ,ಜೂ.27(ಕರ್ನಾಟಕ ವಾರ್ತೆ): ಬಳ್ಳಾರಿ ಗ್ರಾಮೀಣ ಜೆಸ್ಕಾಂ ವ್ಯಾಪ್ತಿಯ 110/11ಕೆ.ವಿ ಮೀನಹಳ್ಳಿ ಉಪ-ಕೇಂದ್ರದ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೆöÊಮಾಸಿಕ ನಿರ್ವಹಣೆ ಮತ್ತು ದುರಸ್ತಿ ಕಾರ್ಯ ಕೈಗೊಳ್ಳುತ್ತಿರುವುದರಿಂದ ಜೂ.29 ರಂದು ಬೆಳಿಗ್ಗೆ 9 ಗಂಟೆಯಿAದ ಸಂಜೆ 05 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. *ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು:* ಎಫ್-2 ಚಾಗನೂರು ಐಪಿ ಫೀಡರ್ ಮಾರ್ಗದ ಮೀನಹಳ್ಳಿ, ಶಿಡಿಗಿನಮೋಳ, ಕೆ.ವೀರಾಪುರ ಕಾರೆಕಲ್ಲು, ಚಾಗನೂರು ಕೃಷಿ ಪ್ರದೇಶಗಳು. ಎಫ್-1 ಮೀನಹಳ್ಳಿ/ ಕೆ.ವೀರಾಪುರ ಎನ್.ಜೆ.ವೈ ಫೀಡರ್ ಮಾರ್ಗದ ಮೀನಹಳ್ಳಿ, ಶಿಡಿಗಿನಮೋಳ, ಕೆ.ವೀರಾಪುರ, ಕಾರೆಕಲ್ಲು ಗ್ರಾಮಗಳು. ಎಫ್-4 ಎ.ಟಿ.ಪಿ.ಎಸ್ ಎನ್.ಜೆ.ವೈ ಫೀಡರ್ ಮಾರ್ಗದ ಹಗರಿ, ಪಿ.ಡಿ.ಹಳ್ಳಿ, ಕಗ್ಗಲ್, ಲಿಂಗದೇವನಹಳ್ಳಿ, ಯಾಳ್ಪಿ, ಜೋಳದರಾಶಿ, ಚೆಳ್ಳಗುರ್ಕಿ ಗ್ರಾಮಗಳು. ಎಫ್-5 ಹಗರಿ ಐಪಿ ಫೀಡರ್ ಮಾರ್ಗದ ಹಗರಿ, ಪಿ.ಡಿ.ಹಳ್ಳಿ, ಕಗ್ಗಲ್, ಲಿಂಗದೇವನಹಳ್ಳಿ, ಯಾಳ್ಪಿ, ಜೋಳದರಾಶಿ, ಚೆಳ್ಳಗುರ್ಕಿ ಕೃಷಿ ಪ್ರದೇಶಗಳು. ಎಫ್-6 ಫೀಡರ್ ಮಾರ್ಗದ ಎ-ಒನ್ ಗೋಲ್ಡ್ ಪೈಪ್ಸ್ ಮತ್ತು ಟೂಬ್ಸ್. ಮೆ.ಜಾನಕಿ ಕಾರ್ಪೋ,ಪ್ರೆöÊ.ಲಿ., ಮೆ.ಬಸಾಯಿ ಸ್ಟೀಲ್ ಪ್ರೆöÊ.ಲಿ., ಮೆ.ಕ್ಲೀನ್ ಮ್ಯಾಕ್ಸ್ ಸೋಲಾರ್, ಕ್ಲೀನ್ ಸೋಲಾರ್, ಮೆ.ಮೌರ್ಯ ಸೀಲಾಮ್ ಸೋಲಾರ್ ಐ.ಪಿ.ಪಿ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಮತ್ತು ವಿದ್ಯುತ್ ಗ್ರಾಹಕರು ಸಹಕರಿಸಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -------------

ಬಳ್ಳಾರಿ ಜಿಲ್ಲೆಯಲ್ಲಿ ವಿವಿಧೆಡೆ ಮೊಹರಂ ಹಬ್ಬ ನಿಷೇಧ

ಬಳ್ಳಾರಿ,ಜೂ.27(ಕರ್ನಾಟಕ ವಾರ್ತೆ): ಜಿಲ್ಲೆಯಾದ್ಯಾಂತ ಜೂನ್ 27 ರಿಂದ ಜುಲೈ 07 ರವರೆಗೆ ಜರುಗುವ ಮೊಹರಂ ಹಬ್ಬದ ಆಚರಣೆಯನ್ನು ಜಿಲ್ಲೆಯ ವಿವಿಧ ತಾಲ್ಲೂಕಿನ ಕೆಲ ಗ್ರಾಮಗಳಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಸಲುವಾಗಿ ನಿಷೇಧಿಸಿ ಬಳ್ಳಾರಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಆದೇಶ ಹೊರಡಿಸಿದ್ದಾರೆ. ಮೊಹರಂ ಹಬ್ಬದ ಆಚರಣೆಯ ಸಂದರ್ಭದಲ್ಲಿ ವಿವಿಧ ತಾಲ್ಲೂಕುಗಳ ಕೆಲ ಗ್ರಾಮಗಳಲ್ಲಿ ವೈಶಮ್ಯ ಇರುವುದರಿಂದ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹಾಗೂ ಮೊಹರಂ ಆಚರಿಸುವ ಸಂದರ್ಭದಲ್ಲಿ ಶಾಂತಿ ಮತ್ತು ಸುವ್ಯಸ್ಥೆಗೆ ಧಕ್ಕೆ ಉಂಟಾಗುವ ಬಗ್ಗೆ ವರದಿಗಳು ಇರುವುದರಿಂದ ಮುಂಜಾಗೃತ ಕ್ರಮಗಳನ್ನು ತೆಗೆದುಕೊಳ್ಳಬೇಕಾಗಿದ್ದು, ಪೊಲೀಸ್ ಬಂದೋಬಸ್ತ್ ಪರಿಣಾಮಕಾರಿಯಾಗಿ ಜಾರಿಗೆ ತರಲು ಕರ್ನಾಟಕ ಪೊಲೀಸ್ ಕಾಯ್ದೆ 1963ರ ಕಲಂ 35 (ಎ) (ಬಿ) (ಡಿ) (ಇ) ರನ್ವಯ ಪ್ರದತ್ತವಾದ ಅಧಿಕಾರ ಚಲಾಯಿಸಿ ಜಿಲ್ಲಾಧಿಕಾರಿಗಳು, ಜೂನ್ 27 ರಿಂದ ಜುಲೈ 07 ರವರೆಗೆ ಆಚರಿಸಲ್ಪಡುವ ಮೊಹರಂ ಹಬ್ಬವನ್ನು ಜಿಲ್ಲೆಯ ವಿವಿಧ ತಾಲ್ಲೂಕುಗಳ ಕೆಲ ಗ್ರಾಮಗಳಲ್ಲಿ ನಿಷೇಧಿಸಲಾಗಿದೆ. ಈ ಸಂದರ್ಭದಲ್ಲಿ ಸಾರ್ವಜನಿಕವಾಗಿ ಜನರು ಗುಂಪು ಸೇರದಂತೆ ಮೆರವಣಿಗೆ ನಡೆಸದಂತೆ ಮತ್ತು ಪಂಜಾಗಳನ್ನು ಕೂಡಿಸದಂತೆ ಮೊಹರಂ ಹಬ್ಬವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಅವರು ಆದೇಶದಲ್ಲಿ ಸ್ಪಷ್ಟಪಡಿಸಿದ್ದಾರೆ. *ಮೊಹರಂ ಹಬ್ಬ ನಿಷೇಧಿಸಲ್ಪಟ್ಟ ಗ್ರಾಮಗಳು:* ಬಳ್ಳಾರಿಯ ಗಾಂಧಿನಗರ ಪೊಲೀಸ್ ಠಾಣೆ ವ್ಯಾಪ್ತಿಯ ತಾಳೂರು ರಸ್ತೆಯ ಕನ್ನಡ ನಗರ ಮುಖ್ಯ ರಸ್ತೆಯ (ನ್ಯಾಯಾಧೀಶರ ವಸತಿಗೃಹ ಕಾಂಪೌAಡ್ ಪಕ್ಕದಲ್ಲಿ) ಮಹಾನಂದಿಕೊಟ್ಟA ಒಳಗಡೆ. ಸಿರುಗುಪ್ಪ ಪೊಲೀಸ್ ಠಾಣೆ ವ್ಯಾಪ್ತಿಯ ಕೆ.ಸೂಗೂರು, ಮುದೇನೂರು, ಹೀರೆಹಾಳ್, ನಾಡಂಗ, ಬಂಡ್ರಾಳ್, ದೇಶನೂರು, ಕೆ.ಬೆಳಗಲ್, ಅಲಬನೂರು ಗ್ರಾಮಗಳು. ತೆಕ್ಕಲಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯ ತೆಕ್ಕಲಕೋಟೆ, ಹಳೇಕೋಟೆ, ಉಪ್ಪಾರಹೊಸಳ್ಳಿ, ಉಡೇಗೋಳ, ಅರಳಿಗನೂರು ಗ್ರಾಮಗಳು. ಸಿರಿಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ ಸಿರಿಗೇರಿ, ಕೂರಿಗನೂರು, ತಾಳೂರು, ಕರೂರು ಗ್ರಾಮಗಳು. ಪಿಡಿ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಅಸುಂಡಿ ಗ್ರಾಮ. ಕಂಪ್ಲಿ ಪೊಲೀಸ್ ಠಾಣೆ ವ್ಯಾಪ್ತಿಯ ನಂ.15-ಗೋನಾಳು ಗ್ರಾಮದಲ್ಲಿ ನಿಷೇಧಿಸಲಾಗಿದೆ ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ. *ನಿಷೇಧಿಸಲಾದ ಚಟುವಟಿಕೆಗಳು:* ಕರ್ನಾಟಕ ಪೊಲೀಸ್ ಕಾಯ್ದೆ 1963ರ ಕಲಂ 35(ಎ)ರಡಿ ಶಸ್ತç, ಬಡಿಗೆ, ಬರ್ಚಿ, ಗದೆ, ಬಂದೂಕು, ಚೂರಿ, ಕೋಲು, ಲಾಠಿ ಅಥವಾ ಶರೀರಕ್ಕೆ ಗಾಯ ಮಾಡಲು ಉಪಯೋಗಿಸಬಹುದಾದ ಯಾವುದೇ ವಸ್ತುವನ್ನು ಒಯ್ಯುವುದು. ಯಾವುದೇ ದಾಹಕ(ನಾಶಕಾರಿ) ಪದಾರ್ಥ ಇಲ್ಲವೇ ಸ್ಪೋಟಕ ವಸ್ತು ಒಯ್ಯುವುದು. ಯಾವುದೇ ವ್ಯಕ್ತಿಗಳ ಭಾವ ಚಿತ್ರಗಳನ್ನು ಅವಮಾನಕಾರ ರೀತಿಯಲ್ಲಿ ಪ್ರದರ್ಶಿಸಬಾರದು. ಬಹಿರಂಗವಾಗಿ ಘೋಷಣೆ ಮಾಡುವುದನ್ನು, ಪದ ಹಾಡುವುದನ್ನು, ವಾದ್ಯ ಬಾರಿಸುವುದನ್ನು, ವ್ಯಾಖ್ಯಾನ ಕೊಡುವುದನ್ನು, ಸನ್ನೆ ಪ್ರದರ್ಶನವನ್ನು, ಆ ಆಫೀಸರರ ಅಭಿಪ್ರಾಯದಲ್ಲಿ ಸಭ್ಯತೆ ಅಥವಾ ನೀತಿಯನ್ನು ಅತಿಕ್ರಮಿಸಬಹುದಾದ ಯಾವುದೇ ವಸ್ತು ಅಥವಾ ತಯಾರಿ ಪ್ರದರ್ಶನ ಅಥವಾ ಪ್ರಸಾರವನ್ನು ಪ್ರತಿಬಂಧಿಸುವುದು ಹಾಗೂ ಗುಂಪುಗೂಡಿ ಮೆರವಣಿಗೆ ಮಾಡುವುದು. ಈ ಪ್ರತಿಬಂಧಕ ಆಜ್ಞೆಗೆ ವಿರುದ್ಧವಾಗಿ ಯಾರೊಬ್ಬರು ವರ್ತಿಸಿದರೆ, ಅವರು ಯಾವುದೇ ಪೊಲೀಸ್ ಅಧಿಕಾರಿಗಳಿಂದ ಇಂತಹ ವಸುಗಳನ್ನು ವಶ ಪಡಿಸಿಕೊಳ್ಳಲು ಪಾತ್ರರಾಗುವರು ಹಾಗೂ ಈ ರೀತಿ ಪಡೆಯಲ್ಪಟ್ಟ ಪದಾರ್ಥ ಸರ್ಕಾರಕ್ಕೆ ಜಮಾ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ. -------------

ಬಳ್ಳಾರಿಯಲ್ಲಿ ಸಂಭ್ರಮದ 516ನೇ ಕೆಂಪೇಗೌಡ ಜಯಂತಿ ಆಚರಣೆ | ಆಧುನಿಕ ಮಹಾನಗರ ನಿರ್ಮಾತೃ ನಾಡಪ್ರಭು ಕೆಂಪೇಗೌಡರ ಆದರ್ಶ ಪಾಲಿಸೋಣ: ಲಿಡ್‌ಕರ್ ಅಧ್ಯಕ್ಷ ಮುಂಡರಗಿ ನಾಗರಾಜ

ಬಳ್ಳಾರಿ,ಜೂ.27(ಕರ್ನಾಟಕ ವಾರ್ತೆ): ಕೆಂಪೇಗೌಡರು ಬೆಂಗಳೂರು ಮಹಾನಗರ ಕಟ್ಟಿದ ಮಹಾನ್ ವೀರ, ವಿಜಯನಗರ ಸಾಮ್ರಾಜ್ಯದ ಸಾಮಂತ ರಾಜ್ಯವಾಗಿದ್ದ ಯಲಹಂಕ ನಾಡಿನ ಪಾಳೇಗಾರರಾಗಿದ್ದರು ಎಂದು ಡಾ.ಬಾಬು ಜಗಜೀವನ್‌ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಡಾ.ರಾಜ್ ಕುಮಾರ್ ರಸ್ತೆಯ ಸಾಂಸ್ಕೃತಿಕ ಸಮುಚ್ಚಯದ ಹೊಂಗಿರಣದಲ್ಲಿ ಮಂಗಳವಾರ ಆಯೋಜಿಸಿದ್ದ ನಾಡಪ್ರಭು ಕೆಂಪೇಗೌಡರ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಸನಾತನ ಹಿಂದೂ ಸಂಸ್ಕೃತಿಯ ಉಳಿವಿಗಾಗಿ ದೇವಾಲಯಗಳ ನಿರ್ಮಾಣ, ಹಳೆಯ ದೇವಾಲಯಗಳ ಜೀರ್ಣೋದ್ದಾರ ಕಾರ್ಯಗಳು, ಅರ್ಚಕರ ಜೀವನೋಪಾಯಕ್ಕಾಗಿ ಜಮೀನು ನೀಡಿರುವುದು, ರಾಜಧಾನಿಯ ಕೋಟೆ ನಿರ್ಮಾಣದ ಜೊತೆಗೆ ಕೆಂಪೇಗೌಡರು ಸುಮಾರು 64 ಪೇಟೆಗಳನ್ನು ನಿರ್ಮಿಸಿದರೆಂದು ತಿಳಿದುಬರುತ್ತದೆ. ಇವುಗಳಲ್ಲಿ 54 ಪೇಟೆಗಳ ಹೆಸರುಗಳು ಮಾತ್ರ ಇತಿಹಾಸಕಾರರಿಗೆ ಲಭ್ಯವಾಗಿವೆ ಎಂದು ಅವರ ಜೀವನದ ಬಗ್ಗೆ ವಿವರಿಸಿದರು. ಮಹಾನಗರ ಪಾಲಿಕೆಯ ಮಹಾಪೌರರಾದ ಮುಲ್ಲಂಗಿ ನಂದೀಶ್ ಅವರು ಮಾತನಾಡಿ, ಕೆಂಪೇಗೌಡರು ಎಲ್ಲರಿಗೂ ಆದರ್ಶ ವ್ಯಕ್ತಿಯಾಗಿದ್ದು, ಅವರ ಕಾರ್ಯವು ಇಂದಿಗೂ ಜೀವಂತವಾಗಿದೆ. ಅಂತಹ ಮಹಾನ್ ವ್ಯಕ್ತಿಯ ಆಚಾರ ವಿಚಾರಗಳನ್ನು ನಾವೆಲ್ಲರೂ ಪಾಲಿಸೋಣ ಎಂದು ತಿಳಿಸಿದರು. ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ ಮಾತನಾಡಿ, ಕೆಂಪೇಗೌಡರು ಸುಭದ್ರವಾದ ರಾಜಧಾನಿಯ ನಿರ್ಮಾಣದ ಜೊತೆಗೆ ಬೆಂಗಳೂರು ಸೇರಿದಂತೆ ನಾಡಿನ ತುಂಬಾ ಹಲವು ಕೆರೆ ಕಟ್ಟೆಗಳನ್ನು ನಿರ್ಮಿಸಿದ್ದರು. ಹಾಗೆಯೇ ಸುಮಾರು ಕೆರೆಗಳನ್ನು ಗ್ರಾಮೀಣ ಪ್ರದೇಶದ ಜನರಿಗಾಗಿ ಕುಡಿಯುವ ನೀರಿಗಾಗಿ ನಿರ್ಮಿಸಲಾಗಿದೆ. ಬೆಂಗಳೂರು ನಗರವು ಇತಿಹಾಸದ ಪುಟದಲ್ಲಿ ಸುವರ್ಣಾಕ್ಷರಗಳಲ್ಲಿ ದಾಖಲಾಗಿದೆ ಎಂದರು. ಕನ್ನಡ ಸಾಹಿತ್ಯ ಪರಿಷತ್ತು ನಿಕಟಪೂರ್ವ ಅಧ್ಯಕ್ಷ ಸಿದ್ಧರಾಮ ಕಲ್ಮಠ ಅವರು ವಿಶೇಷ ಉಪನ್ಯಾಸದಲ್ಲಿ ಮಾತನಾಡಿ, ಕೆಂಪೇಗೌಡರು ಕೆಂಪನAಜೇಗೌಡ ಹಾಗೂ ಲಿಂಗಾAಬೆ ದಂಪತಿಗಳಿಗೆ 1510ರಲ್ಲಿ ಯಲಹಂಕದಲ್ಲಿ ಜನಿಸಿದರು. ಕುಲದೇವತೆಯಾದ ಕೆಂಪಮ್ಮ ಹಾಗೂ ಭೈರವರ ಅನುಗ್ರಹದಿಂದ ಜನಿಸಿದ ಕಾರಣ ಕೆಂಪನAಜೇಗೌಡ ದಂಪತಿಗಳು ಮಗುವಿಗೆ ಕೆಂಪ, ಕೆಂಪಯ್ಯ, ಕೆಂಪಣ್ಣ ಎಂಬ ಹೆಸರಿನಿಂದ ಕರೆಯುತ್ತಿದ್ದರು ಎಂದು ತಿಳಿಸಿದರು. ಕ್ರಿ.ಶ.1509 ರಲ್ಲಿ ವಿಜಯನಗರದ ಸಿಂಹಾಸನವೇರಿದ್ದ ಶ್ರೀಕೃಷ್ಣದೇವರಾಯರ ಆಡಳಿತದಲ್ಲಿ ವಿಜಯನಗರ ಸಾಮ್ರಾಜ್ಯದ ವೈಭೋಗವನ್ನು ಅನಾವರಣಗೊಳಿಸಲು ಕ್ರಿ.ಶ.1515 ರಲ್ಲಿ ರಾಜಧಾನಿ ಹಂಪಿಯಲ್ಲಿ ಪ್ರಥಮ ಬಾರಿಗೆ ವಿಜಯದಶಮಿ ಉತ್ಸವವನ್ನು ಆರಂಭಿಸಿದರು ಎಂದು ವಿವರಿಸಿದರು. ಐದು ವರ್ಷದ ಬಾಲಕನಿದ್ದ ಕೆಂಪೇಗೌಡರು ತಂದೆಯವರ ಜೊತೆ ಈ ಸಮಾರಂಭಕ್ಕೆ ಹೋಗಿದ್ದಾಗ ಬಾಲ್ಯದಿಂದ ಶ್ರೀಕೃಷ್ಣದೇವರಾಯರ ಆಡಳಿತಾವಧಿಯ ಧಾರ್ಮಿಕ ಹಾಗೂ ಸಾಂಸ್ಕೃತಿಕ ಸಿರಿಯನ್ನು ಕಣ್ಣಾರೆ ಕಂಡು ತಮ್ಮ ನಾಡಿನಲ್ಲೂ ಈ ಎಲ್ಲಾ ವೈಭವಗಳನ್ನು ಮರು ಪ್ರತಿಷ್ಠಾಪಿಸುವ ಬಯಕೆಯ ಕನಸು ಕಂಡು ಇದರಿಂದಾಗಿ ಹಲವು ಬಾರಿ ಹಂಪಿಗೆ ಭೇಟಿ ಕೊಟ್ಟು ಅಲ್ಲಿನ ವ್ಯವಸ್ಥೆಗಳೆಲ್ಲವನ್ನೂ ಮನದಟ್ಟು ಮಾಡಿಕೊಂಡು ದೂರದೃಷ್ಠಿಯಿಂದ ಬೆಂಗಳೂರು ಮಹಾನಗರವನ್ನು ನಿರ್ಮಿಸಿದರು ಎಂದು ಸವಿಸ್ತರವಾಗಿ ತಿಳಿಸಿದರು. ಕಾರ್ಯಕ್ರಮದಲ್ಲಿ ಕಂಪ್ಲಿಯ ಜೆ.ಚಿನ್ಮಯ್ ತಂಡದಿAದ ಸುಗಮ ಸಂಗೀತ ಗಾಯನ ಪ್ರಸ್ತುತ ಪಡಿಸಿದರು. ಈ ಸಂದರ್ಭದಲ್ಲಿ ಸಹಾಯಕ ಆಯುಕ್ತ ಪಿ.ಪ್ರಮೋದ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಸೇರಿದಂತೆ ಇಲಾಖೆಯ ಸಿಬ್ಬಂದಿಗಳು ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿ, ವಿದ್ಯಾರ್ಥಿನಿಯರು ಇನ್ನಿತರರು ಉಪಸ್ಥಿತರಿದ್ದರು. --------------

ಕಂಪ್ಲಿ: ವಸತಿ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಬಳ್ಳಾರಿ,ಜೂ.27(ಕರ್ನಾಟಕ ವಾರ್ತೆ): ಕಂಪ್ಲಿ ಪುರಸಭೆ ವ್ಯಾಪ್ತಿಯಲ್ಲಿ 2025-26ನೇ ಸಾಲಿಗೆ ಪ್ರಧಾನಮಂತ್ರಿ ಆವಾಸ್ (ನಗರ) 2.0 ಯೋಜನೆಯಡಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಯಡಿ ಒಂಟಿ ಮಹಿಳೆಯರು, ಅಂಗವಿಕಲರು, ಹಿರಿಯ ನಾಗರಿಕರು, ತೃತೀಯಲಿಂಗಿಗಳು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ಹಿಂದುಳಿದ, ಅಲ್ಪಸಂಖ್ಯಾತ ವರ್ಗ, ಸ್ವಚ್ಚತಾ ಕಾರ್ಮಿಕರು, ಪಿಎಂ ಸ್ವಾನಿಧಿ ಯೋಜನೆಯಡಿ ಗುರುತಿಸಲ್ಪಟ್ಟ ಬೀದಿ ವ್ಯಾಪ್ಯಾರಿಗಳು ಮತ್ತು ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯಡಿ ಗುರುತಿಸಿದ ಕುಶಲಕರ್ಮಿಗಳು, ಅಂಗನವಾಡಿ ಕಾರ್ಯಕರ್ತರು, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು, ಕೈಗಾರಿಕರು, ವಲಸೆ ಬಂದ ಕುಟುಂಬದವರು ಅರ್ಜಿ ಸಲ್ಲಿಸಬಹುದು. ಆನ್‌ಲೈನ್ ವೆಬ್‌ಸೈಟ್ Uಖಐ:hಣಣಠಿs://ಠಿmಚಿಥಿ-uಡಿbಚಿಟಿ.gov.iಟಿ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಜುಲೈ 15 ರೊಳಗಾಗಿ ಅರ್ಜಿ ಸಲ್ಲಿಸಲು ಕೊನೆಯ ದಿನ. *ಬೇಕಾದ ದಾಖಲೆ:* ಆಧಾರ್ ಕಾರ್ಡ್ (ಮನೆಯ ಯಜಮಾನ/ನಿ ಹಾಗೂ ತಂದೆ/ತಾಯಿಯ ಮತ್ತು ಪಡಿತರ ಚೀಟಿಯಲ್ಲಿರುವಂತೆ) ಮತ್ತು ಕುಟುಂಬ ಸದಸ್ಯರ ಆಧಾರ್ ಕಾರ್ಡ್ಗಳು. ವಸತಿ ರಹಿತರಾದಲ್ಲಿ ನಿವೇಶನಕ್ಕೆ ಸಂಭAದಿಸಿದ ದಾಖಲೆಗಳು (ಹಕ್ಕು ಪತ್ರ, ಕ್ರಯ ಪತ, ದಾನ ಪತ್ರ, ಉಡುಗೋರೆ ಪತ್ರ, ಖಾತಾ ನಕಲು ಫಾರಂ-3). ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಪಡಿತರ ಚೀಟಿ, ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ, ನಿಗದಿತ ನಮೂನೆ (ಂಟಿಟಿexuಡಿe-2A/2ಃ/2ಅ) ಯಲ್ಲಿ “Seಟಜಿ Uಟಿಜeಡಿಣಚಿಞiಟಿg” ಸಲ್ಲಿಸುವುದು. ಮೊಬೈಲ್ ಸಂಖ್ಯೆ, ಪ್ಯಾನ್ ಕಾರ್ಡ್ (ಲಭ್ಯವಿದ್ದಲ್ಲಿ ಮಾತ್ರ). ಅವಧಿ ಮೀರಿ ಬಂದತಹ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಕಂಪ್ಲಿ ಪುರಸಭೆ ಕಚೇರಿಯ ಶಾಖೆಯ ಅಧಿಕಾರಿಗಳನ್ನು ಸಂರ್ಪಕಿಸಬಹುದು ಎಂದು ಮುಖ್ಯಾಧಿಕಾರಿ ಮಲ್ಲಿಕಾರ್ಜುನ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ------------

ಮುಂಗಾರು ಬೆಳೆ ಸಮೀಕ್ಷೆ: ಮೊಬೈಲ್ ಆಪ್ ಮೂಲಕ ಬೆಳೆಯ ವಿವರ ದಾಖಲಿಸಲು ಅವಕಾಶ

ಬಳ್ಳಾರಿ,ಜೂ.27(ಕರ್ನಾಟಕ ವಾರ್ತೆ): ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ರೈತರು ಬೆಳೆದ ಬೆಳೆಗಳ ಮಾಹಿತಿಯನ್ನು ಮೊಬೈಲ್ ಆಪ್ ಮೂಲಕ ಬೆಳೆ ಸಮೀಕ್ಷೆ ಮಾಹಿತಿ ನಮೂದಿಸಲು ಅವಕಾಶವಿದ್ದು, ರೈತರು ಮೊಬೈಲ್ ಆಪ್ ಮೂಲಕ ಬೆಳೆ ಸಮೀಕ್ಷೆಯಲ್ಲಿ ಬೆಳೆಯ ವಿವರ ದಾಖಲಿಸಿ, ಬೆಳೆಯ ನಿಖರ ಮಾಹಿತಿ ನಮೂದು ಮಾಡಬಹುದು ಎಂದು ಜಂಟಿ ಕೃಷಿ ನಿರ್ದೇಶಕ ಸೋಮಸುಂದರ್ ಅವರು ತಿಳಿಸಿದ್ದಾರೆ. ರೈತರು ಬೆಳೆದ ಬೆಳೆಗಳ ಬಗ್ಗೆ ನಿಖರವಾಗಿ ಮಾಹಿತಿ ಪಡೆದುಕೊಳ್ಳಲು ಇ-ಆಡಳಿತ ವತಿಯಿಂದ ಅಭಿವೃದ್ಧಿಪಡಿಸಿರುವ ಮೊಬೈಲ್ ಆಪ್ ಮೂಲಕ ಬೆಳೆ ಸಮೀಕ್ಷೆ ನಡೆಸಲಾಗುತ್ತಿದೆ. ಬೆಳೆ ಸಮೀಕ್ಷೆ ದತ್ತಾಂಶ ಮಾಹಿತಿಯನ್ನು ಬೆಳೆ ವಿಸ್ತರಣೆ ಎಣಿಕೆ ಕಾರ್ಯದಲ್ಲಿ, ಬೆಳೆ ಕಟಾವು ಪ್ರಯೋಗದಲ್ಲಿ, ಪ್ರಕೃತಿ ವಿಕೋಪ ಸಂದರ್ಭದಲ್ಲಿ, ಬೆಳೆಹಾನಿ ವರದಿ ಸಿದ್ಧಪಡಿಸಲು, ಬೆಳೆ ವಿಮಾ ಯೋಜನೆ, ಬೆಂಬಲ ಬೆಲೆ ಯೋಜನೆ, ಆರ್.ಟಿ.ಸಿ.ಯಲ್ಲಿ ಬೆಳೆ ವಿವರ ದಾಖಲಿಸಲು, ರಾಷ್ಟಿçÃಯ ಹಾಗೂ ಗ್ರಾಮೀಣ ಬ್ಯಾಂಕ್‌ಗಳಲ್ಲಿ ಬೆಳೆ ಸಾಲ ಮಂಜೂರು ಮಾಡಲು ಬೆಳೆ ಸಮೀಕ್ಷೆ ಮಾಹಿತಿಯನ್ನು ಉಪಯೋಗಿಸಲಾಗುತ್ತದೆ. *ಮೊಬೈಲ್ ಅಪ್ಲಿಕೇಷನ್ ಪಡೆಯಲು ಅನುಸರಿಸಬೇಕಾದ ಅಂಶ:* ರೈತರು ತಮ್ಮ ಮೊಬೈಲ್‌ನಲ್ಲಿ ಗೂಗಲ್ ಪ್ಲೇ-ಸ್ಟೋರ್‌ನಿಂದ ಬೆಳೆ ಸಮೀಕ್ಷೆ ಹಿಂಗಾರು ಹಂಗಾಮಿನ “ಫಾರ್ಮರ್ ಆಪ್ ಕ್ರಾಪ್ ಸರ್ವೇ ಖಾರೀಫ್ 2025” (ಈಚಿಡಿmeಡಿ ಂಠಿಠಿ ಅಡಿoಠಿ Suಡಿveಥಿ ಏhಚಿಡಿiಜಿ 2025) ಆಪ್‌ನ್ನು ಡೌನ್‌ಲೋಡ್ ಮಾಡಿಕೊಳ್ಳಬೇಕು. ಜಿಲ್ಲೆಯಲ್ಲಿ 357904 ಬೆಳೆ ತಾಕುಗಳಿದ್ದು, ಆ ತಾಕುಗಳಿಗೆ ರೈತರು ತಮ್ಮ ಬೆಳೆಗಳ ಮಾಹಿತಿಯನ್ನು ಸ್ವಯಂ ದಾಖಲಿಸಬೇಕು. ಮೊಬೈಲ್ ಆಪ್‌ನಲ್ಲಿ ಜಿಯೋ ರೆಫೆರೆನ್ಸ್ಡ್ ಅಂಡ್ ಡಿಜಿಟೈಜ್‌ಡ್ (ಉeo ಖeಜಿeಡಿeಟಿಛಿeಜ ಚಿಟಿಜ ಆigiಣizeಜ) ಬೆಳೆ ಗ್ರಾಮ ನಕಾಶೆ ಅಳವಡಿಸಲಾಗಿರುವುದರಿಂದ ಆಯಾ ತಾಕಿನ ಗಡಿ ರೇಖೆಯೊಳಗೆ ಹೋಗಿ ಜಿಪಿಎಸ್ ನಿಖರತೆ ಪಡೆದು ಛಾಯಾಚಿತ್ರದೊಂದಿಗೆ ರೈತರು ಬೆಳೆಯ ವಿವರಗಳನ್ನು ಕಡ್ಡಾಯವಾಗಿ ದಾಖಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕೃಷಿ, ತೋಟಗಾರಿಕೆ, ಪಿ.ಆರ್ ಅಥವಾ ಕಂದಾಯ ಇಲಾಖೆಯ ಸಿಬ್ಬಂದಿಗಳನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -----------

ಬೆಳೆ ವಿಮೆ ಯೋಜನೆ: ನೋಂದಣಿಗೆ ಆಹ್ವಾನ

ಬಳ್ಳಾರಿ,ಜೂ.27(ಕರ್ನಾಟಕ ವಾರ್ತೆ): ತೋಟಗಾರಿಕೆ ಇಲಾಖೆ ವತಿಯಿಂದ 2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಬೆಳೆ ವಿಮೆ ಯೋಜನೆ (ಕೆಆರ್‌ಎಸ್-ಪಿಎಂಎಫ್‌ಬಿವೈ) ಗೆ ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಿದ್ದು, ಅರ್ಹ ರೈತರು ತಮ್ಮ ಬೆಳೆಗಳ ವಿಮೆಗೆ ನೋಂದಾಯಿಸಿಕೊಳ್ಳಬಹುದು ಎಂದು ಜಿಪಂ ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಸಂತೋಷ್ ಸಪ್ಪಂಡಿ ಅವರು ತಿಳಿಸಿದ್ದಾರೆ. ಪ್ರಕೃತಿ ವಿಕೋಪಗಳು, ಹವಾಮಾನ ವೈಪರೀತ್ಯಗಳಾದ ಅತಿವೃಷ್ಟಿ, ಅನಾವೃಷ್ಟಿ, ಬಿರುಗಾಳಿ, ಆಲಿಕಲ್ಲು ಮಳೆ, ಪ್ರವಾಹ ಮತ್ತು ಸಿಡಿಲಿನಿಂದ ಉಂಟಾಗುವ ಬೆಂಕಿ ಅವಘÀಡ ಇತ್ಯಾದಿ ಕಾರಣಗಳಿಂದ ಸಂಭವಿಸಬಹುದಾದ ಬೆಳೆಹಾನಿಯ ನಷ್ಟದ ಪರಿಹಾರವನ್ನು ಬೆಳೆ ವಿಮೆ ಘಟಕ (ಹಳ್ಳಿ, ಗ್ರಾಮಪಂಚಾಯಿತಿ, ಹೋಬಳಿ) ವಾರು ನಿರ್ಧರಿಸಿ ಬೆಳೆ ನಷ್ಟದ ಪರಿಹಾರ ನೀಡಲಾಗುವುದು. ವಿಮಾ ಯೋಜನೆಯಡಿ ಒಳಪಡುವ ನೀರಾವರಿ ಬೆಳೆಗಳಾದ ಕೆಂಪು ಮೆಣಸಿನಕಾಯಿ ಮತ್ತು ಈರುಳ್ಳಿ ಬೆಳೆಗಳಾಗಿವೆ. *ಕೆಂಪು ಮೆಣಸಿನಕಾಯಿ:* ಬಳ್ಳಾರಿ, ಕಂಪ್ಲಿ, ಕುರುಗೋಡು, ಕೋಳೂರು, ಮೋಕಾ, ರೂಪನಗುಡಿ, ಸಿರುಗುಪ್ಪ, ಕರೂರು, ತೆಕ್ಕಲಕೋಟೆ, ಹಚ್ಚೋಳ್ಳಿ, ತೋರಣಗಲ್ಲು ವಿಮೆಗೆ ಒಳಪಡುವ ಪ್ರದೇಶಗಳಾಗಿದ್ದು, ಪ್ರತಿ ಹೆಕ್ಟರ್‌ಗೆ ವಿಮಾ ಮೊತ್ತ ರೂ.1,07,500 ಹಾಗೂ ರೈತರು ಪಾವತಿಸಬೇಕಾದ ವಿಮಾ ಕಂತಿನ ದರ ರೂ.5,375 ಆಗಿರುತ್ತದೆ. *ಈರುಳ್ಳಿ:* ಸಂಡೂರು ತಾಲ್ಲೂಕಿನ ಚೋರನೂರು ಹಾಗೂ ತೋರಣಗಲ್ಲು ವಿಮೆಗೆ ಒಳಪಡುವ ಪ್ರದೇಶಗಳಾಗಿದ್ದು, ಪ್ರತಿ ಹೆಕ್ಟರ್‌ಗೆ ವಿಮಾ ಮೊತ್ತ ರೂ.80,500 ಹಾಗೂ ರೈತರು ಪಾವತಿಸಬೇಕಾದ ವಿಮಾ ಕಂತಿನ ದರ ರೂ.4,025 ಆಗಿರುತ್ತದೆ. ರೈತರು ಅಗತ್ಯ ದಾಖಲೆಗಳೊಂದಿಗೆ ಎರಡು ಬೆಳೆಗಳ ವಿಮೆಗೆ ನೋಂದಾಯಿಸಿಕೊಳ್ಳಲು ಜುಲೈ 31 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಬಳ್ಳಾರಿ ಮತ್ತು ಕುರುಗೋಡು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ ಅಥವಾ ದೂ.08392-278177 ಹಾಗೂ ಮೊ.9480257282, ಸಂಡೂರು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ ಅಥವಾ ದೂ.08395-260389 ಹಾಗೂ ಮೊ.9740934208, ಕಂಪ್ಲಿ ಮತ್ತು ಸಿರುಗುಪ್ಪದ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ ಅಥವಾ ದೂ.08396-222066 ಹಾಗೂ ಮೊ.9448910277 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ------------

ಸಿರುಗುಪ್ಪ: ವಸತಿ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಬಳ್ಳಾರಿ,ಜೂ.27(ಕರ್ನಾಟಕ ವಾರ್ತೆ): ಸಿರುಗುಪ್ಪ ನಗರÀಸಭೆ ವ್ಯಾಪ್ತಿಯಲ್ಲಿ 2025-26ನೇ ಸಾಲಿಗೆ ಪ್ರಧಾನಮಂತ್ರಿ ಆವಾಸ್ (ನಗರ) 2.0 ಯೋಜನೆಯಡಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಯಡಿ ನಿವೇಶನ ರಹಿತ ಮತ್ತು ವಸತಿ ರಹಿತರು ವಸತಿ ಸೌಲಭ್ಯಕ್ಕಾಗಿ ಆನ್‌ಲೈನ್ ವೆಬ್‌ಸೈಟ್ Uಖಐ:hಣಣಠಿs://ಠಿmಚಿಥಿ-uಡಿbಚಿಟಿ.gov.iಟಿ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಅರ್ಜಿಗಳನ್ನು ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ಸಲ್ಲಿಸಬಹುದು. ಜುಲೈ 15 ಅರ್ಜಿ ಸಲ್ಲಿಸಲು ಕೊನೆಯ ದಿನ. ಅವಧಿ ಮೀರಿ ಬಂದತಹ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಸಿರುಗುಪ್ಪ ನಗರÀಸಭೆ ಕಚೇರಿಗೆ ಸಂರ್ಪಕಿಸಬಹುದು ಎಂದು ಸಿರುಗುಪ್ಪ ನಗರಸಭೆಯ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ------------

ಗುರುವಾರ, ಜೂನ್ 26, 2025

ಜೂ.28 ರಂದು ವಿದ್ಯುತ್ ವ್ಯತ್ಯಯ

ಬಳ್ಳಾರಿ,ಜೂ.26(ಕರ್ನಾಟಕ ವಾರ್ತೆ): ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-2 ರ ವ್ಯಾಪ್ತಿಯಲ್ಲಿ ಕಬ್ಬಿಣದ ವಿದ್ಯುತ್ ಕಂಬಗಳ ಬದಲಾವಣೆ ಕಾರ್ಯ ಕೈಗೊಳ್ಳುತ್ತಿರುವುದರಿಂದ ಜೂ.28 ರಂದು ಬೆಳಿಗ್ಗೆ 08.30 ಗಂಟೆಯಿAದ ಸಂಜೆ 06 ಗಂಟೆಯವರೆಗೆ ಎಫ್-ಫೀಡರ್‌ನ ಬಸವನಕುಂಟೆ, ಕೋಟೆ ಪ್ರದೇಶ, ಮೇದಾರ್ ಓಣಿ ಸೇರಿದಂತೆ ಮುಂತಾದ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಹಾಗೂ ವಿದ್ಯುತ್ ಗ್ರಾಹಕರು ಸಹಕರಿಸಬೇಕು ಎಂದು ಬಳ್ಳಾರಿ ನಗರ ಉಪವಿಭಾಗ-2 ರ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -------------

ಅತಿಥಿ ಬೋಧಕ, ಬೋಧಕೇತರ ಹುದ್ದೆಗಳ ನೇಮಕ: ಅರ್ಜಿ ಆಹ್ವಾನ

ಬಳ್ಳಾರಿ,ಜೂ.26(ಕರ್ನಾಟಕ ವಾರ್ತೆ): ನಗರದ ಕಂಟೋನ್‌ಮೆAಟ್‌ನ ಐಶ್ವರ್ಯ ಕಾಲೋನಿಯ(ಐಟಿಐ ಕ್ಯಾಂಪಸ್) ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ (ಜಿಟಿಟಿಸಿ) ಸಂಸ್ಥೆಯಲ್ಲಿ ಅತಿಥಿ ಬೋಧಕ, ಬೋಧಕೇತರ ಹುದ್ದೆಗಳ ನೇಮಕಕ್ಕಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಮೆಕ್ಯಾನಿಕಲ್, ಎಲೆಕ್ಟಾçನಿಕ್ಸ್, ಎಲೆಕ್ಟಿçಕಲ್ ಮತ್ತು ಕಂಪ್ಯೂಟರ್ ಸೈನ್ಸ್ ವಿಭಾಗದಲ್ಲಿ ಕಾರ್ಯನಿರ್ವಹಿಸಲು ಬಿಇ (ಬಿಟೆಕ್) ಅಥವಾ ಡಿಪ್ಲೋಮಾ ಅನುಭವವಿರುವ ತಲಾ ಒಬ್ಬ ಅತಿಥಿ ಬೋಧಕರನ್ನು ನೇಮಕ ಮಾಡಿಕೊಳ್ಳಲಾಗುವುದು. ಹೆಚ್ಚಿನ ಮಾಹಿತಿಗಾಗಿ ಜಿಟಿಟಿಸಿಯ ಪ್ರಾಂಶುಪಾಲರ ಕಚೇರಿ ಅಥವಾ ಮೊ.9972320076, 9620057086 ಗೆ ಸಂಪರ್ಕಿಬಹುದು ಎಂದು ಸಂಸ್ಥೆಯ ಪ್ರಾಂಶುಪಾಲ ಮುತ್ತಣ್ಣ ಧರ್ಮಂತಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -------------

ವಿದ್ಯಾರ್ಥಿಗಳು ವೈಯಕ್ತಿಕ ಆರೋಗ್ಯದೊಂದಿಗೆ ಓದಿನ ಕಡೆ ಗಮನಹರಿಸಿ: ಡಿಹೆಚ್‌ಓ ಡಾ.ಯಲ್ಲಾ ರಮೇಶ್‌ಬಾಬು

ಬಳ್ಳಾರಿ,ಜೂ.26(ಕರ್ನಾಟಕ ವಾರ್ತೆ): ವಿದ್ಯಾರ್ಥಿಗಳು ವೈಯಕ್ತಿಕ ಆರೋಗ್ಯದೊಂದಿಗೆ ಓದಿನ ಕಡೆ ಗಮನಹರಿಸುವ ಮೂಲಕ ಉನ್ನತ ಗುರಿ ಸಾಧಿಸಲು ಪಣತೊಡಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್‌ಬಾಬು ಅವರು ಹೇಳಿದರು. ಗುರುವಾರ, ಬಳ್ಳಾರಿ ತಾಲ್ಲೂಕಿನ ಕೆ.ವೀರಾಪುರ ಗ್ರಾಮದ ಸರ್ಕಾರಿ ಪ್ರೌಢಶಾಲೆಗೆ ಭೇಟಿ ನೀಡಿ ಹುಟ್ಟಿನಿಂದ 05 ವರ್ಷದೊಳಗಿನ ಮಕ್ಕಳಿಗೆ ಕಾಡುವ ಅತಿಸಾರ ಭೇದಿ ನಿಯಂತ್ರಣ ಕಾರ್ಯಕ್ರಮದಡಿ ಜಿಂಕ್ ಮತ್ತು ಓಆರ್‌ಎಸ್ ದ್ರಾವಣ ಕುರಿತು ಜಾಗೃತಿ ಹತ್ತನೇಯ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಮನುಷ್ಯನ ಜೀವನದಲ್ಲಿ ಬಾಲ್ಯಾವ್ಯಸ್ಥೆಯಿಂದ ಹದಿಹರೆಯದಕ್ಕೆ ಕಾಲಿಡುವ ಅವಧಿಯು ಅತ್ಯಂತ ಮಹತ್ವಪೂರ್ಣವಾಗಿದೆ. ಹಾರ್ಮೋನುಗಳ ಬದಲಾವಣೆಯಿಂದ ದೈಹಿಕವಾಗಿ ಬಾಲಕ-ಬಾಲಕಿಯರಲ್ಲಿ ಬದಲಾವಣೆಗಳು ಉಂಟಾಗುತ್ತವೆ. ವಿದ್ಯಾರ್ಥಿಗಳು ಪಾಲಕರ ಹಾಗೂ ಶಾಲಾ ಗುರುಗಳ ಮಾರ್ಗದರ್ಶನ ಪಡೆದು ಭವಿಷ್ಯದಲ್ಲಿ ಉನ್ನತ ಹುದ್ದೆಗಳನ್ನು ಪಡೆಯುವ ಗುರಿಯೊಂದಿಗೆ ಸಾಗುವ ಮಹಾದಾಸೆ ಹೊಂದಬೇಕು ಎಂದು ತಿಳಿಸಿದರು. ಇಂದಿನ ಸ್ಪರ್ಧಾತ್ಮಕ ದಿನಗಳಲ್ಲಿ ಶ್ರಧ್ದೆಯಿಂದ ಓದುವುದಕ್ಕೆ ಹೆಚ್ಚು ಗಮನ ಹರಿಸಬೇಕು. ಇತ್ತೀಚಿನ ದಿನಗಳಲ್ಲಿ ಮೊಬೈಲ್ ಮೂಲಕ ಸಾಮಾಜಿಕ ಜಾಲ ತಾಣಗಳಾದ ಫೇಸ್ಬುಕ್, ಇಸ್ಟಾಗ್ರಾಮ್ ಮುಂತಾದವುಗಳಿAದ ಹದಿಹರೆಯದವರು ಪರಿಚಯವಿಲ್ಲದವರೊಂದಿಗೆ ಸಲುಗೆ ಬೆಳೆದು ಕುಟುಂಬದವರಿಗೆ ಗೊತ್ತಿಲ್ಲದೆ ಮದುವೆಯಾಗುವ, ಮನೆಯಿಂದ ಕಣ್ಮರೆಯಾಗುವ ಘಟನೆಗಳ ಕುರಿತು ಪತ್ರಿಕೆಗಳಲ್ಲಿ ವರದಿಯಾಗುತ್ತಿವೆ. ಇದು ಬಾಲ್ಯವಿವಾಹಕ್ಕೂ ದಾರಿ ಮಾಡುತ್ತದೆ ಅಲ್ಲದೆ ಹಲವಾರು ಬಾರಿ ದುಷ್ಟರಿಂದ ಲೈಂಗಿಕ ದೌರ್ಜನ್ಯಕ್ಕೂ ಒಳಗಾಗುವ ಸಾಧ್ಯತೆ ಇರುತ್ತದೆ. ಹಾಗಾಗಿ ವಿದ್ಯಾರ್ಥಿಗಳು ಇವುಗಳಿಂದ ದೂರ ಇರಬೇಕು. ಆರೋಗ್ಯ ಇಲಾಖೆಯ ಎಲ್ಲ ಆಸ್ಪತ್ರೆಗಳಲ್ಲಿರುವ ‘ಸ್ನೇಹ ಕ್ಲಿನಿಕ್’ ನಲ್ಲಿ ಹದಿಹರೆಯದವರ ಆಪ್ತಸಮಾಲೋಚಕರ ಬಳಿ ಸಲಹೆ ಪಡೆದು ಒತ್ತಡಗಳಿಂದ ಮುಕ್ತರಾಗುವ ಹಾಗೂ ಹದಿಹರೆಯದಲ್ಲಿ ಆಕರ್ಷಕವಾಗುವ ತಂಬಾಕು ಉತ್ಪನ್ನಗಳು, ಬೀಡಿ ಸೀಗರೇಟು ಮುಂತಾದವುಗಳಿAದ ದೂರವಿರಬೇಕು ಎಂದು ಸಲಹೆ ನೀಡಿದರು. ಮಕ್ಕಳಲ್ಲಿ ಜಂತುಹುಳು ಕಂಡುಬAದ ಸಂದರ್ಭದಲ್ಲಿ ಮಕ್ಕಳು ಸೇವಿಸುವ ಆಹಾರವನ್ನು ಜಂತುಹುಳುಗಳು ಕಸಿದುಕೊಳ್ಳುವ ಮೂಲಕ ದೇಹದಲ್ಲಿ ರಕ್ತದ ಪ್ರಮಾಣ ಕಡಿಮೆ ಮಾಡುವ ಜೊತೆಗೆ ರೋಗ ನಿರೋಧಕ ಶಕ್ತಿ ಕುಂದಿಸಿ ಸಣ್ಣಪುಟ್ಟ ಕಾಯಿಲೆಗಳು ದೀರ್ಘಾವಧಿಯವರೆಗೆ ಕಾಡುವಂತೆ ಮಾಡುತ್ತವೆ ಎಂದರು. ಮುಖ್ಯವಾಗಿ ಹೆಣ್ಣುಮಗುವಿನಲ್ಲಿ ರಕ್ತಹೀನತೆ ಸತತವಾಗಿ ಮುಂದುವರೆದಲ್ಲಿ ಹದಿಹರೆಯದಲ್ಲಿಯ ಸಮಸ್ಯೆಗಳು ಮದುವೆಯ ನಂತರ ವೈವಾಹಿಕ ಜೀವನದಲ್ಲಿ ಗಂಭೀರ ಸ್ವರೂಪ ಪಡೆಯುತ್ತವೆ. ಈ ದಿಶೆಯಲ್ಲಿ ಮಕ್ಕಳು ವರ್ಷದಲ್ಲಿ ಎರಡು ಬಾರಿ ತಪ್ಪದೇ ಜಂತುಹುಳು ನಿವಾರಕ ಮಾತ್ರೆ ಸೇವಿಸಬೇಕು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಶಿಡಿಗಿನಮೊಳ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ಸಂತೋಷ ಹೆಬ್ಬಾಳ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ಹೆಚ್ ದಾಸಪ್ಪನವರ, ಶಾಲೆಯ ಮುಖ್ಯಗುರುಗಳಾದ ನಾಗರಾಜ, ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಣಾಧಿಕಾರಿ, ಶಕುಂತಲಮ್ಮ, ಸಮುದಾಯ ಆರೋಗ್ಯ ಅಧಿಕಾರಿ ಮಧುಲತಾ ಸೇರಿದಂತೆ ಶಾಲಾ ಶಿಕ್ಷಕರು, ಆಶಾ ಕಾರ್ಯಕರ್ತೆಯರು, ಮಕ್ಕಳು ಉಪಸ್ಥಿತರಿದ್ದರು. ------------

ಕರ್ನಾಟಕ ಸಾಹಿತ್ಯ ಅಕಾಡೆಮಿ: ಅಧ್ಯಯನ ಶಿಬಿರಕ್ಕೆ ಅರ್ಜಿ ಆಹ್ವಾನ

ಬಳ್ಳಾರಿ,ಜೂ.26(ಕರ್ನಾಟಕ ವಾರ್ತೆ): ಕರ್ನಾಟಕ ಸಾಹಿತ್ಯ ಅಕಾಡೆಮಿ ವತಿಯಿಂದ ವಿಶೇಷ ಘಟಕ ಯೋಜನೆಯಡಿ ದಲಿತ ಸಾಹಿತ್ಯ ಅರ್ಧ ಶತಮಾನ ಎಂಬ ವಿಷಯದ ಬಗ್ಗೆ ಮೂರು ದಿನಗಳ ಅಧ್ಯಯನ ಶಿಬಿರಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಶಿಬಿರವು ಸೆಪ್ಟಂಬರ್‌ನಲ್ಲಿ ನಡೆಯಲಿದ್ದು, ರಾಜ್ಯದ ಎಲ್ಲಾ ಭಾಗದ 20 ರಿಂದ 50 ವರ್ಷದ ಪರಿಶಿಷ್ಟ ಜಾತಿಗೆ ಸೇರಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಜು.20 ಕೊನೆಯ ದಿನವಾಗಿದೆ. ಆಸಕ್ತ ಅಭ್ಯರ್ಥಿಗಳು ವೆಬ್‌ಸೈಟ್ https://sahithyaacademy.karnataka.gov.in ಗೆ ಭೇಟಿ ನೀಡಿ ಅರ್ಜಿ ನಮೂನೆ ಹಾಗೂ ವಿವರ ಪಡೆದುಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಬೆಂಗಳೂರಿನ ಜೆ.ಸಿ ರಸ್ತೆಯ ಕನ್ನಡ ಭವನದ 2ನೇ ಮಹಡಿಯ ಕರ್ನಾಟಕ ಸಾಹಿತ್ಯ ಅಕಾಡೆಮಿ ಕಚೇರಿ ಅಥವಾ ದೂ.080-22211730, 29601730, 22106460 ಗೆ ಸಂಪರ್ಕಿಸಬಹುದು ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ರಿಜಿಸ್ಟಾçರ್ ಕರಿಯಪ್ಪ.ಎನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -------------

ಬುಧವಾರ, ಜೂನ್ 25, 2025

ಸರ್ಕಾರಿ ನೌಕರರ ಸಂಘ ಬಳ್ಳಾರಿ ಜಿಲ್ಲಾ ಶಾಖೆಯ ಪದಾಧಿಕಾರಿಗಳಿಂದ ರಕ್ತದಾನ

ಬಳ್ಳಾರಿ,ಜೂ.25(ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಬಳ್ಳಾರಿ ಜಿಲ್ಲಾ ಶಾಖೆ ಮತ್ತು ಮಿನೇರಾ ಸ್ಟೀಲ್ಸ್ ಸಹಯೋಗದಲ್ಲಿ ನಗರದ ಅನಂತಪುರ ರಸ್ತೆಯ ನೂತನ ಜಿಲ್ಲಾಡಳಿತ ಭವನದ ಆವರಣದಲ್ಲಿ ಮಂಗಳವಾರ ಏರ್ಪಡಿಸಿದ್ದ ‘ಬೃಹತ್ ರಕ್ತದಾನ ಶಿಬಿರ’ದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಬಳ್ಳಾರಿ ಜಿಲ್ಲಾ ಶಾಖೆಯ ಅಧ್ಯಕ್ಷರು, ಪದಾಧಿಕಾರಿಗಳು ರಕ್ತದಾನ ಮಾಡಿದರು. ಬಳ್ಳಾರಿ ಜಿಲ್ಲಾ ಶಾಖೆಯ ಅಧ್ಯಕ್ಷರಾದ ಎಂ.ಎ.ಆಸೀಫ್ ಅವರು ಒಳಗೊಂಡು ಜಿಲ್ಲೆಯ ಎಲ್ಲಾ ಇಲಾಖೆಗಳ ಅಧಿಕಾರಿಗಳು ಸಹ ರಕ್ತದಾನ ಮಾಡಿ ಪ್ರೇರಣೆಯಾದರು. ಶಿಬಿರದಲ್ಲಿ ಭಾಗವಹಿಸಿ ರಕ್ತದಾನ ಮಾಡಿದ ನೌಕರರು ಮತ್ತು ಶಿಬಿರ ಯಶಸ್ವಿಗೆ ಸಹಕರಿಸಿದ ಸಂಘದ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು ಹಾಗೂ ವೃಂದ ಸಂಘಗಳ ಅಧ್ಯಕ್ಷರು, ಪದಾಧಿಕಾರಿಗಳಿಗೆ ಅಭಿನಂದನೆ ಹೇಳಿದರು. ------------

ಕುಡತಿನಿ: ವಸತಿ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಬಳ್ಳಾರಿ,ಜೂ.25(ಕರ್ನಾಟಕ ವಾರ್ತೆ): ಕುಡತಿನಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2025-26ನೇ ಸಾಲಿಗೆ ಪ್ರಧಾನಮಂತ್ರಿ ಆವಾಸ್ (ನಗರ) 2.0 ಯೋಜನೆಯಡಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಯಡಿ ಒಂಟಿ ಮಹಿಳೆಯರು, ಅಂಗವಿಕಲರು, ಹಿರಿಯ ನಾಗರಿಕರು, ತೃತೀಯಲಿಂಗಿಗಳು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ಹಿಂದುಳಿದ, ಅಲ್ಪಸಂಖ್ಯಾತ ವರ್ಗ, ಸ್ವಚ್ಚತಾ ಕಾರ್ಮಿಕರು, ಪಿಎಂ ಸ್ವಾನಿಧಿ ಯೋಜನೆಯಡಿ ಗುರುತಿಸಲ್ಪಟ್ಟ ಬೀದಿ ವ್ಯಾಪ್ಯಾರಿಗಳು ಮತ್ತು ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯಡಿ ಗುರುತಿಸಿದ ಕುಶಲಕರ್ಮಿಗಳು, ಅಂಗನವಾಡಿ ಕಾರ್ಯಕರ್ತರು, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು, ಕೈಗಾರಿಕರು, ವಲಸೆ ಬಂದ ಕುಟುಂಬದವರು ಅರ್ಜಿ ಸಲ್ಲಿಸಬಹುದು. ಆನ್‌ಲೈನ್ ವೆಬ್‌ಸೈಟ್ URL:https://pmay-urban.gov.in ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಜುಲೈ 15 ರೊಳಗಾಗಿ ಅರ್ಜಿ ಸಲ್ಲಿಸಲು ಕೊನೆಯ ದಿನ. *ಬೇಕಾದ ದಾಖಲೆ:* ಆಧಾರ್ ಕಾರ್ಡ್ (ಮನೆಯ ಯಜಮಾನ/ನಿ ಹಾಗೂ ತಂದೆ/ತಾಯಿಯ ಮತ್ತು ಪಡಿತರ ಚೀಟಿಯಲ್ಲಿರುವಂತೆ) ಮತ್ತು ಕುಟುಂಬ ಸದಸ್ಯರ ಆಧಾರ್ ಕಾರ್ಡ್ಗಳು. ವಸತಿ ರಹಿತರಾದಲ್ಲಿ ನಿವೇಶನಕ್ಕೆ ಸಂಭAದಿಸಿದ ದಾಖಲೆಗಳು (ಹಕ್ಕು ಪತ್ರ, ಕ್ರಯ ಪತ, ದಾನ ಪತ್ರ, ಉಡುಗೋರೆ ಪತ್ರ, ಖಾತಾ ನಕಲು ಫಾರಂ-3). ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಪಡಿತರ ಚೀಟಿ, ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ, ನಿಗದಿತ ನಮೂನೆ (Annexure-2A/2B/2C) ಯಲ್ಲಿ “Self Undertaking” ಸಲ್ಲಿಸುವುದು. ಮೊಬೈಲ್ ಸಂಖ್ಯೆ, ಪ್ಯಾನ್ ಕಾರ್ಡ್ (ಲಭ್ಯವಿದ್ದಲ್ಲಿ ಮಾತ್ರ). ಅವಧಿ ಮೀರಿ ಬಂದತಹ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಕುಡತಿನಿ ಪಟ್ಟಣ ಪಂಚಾಯಿತಿ ಕಚೇರಿಯ ಶಾಖೆಯ ಅಧಿಕಾರಿಗಳನ್ನು ಸಂರ್ಪಕಿಸಬಹುದು ಎಂದು ಮುಖ್ಯಾಧಿಕಾರಿ ತೀರ್ಥಪ್ರಸಾದ್ ಅವರು ತಿಳಿಸಿದ್ದಾರೆ. ----------

ಜು.02 ರಂದು ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮ

ಬಳ್ಳಾರಿ,ಜೂ.25(ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ಡಾ.ಫ.ಗು.ಹಳಕಟ್ಟಿಯವರ ಜನ್ಮದಿನದ ಅಂಗವಾಗಿ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮವನ್ನು ಜು.02 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಡಾ. ರಾಜ್‌ಕುಮಾರ್ ರಸ್ತೆಯ ಸಾಂಸ್ಕೃತಿಕ ಸಮುಚ್ಚಯದ ಹೊಂಗಿರಣದಲ್ಲಿ ಆಯೋಜಿಸಲಾಗಿದೆ. ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಉಸ್ತುವಾರಿ ಸಚಿವ ಬಿ.ಝಡ್.ಜಮೀರ್ ಅಹ್ಮದ್ ಖಾನ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಅಧ್ಯಕ್ಷತೆ ವಹಿಸುವರು. ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಹಾಗೂ ಶಾಸಕ ಜೆ.ಎನ್ ಗಣೇಶ್, ಸಂಸದರಾದ ಈ.ತುಕಾರಾಂ, ಕೆ.ರಾಜಶೇಖರ ಬಸವರಾಜ ಹಿಟ್ನಾಳ್, ಡಾ.ಸೈಯದ್ ನಾಸೀರ್ ಹುಸೇನ್, ಶಾಸಕರಾದ ಬಿ.ನಾಗೇಂದ್ರ, ವಿಧಾನಪರಿಷತ್ ಶಾಸಕರಾದ ಡಾ.ಚಂದ್ರಶೇಖರ್ ಬಿ.ಪಾಟೀಲ, ಶಾಸಕರಾದ ಬಿ.ಎಂ.ನಾಗರಾಜ, ಈ.ಅನ್ನಪೂರ್ಣ, ವಿಧಾನಪರಿಷತ್ ಶಾಸಕರಾದ ಶಶೀಲ್ ನಮೋಶಿ, ವೈ.ಎಂ.ಸತೀಶ್, ಡಾ.ಬಾಬು ಜಗಜೀವನ್‌ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ, ಮಹಾನಗರ ಪಾಲಿಕೆಯ ಮಹಾಪೌರರಾದ ಮುಲ್ಲಂಗಿ ನಂದೀಶ್, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯಲು, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ರಾವ್ ಬಹುದ್ದೂರ್ ವೈ.ಮಹಾಬಲೇಶ್ವರಪ್ಪ ಇಂಜಿನಿಯರಿAಗ್ ಕಾಲೇಜಿನ ಪ್ರಾಧ್ಯಾಪಕ ಡಾ.ಎ.ತಿಮ್ಮನಗೌಡ ಅವರು ಕಾರ್ಯಕ್ರಮ ಕುರಿತು ವಿಶೇಷ ಉಪನ್ಯಾಸ ನೀಡುವರು. ಕಾರ್ಯಕ್ರಮದಲ್ಲಿ ಬಳ್ಳಾರಿಯ ದೊಡ್ಡಯ್ಯ ವಿ.ಕಲ್ಲೂರು ಅವರ ತಂಡದಿAದ ವಚನ ಸಂಗೀತ ಇರಲಿದೆ. ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ.ವಿ.ಜೆ., ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರೀಸ್ ಸುಮೈರ್, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಎನ್.ಝುಬೇರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಸೇರಿದಂತೆ ಇತರರು ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ. ------------

ಕೃಷಿ ಇಲಾಖೆ: ಹೈಟೆಕ್ ಹಾರ್ವೆಸ್ಟರ್ ಹಬ್‌ಗಳ ಸ್ಥಾಪನೆಗೆ ಅರ್ಜಿ ಆಹ್ವಾನ

ಬಳ್ಳಾರಿ,ಜೂ.25(ಕರ್ನಾಟಕ ವಾರ್ತೆ): ಕೃಷಿ ಇಲಾಖೆ ವತಿಯಿಂದ ಕ್ಷೇತ್ರದಲ್ಲಿ ಯಂತ್ರೋಪಕರಣಗಳ ಬಳಕೆ ಅಧಿಕ ಮಾಡುವ ನಿಟ್ಟಿನಲ್ಲಿ ಕೃಷಿ ಚಟುವಟಿಕೆಗಳಿಗೆ ಆಧುನಿಕ ತಂತ್ರಜ್ಞಾನದ ಬೃಹತ್ ಯಂತ್ರಗಳನ್ನು ಅಳವಡಿಸಿಕೊಂಡು, ಸಕಾಲದಲ್ಲಿ ಕೃಷಿ ಕಾರ್ಯಗಳನ್ನು ನೆರವೇರಿಸಲು ಹೈಟೆಕ್ ಹಾರ್ವೆಸ್ಟರ್ ಹಬ್‌ಗಳ (ಕಟಾವು ಕೇಂದ್ರಗಳು) ಸ್ಥಾಪನೆಗಾಗಿ ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಕೆ.ಎಂ. ಸೋಮಸುಂದರ ತಿಳಿಸಿದ್ದಾರೆ. ಹೈಟೆಕ್ ಹಾರ್ವೆಸ್ಟರ್ ಹಬ್‌ಗಳನ್ನು ಅನುಷ್ಟಾನ ಮಾಡಲು ಚಾಲ್ತಿಯಲ್ಲಿರುವ ಕೃಷಿ ಯಂತ್ರಧಾರೆ ಕೇಂದ್ರಗಳು, ಸೇವಾದಾರ ಸಂಸ್ಥೆಗಳು, ವೈಯಕ್ತಿಕ ಫಲಾನುಭವಿಗಳು ಹಾಗೂ ನೋಂದಾಯಿತ ಸಂಘ ಸಂಸ್ಥೆಗಳು ಎಫ್‌ಪಿಓ ಸಂಸ್ಥೆಗಳು ಯೋಜನೆಗೆ ಅರ್ಹರಾಗಿದ್ದು, ಆಸಕ್ತ ರೈತರು ಸಂಬAಧಿಸಿದ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಜು.16 ರೊಳಗಾಗಿ ಅರ್ಜಿ ಸಲ್ಲಿಸಬಹುದು. ಹೈಟೆಕ್ ಹಾರ್ವೆಸ್ಟರ್ ಹಬ್ ಯೋಜನೆಯನ್ನು ಅನುಷ್ಟಾನ ಮಾಡಲು ಸರ್ಕಾರದ ಆದೇಶವಾಗಿದ್ದು, ಈ ಯಂತ್ರಗಳನ್ನು ಬಾಡಿಗೆಗೆ ನೀಡುವ ಮೂಲಕ ರೈತರು ಹೆಚ್ಚುವರಿ ಆದಾಯ ಪಡೆಯಬಹುದಾಗಿದೆ. ಕೃಷಿ ಯಂತ್ರಧಾರೆ ಕೇಂದ್ರಗಳನ್ನು ಇನ್ನಷ್ಟು ಬಲಪಡಿಸಲು ಹೈಟೆಕ್ ಹಾರ್ವೆಸ್ಟರ್ ಹಬ್‌ಗಳನ್ನು ಬೆಳೆಯ ವಿಧ ಮತ್ತು ಕಟಾವು ಅವಧಿಯ ಆಧಾರದ ಮೇಲೆ ಕಾರಿಡಾರ್ ಮಾದರಿಯಲ್ಲಿ ಸ್ಥಾಪಿಸಬಹುದು. ಸಾಮಾನ್ಯ ವರ್ಗದ ರೈತರಿಗೆ ಗರಿಷ್ಠ ಶೇ.50 ರಂತೆ ಗರಿಷ್ಟ ರೂ.40 ಲಕ್ಷ ಸಹಾಯಧನ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ವರ್ಗದ ರೈತರಿಗೆ ಗರಿಷ್ಠ ಶೇ.70ರಂತೆ ಹಾಗೂ ಸಂಘ-ಸAಸ್ಥೆಗಳಿಗೆ ಚಾಲ್ತಿಯಲ್ಲಿರುವ ಕೃಷಿ ಯಂತ್ರಧಾರೆ ಕೇಂದ್ರಗಳ ಸೇವಾದಾರ ಸಂಸ್ಥೆ, ಎಫ್‌ಪಿಓಗಳನ್ನೊಳಗೊಂಡAತೆ ಗರಿಷ್ಠ ಶೇ.70 ರಂತೆ ಗರಿಷ್ಟ ರೂ.50 ಸಹಾಯಧನ ನೀಡಲಾಗುತ್ತದೆ. ಸಂಘ-ಸAಸ್ಥೆಗಳು, ಎಫ್‌ಪಿಓಗಳನ್ನೊಳಗೊಂಡAತೆ ಟ್ರಸ್ಟ್ಗಳು ಮಾತ್ರ ಕಂಬೈAಡ್ ಹಾರ್ವೆಸ್ಟರ್ ಮತ್ತು ಶುಗರ್‌ಕೇನ್ ಹಾರ್ವೆಸ್ಟರ್‌ಗಳನ್ನು ಒಳಗೊಂಡ “ಕೋಂಬೊ ಹಾರ್ವೆಸ್ಟರ್ ಹಬ್” ಗೆ ಅರ್ಜಿಯನ್ನು ಸಲ್ಲಿಸಲು ಅವಕಾಶವಿರುತ್ತದೆ. ಕೃಷಿ ಯಂತ್ರೋಪಕರಣವಾರು ನಿಗದಿಪಡಿಸಿದ ಗರಿಷ್ಠ ಸಹಾಯಧನವನ್ನು ಒದಗಿಸಲಾಗಲಿದ್ದು, ಸಹಾಯಧನವನ್ನು ಕ್ರೆಡಿಟ್ ಲಿಂಕ್ ಬ್ಯಾಕ್ ಎಂಡೆಡ್ ಸಬ್ಸಿಡಿ ಮುಖಾಂತರ ಬಿಡುಗಡೆ ಮಾಡಲಾಗುತ್ತದೆ. ಆಯ್ಕೆಯಾದ ಫಲಾನುಭವಿಗಳು ಅಥವಾ ಸಂಘ-ಸAಸ್ಥೆಗಳು ಕೃಷಿ ಮೂಲಭೂತ ಸೌಕರ್ಯ ನಿಧಿ ಸಾಲದ ನೆರವನ್ನು ಪಡೆಯಲು ಸಹ ಅವಕಾಶವಿರುತ್ತದೆ. ಸಹಕಾರ ಸಂಘಗಳ ನಿಬಂಧನೆಯAತೆ ಕಂಪನಿ ಕಾಯ್ದೆಯಡಿ ನೊಂದಾಯಿಸಿದ ಸಂಘ-ಸAಸ್ಥೆಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹತೆಯನ್ನು ಹೊಂದಿರುತ್ತವೆ. ಕೃಷಿ ಯಂತ್ರಧಾರೆ ಕೇಂದ್ರಗಳ ಸೇವಾದಾರ ಸಂಸ್ಥೆಗಳ, ಕೃಷಿ ಯಂತ್ರೋಪಕರಣಗಳ ಬ್ಯಾಂಕ್, ರೈತ ಉತ್ಪಾದಕ ಸಂಸ್ಥೆಗಳು, ಇತರೆ ಸಂಘ-ಸAಸ್ಥೆಗಳು ರಾಜ್ಯಾದ್ಯಂತ ಅರ್ಜಿಗಳನ್ನು ಸಲ್ಲಿಸಬಹುದು. ಆರು ಅಥವಾ ಒಂಬತ್ತು ವರ್ಷಗಳ ಕಾಲ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿರುವ ಮತ್ತು ತಪಾಸಣೆಯಲ್ಲಿ ಸಂಪೂರ್ಣವಾಗಿ ಲೆಕ್ಕ-ಪತ್ರ ಹಾಗೂ ಯಂತ್ರೋಪಕರಣಗಳನ್ನು ಹಾಜರುಪಡಿಸಿರುವ ಕೃಷಿ ಯಂತ್ರಧಾರೆ ಕೇಂದ್ರಗಳ ಸೇವಾದಾರ ಸಂಸ್ಥೆಗಳು ಮಾತ್ರ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಸಮೀಪದ ರೈತ ಸಂಪರ್ಕ ಕೇಂದ್ರ ಹಾಗೂ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಅಥವಾ ದೂ.08392-276224 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -------------

ಕೃಷಿ ಇಲಾಖೆ: ವಿವಿಧ ಬೆಳೆಗಳಿಗೆ ವಿಮೆ ನೋಂದಣಿಗೆ ಆಹ್ವಾನ

ಬಳ್ಳಾರಿ,ಜೂ.25(ಕರ್ನಾಟಕ ವಾರ್ತೆ): ಪ್ರಸಕ್ತ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯಡಿ ಮುಂಗಾರು ಹಂಗಾಮಿನ ಬೆಳೆಗಳ ಬೆಳೆ ವಿಮೆಗೆ ನೋಂದಾಯಿಸಲು ಬೆಳೆ ಸಾಲ ಪಡೆದ ಹಾಗೂ ಬೆಳೆ ಸಾಲ ಪಡೆಯದ ರೈತರು ತಮ್ಮ ಬೆಳೆಗಳಿಗೆ ಬ್ಯಾಂಕುಗಳಲ್ಲಿ ವಿಮೆಗೆ ನೋಂದಾಯಿಸಿಕೊಳ್ಳಬೇಕು ಎಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ. ಮುಂಗಾರು ಹಂಗಾಮಿನ ಗ್ರಾಮ ಪಂಚಾಯಿತಿ ಮಟ್ಟದ ಬೆಳೆಗಳಾದ ಭತ್ತ, ಮುಸುಕಿನ ಜೋಳ ಹಾಗೂ ಹೋಬಳಿ ಮಟ್ಟದ ಮುಂಗಾರು ಹಂಗಾಮಿನ ಬೆಳೆಗಳಾದ ಜೋಳ, ರಾಗಿ, ಸಜ್ಜೆ, ನವಣೆ, ತೊಗರಿ, ಹುರುಳಿ, ಸೂರ್ಯಕಾಂತಿ, ಎಳ್ಳು, ಹತ್ತಿ, ನೆಲಗಡಲೆ, ಈರುಳ್ಳಿ, ಭತ್ತ, ಕೆಂಪು ಮೆಣಸಿನಕಾಯಿ ಜಿಲ್ಲೆಯ ಬೆಳೆಗಳಾಗಿವೆ. *ವಿವಿಧ ಬೆಳೆಗಳ ಬೆಳೆ ವಿಮೆಗೆ ಕೊನೆಯ ದಿನ:* ಎಳ್ಳು-ಜುಲೈ 15 ಕೊನೆಯ ದಿನ. ಮುಸುಕಿನ ಜೋಳ, ಜೋಳ, ಸೂರ್ಯಕಾಂತಿ, ತೊಗರಿ, ಹತ್ತಿ, ಕೆಂಪು ಮೆಣಸಿನಕಾಯಿ, ಈರುಳ್ಳಿ ಬೆಳೆಗಳಿಗೆ ಜುಲೈ 31 ಕೊನೆಯ ದಿನ. ಭತ್ತ, ತೊಗರಿ, ರಾಗಿ, ನವಣೆ, ಹುರುಳಿ, ನೆಲಗಡಲೆ, ಸಜ್ಜೆ ಬೆಳೆಗಳಿಗೆ ಆಗಸ್ಟ್ 16 ರ ವರೆಗೆ ಅವಕಾಶ ಕಲ್ಪಿಸಲಾಗಿದೆ. ನೋಂದಾಯಿಸಿಕೊಳ್ಳಲು ಸ್ಥಳೀಯ ಬ್ಯಾಂಕ್‌ಗಳು ಅಥವಾ ಸಾರ್ವಜನಿಕ ಸೇವಾ ಕೇಂದ್ರ ಅಥವಾ ಗ್ರಾಮ ಒನ್ ಸೇವಾ ಕೇಂದ್ರಗಳಿಗೆ ಸಂಪರ್ಕಿಸಬಹುದು. ಬೆಳೆ ಸಾಲ ಪಡೆದ ರೈತರು ಇಚ್ಛೆ ಪಡೆಯದೇ ಇದ್ದಲ್ಲಿ ತಮ್ಮ ವ್ಯಾಪ್ತಿಯ ಬ್ಯಾಂಕಿನ ವ್ಯವಸ್ಥಾಪಕರಿಗೆ ಬೆಳೆ ನೊಂದಣಿ ಅಂತಿಮ ದಿನಾಂಕಕ್ಕಿAತ 7 ದಿನಗಳ ಮುಂಚಿತವಾಗಿ ಲಿಖಿತವಾಗಿ ಮುಚ್ಛಳಿಕೆ ಪತ್ರವನ್ನು ನೀಡಿದ್ದಲ್ಲಿ ಅಂತಹ ರೈತರನ್ನು ಬೆಳೆ ವಿಮೆ ಯೋಜನೆಯಿಂದ ಕೈಬಿಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರ, ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಅಥವಾ ಜಂಟಿ ಕೃಷಿ ನಿರ್ದೇಶಕರ ಕಚೇರಿಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -----------

ಮಹಾನಗರ ಪಾಲಿಕೆ: ವಸತಿ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಬಳ್ಳಾರಿ,ಜೂ.25(ಕರ್ನಾಟಕ ವಾರ್ತೆ): ಮಹಾನಗರ ಪಾಲಿಕೆ ವ್ಯಾಪ್ತಿಗೆ ನಿವೇಶನ ರಹಿತ ಮತ್ತು ವಸತಿ ರಹಿತರಿಗೆ ಪ್ರಧಾನ ಮಂತ್ರಿ ಆವಾಸ್ ಯೋಜನೆ(ನಗರ) 2.0 ಅಡಿಯಲ್ಲಿ ವಸತಿ ಸೌಲಭ್ಯ ಒದಗಿಸಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಮಹಾನಗರ ಪಾಲಿಕೆಯ ಆಯುಕ್ತರು ತಿಳಿಸಿದ್ದಾರೆ. ವೆಬ್‌ಸೈಟ್ https://pmay-urban.gov.in ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಜು.15 ಅರ್ಜಿ ಸಲ್ಲಿಸಲು ಕೊನೆಯ ದಿನ. *ಬೇಕಾದ ದಾಖಲೆಗಳು:* ಅರ್ಜಿದಾರರ ಆಧಾರ್ ಕಾರ್ಡ್ ಮತ್ತು ಕುಟುಂಬದ ಎಲ್ಲಾ ಸದಸ್ಯರ ಆಧಾರ್ ಕಾರ್ಡ್, ವಸತಿ ರಹಿತರಾಗಿದ್ದಲ್ಲಿ ನಿವೇಶನಕ್ಕೆ ಸಂಬAಧಿಸಿದ ದಾಖಲೆಗಳು(ಹಕ್ಕುಪತ್ರ, ಕ್ರಯಪತ್ರ, ದಾನಪತ್ರ, ಉಡುಗೊರೆ, ಖಾತಾ), ಆದಾಯ ಮತ್ತು ಜಾತಿ ಪ್ರಮಾಣ ಪತ್ರ, ಪಡಿತರ ಚೀಟಿ, ಬ್ಯಾಂಕ್ ಖಾತೆಯ ವಿವರ, ಆಧಾರ್ ಕಾರ್ಡ್ಗೆ ಲಿಂಕ್ ಇರುವ ಮೊಬೈಲ್ ಸಂಖ್ಯೆ, ಪಾನ್ ಕಾರ್ಡ್(ಲಭ್ಯವಿದ್ದಲ್ಲಿ), ನಿಗಧಿತ ನಮೂನೆ(ಅನೆಕ್ಷರ್-2ಎ,2ಬಿ,2ಸಿ) ಯಲ್ಲಿ ಸೆಲ್ಪ್ ಅಂಡರ್‌ಟೆಕಿAಗ್ ಹೊಂದಿರಬೇಕು. ಅರ್ಜಿ ಸಲ್ಲಿಸಲು ಸಾಮಾನ್ಯ ಸೇವಾ ಕೇಂದ್ರ ಸೆಂಟರ್‌ಗಳಲ್ಲಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ನಗರದ ಗಡಗಿ ಚೆನ್ನಪ್ಪ ವೃತ್ತ (ರಾಯಲ್ ಸರ್ಕಲ್) ಹತ್ತಿರದ ಮಹಾನಗರ ಪಾಲಿಕೆಯ ಆಯುಕ್ತರ ಕಚೇರಿ ಅಥವಾ ದೂ.08392-273479/278168 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ------------

ಬಳ್ಳಾರಿ: ಏಕ ಬಳಕೆಯ ಪ್ಲಾಸ್ಟಿಕ್ ವಸ್ತುಗಳ ಉತ್ಪಾದನೆ, ಮಾರಾಟ, ಸಂಗ್ರಹಣೆ, ವಿತರಣೆ ಹಾಗೂ ಬಳಕೆ ನಿಷೇಧ

ಬಳ್ಳಾರಿ,ಜೂ.25(ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ವಸ್ತುಗಳ ಉತ್ಪಾದನೆ, ಮಾರಾಟ, ಸಂಗ್ರಹಣೆ, ವಿತರಣೆ ಹಾಗೂ ಬಳಕೆ ನಿಷೇಧಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರೀಸ್ ಸುಮೈರ್ ಅವರು ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ಹೊರಡಿಸಿರುವ ಅವರು, ರಸ್ತೆಗಳಲ್ಲಿ ಮತ್ತು ಕಾಲುವೆಗಳಲ್ಲಿ ಪ್ಲಾಸ್ಟಿಕ್ ಕಸದ ರಾಶಿಗಳು, ಏಕ ಬಳಕೆಯ ಪ್ಲಾಸ್ಟಿಕ್ ವಸ್ತುಗಳು ಪರಿಸರ ಹಾಗೂ ಆರೋಗ್ಯದ ಮೇಲೆ ಬೀರುವ ದುಷ್ಪರಿಣಾಮಗಳ ಬಗ್ಗೆ ಮುಖ್ಯಮಂತ್ರಿಗಳು ತೀವ್ರ ಆತಂಕ ವ್ಯಕ್ತಪಡಿಸಿದ್ದು, ಈ ಬಗ್ಗೆ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಸೂಚಿಸಿದ್ದಾರೆ ಎಂದು ಜಿಪಂ ಸಿಇಒ ಅವರು ತಿಳಿಸಿದ್ದಾರೆ. ಪರಿಸರ ಸಂರಕ್ಷಣಾ ಕಾಯ್ದೆಯ ಸೆಕ್ಷನ್ 5 ರಡಿ ಹಾಗೂ ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣಾ ನಿಯಮಗಳು 2016, 2021 ರ ತಿದ್ದುಪಡಿ ಅನ್ವಯ ಕ್ಯಾರಿ ಬ್ಯಾಗ್ ಇತ್ಯಾದಿಗಳಲ್ಲಿ 120 ಮೈಕ್ರಾನ್ ಗಿಂತ ಕಡಿಮೆ ಗಾತ್ರದ ಎಲ್ಲಾ ಕೆಲವು ಏಕ ಬಳಕೆಯ ಪ್ಲಾಸ್ಟಿಕ್ ವಸ್ತುಗಳ ಉತ್ಪಾದನೆ, ಮಾರಾಟ, ಸಂಗ್ರಹಣೆ, ವಿತರಣೆ ಹಾಗೂ ಬಳಕೆ ನಿಷೇಧಿಸಲಾಗಿದೆ. ಹಾಗಾಗಿ ಸ್ಥಳೀಯ ಸಂಸ್ಥೆಗಳ ತಾಲ್ಲೂಕು, ಗ್ರಾಮ ಪಂಚಾಯತಿಗಳ ಮೂಲಕ ರಸ್ತೆ ಮತ್ತು ಕಾಲುವೆಗಳಲ್ಲಿ ಪ್ಲಾಸ್ಟಿಕ್ ಕಸ ವಿಲೇವಾರಿ ತಡೆಗಟ್ಟುವುದು ಹಾಗೂ ಉಲ್ಲಂಘಿಸುವವರಿಗೆ ದಂಡ ವಿಧಿಸುವ ಕಾರ್ಯಾಚರಣೆ ತ್ವರಿತವಾಗಿ ಸಂಬAಧಿಸಿದ ಅಧಿಕಾರಿಗಳು ನಡೆಸಬೇಕು. ಆಯಾ ಗ್ರಾಮ ಪಂಚಾಯತಿಯ ಪಂಚಾಯತಿ ಅಭಿವೃದ್ದಿ ಅಧಿಕಾರಿಗಳು, ಏಕ ಬಳಕೆಯ ಪ್ಲಾಸ್ಟಿಕ್ ತಯಾರಕರು ಹಾಗೂ ಮಾರಾಟಗಾರರ ಮೇಲ್ವಿಚಾರಣೆ ನಡೆಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದ್ದಾರೆ. ತಾಲ್ಲೂಕು ಪಂಚಾಯತಿ, ಗ್ರಾಮ ಪಂಚಾಯತಿ ವ್ಯಾಪ್ತಿಯ ಎಲ್ಲಾ ಕಚೇರಿಗಳು ಮತ್ತು ಘಟಕಗಳಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ಬಳಕೆಯನ್ನು ತಕ್ಷಣದಿಂದಲೇ ನಿಷೇಧಿಸಲಾಗಿದೆ ಎಂದು ಜಿಪಂ ಸಿಇಒ ಮಹಮ್ಮದ್ ಹ್ಯಾರೀಸ್ ಸುಮೈರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ------------

ಜೂ.27 ರಂದು ಶ್ರೀ ಕೆಂಪೇಗೌಡ ಜಯಂತಿ ಕಾರ್ಯಕ್ರಮ

ಬಳ್ಳಾರಿ,ಜೂ.25(ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ಶ್ರೀ ಕೆಂಪೇಗೌಡ ಜಯಂತಿ ಕಾರ್ಯಕ್ರಮವನ್ನು ಜೂ.27 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಡಾ.ರಾಜ್‌ಕುಮಾರ್ ರಸ್ತೆಯ ಸಾಂಸ್ಕೃತಿಕ ಸಮುಚ್ಚಯಜ ಹೊಂಗಿರಣದಲ್ಲಿ ಆಯೋಜಿಸಲಾಗಿದೆ. ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಉಸ್ತುವಾರಿ ಸಚಿವ ಬಿ.ಝಡ್.ಜಮೀರ್ ಅಹ್ಮದ್ ಖಾನ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಅಧ್ಯಕ್ಷತೆ ವಹಿಸುವರು. ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಹಾಗೂ ಶಾಸಕ ಜೆ.ಎನ್ ಗಣೇಶ್, ಸಂಸದರಾದ ಈ.ತುಕಾರಾಂ, ಕೆ.ರಾಜಶೇಖರ ಬಸವರಾಜ ಹಿಟ್ನಾಳ್, ಡಾ.ಸೈಯದ್ ನಾಸೀರ್ ಹುಸೇನ್, ಶಾಸಕರಾದ ಬಿ.ನಾಗೇಂದ್ರ, ವಿಧಾನಪರಿಷತ್ ಶಾಸಕರಾದ ಡಾ.ಚಂದ್ರಶೇಖರ್ ಬಿ.ಪಾಟೀಲ, ಶಾಸಕರಾದ ಬಿ.ಎಂ.ನಾಗರಾಜ, ಈ.ಅನ್ನಪೂರ್ಣ, ವಿಧಾನಪರಿಷತ್ ಶಾಸಕರಾದ ಶಶೀಲ್ ನಮೋಶಿ, ವೈ.ಎಂ.ಸತೀಶ್, ಡಾ.ಬಾಬು ಜಗಜೀವನ್‌ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ, ಮಹಾನಗರ ಪಾಲಿಕೆಯ ಮಹಾಪೌರರಾದ ಮುಲ್ಲಂಗಿ ನಂದೀಶ್, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯಲು, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷ ಸಿದ್ಧರಾಮ ಕಲ್ಮಠ ಅವರು ಜಯಂತಿ ಕುರಿತು ವಿಶೇಷ ಉಪನ್ಯಾಸ ನೀಡುವರು. ಕಾರ್ಯಕ್ರಮದಲ್ಲಿ ಕಂಪ್ಲಿಯ ಜೆ.ಚಿನ್ಮಯ್ ಅವರಿಂದÀ ಸುಗಮ ಸಂಗೀತ ಇರಲಿದೆ. ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ.ವಿ.ಜೆ., ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರೀಸ್ ಸುಮೈರ್, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಎನ್.ಝುಬೇರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಸೇರಿದಂತೆ ಇತರರು ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ. -----------------

ರೈತರಿಗೆ ಬೆಳೆ ವಿವರ ದಾಖಲಿಸಲು ಅವಕಾಶ

ಬಳ್ಳಾರಿ,ಜೂ.25(ಕರ್ನಾಟಕ ವಾರ್ತೆ): ಬಳ್ಳಾರಿ ತಾಲ್ಲೂಕಿನ ರೈತರು ತಮ್ಮ ಜಮೀನಿನಲ್ಲಿ ಬೆಳೆದ ಬೆಳೆ ವಿವರ ದಾಖಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಸಹಾಯಕ ಕೃಷಿ ನಿರ್ದೇಶಕರು ತಿಳಿಸಿದಾರೆ. 2025-26 ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಆರಂಭವಾಗಿದ್ದು, ಕಳೆದ ಬಾರಿಯಂತೆ ಈ ಬಾರಿಯೂ ಸಹ ಬೆಳೆ ಸಮೀಕ್ಷೆ ಕಾರ್ಯದಲ್ಲಿ ರೈತರು ಸ್ವತ: ತಮ್ಮ ಜಮೀನಿನಲ್ಲಿ ತಾವು ಬೆಳೆದ ಬೆಳೆಯ ವಿವರ ದಾಖಲಿಸಬಹುದು. ಬೆಳೆ ವಿವರ ನಮೂದಿಸಲು ಮೊಬೈಲ್ ಆಪ್ ಬಳಸಬಹುದಾಗಿದ್ದು, ಗೂಗಲ್ ಪ್ಲೇ-ಸ್ಟೋರ್‌ನಿಂದ “ಮುಂಗಾರು ರೈತರ ಬೆಳೆ ಸಮೀಕ್ಷೆ 2025-26” ಎಂಬ ಹೆಸರಿನ ಮೊಬೈಲ್ ಆಪ್ ಅನ್ನು ಡೌನ್‌ಲೋಡ್ ಮಾಡಿಕೊಳ್ಳಬೇಕು. ಮೊಬೈಲ್ ಆಪ್ ಬಳಕೆ ಮಾಡುವ ರೀತಿಯನ್ನು ರೈತರಿಗೆ ತಿಳಿಸಲು ಪ್ರತಿ ಗ್ರಾಮದಲ್ಲಿ ನುರಿತ ಖಾಸಗಿ ನಿವಾಸಿಗಳನ್ನು ನೇಮಿಸಲಾಗಿದೆ ಎಂದು ತಿಳಿಸಿದ್ದಾರೆ. *ವಿಧಾನ:* ಗೂಗಲ್ ಪ್ಲೇ-ಸ್ಟೋರ್‌ನಲ್ಲಿ “ಮುಂಗಾರು ರೈತರ ಬೆಳೆ ಸಮೀಕ್ಷೆ 2025-26” ಎಂದು ಹುಡುಕಿ ಡೌನ್‌ಲೋಡ್ ಮಾಡಿಕೊಳ್ಳಬೇಕು. ಬಳಿಕ ಆಧಾರ್ ವಿವರ ಮತ್ತು ಮೊಬೈಲ್ ನಂಬರ್ ಅನ್ನು ನಮೂದಿಸಿ ಸಕ್ರಿಯಗೊಳಿಸಲು ಓಟಿಪಿ ನಮೂದಿಸಬೇಕು. ಮೊಬೈಲ್ ಆಪ್‌ನಲ್ಲಿ ಮೊದಲು ಮಾಸ್ಟರ್ ವಿವರಗಳನ್ನು ಡೌನ್‌ಲೋಡ್ ಮಾಡಿಕೊಳ್ಳಬೇಕು. ನಂತರ ತಮ್ಮ ಜಮೀನಿನ ಸರ್ವೆ ನಂಬರ್‌ಗಳನ್ನು ಸೇರಿಸಿಕೊಳ್ಳಬೇಕು. ಮುಂದಿನ ಹಂತದಲ್ಲಿ ರೈತರು ತಮ್ಮ ಜಮೀನಿನಲ್ಲಿ ಬೆಳೆದ ಬೆಳೆ ವಿವರಗಳನ್ನು ದಾಖಲಿಸಬೇಕು. ಈ ಹಂತದಲ್ಲಿ ರೈತರು ತಮ್ಮ ಜಮೀನಿನಲ್ಲಿ ಪಾಳು ಬಿದ್ದಿರುವ ಪ್ರದೇಶ, ಈಗಾಗಲೇ ಕಟಾವಾದ ಪ್ರದೇಶ, ಕೃಷಿಯೇತರ ಬಳಕೆಗೆ (ಕೊಟ್ಟಿಗೆ, ಕೃಷಿ ಹೊಂಡ, ಮನೆ ಇತರೆ) ಬಳಕೆಯಾದ ಪ್ರದೇಶದ ವಿವರಗಳನ್ನು ಸಹ ದಾಖಲಿಸಬೇಕಾಗುತ್ತದೆ. ರೈತರು ತಾವು ಬೆಳೆದ ಪ್ರತಿ ಬೆಳೆಯ ವಿಸ್ತೀರ್ಣದ ಜೊತೆಗೆ ಪ್ರತಿ ಬೆಳೆಯ ಎರಡು ಛಾಯಚಿತ್ರಗಳನ್ನು ಸೆರೆ ಹಿಡಿದು ಅಪ್ಲೋಡ್ ಮಾಡಬೇಕು. ಹೀಗೆ ಅಪ್ಲೋಡ್ ಮಾಡಲಾದ ಮಾಹಿತಿಯನ್ನು ಪ್ರತಿಗ್ರಾಮಕ್ಕೆ ನೇಮಿಸಲಾದ ಸರ್ಕಾರಿ ಅಧಿಕಾರಿಗಳು (ಮೇಲ್ವಿಚಾರಕರು) ಪರಿಶೀಲಿಸಿ ರೈತರು ದಾಖಲಿಸಿದ ಬೆಳೆ ವಿವರಕ್ಕೂ, ಛಾಯಚಿತ್ರಕ್ಕೂ ತಾಳೆ ಹೊಂದಿದಲ್ಲಿ ಮಾತ್ರ ಬೆಳೆ ವಿವರವನ್ನು ಅನುಮೋದಿಸುತ್ತಾರೆ. ಒಂದು ವೇಳೆ ರೈತರು ತಮ್ಮ ಸ್ನೇಹಿತರು ಅಥವಾ ಸಂಬAಧಿಕರಿಗೆ ಸಹಾಯ ಮಾಡುವುದಾದರೆ ಅವರ ಸರ್ವೆ ನಂಬರ್‌ಗಳನ್ನು ಸಹ ತಮ್ಮ ಮೊಬೈಲ್ ಆಪ್‌ನಲ್ಲಿ ಸೇರಿಸಿಕೊಂಡು ಅವರ ಜಮೀನಿನ ವಿವರ ದಾಖಲಿಸಲೂ ಸಹ ಮೊಬೈಲ್‌ಆಪ್‌ನಲ್ಲಿ ಅವಕಾಶ ಕಲ್ಪಿಸಲಾಗಿದೆ. *ಉಪಯೋಗ:* ಹೀಗೆ ಸಂಗ್ರಹಿಸಲಾದ ಬೆಳೆ ಸಮೀಕ್ಷೆ ಮಾಹಿತಿಯನ್ನು ಎನ್.ಡಿ.ಆರ್.ಎಫ್ ಮತ್ತು ಎಸ್.ಡಿ.ಆರ್.ಎಫ್ ಅಡಿ ಪ್ರವಾಹ ಮತ್ತು ಬರಗಾಲ ಸಂದರ್ಭದಲ್ಲಿ ನೀಡುವ ನಷ್ಟ ಪರಿಹಾರ ವಿತರಿಸಲು, ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಅರ್ಹ ಫಲಾನುಭವಿಗಳನ್ನು ಗುರುತಿಸಲು, ಬೆಳೆ ವಿಮಾ ಯೋಜನೆಯಡಿ ಬೆಳೆ ವಿವರ ಪರಿಶೀಲಿಸಲು, ಸಾಂಖ್ಯಿಕ ಇಲಾಖೆ, ಕೃಷಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಗಳ ಬೆಳೆ ವಿಸ್ತೀರ್ಣ ವರದಿ ಕಾರ್ಯದಲ್ಲಿ, ಬೆಳೆ ಕಟಾವು ಪ್ರಯೋಗಗಳನ್ನು ಕೈಗೊಳ್ಳಲು ಸಹಾಯಕವಾಗುತ್ತದೆ. ಅದೇರೀತಿಯಾಗಿ ಬೆಳೆ ಮಾನದಂಡಗಳಿಗೆ ಅನುಗುಣವಾಗಿ ಕೃಷಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಗಳ ಫಲಾನುಭವಿ ಆಧಾರಿತ ಯೋಜನೆಗಳ ಅನುಷ್ಠಾನಕ್ಕೆ, ಪಹಣಿಯಲ್ಲಿ ಬೆಳೆ ವಿವರ ದಾಖಲಿಸಲು, ಬ್ಯಾಂಕ್ ಮತ್ತು ವ್ಯವಸಾಯ ಸೇವಾ ಸಹಕಾರಿ ಸಂಘಗಳ ಮುಖಾಂತರ ಬೆಳೆ ಸಾಲ ನೀಡುವ ಸಂದರ್ಭದಲ್ಲಿ ಬೆಳೆ ಪರಿಶೀಲನೆ ಮಾಡಲು ಹಾಗೂ ಮುಂತಾದ ಸರ್ಕಾರದ ಯೋಜನೆಗಳಿಗೆ ಬಳಸಲಾಗುತ್ತದೆ. ಹಾಗಾಗಿ ರೈತರು ತಮ್ಮ ಜಮೀನಿನಲ್ಲಿ ಬೆಳೆದ ಬೆಳೆ ವಿವರಗಳನ್ನು ತಾವೇ ಸರ್ಕಾರಕ್ಕೆ ನಿಗಧಿತ ಸಮಯದೊಳಗೆ ವರದಿ ಮಾಡಬೇಕು. ಹೆಚ್ಚಿನ ಮಾಹಿತಿಗಾಗಿ ಕಂದಾಯ, ಕೃಷಿ, ತೋಟಗಾರಿಕೆಯ ಅಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -------------

ಉಚಿತ ಪರೀಕ್ಷಾ ಪೂರ್ವ ತರಬೇತಿಗಾಗಿ ಅರ್ಜಿ ಆಹ್ವಾನ

ಬಳ್ಳಾರಿ,ಜೂ.25(ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಂಡೂರು ತಾಲ್ಲೂಕು ಆಡಳಿತ ಇವರ ಸಂಯುಕ್ತಾಶಯದಲ್ಲಿ ದೋಣಿಮಲೈನ ಎನ್‌ಎಂಡಿಸಿ ಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಳ್ಳಾರಿ ಜಿಲ್ಲೆಯ ಅಭ್ಯರ್ಥಿಗಳಿಗೆ ಉಚಿತ ಪರೀಕ್ಷಾ ಪೂರ್ವ ತರಬೇತಿ ಹಮ್ಮಿಕೊಳ್ಳಲಾಗಿದೆ. ತರಬೇತಿಯು ಜೂನ್ 30 ರಿಂದ ಜುಲೈ 08 ರ ವರೆಗೆ ಬೆಳಿಗ್ಗೆ 10 ಗಂಟೆಯಿAದ ಸಂಜೆ 04 ಗಂಟೆಯವರೆಗೆ ಸಂಡೂರು ತಾಲ್ಲೂಕಿನ ದೋಣಿಮಲೈ ನ ಸರ್ಕಾರಿ ಪ್ರೌಢ ಶಾಲೆಯಲ್ಲಿ ನೀಡಲಾಗುತ್ತದೆ. ಅರ್ಜಿ ಸಲ್ಲಿಸಿದ ಅಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿರುವ ಬಗ್ಗೆ ಅರ್ಜಿಯ ಪ್ರತಿ ಮತ್ತು ಆಧಾರ್ ಕಾರ್ಡ್ನೊಂದಿಗೆ ನೇರವಾಗಿ ಮೇಲ್ಕಂಡ ಸ್ಥಳದಲ್ಲಿ ತರಬೇತಿಗೆ ಹಾಜರಾಗಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -----------

ಬೆಳೆ ವಿಮೆ ನೋಂದಣಿಗೆ ಆಹ್ವಾನ

ಬಳ್ಳಾರಿ,ಜೂ.25(ಕರ್ನಾಟಕ ವಾರ್ತೆ): ಪ್ರಸ್ತಕ ಸಾಲಿನ ಮುಂಗಾರು ಹಂಗಾಮಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ (ವಿಮಾ) ಯೋಜನೆಯಡಿ ಕೃಷಿ ಬೆಳೆಗಳಿಗೆ ವಿಮೆ ನೋಂದಣಿ ಪ್ರಕ್ರಿಯೆ ಪ್ರಾರಂಭಗೊAಡಿದ್ದು, ರೈತರು ತಮ್ಮ ವಿವಿಧ ಕೃಷಿ ಬೆಳೆಗಳಿಗೆ ಬೆಳೆ ವಿಮೆ ಮಾಡಿಸಿಕೊಳ್ಳಬೇಕು ಎಂದು ಸಹಾಕಯ ಕೃಷಿ ನಿರ್ದೇಶಕರು ತಿಳಿಸಿದ್ದಾರೆ. ಬೆಳೆ ವಿಮೆಯಿಂದ ರೈತರಿಗೆ ನೈಸರ್ಗಿಕ ಪ್ರಕೃತಿ ವಿಕೋಪಗಳಿಂದಾಗಿ ಬೆಳೆ ಹಾನಿಯಾದರೆ, ವಿಮಾಯೋಜನೆಯಿಂದ ಅನುಕೂಲವಾಗಲಿದೆ. ಮಳೆಯಾಶ್ರಿತ ಬೆಳೆಗಳಾದ ರಾಗಿ, ನವಣೆ, ಹುರುಳಿ, ನೆಲಗಡಲೆ, ಸಜ್ಜೆ, ತೊಗರಿ ಭತ್ತ ಬೆಳೆಗಳಿಗೆ ಬೆಳೆ ವಿಮೆ ಮಾಡಿಸಬಹುದು. ನೋಂದಣಿಗೆ ಆಗಸ್ಟ್ 16 ಕೊನೆಯ ದಿನ. ರೈತರು ಬೆಳೆ ವಿಮೆ ನೋಂದಣಿಗಾಗಿ ಹತ್ತಿರದ ಸಾಮಾನ್ಯ ಸೇವಾ ಕೇಂದ್ರ, ಗ್ರಾಮ ಒನ್ ಕೇಂದ್ರ, ರೈತರು ತಮ್ಮ ವ್ಯವಹಾರದ ಬ್ಯಾಂಕ್‌ಗಳಿಗೆ ಭೇಟಿ ನೀಡಬಹುದು. ಹೆಚ್ಚಿನ ಮಾಹಿತಿಗಾಗಿ ರೈತ ಸಂಪರ್ಕ ಕೇಂದ್ರ, ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಅಥವಾ ವಿಮಾ ಸಂಸ್ಥೆಯ ತಾಲೂಕು ಪ್ರತಿನಿಧಿಗೆ (ಮೊ.7996453241) ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ----------------

ಮೃತ ಅನಾಮಧೇಯ ವ್ಯಕ್ತಿ ವಾರಸುದಾರರ ಪತ್ತೆಗೆ ಮನವಿ

ಬಳ್ಳಾರಿ,ಜೂ.25(ಕರ್ನಾಟಕ ವಾರ್ತೆ): ನಗರದ ಹೆಚ್.ಆರ್.ಗವಿಯಪ್ಪ ವೃತ್ತದ ಹತ್ತಿರ ಬಸ್ ನಿಲ್ದಾಣ ಬಳಿ ಸುಮಾರು 40-45 ವರ್ಷದ ಅನಾಮಧೇಯ ವ್ಯಕ್ತಿಯು ಯಾವುದೋ ಖಾಯಿಲೆಯಿಂದ ಆರೈಕೆ ಇಲ್ಲದೇ ಜೂ.22 ರಂದು ಮೃತಪಟ್ಟಿದ್ದು, ಮೃತನ ವಾರಸುದಾರರು ತಿಳಿದಿರುವುದಿಲ್ಲ. ಈ ಕುರಿತು ಬ್ರೂಸ್‌ಪೇಟೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತನ ವಾರಸುದಾರರ ಪತ್ತೆಗೆ ಸಹಕರಿಸಬೇಕು ಎಂದು ಪೊಲೀಸ್ ಠಾಣಾಧಿಕಾರಿ ಮನವಿ ಮಾಡಿದ್ದಾರೆ. ಚಹರೆ ಗುರುತು: ಎತ್ತರ 5.5 ಅಡಿ, ದುಂಡು ಮುಖ, ಎಣ್ಣೆಗೆಂಪು ಮೈಬಣ್ಣ, ತೆಳುವಾದ ಮೈಕಟ್ಟು ಹೊಂದಿದ್ದು, ತಲೆಯಲ್ಲಿ ಕಪ್ಪು ಕೂದಲು ಮತ್ತು ಮುಖದಲ್ಲಿ ಕಪ್ಪು ಗಡ್ಡ÷ಮತ್ತು ಮೀಸೆ ಹೊಂದಿರುತ್ತಾನೆ. ನೀಲಿ ಬಣ್ಣದ ಟೀ-ಶರ್ಟ್ ಮತ್ತು ಕಪ್ಪು ಬಣ್ಣದ ಕತ್ತರಿಸಿದ ಪ್ಯಾಂಟ್ ಧರಿಸಿರುತ್ತಾನೆ. ಈ ಮೇಲ್ಕಂಡ ಚಹರೆ ಗುರುತುಗಳುಳ್ಳ ಮೃತ ವ್ಯಕ್ತಿಯ ವಾರಸುದಾರರ ಬಗ್ಗೆ ಮಾಹಿತಿ ಸಿಕ್ಕಲ್ಲಿ ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ ದೂ.08392-258100, 258102 ಅಥವಾ ಬ್ರೂಸ್‌ಪೇಟೆ ಪೊಲೀಸ್ ಠಾಣೆಯ ದೂ.08392-272022, ಪಿ.ಐ ಮೊ.9480803045, ಪಿಎಸ್‌ಐ ಮೊ.9480803081 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -------------

ಮೃತ ಅನಾಮಧೇಯ ವ್ಯಕ್ತಿ ವಾರಸುದಾರರ ಪತ್ತೆಗೆ ಮನವಿ

ಬಳ್ಳಾರಿ,ಜೂ.25(ಕರ್ನಾಟಕ ವಾರ್ತೆ): ನಗರದ ಎಪಿಎಂಸಿ ಆವರಣದಲ್ಲಿರುವ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಉಚಿತ ಆಸ್ಪತ್ರೆ ಮುಂದಿನ ಶೆಡ್‌ನಲ್ಲಿ ಸುಮಾರು 35-45 ವರ್ಷದ ಅನಾಮಧೇಯ ವ್ಯಕ್ತಿಯು ಜೂ.24 ರಂದು ಮೃತಪಟ್ಟಿದ್ದು, ಮೃತನ ವಾರಸುದಾರರು ತಿಳಿದಿರುವುದಿಲ್ಲ. ಈ ಕುರಿತು ಎಪಿಎಂಸಿ ಯಾರ್ಡ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತನ ವಾರಸುದಾರರ ಪತ್ತೆಗೆ ಸಹಕರಿಸಬೇಕು ಎಂದು ಪೊಲೀಸ್ ಠಾಣಾಧಿಕಾರಿ ಮನವಿ ಮಾಡಿದ್ದಾರೆ. ಚಹರೆ ಗುರುತು: ಎತ್ತರ 5.7 ಅಡಿ, ಕೋಲು ಮುಖ, ಗೋಧಿ ಮೈಬಣ್ಣ, ತಲೆಯಲ್ಲಿ 03 ಇಂಚು ಕಪ್ಪು ಕೂದಲು ಮತ್ತು 02 ಇಂಚು ಉದ್ದ ಕಪ್ಪು ಮೀಸೆ ಮುಖದಲ್ಲಿ 01 ಇಂಚು ಕಪ್ಪು ಗಡ್ಡ ಹೊಂದಿರುತ್ತಾನೆ. ಮೃತನ ಬಲಗೈ ಮತ್ತು ಎಡ ಎದೆಯ ಮೇಲೆ ಇಂಗ್ಲೀಷ್‌ನಲ್ಲಿ ಪೂಜ ಎಂದು ಕಪ್ಪು ಅಚ್ಚೆ ಗುರುತು ಇರುತ್ತದೆ. ಮೃತನು ಒಂದು ಮಾಸಿದ ಮತ್ತು ಕಪ್ಪು ಬಣ್ಣ ಮಿಶ್ರಿತ ಗೆರೆಗಳ್ಳುಳ್ಳ ಅರ್ಧ ತೋಳಿನ ಅಂಗಿ ಮತ್ತು ಕಪ್ಪು ನೀಲಿ ಗೆರೆಗಳ್ಳುಳ್ಳ ಲುಂಗಿ ಹಾಗೂ ನೇರಳೆ ಬಣ್ಣದ ಚಡ್ಡಿ ಧರಿಸಿರುತ್ತಾನೆ. ಈ ಮೇಲ್ಕಂಡ ಚಹರೆ ಗುರುತುಗಳುಳ್ಳ ಮೃತ ವ್ಯಕ್ತಿಯ ವಾರಸುದಾರರ ಬಗ್ಗೆ ಮಾಹಿತಿ ಸಿಕ್ಕಲ್ಲಿ ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ ದೂ.08392-258100, 258102 ಅಥವಾ ಎಪಿಎಂಸಿ ಯಾರ್ಡ ಪೊಲೀಸ್ ಠಾಣೆಯ ದೂ.08392-250033, 9480803096, ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -------------

ಮಂಗಳವಾರ, ಜೂನ್ 24, 2025

ನಿರ್ಗತಿಕ ಮಕ್ಕಳ ಆಧಾರ್ ದಾಖಲೆಗಾಗಿ ಜಿಲ್ಲಾ ಸಾಥಿ ಸಮಿತಿ ರಚನೆ | ನಿರ್ಗತಿಕ ಮಕ್ಕಳು ಕಂಡುಬAದಲ್ಲಿ ಮಾಹಿತಿ ನೀಡಿ: ನ್ಯಾ.ರಾಜೇಶ್ ಎನ್.ಹೊಸಮನೆ

ಬಳ್ಳಾರಿ,ಜೂ.24(ಕರ್ನಾಟಕ ವಾರ್ತೆ): ರಾಷ್ಟಿçÃಯ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಜಿಲ್ಲಾ ಮಟ್ಟದಲ್ಲಿ ನಿರ್ಗತಿಕ ಮಕ್ಕಳನ್ನು ಗುರುತಿಸಿ ಆಧಾರ್ ನೋಂದಣಿಯಲ್ಲಿ ಮಕ್ಕಳ ಹೆಸರನ್ನು ಸೇರಿಸಿ ಅವರಿಗೆ ಶಿಕ್ಷಣ, ವೈದ್ಯಕೀಯ ಮತ್ತು ಸರ್ಕಾರದಿಂದ ಬರುವ ಯೋಜನೆಗಳನ್ನು ದೊರಕಿಸಿಕೊಡುವ ಅಭಿಯಾನವನ್ನು ಕಾರ್ಯಗತಗೊಳಿಸಲು ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ “ಜಿಲ್ಲಾ ಸಾಥಿ ಸಮಿತಿ'' ಯನ್ನು ರಚಿಸಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ ಅವರು ತಿಳಿಸಿದ್ದಾರೆ. 18 ವರ್ಷದೊಳಗಿನ ನಿರ್ಗತಿಕ ಮಕ್ಕಳು ಅಂದರೆ ಸರ್ಕಾರಿ ಸಂಸ್ಥೆಗಳಲ್ಲಿ ಪಾಲನೆ ಪಡೆಯುತ್ತಿರುವ ಅಥವಾ ಆಶ್ರಯ ಮತ್ತು ರಕ್ಷಣೆ ಪಡೆಯುತ್ತಿರುವ ಮಕ್ಕಳು, ಬೀದಿಗಳಲ್ಲಿ, ಕೊಳಗೇರಿಗಳಲ್ಲಿ ಅಥವಾ ರೈಲ್ವೆ ನಿಲ್ದಾಣಗಳಲ್ಲಿ ವಾಸಿಸುತ್ತಿರುವ ಮಕ್ಕಳು, ಮಕ್ಕಳ ಆರೈಕೆ ಸ್ಥಳಗಳಲ್ಲಿ ವಾಸಿಸುವ ಮಕ್ಕಳು, ಅನಾಥರು, ಪರಿತ್ಯಕ್ತ ಮಕ್ಕಳು, ಏಕ ಪೋಷಕರ ಮಕ್ಕಳು, ಕಳ್ಳ ಸಾಗಾಣಿಕೆಯಲ್ಲಿ ಸಿಲುಕಿದ ಮಕ್ಕಳು, ಬಾಲ ಕಾರ್ಮಿಕ ಮಕ್ಕಳು, ಭಿಕ್ಷಾಟನೆ ಮಾಡುತ್ತಿರುವ ಮಕ್ಕಳು, ಒಂಟಿಯಾಗಿರುವ ಮಕ್ಕಳು, ಮಾದಕ ವ್ಯಸನ ಮಕ್ಕಳು, ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಮಕ್ಕಳು, ಹಿಂಸೆ ಮತ್ತು ಅತ್ಯಾಚಾರಕ್ಕೆ ಒಳಗಾದ ಮಕ್ಕಳು, ಜೀತ ಪದ್ಧತಿಯಿಂದ ರಕ್ಷಿಸಲ್ಪಟ್ಟಿರುವ ಮಕ್ಕಳು, ಅನೌಪಚಾರಿಕ ಆಶ್ರಯಗಳಲ್ಲಿ ಅಥವಾ ನೋಂದಾಯಿಸದ ಮಕ್ಕಳ ಆರೈಕೆ ಮನೆಗಳಲ್ಲಿ ವಾಸಿಸುವ ಮಕ್ಕಳನ್ನು ಗುರುತಿಸಿ ಅವರಿಗೆ ಆಧಾರ್ ದಾಖಲಾತಿಯನ್ನು ಮಾಡಿಸಿ, ಕಾನೂನಿನ ನೆರವು, ಆರೋಗ್ಯ ರಕ್ಷಣೆ, ಶಿಕ್ಷಣ ಹಾಗೂ ಸರ್ಕಾರದ ಸೌಲಭ್ಯಗಳನ್ನು ಒದಗಿಸಲಾಗುತ್ತದೆ ಮತ್ತು ಆ ಮಕ್ಕಳ ಪೋಷಕರನ್ನು ತಂದೆ-ತಾಯಿಗಳನ್ನು ಗುರುತಿಸಿ ಅವರನ್ನು ಕುಟುಂಬಕ್ಕೆ ಮರಳಿಸಲಾಗುತ್ತದೆ. ಇದು ಜಿಲ್ಲಾ ಸಾಥಿ ಸಮಿತಿಯ ಅಭಿಯಾನದ ಉದ್ದೇಶವಾಗಿದೆ ಎಂದು ಅವರು ತಿಳಿಸಿದ್ದಾರೆ. ಪಾಲನೆ ಮತ್ತು ಸಂರಕ್ಷಣೆ ಅಗತ್ಯವಿರುವ ಮಕ್ಕಳಿಗೆ ಆಧಾರ್ ನೋಂದಣಿ, ಸರಕಾರಿ ಯೋಜನೆಗಳ ಸೇರ್ಪಡೆ ಮತ್ತು ಟ್ರಾö್ಯಕಿಂಗ್‌ಗಾಗಿ ‘ಸಾಥಿ' ಅಭಿಯಾನದ ಸಮಿತಿಯನ್ನು ರಚಿಸಲಾಗಿದ್ದು, ಸಾಥಿ ಅಭಿಯಾನ ಸಮಿತಿಯ ಅಧ್ಯಕ್ಷರಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಸದಸ್ಯರಾಗಿ ಎರಡು ಜಿಲ್ಲೆಯ ತಾಲ್ಲೂಕುಗಳ ತಹಶೀಲ್ದಾರರು, ಜಿಲ್ಲಾ ಮಕ್ಕಳ ರಕ್ಷಾಣಾಧಿಕಾರಿಗಳು, ಡಿಡಿಪಿಐ, ಜಿಲ್ಲಾ ಆರೋಗ್ಯ ಅಧಿಕಾರಿಗಳು, ಪೋಲೀಸ್ ಅಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿಗಳು, ಅನಾಥಾಶ್ರಮ ಮತ್ತು ಮಕ್ಕಳ ಕಾಳಜಿ ಕೇಂದ್ರಗಳ ಅಧಿಕಾರಿಗಳು, ಪ್ಯಾನಲ್ ವಕೀಲರು ಮತ್ತು ಅರೆ-ಕಾಲಿಕ ಕಾನೂನು ಸ್ವಯಂ ಸೇವಕರು ಸಮಿತಿಯೊಂದಿಗೆ ಕಾಲೇಜು ವಿದ್ಯಾರ್ಥಿಗಳು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು, ಸರ್ಕಾರೇತರ ಸಂಘಟನೆ (ಎನ್‌ಜಿಓ) ಗಳು ಸಹ ಕೆಲಸ ನಿರ್ವಹಿಸುತ್ತಾರೆ. ಈ ಅಭಿಯಾನಕ್ಕೆ ಸಾರ್ವಜನಿಕರು ಸಹ ಕೈ ಜೋಡಿಸಿದಾಗ ಮಾತ್ರ ಯಶಸ್ವಿಯಾಗುತ್ತದೆ. ಹಾಗಾಗಿ ಸಾರ್ವಜನಿಕರು ಯಾವುದೇ ರೀತಿಯ ನಿರ್ಗತಿಕ ಮಕ್ಕಳನ್ನು ನೋಡಿದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ದೂ.08392-278077, ಮೊ.9141193929, ಮಕ್ಕಳ ಸಹಾಯವಾಣಿ ಸಂಖ್ಯೆ 1098 ಹಾಗೂ ಉಚಿತ ಕಾನೂನು ಸೇವೆ ಸಂಖ್ಯೆ 15100 ಗೆ ಕರೆ ಮಾಡಿ ಮಾಹಿತಿ ನೀಡಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ------------

ಅಂಚೆ ಇಲಾಖೆಯಲ್ಲಿ ಸುಧಾರಿತ ಹಾಗೂ ವೇಗದ ಸೇವೆಗೆ ಹೊಸ ತಂತ್ರಾAಶ ಜಾರಿ: ಪಿ.ಚಿದಾನಂದ

ಬಳ್ಳಾರಿ,ಜೂ.24(ಕರ್ನಾಟಕ ವಾರ್ತೆ): ಅಂಚೆ ಇಲಾಖೆಯಲ್ಲಿ ಅಡ್ವಾನ್ಸಡ್ ಪೋಸ್ಟಲ್ ಟೆಕ್ನಾಲಜಿ (ಎಟಿಪಿ 2.0) ತಂತ್ರಾAಶ ಅಂಚೆ ಇಲಾಖೆಯ ಎಲ್ಲ ಗ್ರಾಹಕರಿಗೆ ಸುಧಾರಿತ ಹಾಗೂ ತೃಪ್ತಿದಾಯಕವಾದ ಸೇವೆಗಳನ್ನು ನೀಡುವಲ್ಲಿ ಪ್ರಮುಖ ಪಾತ್ರವಹಿಸಲಿದೆ ಎಂದು ಅಂಚೆ ಅಧೀಕ್ಷಕ ಪಿ.ಚಿದಾನಂದ ಅವರು ಹೇಳಿದರು. ಮಂಗಳವಾರ ನಗರದ ಪ್ರಧಾನ ಅಂಚೆ ಕಚೇರಿಯಲ್ಲಿ ಬಳ್ಳಾರಿ ಅಂಚೆ ವಿಭಾಗದ ಬಳ್ಳಾರಿ ಪ್ರಧಾನ ಅಂಚೆ ಕಚೇರಿ ಹಾಗೂ ಅದರಡಿ ಬರುವ ಎಲ್ಲಾ ಉಪ ಅಂಚೆ ಕಚೇರಿಗಳು ಮತ್ತು ಶಾಖಾ ಅಂಚೆ ಕಚೇರಿಗಳಲ್ಲಿ ಎಪಿಟಿ 2.0 ತಂತ್ರಾAಶ ಅಳವಡಿಕೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಭಾರತೀಯ ಅಂಚೆ ಇಲಾಖೆಯು 170 ವರ್ಷಗಳ ಸುದೀರ್ಘ ಇತಿಹಾಸ ಹೊಂದಿದ್ದು, ಭಾರತೀಯ ಜನ ಸಮುದಾಯದ ನಾಡಿ ಮಿಡಿತವಾಗಿ ಕಾರ್ಯ ನಿರ್ವಹಿಸುತ್ತಿದೆ. ಆಧುನಿಕ ಯುಗದ ಸವಾಲುಗಳಿಗೆ ಒಡ್ಡಿಕೊಂಡು ತನ್ನ ಗ್ರಾಹಕರಿಗೆ ಯಾವಾಗಲೂ ಉತ್ತಮವಾದ ಸೇವೆಗಳನ್ನು ಒದಗಿಸುವಲ್ಲಿ ಇಲಾಖೆಯು ಸದಾ ಮುಂಚೂಣಿಯಲ್ಲಿದೆ. ಈ ನಿಟ್ಟಿನಲ್ಲಿ ಕರ್ನಾಟಕದ ಮೈಸೂರುನಲ್ಲಿರುವ ‘ಸೆಂಟರ್ ಫಾರ್ ಎಕ್ಸಲೆನ್ಸ್ ಇನ್ ಪೋನ್ಸಲ್ ಟೆಕ್ನಾಲಜಿ’ ಎನ್ನುವ ತನ್ನದೇ ತಾಂತ್ರಿಕ ವಿಭಾಗದ ನುರಿತ ಸಿಬ್ಬಂದಿ ವರ್ಗದವರೇ ರೂಪುಗೊಳಿಸಿದ ಹೊಸದಾದ ಅತ್ಯಂತ ಸುಧಾರಿತ ಮತ್ತು ಗ್ರಾಹಕ ಸ್ನೇಹಿ ತಂತ್ರಾAಶವನ್ನು ದೇಶದ ಎಲ್ಲಾ ಅಂಚೆ ಕಚೇರಿಗಳಲ್ಲಿ ಅಳವಡಿಸಿಕೊಳ್ಳಲು ಮುಂದಾಗಿದೆ ಎಂದು ತಿಳಿಸಿದರು. ಜೂ.23 ರಿಂದ ಬಳ್ಳಾರಿ ಅಂಚೆ ವಿಭಾಗದ ವ್ಯಾಪ್ತಿಗೆ ಬರುವ ಬಳ್ಳಾರಿ ಪ್ರಧಾನ ಅಂಚೆ ಕಚೇರಿ, ಬಳ್ಳಾರಿ ನಗರದಲ್ಲಿರುವ ಇತರೆ ಎಲ್ಲಾ ಅಂಚೆ ಕಚೇರಿಗಳು, ಸಿರುಗುಪ್ಪ, ಸಿರುಗುಪ್ಪ ಸದಾಶಿವನಗರ, ಹಚ್ಚೋಳ್ಳಿ, ತೆಕ್ಕಲಕೋಟೆ, ಎಮ್ಮಿಗನೂರು, ಕುರುಗೋಡು, ಸಿರಿಗೇರಿ, ಕರೂರು, ಕೋಳೂರು, ಮೋಕಾ, ಚೆಳ್ಳಗುರ್ಕಿ, ಕುಡುತಿನಿ, ಬಿ.ಟಿ.ಪಿ.ಎಸ್, ತೋರಣಗಲ್ಲು, ವಿದ್ಯಾನಗರ, ಶಂಕರಹಿಲ್ ಟೌನ್, ಸಂಡೂರು, ಸಂಡೂರು ಲಕ್ಷಿö್ಮಪುರ, ದೇವಗಿರಿ, ದೋಣಿಮಲೈ ಟೌನ್ ಶಿಪ್, ಯಶವಂತನಗರ, ಉಪ ಅಂಚೆ ಕಚೇರಿಗಳು ಹಾಗೂ ಸಂಬAಧಿತ ಶಾಖಾ ಅಂಚೆ ಕಚೇರಿಗಳಲ್ಲಿ ಅಡ್ವಾನ್ಸಡ್ ಪೋಸ್ಟಲ್ ಟೆಕ್ನಾಲಜಿ 2.0 ನಲ್ಲಿಯೇ ಎಲ್ಲಾ ತರಹದ ವಹಿವಾಟುಗಳು ಜರುಗುತ್ತವೆ ಎಂದು ತಿಳಿಸಿದರು. ಈ ಮೊದಲು ಬಳಸುತ್ತಿದ್ದ ತಂತ್ರಾAಶಗಳು ಅನ್ಯ ಟೆಕ್-ಕಂಪೆನಿಗಳಿAದ ಪಡೆದದ್ದರಿಂದ ಬಹಳ ತೊಂದರೆಗಳನ್ನು ಎದುರಿಸಬೇಕಾಗಿತ್ತು. ಹಾಗಾಗಿ ಅಂಚೆ ಇಲಾಖೆಯು ತನ್ನದೇ ನುರಿತ ತಂತ್ರಜ್ಞರಿAದ ಗ್ರಾಹಕರಿಗೂ ಹಾಗೂ ತಂತ್ರಾAಶವನ್ನು ಬಳಸುವ ಉದ್ಯೋಗಿಗಳಿಗೂ ಅನುಕೂಲವಾಗುವಂತೆ ಅಡ್ವಾನ್ಸಡ್ ಪೋಸ್ಟಲ್ ಟೆಕ್ನಾಲಜಿ 2.0 ಅನ್ನು ರೂಪಿಸಲಾಗಿದೆ ಎಂದರು. ಪೋಸ್ಟ್ ಮ್ಯಾನ್ ಕಾಗದ-ಪತ್ರಗಳನ್ನು ಬಟವಾಡೆ ಮಾಡುವ ಪ್ರಕ್ರಿಯೆಯನ್ನು ಸುಧಾರಿಸಲಾಗಿದ್ದು, ಗ್ರಾಹಕರ ಮನೆಯ ಬಾಗಿಲಿನಲ್ಲಿಯೇ ಕಾಗದ ಪತ್ರ ಬಟವಾಡೆಯಾದ ಬಗ್ಗೆ ಮಾಹಿತಿಯು ಪತ್ರ ಸ್ವೀಕರಿಸಿದವರ ಮೊಬೈಲ್ ಸಂಖ್ಯೆಗೂ ಹಾಗೂ ಪತ್ರವನ್ನು ಕಳುಹಿಸಿದವರ ಮೊಬೈಲ್ ಸಂಖ್ಯೆಗೂ ರವಾನೆಯಾಗಲಿದೆ. ಅಂಚೆ ಕಚೇರಿಯಲ್ಲಿ ಕಾಗದ ಪತ್ರಗಳನ್ನು ಬುಕ್ ಮಾಡಲು, ಮನೀ ಆರ್ಡರ್ ಕಳುಹಿಸಲು ಇನ್ನು ಮುಂದೆ ಯಾವುದೇ ನೆಟ್‌ವರ್ಕ್ ಸಮಸ್ಯೆಯನ್ನು ಎದುರಿಸುವ ಅಗತ್ಯವಿಲ್ಲ. ಹೊಸ ತಂತ್ರಾAಶವು ಯಾವುದೇ ಪಬ್ಲಿಕ್ ನೆಟ್‌ವರ್ಕ್ ನಲ್ಲಿ ಕಾರ್ಯ ನಿರ್ವಹಿಸುವ ಸಾಮರ್ಥ್ಯವನ್ನು ಹೊಂದಿದೆ. ಹಾಗಾಗಿ ಗ್ರಾಹಕರು ಇನ್ನೂ ಹೆಚ್ಚಿನ ವೇಗದಲ್ಲಿ ತಮ್ಮ ಸೇವೆಗಳನ್ನು ಅಂಚೆ ಕಚೇರಿಗಳಿಂದ ಪಡೆಯಬಹುದು ಎಂದು ತಿಳಿಸಿದರು. ಹೊಸ ತಂತ್ರಾAಶದಲ್ಲಿ ಅಂಚೆ ಇಲಾಖೆಯ ಗ್ರಾಹಕರು ತಮ್ಮ ಮನೆಯಿಂದಲೇ ಕಾಗದ ಪತ್ರಗಳನ್ನು ಬುಕ್ ಮಾಡಿಕೊಳ್ಳಬಹುದು ಹಾಗೂ ಅವುಗಳನ್ನು ತಮ್ಮ ಮನೆಯಿಂದಲೇ ಅಂಚೆ ಕಚೇರಿಗೆ ತೆಗೆದುಕೊಂಡು ಹೋಗುವಂತೆ ಪಿಕ್-ಅಪ್ ಸೇವೆಯನ್ನು ಸಹ ಬಳಸಿಕೊಳ್ಳಬಹುದು. ಇದು ಅತ್ಯಂತ ಆಕರ್ಷಣೀಯವಾದ ಹಾಗೂ ಗ್ರಾಹಕೋಪಯೋಗಿ ಸೇವೆಯಾಗಿದೆ ಎಂದರು. ಜೂ.24 ರಿಂದ ಬಳ್ಳಾರಿಯ ಪ್ರಧಾನ ಅಂಚೆ ಕಚೇರಿಯಲ್ಲಿ ‘ಸಂಜೆ ಅಂಚೆ’ ಎನ್ನುವ ಹೊಸ ಸೇವೆಯನ್ನು ಜಾರಿಗೊಳಿಸಲಾಗುತ್ತಿದೆ. ಗ್ರಾಹಕರು ಸಂಜೆ 04 ರಿಂದ 7.30 ರ ವರೆಗೆ ತಮ್ಮ ಸ್ಪೀಡ್ ಪೋಸ್ಟ್, ರೆಜಿಸ್ಟರ್ಡ್ ಕಾಗದ ಪತ್ರಗಳು, ಪಾರ್ಸಲ್ ಗಳನ್ನು ಕಳುಹಿಸಲು ಮತ್ತು ಅಂಚೆ ಚೀಟಿಗಳನ್ನು ಖರೀದಿಸಲು ಈ ಸೇವೆಯನ್ನು ಉಪಯೋಗಿಸಿಕೊಳ್ಳಬಹುದಾಗಿದೆ ಎಂದು ಅಂಚೆ ಅಧೀಕ್ಷಕ ಪಿ.ಚಿದಾನಂದ ಅವರು ತಿಳಿಸಿದರು. ಈ ಸಂದರ್ಭದಲ್ಲಿ ಬಳ್ಳಾರಿ ಪ್ರಧಾನ ಅಂಚೆ ಕಚೇರಿಯ ಅಂಚೆ ಪಾಲಕರಾದ ಭೀಮಸೇನ ಜೋಶಿ, ಸಹಾಯಕ ಅಂಚೆ ಪಾಲಕರಾದ ರಾಜಶೇಖರ, ವಿ.ತಿಂದಪ್ಪ ಮತ್ತು ನಾಗಭೂಷಣ, ಲೆಕ್ಕಪಾಲಕರಾದ ರಾಮಪ್ರಸಾದ, ತಾಂತ್ರಿಕ ಪರಿಣಿತರಾದ ಶರತ್ ಕುಮಾರ್, ಪ್ರತಾಪ್ ರೆಡ್ಡಿ, ಪ್ರತಾಪ್ ನಾಯಕ, ಪ್ರಧಾನ ಅಂಚೆ ಕಚೇರಿಯ ಎಲ್ಲಾ ಅಂಚೆ ಸಹಾಯಕರು, ಅಂಚೆ ಪೇದೆಗಳು, ಎಂಟಿಎಸ್ ಹಾಗೂ ಜಿಡಿಎಸ್ ಸಿಬ್ಬಂದಿ ವರ್ಗದವರು ಹಾಜರಿದ್ದರು. ------------

ಆಕಸ್ಮಿಕ ದಾಳಿ; 09 ಬಾಲ ಕಾರ್ಮಿಕರ ರಕ್ಷಣೆ

ಬಳ್ಳಾರಿ,ಜೂ.24(ಕರ್ನಾಟಕ ವಾರ್ತೆ): ನಗರದ ಅನಂತಪುರ ರಸ್ತೆ, ತಾಳೂರು ರಸ್ತೆ, ಸಿರುಗುಪ್ಪ ರಸ್ತೆಯ ವಿವಿಧ ಸ್ಥಳಗಳಲ್ಲಿರುವ ಗ್ಯಾರೇಜ್, ಮೆಕ್ಯಾನಿಕ್ ಶಾಪ್, ಬೇಕರಿ ಇತ್ಯಾದಿ ಉದ್ದಿಮೆಗಳ ಮೇಲೆ ಟಾಸ್ಕ್ ಪೋರ್ಸ್ ಸಮಿತಿ ಅಧಿಕಾರಿಗಳ ತಂಡವು ಮಂಗಳವಾರ ಆಕಸ್ಮಿಕ ಭೇಟಿ ನೀಡಿ ಪರಿವೀಕ್ಷಣೆ ನಡೆಸಿದಾಗ 09 ಬಾಲಕಾರ್ಮಿಕರು ಕೆಲಸ ಮಾಡುತ್ತಿರುವುದು ಕಂಡುಬAದಿದ್ದು, ಎಲ್ಲಾ ಮಕ್ಕಳನ್ನು ಮಕ್ಕಳ ಕಲ್ಯಾಣ ಸಮಿತಿಗೆ ಹಾಜರುಪಡಿಸಲಾಗಿದ್ದು, ಮಕ್ಕಳ ವಯಸ್ಸಿನ ದೃಢೀಕರಣ ದಾಖಲೆ ಹಾಗೂ ಮಾಲೀಕರ ದಾಖಲೆ ಪಡೆದು ಮಾಲೀಕರ ವಿರುದ್ಧ ಬಾಲ ಹಾಗೂ ಕಿಶೋರ ಕಾರ್ಮಿಕ ಕಾಯ್ದೆಯಡಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಯೋಜನಾಧಿಕಾರಿ ಮೌನೇಶ್ ತಿಳಿಸಿದ್ದಾರೆ. ದಾಳಿ ಸಂದರ್ಭದಲ್ಲಿ ಕಾರ್ಮಿಕ ನಿರೀಕ್ಷಕರಾದ ಪರಶುರಾಮ್, ರಮೇಶ್, ಶಿಕ್ಷಣ ಇಲಾಖೆಯ ಸಂಪನ್ಮೂಲ ವ್ಯಕ್ತಿಗಳಾದ ನರಸಪ್ಪ, ಮನ್ಸೂರ್ ಬಾಷಾ, ಪೋಲಿಸ್ ಇಲಾಖೆಯ ಗುರುಪ್ರಸಾದ್, ಶಂಕರಪ್ಪ ಮಕ್ಕಳ ಸಹಾಯವಾಣಿ ಸಿಬ್ಬಂದಿ ಕಾರ್ತಿಕ್, ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿ ನಿಲೋಫಿಯಾ, ರೀಚ್ ಸಂಸ್ಥೆಯ ಸಂಯೋಜಿಕಿಯಾದ ಲಕ್ಷಿö್ಮÃದೇವಿ, ಹನುಮಂತಪ್ಪ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು. ---------------

ಯುವ ಸಬಲೀಕರಣ, ಕ್ರೀಡಾ ಇಲಾಖೆ: ಅರ್ಜಿ ಆಹ್ವಾನ

ಬಳ್ಳಾರಿ,ಜೂ.24(ಕರ್ನಾಟಕ ವಾರ್ತೆ): ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ‘ನಮ್ಮೂರ ಶಾಲೆಗೆ ನಮ್ಮ ಯುವಜನರು’ ಯೋಜನೆಯಡಿ ಪ್ರಸ್ತಕ ಸಾಲಿಗೆ ತಾಲ್ಲೂಕು, ಜಿಲ್ಲೆ, ರಾಜ್ಯ ಮತ್ತು ರಾಷ್ಟç ಮಟ್ಟದ ಕ್ರೀಡಾಕೂಟಗಳಲ್ಲಿ ಉತ್ತಮ ಸಾಧನೆ ತೋರುವ ಕ್ರೀಡಾಪಟುಗಳನ್ನು ಹೊಂದಿರುವ ಸರ್ಕಾರಿ ಶಾಲೆಗೆ ರೂ.1 ಲಕ್ಷ ಪ್ರೋತ್ಸಾಹಧನ ನೀಡಲು ಉದ್ದೇಶಿಸಲಾಗಿದ್ದು, ಆಸಕ್ತಿಯುಳ್ಳ ಸರ್ಕಾರಿ ಶಾಲೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಅನುದಾನದಲ್ಲಿ ಆಯ್ಕೆಯಾದ ಶಾಲೆಯ ದೈಹಿಕ ಶಿಕ್ಷಕರಿಗೆ ರೂ.10 ಸಾವಿರ ಮತ್ತು ಉಳಿದ ರೂ.90 ಸಾವಿರ ಶಾಲೆಯ ಎಸ್‌ಡಿಎಂಸಿಗೆ ಅಗತ್ಯ ಕ್ರೀಡಾ ಸಾಮಾಗ್ರಿಗಳನ್ನು ಖರೀದಿಸಲು ನೀಡಲಾಗುವುದು. ಹಾಗಾಗಿ ಜಿಲ್ಲೆಯಲ್ಲಿ ಪ್ರೋತ್ಸಾಹಧನ ಪಡೆಯಬಯಸುವ ಸರ್ಕಾರಿ ಶಾಲೆಗಳು 2024-25 ನೇ ಸಾಲಿಗೆ ಕ್ರೀಡೆಯಲ್ಲಿ ಉತ್ತಮ ಸಾಧನೆ ತೋರಿರಬೇಕು ಮತ್ತು ಹೆಚ್ಚಿನ ಸಂಖ್ಯೆಯಲ್ಲಿ ಕ್ರೀಡಾಪಟುಗಳನ್ನು ಹೊಂದಿರಬೇಕು. ಅರ್ಜಿ ಸಲ್ಲಿಸಲು ಜೂ.27 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ನಗರದ ನಲ್ಲಚೇರುವು ಪ್ರದೇಶದ ಜಿಲ್ಲಾ ಕ್ರೀಡಾಂಗಣದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಗೆ ಸಂಪರ್ಕಿಸಬಹುದು ಎಂದು ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -------------

ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಸೂಚನೆ | ಕುಡಿಯುವ ನೀರು ಕಲುಷಿತಗೊಳ್ಳದಂತೆ ನಿಗಾವಹಿಸಿ

ಬಳ್ಳಾರಿ,ಜೂ.24(ಕರ್ನಾಟಕ ವಾರ್ತೆ): ನಗರ ಮತ್ತು ಗ್ರಾಮಗಳ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಮೂಲಗಳು ಕಲುಷಿತಗೊಳ್ಳದಂತೆ ಮಹಾನಗರ ಪಾಲಿಕೆ ಅಧಿಕಾರಿಗಳು, ಆಯಾ ತಾಲ್ಲೂಕು ತಹಶೀಲ್ದಾರರು ನಿಗಾವಹಿಸಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಸೂಚಿಸಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್ ವಿಡೀಯೋ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಮಿತಿ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು. ಮುಂಗಾರು ಮಳೆಗಾಲ ಆರಂಭವಾಗಿರುವುದರಿAದ ಕೊಳಚೆ ನೀರು ಕುಡಿಯುವ ನೀರಿನೊಂದಿಗೆ ಬೆರೆಯದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ನಿಗಾ ವಹಿಸಬೇಕು. ಆಯಾ ತಾಲ್ಲೂಕು ಆರೋಗ್ಯಾಧಿಕಾರಿಗಳ ಜೊತೆ ನಿರಂತರ ಸಂಪರ್ಕದಲ್ಲಿರಬೇಕು. ಪ್ರತಿ 15 ದಿನಗಳಿಗೊಮ್ಮೆ ಸಭೆ ನಡೆಸಿ, ಸಮಸ್ಯೆಗಳಿದ್ದಲ್ಲಿ ಪರಿಹರಿಸಿಕೊಳ್ಳಬೇಕು ಎಂದು ತಿಳಿಸಿದರು. ಈ ಭಾಗದ ತುಂಗಭದ್ರಾ ಜಲಾಶಯವು ಪ್ರಸ್ತುತದಲ್ಲಿ 48.270 ಟಿಎಂಸಿ ನೀರಿನ ಸಂಗ್ರಹಣಾ ಮಟ್ಟ ತಲುಪಿದೆ. ಮಲೆನಾಡು ವ್ಯಾಪ್ತಿಯಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ ಮುಂಬರುವ ದಿನಗಳಲ್ಲಿ ಜಲಾಶಯದಿಂದ ನದಿಗೆ ನೀರು ಹರಿಸುವ ಸಾಧ್ಯತೆ ಇರಲಿದೆ. ಹಾಗಾಗಿ ಕಂಪ್ಲಿ, ಸಿರುಗುಪ್ಪ ಭಾಗದ ನದಿಪಾತ್ರದ ಗ್ರಾಮಗಳಿಗೆ ಎಚ್ಚರಿಕೆ ನೀಡಬೇಕು ಎಂದು ಆಯಾ ತಾಲ್ಲೂಕು ತಹಶೀಲ್ದಾರರಿಗೆ ನಿರ್ದೇಶನ ನೀಡಿದರು. ಕಾಳಜಿ ಕೇಂದ್ರಗಳನ್ನು ಸಿದ್ಧತೆಯಲ್ಲಿಟ್ಟುಕೊಳ್ಳಲು ಅಗತ್ಯ ವ್ಯವಸ್ಥೆ ಮಾಡಿಕೊಳ್ಳಬೇಕು. ಒಟ್ಟಾರೆಯಾಗಿ ಅಧಿಕಾರಿಗಳು ಯಾವುದೇ ತುರ್ತು ಸಂದರ್ಭ ನಿರ್ವಹಣೆಗೆ ಸಿದ್ಧರಿರಬೇಕು ಎಂದು ತಿಳಿಸಿದರು. ಮಳೆಯಿಂದಾಗಿ ಸಾರ್ವಜನಿಕ ಆಸ್ತಿ ಹಾನಿ, ಮಾನವ, ಜಾನುವಾರು ಜೀವಹಾನಿ, ಬೆಳೆ ಹಾನಿ, ಮನೆಗಳ ಹಾನಿ ಬಗ್ಗೆ ಗ್ರಾಮಲೆಕ್ಕಿಗರು, ರಾಜಸ್ವ ನಿರೀಕ್ಷಕರಿಂದ ವರದಿ ಪಡೆದು, ತಾಲ್ಲೂಕುವಾರು ಕ್ರೋಢೀಕರಿಸಿ ವರದಿ ಸಲ್ಲಿಸಬೇಕು ಎಂದು ತಹಶೀಲ್ದಾರರಿಗೆ ಸೂಚಿಸಿದರು. ಸಾಂಕ್ರಾಮಿಕ ರೋಗಗಳು ಹರಡಲು ಅವಕಾಶ ನೀಡದಂತೆ ಚರಂಡಿಗಳ ಸ್ವಚ್ಛತೆಗೆ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ವಹಿಸಬೇಕು. ಜಿಲ್ಲೆಯಲ್ಲಿ ಈಗಾಗಲೇ ಮುಂಗಾರು ಹಂಗಾಮಿನಲ್ಲಿ ಶೇ.17 ರಷ್ಟು ಬಿತ್ತನೆಯಾಗಿದ್ದು, ಅಗತ್ಯ ಬಿತ್ತನೆ ಬೀಜ, ರಸಗೊಬ್ಬರ ದಾಸ್ತಾನು ಇಟ್ಟುಕೊಳ್ಳಬೇಕು ಎಂದು ಕೃಷಿ ಅಧಿಕಾರಿಗಳಿಗೆ ತಿಳಿಸಿದರು. ನಗರ ಮತ್ತು ಗ್ರಾಮಗಳಲ್ಲಿ ಮಳೆ ನೀರು ಸರಾಗವಾಗಿ ಹರಿಯಲು ರಾಜ ಕಾಲುವೆ, ಚರಂಡಿ, ಸೇತುವೆ ಹೂಳು ತೆಗೆದು ಸ್ವಚ್ಚಗೊಳಿಸುವುದರ ಸಂಬAಧ ಕ್ರಮವಹಿಸಬೇಕು ಎಂದು ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದರು. ನಗರ ವ್ಯಾಪ್ತಿಯಲ್ಲಿ ಮಳೆಯಿಂದ ಹೆಚ್ಚು ನೀರು ನಿಲ್ಲುವ ಸ್ಥಳಗಳಲ್ಲಿ ನಿರೇತ್ತಲು 3 ಡಿಸೇಲ್ ಮತ್ತು 3 ಎಲೆಕ್ಟಿçಕಲ್ ಮಷಿನ್‌ಗಳನ್ನು ಸಿದ್ಧವಾಗಿಟ್ಟುಕೊಳ್ಳಲಾಗಿದೆ. ನಗರ ವ್ಯಾಪ್ತಿಯ 28 ಕಿ.ಮೀ ವ್ಯಾಪ್ತಿಯ ರಾಜ ಕಾಲುವೆಯಲ್ಲಿ ಈಗಾಗಲೇ 24 ಕಿ.ಮೀ ಸ್ವಚ್ಛಗೊಳಿಸಲಾಗಿದೆ ಎಂದು ಮಹಾನಗರ ಪಾಲಿಕೆಯ ಅಧಿಕಾರಿಗಳು ಸಭೆಗೆ ತಿಳಿಸಿದರು. ಮಳೆಗಾಲದಲ್ಲಿ ವಿದ್ಯುತ್ ಸರಬರಾಜು ಮೇಲೆ ಉಂಟಾಗಬಹುದಾದ ವ್ಯತ್ಯಯ ಅಂಶಗಳನ್ನು ಗಮನದಲ್ಲಿರಿಸಿ ವಿದ್ಯುತ್ ಮೂಲ ಸೌಕರ್ಯಗಳನ್ನು ಬಲಪಡಿಸುವುದು, ಯಾವುದೇ ವಿದ್ಯುತ್ ಕಡಿತ, ತುರ್ತುಸ್ಥಿತಿಗೆ ಹಾಜರಾಗಲು ಮತ್ತು ವಿದ್ಯುತ್ ಸರಬರಾಜನ್ನು ತ್ವರಿತವಾಗಿ ಪುನಃ ಸ್ಥಾಪಿಸಲು ರಚಿಸುವುದು ಮತ್ತು ವಿದ್ಯುತ್ ತಂತಿ ಹಾದು ಹೋಗುವ ಮಾರ್ಗಗಳಲ್ಲಿ ಮಳೆ ಗಾಳಿಗೆ ಬೀಳುವಂತಹ ಮರಗಳನ್ನು ಕೊಂಬೆಗಳನ್ನು ಕತ್ತರಿಸಬೇಕು. ಜೆಸ್ಕಾಂ ಸಹಾಯವಾಣಿ ಸಂಖ್ಯೆ 1912 ಬಗ್ಗೆ ಸಾರ್ವಜನಿಕರಿಗೆ ಹೆಚ್ಚಿನ ಮಾಹಿತಿ ನೀಡಬೇಕು ಎಂದು ಜೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದರು. ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯಲ್ಲಿ ಲಭ್ಯವಿರುವ ಎಲ್ಲಾ ರಕ್ಷಣಾ ಸಲಕರಣೆಗಳನ್ನು ಸುಸ್ಥಿತಿಯಲ್ಲಿರುವಂತೆ ಕ್ರಮ ವಹಿಸಬೇಕೆಂದು ಅಗ್ನಿ ಶಾಮಕ ಮತ್ತು ಗೃಹ ರಕ್ಷಕದಳ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು. ತುರ್ತು ಸಂದರ್ಭಗಳಲ್ಲಿ ಇತರೆ ಎಲ್ಲಾ ಇಲಾಖೆಗಳನ್ನು ಒಳಗೊಂಡAತೆ ರಕ್ಷಣಾ ಕಾರ್ಯಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳು ಸನ್ನದ್ಧರಾಗಬೇಕೆಂದು ಜಿಲ್ಲಾಧಿಕಾರಿಗಳು ತಿಳಿಸಿದರು. *ಮರುಪರಿಶೀಲನೆ ನಡೆಸಿ:* ಜಿಲ್ಲೆಯಲ್ಲಿ ಕನಿಷ್ಠ ಬೆಂಬಲ ಯೋಜನೆಯಡಿ ಖರೀದಿಸಲಾಗುತ್ತಿರುವ ಜೋಳ ಪ್ರಕ್ರಿಯೆಯಲ್ಲಿ ಅವ್ಯವಹಾರ ನಡೆಯುತ್ತಿರುವುದಾಗಿ ದೂರುಗಳು ಕೇಳಿ ಬರುತ್ತಿದೆ. ರೈತರ ಎಫ್‌ಐಡಿ ಹೆಸರಿನಲ್ಲಿ ವ್ಯಾಪಾರಿಗಳು ಜೋಳ ಮಾರಾಟ ಮಾಡುತ್ತಿದ್ದಾರೆ. ಮಾರುಕಟ್ಟೆ ಬೆಲೆಗಿಂತ ಕನಿಷ್ಠ ಬೆಂಬಲ ಯೋಜನೆಯಡಿಯ ಬೆಲೆಯು ಅಧಿಕವಾಗಿರುವುದರಿಂದ ಹೆಚ್ಚಾಗಿ ಮಾರಾಟವಾಗುತ್ತಿರುವುದಾಗಿ ತಿಳಿದುಬಂದಿದೆ. ಹೀಗಾಗಿ ಎಲ್ಲಾ ತಹಶೀಲ್ದಾರರು, ಜೋಳ ಮಾರಾಟಕ್ಕೆ ನೋಂದಣಿ ಮಾಡಿಕೊಂಡ ಎಲ್ಲಾ ರೈತರ ಎಫ್‌ಐಡಿಗಳನ್ನು ಮರು ಪರಿಶೀಲಿಸಬೇಕು ಎಂದರು. ಬಳ್ಳಾರಿ, ಕುರುಗೋಡು ಮತ್ತು ಕಂಪ್ಲಿ ಭಾಗದಲ್ಲಿ ಹೆಚ್ಚಾಗಿ ಈ ಸಮಸ್ಯೆ ಕಂಡುಬರುತ್ತಿದ್ದು, ವ್ಯಾಪಾರಿಗಳ ಹಾವಳಿ ಹೆಚ್ಚಾಗಿದ್ದು, ಈ ಬಾರಿ ಪಿಆರ್ ಗಳ ನೇಮಕ ಮಾಡುವಲ್ಲಿ ಎಚ್ಚರ ವಹಿಸಬೇಕು ಎಂದು ನಿರ್ದೇಶನ ನೀಡಿದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್, ಕೃಷಿ ಜಂಟಿ ನಿರ್ದೇಶಕ ಸೋಮಸುಂದರ್ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ತಹಶೀಲ್ದಾರರು ಉಪಸ್ಥಿತರಿದ್ದರು. -------------

ಬಳ್ಳಾರಿ: ‘ರಕ್ತದಾನ ಶಿಬಿರ’ದಲ್ಲಿ ರಕ್ತದಾನ ಮಾಡಿದ ಡಿಸಿ, ಎಸ್ಪಿ | ಜೀವ ಉಳಿಸಲು ರಕ್ತ ಅವಶ್ಯಕ: ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ

ಬಳ್ಳಾರಿ,ಜೂ.24(ಕರ್ನಾಟಕ ವಾರ್ತೆ): ಅಪಘಾತ, ತುರ್ತು ಶಸ್ತçಚಿಕಿತ್ಸೆಗಳ ಸಂದರ್ಭದಲ್ಲಿ ಜೀವ ಉಳಿಸಲು ರಕ್ತ ಅವಶ್ಯಕವಾಗಿದ್ದು, ಆರೋಗ್ಯವಂತರು ತಪ್ಪದೇ ರಕ್ತದಾನ ಮಾಡಿ ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಸಹಯೋಗ ಮತ್ತು ಮಿನೇರಾ ಸ್ಟೀಲ್ ಇವರ ಸಹಕಾರದಲ್ಲಿ ನಗರದ ಅನಂತಪುರ ರಸ್ತೆಯ ನೂತನ ಜಿಲ್ಲಾಡಳಿತ ಭವನದ ಆವರಣದಲ್ಲಿ ಮಂಗಳವಾರ ಆಯೋಜಿಸಿದ್ದ ‘ಬೃಹತ್ ರಕ್ತದಾನ ಶಿಬಿರ’ಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ರಕ್ತದಾನ ಮಾಡುವುದರಿಂದ ಹಲವಾರು ರೀತಿಯ ಪ್ರಯೋಜನಗಳಿದ್ದು, ಅದರಲ್ಲಿ ಹೊಸ ರಕ್ತದ ಉತ್ಪತ್ತಿ ಆಗುವುದರ ಜೊತೆಗೆ ರಕ್ತ ಚಲನೆಯ ಕಾರ್ಯತತ್ಪರತೆ ಮತ್ತು ಜ್ಞಾಪಕ ಶಕ್ತಿ ವೃದ್ಧಿಯಾಗುತ್ತದೆ ಎಂದರು. ಈ ಹಿಂದೆ ಜೆಎಸ್‌ಡಬ್ಲೂö್ಯನಲ್ಲಿ 5000 ಯುನಿಟ್ ರಕ್ತ ಶೇಖರಿಸುವ ಮೂಲಕ ಕಲ್ಯಾಣ ಕರ್ನಾಟಕ ಭಾಗದಲ್ಲಿ ದೊಡ್ಡ ಮಟ್ಟದಲ್ಲಿ ದಾಖಲೆಯಾಗಿದೆ. ಮುಂಬರುವ ದಿನಗಳಲ್ಲಿಯೂ ರಕ್ತದಾನ ಶಿಬಿರಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಹೇಳಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ ವಿ.ಜೆ ಅವರು ಮಾತನಾಡಿ, ರಕ್ತದಾನವು ಒಂದು ಮಹಾದಾನ. ರಕ್ತದಾನ ಶಿಬಿರಗಳಲ್ಲಿ ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಬೇಕು. ಆರೋಗ್ಯವಂತ ಪ್ರತಿಯೊಬ್ಬ ವ್ಯಕ್ತಿ ರಕ್ತದಾನ ಮಾಡುವುದರಿಂದ ಮತ್ತೋಬ್ಬರ ಆರೋಗ್ಯವನ್ನೂ ಸಹ ಉಳಿಸಬೇಕು ಎಂದು ತಿಳಿಸಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಅವರು ಮಾತನಾಡಿ, ಜಿಲ್ಲೆಯಲ್ಲಿ 2024-25 ರ ಸಾಲಿನಲ್ಲಿ 18,000 ಯುನಿಟ್ ಶೇಖರಿಸುವ ಮೂಲಕ ಮಾದರಿ ಜಿಲ್ಲೆಯಾಗಿದೆ. ಬೇರೆ ಜಿಲ್ಲೆಗಳಿಗೂ ಸಹ ರಕ್ತ ರವಾನಿಸಲಾಗುತ್ತಿದೆ. ಈ ಶಿಬಿರದಲ್ಲಿ 1500 ಯುನಿಟ್ ರಕ್ತ ಸಂಗ್ರಹಣೆ ಗುರಿ ಹೊಂದಲಾಗಿದೆ. ರಕ್ತಹೀನತೆಯಿAದ ಬಳಲುವ ಗರ್ಭಿಣಿ ಸ್ತಿçÃಯರಿಗೆ, ಶಸ್ತçಚಿಕಿತ್ಸಾ ಹೆರಿಗೆ ವೇಳೆ ಹಾಗೂ ಕ್ಯಾನ್ಸರ್ ರೋಗಿಗಳಿಗೆ ಜೀವ ಉಳಿಸಲು ರಕ್ತ ಸಹಕಾರಿ ಆಗುತ್ತದೆ. ಮುಂಬರುವ ದಿನಗಳಲ್ಲಿ ಜಿಲ್ಲೆಯಲ್ಲಿ ರಕ್ತದ ಕೊರತೆಯಾಗದಂತೆ ಕ್ರಮ ವಹಿಸಲಾಗುವುದು. ಜೀವ ಉಳಿಸುವ ಪುಣ್ಯದ ಕಾರ್ಯಕ್ಕೆ ಪ್ರತಿಯೊಬ್ಬರೂ ಕೈ ಜೋಡಿಸಬೇಕು ಎಂದರು. ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭರಾಣಿ ವಿ.ಜೆ ಅವರು ರಕ್ತದಾನ ಮಾಡುವ ಮೂಲಕ ಇತರರಿಗೆ ಮಾದರಿಯಾದರು. ಬಳಿಕ ಪ್ರಮಾಣ ಪತ್ರ ನೀಡಲಾಯಿತು. ಈ ವೇಳೆ ಜಿಲ್ಲೆಯಲ್ಲಿ ಅತಿ ಹೆಚ್ಚು ರಕ್ತದಾನ ಮಾಡಿದ ಆಶಾ ಕಾರ್ಯಕರ್ತೆ ಪರಿಮಳ, ವಂಶಿ ಕಲ್ಯಾಣಿ ರೆಡ್ಡಿ, ಮಂಜುನಾಥ, ಲೋಕೇಶ್ ಅವರಿಗೆ ಸನ್ಮಾನ ಮಾಡಲಾಯಿತು. ರಕ್ತದಾನ ಮಾಡಿದ ವ್ಯಕ್ತಿಗಳಿಗೆ ಪ್ರಮಾಣ ಪತ್ರ ಜೊತೆಗೆ ಹಣ್ಣು, ಜ್ಯೂಸ್ ನೀಡಲಾಯಿತು. ಈ ಸಂದರ್ಭದಲ್ಲಿ ಬಿಎಂಸಿಆರ್‌ಸಿ ನಿರ್ದೇಶಕ ಟಿ.ಗಂಗಾಧರ ಗೌಡ, ಜಿಲ್ಲಾ ಶಸ್ತçಚಿಕಿತ್ಸಕ ಎನ್.ಬಸರೆಡ್ಡಿ, ಮಿನೇರ ಸ್ಟೀಲ್ಸ್ ಪ್ರೆöÊವೇಟ್ ಲಿಮಿಟೆಡ್‌ನ ನಿರ್ದೇಶಕ ಟಿ.ಹನುಮಂತ ರೆಡ್ಡಿ, ಉಪಾಧ್ಯಕ್ಷ ಗಿರೀಶ್ ಕುಮಾರ್, ಇಂಡಸ್ಟಿçÃಸ್‌ನ ಹಿರಿಯ ಸಹಾಯಕ ನಿರ್ದೇಶಕ ವರುಣ್ ಕುಮಾರ್, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಆಸೀಫ್, ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಹಾಗೂ ಏಡ್ಸ್ ನಿಯಂತ್ರಣಾಧಿಕಾರಿ ಡಾ.ಇಂದ್ರಾಣಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ದಾಸಪ್ಪನವರ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ, ತಾರಾನಾಥ ವೈದ್ಯಕೀಯ ವಿದ್ಯಾಲಯದ ಪ್ರಶಿಕ್ಷಣಾರ್ಥಿಗಳು, ಸಾರ್ವಜನಿಕರು, ಇನ್ನೀತರರು ಉಪಸ್ಥಿತರಿದ್ದರು. -------------------