ಶನಿವಾರ, ಜೂನ್ 21, 2025

ಬಳ್ಳಾರಿಯಲ್ಲಿ 11ನೇ ಅಂತರಾಷ್ಟಿçÃಯ ಯೋಗ ದಿನಾಚರಣೆ | ಯೋಗದಿಂದ ದೈಹಿಕ, ಮಾನಸಿಕ ಆರೋಗ್ಯ ಸುಧಾರಣೆ

ಬಳ್ಳಾರಿ,ಜೂ.21(ಕರ್ನಾಟಕ ವಾರ್ತೆ): ಕೇಂದ್ರ ಆಯುಷ್ ಮಂತ್ರಾಲಯ, ರಾಷ್ಟಿçÃಯ ಆಯುಷ್ ಅಭಿಯಾನ, ಆಯುಷ್ ಇಲಾಖೆ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಇಲಾಖೆ ಮತ್ತು ಬಳ್ಳಾರಿಯ ಸಮಸ್ತ ಯೋಗ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ “ಒಂದು ಭೂಮಿ, ಒಂದು ಆರೋಗ್ಯಕ್ಕಾಗಿ ಯೋಗ” ಎಂಬ ಘೋಷವಾಕ್ಯದೊಂದಿಗೆ ನಗರದ ಕಪ್ಪಗಲ್ ರಸ್ತೆಯ ಶೆಟ್ಟರ ಗುರುಶಾಂತಪ್ಪ ಪದವಿಪೂರ್ವ ಕಾಲೇಜು (ಲಾ ಕಾಲೇಜು ಮೈದಾನ) ಆವರಣದಲ್ಲಿ 11ನೇ ಅಂತರಾಷ್ಟಿçÃಯ ಯೋಗ ದಿನಾಚರಣೆ ಕಾರ್ಯಕ್ರಮಕ್ಕೆ ಗಣ್ಯರಿಂದ ಸಸಿಗೆ ನೀರೆರೆಯುವ ಮೂಲಕ ಮತ್ತು ಕೆಲವು ಯೋಗಾಸನಗಳ ಅಭ್ಯಾಸ ಮಾಡುವ ಮೂಲಕ ಚಾಲನೆ ನೀಡಲಾಯಿತು. ಡಾ.ಬಾಬು ಜಗಜೀವನರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತ ಅಧ್ಯಕ್ಷ ಮುಂಡರಗಿ ನಾಗರಾಜ, ಮಹಾನಗರ ಪಾಲಿಕೆಯ ಮೇಯರ್ ಮುಲ್ಲಂಗಿ ನಂದೀಶ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪಂಚಾಯತ್ ಸಿಇಒ ಮಹಮ್ಮದ್ ಹ್ಯಾರಿಸ್ ಸುಮೈರ್, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ ವಿ.ಜೆ., ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಎನ್.ಝುಬೇರ್, ಎಸ್.ಜಿ ಕಾಲೇಜು ಸಂಸ್ಥೆಯ ಅಧ್ಯಕ್ಷ ಹಚ್ಚೊಳ್ಳಿ ಶರಣಬಸವನಗೌಡ, ಜಿಲ್ಲಾ ಆಯುಷ್ ಇಲಾಖೆಯ ಅಧಿಕಾರಿ ಡಾ.ಎಂ.ವಿರುಪಾಕ್ಷ, ವೈದ್ಯಾಧಿಕಾರಿ ಡಾ.ವಿಜಯೇಂದ್ರ ಆಚಾರ್ ಸೇರಿದಂತೆ ಜಿಲ್ಲೆಯ ವಿವಿಧ ಯೋಗ ಸಂಸ್ಥೆಗಳು, ಶಾಲಾ ಮಕ್ಕಳು ಮತ್ತು ಸಾರ್ವಜನಿಕರು ಯೋಗಾಭ್ಯಾಸ ಮಾಡಿದರು. ಅಂತಾರಾಷ್ಟಿçÃಯ ಯೋಗ ದಿನವನ್ನು ವಿಶ್ವದಾದ್ಯಂತ ಜೂನ್ 21 ರಂದು ಆಚರಿಸಲಾಗುತ್ತದೆ. ಯೋಗವು ಭಾರತೀಯ ಸಂಸ್ಕೃತಿಯಲ್ಲಿ ಒಂದು ಪುರಾತನ ಅಭ್ಯಾಸವಾಗಿದೆ. ಇದು ದೈಹಿಕ, ಮಾನಸಿಕ ಮತ್ತು ಆಧ್ಯಾತ್ಮಿಕ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಪ್ರತಿದಿನ ಯೋಗಾಭ್ಯಾಸ ಮಾಡುವುದು, ನಮ್ಮ ಆರೋಗ್ಯದ ದೃಷ್ಟಿಯಿಂದ ಬಹಳ ಒಳ್ಳೆಯದು. ಯೋಗವು ಹಲವಾರು ರೋಗಗಳನ್ನು ನಮ್ಮತ್ತ ಸುಳಿಯದಂತೆ ನೋಡಿಕೊಳ್ಳುತ್ತದೆ ಎಂಬುದನ್ನು ಅರಿಯಲಾಯಿತು. ಯೋಗಾಭ್ಯಾಸದಲ್ಲಿ ಪತಂಜಲಿ ಯೋಗ ಸಮಿತಿಯ ರಾಜ್ಯ ಸಮಿತಿ ಸದಸ್ಯರು ಮತ್ತು ಜಿಲ್ಲಾ ಸಂಯೋಜಕರಾದ ಇಸ್ವಿ ಪಂಪಾಪತಿ ಅವರು ಧ್ವನಿ ಸುರುಳಿಯ ಮೂಲಕ ವಿವಿಧ ಆಸನಗಳ ಮಹತ್ವ ತಿಳಿಸುತ್ತಾ, ಯೋಗಾಸಕ್ತರಿಗೆ ನಿಯಮಾನುಸಾರ ಯೋಗಾಸನಗಳನ್ನು 45 ನಿಮಿಷಗಳÀ ಕಾಲ ಯೋಗ ನಡೆಸಿಕೊಟ್ಟರು. ಇದೇ ವೇಳೆ ಕುರೆಕುಪ್ಪ ಎಸ್.ಆರ್.ಕೆ. ಯೋಗ ಸಂಸ್ಥೆಯ ಮಕ್ಕಳಿಂದ ವಿಶೇಷ ಯೋಗ ಪ್ರದರ್ಶನ ಪ್ರಸ್ತುತ ಪಡಿಸಿದರು ಹಾಗೂ 21 ಯೋಗ ಸಾಧಕರಿಗೆ ಸನ್ಮಾನಿಸಿ ಗೌರವಿಸಲಾಯಿತು. ಯೋಗಭ್ಯಾಸದಲ್ಲಿ ಭಾಗವಹಿಸಿದ ಎಲ್ಲಾ ಯೋಗಾಸಕ್ತರಿಗೆ ಕ್ಯೂಆರ್ ಕೋಡ್ ಮೂಲಕ ನೋಂದಾಯಿಸಿಕೊAಡು ಭಾಗವಹಿದ ಪ್ರಮಾಣ ಪತ್ರ ಪಡೆದುಕೊಳ್ಳಬಹುದಾಗಿತ್ತು. ಕಾರ್ಯಕ್ರಮದಲ್ಲಿ ವಿವಿಧ ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳು ಹಾಗೂ ಯೋಗಾಸಕ್ತರು ಸಾಮೂಹಿಕ ಯೋಗಾಭ್ಯಾಸದಲ್ಲಿ ಆಸಕ್ತಿಯಿಂದ ಭಾಗವಹಿಸಿದ್ದು ವಿಶೇಷವಾಗಿತ್ತು. ಯೋಗಾಭ್ಯಾಸದಲ್ಲಿ ಭಾಗವಹಿಸಿದ ಯೋಗಾಸಕ್ತರಿಗೆ ಟಿ-ಶರ್ಟ್, ಕ್ಯಾಪ್ ಮತ್ತು ಔಷಧ ಸಸಿಗಳನ್ನು ವಿತರಿಸಲಾಯಿತು. -------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ