ಶುಕ್ರವಾರ, ಜೂನ್ 6, 2025

ಪೂರ್ವಭಾವಿ ಸಭೆಯಲ್ಲಿ ಎಡಿಸಿ ಮಹಮ್ಮದ್ ಝುಬೇರ್ ನಿರ್ದೇಶನ | ಜೂ.12 ರಂದು ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ; ಅಗತ್ಯ ಸಿದ್ಧತೆ ಕೈಗೊಳ್ಳಿ

ಬಳ್ಳಾರಿ,ಜೂ.06(ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಜೂನ್ 12ರಂದು ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಆಯೋಜಿಸಲು ಅಗತ್ಯ ಸಿದ್ಧತೆ ಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್ ಅವರು ನಿರ್ದೇಶನ ನೀಡಿದರು. ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ವಿಶ್ವ ಬಾಲ ಕಾರ್ಮಿಕ ಪದ್ಧತಿಯ ವಿರೋಧಿ ದಿನಾಚರಣೆ ಕಾರ್ಯಕ್ರಮ ಆಯೋಜನೆ ಕುರಿತಂತೆ ಶುಕ್ರವಾರ ಏರ್ಪಡಿಸಿದ್ದ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ಅವರು ಮಾತನಾಡಿದರು. ಜೂ.12ರಂದು ಜಿಲ್ಲಾ ಕೇಂದ್ರ ಸೇರಿದಂತೆ ಎಲ್ಲಾ ತಾಲೂಕುಗಳಲ್ಲಿ ಸಹ ವಿಶ್ವ ಬಾಲ ಕಾರ್ಮಿಕ ಪದ್ಧತಿಯ ವಿರೋಧಿ ದಿನವನ್ನು ಆಚರಣೆ ಮಾಡಬೇಕು. ಈ ಬಗ್ಗೆ ಆಯಾ ತಹಸೀಲ್ದಾರರು ಆಯಾ ತಾಲೂಕುಗಳಲ್ಲಿ ಸಿದ್ಧತೆ ಕೈಗೊಳ್ಳುವಂತೆ ಸೂಚಿಸಬೇಕು ಎಂದರು. ಜಿಲ್ಲೆಯ ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ ಸೇರಿದಂತೆ ಎಲ್ಲಾ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿನ ಕಸ ವಿಲೆವಾರಿ ವಾಹನಗಳಲ್ಲಿ ಉಚಿತವಾಗಿ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ವಿರೋಧಿ ಪದ್ಧತಿ ಕುರಿತು ಜಿಂಗಲ್ಸ್ ಪ್ರಸಾರಕ್ಕೆ ಕ್ರಮ ವಹಿಸಬೇಕು ಎಂದು ಸೂಚಿಸಿದರು. ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯಂದು ಪ್ರತಿಜ್ಞಾ ವಿಧಿ ಸ್ವೀಕರಿಸಲು ಎಲ್ಲ ಇಲಾಖೆಗಳಿಗೆ ಸುತ್ತೋಲೆ ಹೊರಡಿಸಿ ಕ್ರಮವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿಗಳು ಸಂಬAಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಯೋಜನಾಧಿಕಾರಿ ಎ.ಮೌನೇಶ್ ಅವರು ಮಾತನಾಡಿ, ಜಿಲ್ಲಾ ಕೇಂದ್ರದಲ್ಲಿ ಜೂ.12ರಂದು ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯ ಕಾರ್ಯಕ್ರಮವನ್ನು ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮAದಿರದಲ್ಲಿ ಆಯೋಜಿಸಲಾಗುವುದು ಎಂದು ಸಭೆಗೆ ತಿಳಿಸಿದರು. ಅಂದು ಜಾಗೃತಿ ಜಾಥಾವೂ ನಡೆಯಲಿದೆ. ಈ ವೇಳೆ ಆಟೋ ಮೈಕಿಂಗ್ ಮೂಲಕ ಘೋಷಣೆಗಳೊಂದಿಗೆ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಬಾಲಕಾರ್ಮಿಕ ಅನಿಷ್ಠ ಪದ್ಧತಿಯನ್ನು ಹೋಗಲಾಡಿಸಲು ಜಾಗೃತಿ ಮೂಡಿಸಲಾಗುವುದು. ಕಾರ್ಯಕ್ರಮಕ್ಕೆ ಆಗಮಿಸಿದ ಮಕ್ಕಳಿಗೆ ಲಘು-ಉಪಹಾರ ಮತ್ತು ಹಾಲು ವಿತರಿಸುವ ಸಂಬAಧ ಕೆಎಂಎಫ್‌ಗೆ ಪತ್ರ ಬರೆಯಲಾಗುವುದು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕತೆಯಿಂದ ಬಿಡುಗಡೆಗೊಂಡು ಶಾಲಾ ಮುಖ್ಯವಾಹಿನಿಗೆ ಸೇರಿಸಿರುವ ಮಕ್ಕಳು ಎಸ್‌ಎಸ್‌ಎಲ್‌ಸಿ, ಪಿಯುಸಿ, ಪದವಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಗೌರವಿಸಲು ಸಭೆಯಲ್ಲಿ ನಿರ್ಣಯಿಸಲಾಯಿತು. ಸಭೆಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ, ಜಿಲ್ಲಾ ಕಾರ್ಮಿಕ ಅಧಿಕಾರಿ ಸಿದ್ಧಪ್ಪ ಖೈನೂರ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಮಕ್ಕಳ ರಕ್ಷಣಾಧಿಕಾರಿ ಎಳೆನಾಗಪ್ಪ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು. -------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ