ಮಂಗಳವಾರ, ಜೂನ್ 10, 2025

ಜೂ.12 ರಂದು ‘ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ' ಕಾರ್ಯಕ್ರಮ

ಬಳ್ಳಾರಿ,ಜೂ.10(ಕರ್ನಾಟಕ ವಾರ್ತೆ): ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕಾರ್ಮಿಕ ಇಲಾಖೆ, ಪೊಲೀಸ್ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನೆ, ಜಿಲ್ಲಾ ವಕೀಲರ ಸಂಘ, ವಿವಿಧ ಇಲಾಖೆಗಳು ಮತ್ತು ಇತರೆ ಸಂಘ-ಸAಸ್ಥೆಗಳ ಸಂಯುಕ್ತಾಶ್ರಯದಲ್ಲಿ ‘ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ’ ಕಾರ್ಯಕ್ರಮವನ್ನು ಜೂ.12 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮAದಿರದಲ್ಲಿ ಏರ್ಪಡಿಸಲಾಗಿದೆ. ಇದಕ್ಕೂ ಮುನ್ನ ಅಂದು ಬೆಳಿಗ್ಗೆ 09.30 ಗಂಟೆಗೆ ಹಳೆ ಜಿಲ್ಲಾಧಿಕಾರಿಗಳ ಕಚೇರಿಯಿಂದ ಗಡಿಗಿ ಚೆನ್ನಪ್ಪ ವೃತ್ತ-ಬೆಂಗಳೂರು ರಸ್ತೆ-ತೇರು ಬೀದಿ ಹಾಗೂ ಗಡಿಗಿ ಚೆನ್ನಪ್ಪ ವೃತ್ತ ಮಾರ್ಗವಾಗಿ ಡಾ.ಜೋಳದರಾಶಿ ದೊಡ್ಡನಗೌಡ ರಂಗಮAದಿರದವರೆಗೆ ಜಾಥಾ ನಡೆಯಲಿದೆ. ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆದ ಕೆ.ಜಿ.ಶಾಂತಿ ಅವರು ಜಾಥಾಗೆ ಚಾಲನೆ ನೀಡುವರು. ವೇದಿಕೆ ಕಾರ್ಯಕ್ರಮವನ್ನು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ ಅವರು ಉದ್ಘಾಟಿಸುವರು. ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಅಧ್ಯಕ್ಷತೆ ವಹಿಸುವರು. ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರಿಸ್ ಸುಮೈರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ ವಿ.ಜೆ., ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರಾದ ವಿಜಯಲಕ್ಷಿö್ಮ ಮೈದೂರು, ಬಳ್ಳಾರಿ ಉಪ ವಿಭಾಗ ಕಾರ್ಮಿಕ ಅಧಿಕಾರಿ ಸಿದ್ದಪ್ಪ÷ಜಿ. ಖೈನೂರ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕಿ ಉಮಾದೇವಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ವಿಜಯ್ ಕುಮಾರ್, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಎಳೆನಾಗಪ್ಪ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಪಿ.ರಾಮ ಬ್ರಹ್ಮಂ, ಜಿಲ್ಲಾ ವಕೀಲರ ಸಂಘದ ಕಾರ್ಯದರ್ಶಿ ಸಿ.ಎಂ.ಗುರುಬಸವರಾಜ್, ಸಂಪನ್ಮೂಲ ವ್ಯಕ್ತಿಯಾಗಿ ವಕೀಲರು ಮತ್ತು ಮಕ್ಕಳ ಕಲ್ಯಾಣ ಸಮಿತಿಯ ಮಾಜಿ ಸದಸ್ಯರಾದ ತ್ರಿವೇಣಿ ಪತ್ತಾರ್ ಮತ್ತು ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕ ಎ.ಮೌನೇಶ್, ಕಾರ್ಮಿಕ ನಿರೀಕ್ಷಕರಾದ ಪರಶುರಾಮ್, ರಮೇಶ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ. ----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ