ಶುಕ್ರವಾರ, ಜೂನ್ 13, 2025

ಇಬ್ರಾಹಿಂಪುರ: ಜೂ.15 ರಂದು ಶಾಲಾ ಅಮೃತ ಮಹೋತ್ಸವ ಕಾರ್ಯಕ್ರಮ

ಬಳ್ಳಾರಿ,ಜೂ.13(ಕರ್ನಾಟಕ ವಾರ್ತೆ): ತಾಲ್ಲೂಕಿನ ಇಬ್ರಾಹಿಂಪುರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜೂ.15 ರಂದು ಶಾಲೆಯ 75 ನೇ ವರ್ಷದ ಶಾಲಾ ಅಮೃತ ಮಹೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಶಾಲೆಯ ಪ್ರಭಾರಿ ಮುಖ್ಯಗುರುಗಳಾದ ಹನುಮೇಶಿ.ಟಿ ಅವರು ತಿಳಿಸಿದ್ದಾರೆ. ಕಾರ್ಯಕ್ರಮದಲ್ಲಿ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ, ನಿವೃತ್ತ ಪ್ರಭಾರಿ ಮುಖ್ಯಗುರುಗಳಾದ ಡಿ.ರ‍್ರಿಸ್ವಾಮಿ ಅವರ ಬೀಳ್ಕೊಡುಗೆ ಸನ್ಮಾನ ಮತ್ತು 1950 ರಿಂದ ಇಲ್ಲಿಯವರೆಗೆ ಸೇವೆ ಸಲ್ಲಿಸಿದ ಶಿಕ್ಷಕರಿಗೆ ಪೂರ್ಣ ಕುಂಭ ಸ್ವಾಗತ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದ್ದಾರೆ. --------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ