ಸೋಮವಾರ, ಜೂನ್ 16, 2025
ಜೂ.18 ರಂದು ನೇರ ಸಂದರ್ಶನ
ಬಳ್ಳಾರಿ,ಜೂ.16(ಕರ್ನಾಟಕ ವಾರ್ತೆ):
ಹೊಸಪೇಟೆಯ ಬಳ್ಳಾರಿ ಮೋರ‍್ಸ್ (ಹೊಸಪೇಟೆಯ ಸಂಕಲಾಪುರಹಳ್ಳಿಯ 22ನೇ ವಾರ್ಡ್ನ ಇಂಡಿಯನ್ ಪೆಟ್ರೋಲ್ ಬಂಕ್ ಪಕ್ಕದಲ್ಲಿ) ಇಲ್ಲಿ ಜೂ.18 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 02 ಗಂಟೆಯವರೆಗೆ ನೇರ ಸಂದರ್ಶನ ಏರ್ಪಡಿಸಲಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.
ಇಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದು, ಈ ನೇರ ಸಂದರ್ಶನದಲ್ಲಿ ಭಾಗವಹಿಸಲು ಯಾವುದೇ ಶುಲ್ಕ ಇರುವುದಿಲ್ಲ.
*ವಿದ್ಯಾರ್ಹತೆ:*
ಐಟಿಐ, ಡಿಪ್ಲೋಮಾ(ಆಟೋಮೋಬೈಲ್ಸ್, ಡಿಸೇಲ್ ಮೆಕಾನಿಕಾಲ್, ಮೆಕಾನಿಕಾಲ್, ಟರ‍್ನೆರ್, ವೆಲ್ಡೆರ್) ವಿದ್ಯಾರ್ಹತೆ ಹೊಂದಿರಬೇಕು. ಆಸಕ್ತ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಭಾಗವಹಿಸಿ, ಇದರ ಸದುಪಯೋಗ ಪಡೆದುಕೊಳ್ಳಬೇಕು. ಪುರುಷರಿಗೆ ಮಾತ್ರ ಅವಕಾಶ.
ಸಂದರ್ಶನದಲ್ಲಿ ಭಾಗವಹಿಸುವ ಅಭ್ಯರ್ಥಿಗಳು ತಮ್ಮ ಆಧಾರ್ ಕಾರ್ಡ್ ಪ್ರತಿ ಮತ್ತು ಸ್ವ-ವಿವರ (ಬಯೋಡೇಟಾ) ಗಳೊಂದಿಗೆ ಅಂದು ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಅಥವಾ ಮೊ.9742718891, 9663263086, 9900827768, 6360408094 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
--------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ