ಗುರುವಾರ, ಜೂನ್ 19, 2025

ಜೂ.20, 21 ರಂದು ಅಂಚೆ ವಹಿವಾಟು ಸ್ಥಗಿತ

ಬಳ್ಳಾರಿ,ಜೂ.19(ಕರ್ನಾಟಕ ವಾರ್ತೆ): ಭಾರತೀಯ ಅಂಚೆ ಇಲಾಖೆಯ ಆದೇಶದಂತೆ ಬಳ್ಳಾರಿ ಪ್ರಧಾನ ಕಚೇರಿ ವ್ಯಾಪ್ತಿಗೆ ಬರುವ ಎಲ್ಲಾ ಉಪ ಅಂಚೆ ಕಚೇರಿ ಹಾಗೂ ಶಾಖಾ ಅಂಚೆ ಕಚೇರಿಗಳಲ್ಲಿ ಹೊಸ ತಂತ್ರಾAಶ (ಎಪಿಟಿ 2.0) ಅಳವಡಿಕೆ ಜಾರಿಯಾಗುತ್ತಿದ್ದು, ಈ ಹಿನ್ನಲೆಯಲ್ಲಿ ಜೂ. 20 ಮತ್ತು 21 ರಂದು ಎರಡು ದಿನಗಳ ಕಾಲ ಅಂಚೆ ಕಚೇರಿಗಳಲ್ಲಿ ವಹಿವಾಟು ಸ್ಥಗಿತಗೊಳಿಸಲಾಗುವುದು ಎಂದು ಬಳ್ಳಾರಿ ವಿಭಾಗದ ಅಂಚೆ ಅಧೀಕ್ಷಕ ಪಿ.ಚಿದಾನಂದ ಅವರು ತಿಳಿಸಿದ್ದಾರೆ. ಭಾರತೀಯ ಅಂಚೆ ಇಲಾಖೆಯು ಆಧುನಿಕ ಹಾಗೂ ಗ್ರಾಹಕ ಸ್ನೇಹಿ ತಂತ್ರಾAಶವನ್ನು ಅಭಿವೃದ್ಧಿಪಡಿಸಿ, ಆಧುನಿಕ ತಂತ್ರಜ್ಞಾನದ ನೆಟ್ವರ್ಕ್ ಸಮಸ್ಯೆಯಂತಹ ತೊಡಕುಗಳಿಂದ ಗ್ರಾಹಕರ ಸೇವೆಗಳಿಗೆ ಚ್ಯುತಿ ಬರದಂತೆ ಗಮನಹರಿಸಿ (ಅಡ್ವನ್ಸ್ಡ್ ಪೋಸ್ಟಲ್ ಟೆಕ್ನಾಲಜಿ 2.0) ಯನ್ನು ದೇಶಾದ್ಯಂತ ಎಲ್ಲಾ ಅಂಚೆ ಕಚೇರಿಗಳಲ್ಲಿ ಅಳವಡಿಸಲು ಮುಂದಾಗಿದೆ. ಇದರ ಪ್ರಯುಕ್ತ ಬಳ್ಳಾರಿ ಅಂಚೆ ವಿಭಾಗದ ಬಳ್ಳಾರಿ ಪ್ರಧಾನ ಅಂಚೆ ಕಚೇರಿ ಹಾಗೂ ಅದರಡಿ ಬರುವ ಎಲ್ಲಾ ಉಪ ಅಂಚೆ ಕಚೇರಿಗಳು ಮತ್ತು ಶಾಖಾ ಅಂಚೆ ಕಚೇರಿಗಳಲ್ಲಿ ಎ.ಪಿ.ಟಿ 2.0 ತಂತ್ರಾAಶವನ್ನು ಜೂ.23 ರಂದು ಅಳವಡಿಸಲು ಮುಂದಾಗಿದೆ. ಈ ಚಟುವಟಿಕೆಯ ಪೂರ್ವಭಾವಿಯಾಗಿ ಬಳ್ಳಾರಿ ಅಂಚೆ ವಿಭಾಗದ ವ್ಯಾಪ್ತಿಗೆ ಬರುವ ಬಳ್ಳಾರಿ ಪ್ರಧಾನ ಅಂಚೆ ಕಚೇರಿ, ಬಳ್ಳಾರಿ ನಗರದಲ್ಲಿರುವ ಇತರೆ ಎಲ್ಲಾ ಅಂಚೆ ಕಚೇರಿಗಳು, ಸಿರುಗುಪ್ಪ, ಸಿರುಗುಪ್ಪ ಸದಾಶಿವನಗರ, ಹಚ್ಚೊಳ್ಳಿ, ತೆಕ್ಕಲಕೋಟೆ, ಎಮ್ಮಿಗನೂರು, ಕುರುಗೋಡು, ಸಿರಿಗೇರಿ, ಕರೂರು, ಕೋಳೂರು, ಮೋಕಾ, ಚೆಳ್ಳಗುರ್ಕಿ, ಕುಡುತಿನಿ, ಬಿ.ಟಿ.ಪಿ.ಎಸ್, ತೋರಣಗಲ್ಲು, ವಿದ್ಯಾನಗರ, ಶಂಕರಹಿಲ್ ಟೌನ್, ಸಂಡೂರು, ಸಂಡೂರು ಲಕ್ಷಿö್ಮಪುರ, ದೇವಗಿರಿ, ದೋಣಿಮಲೈ ಟೌನ್ ಶಿಪ್, ಯಶವಂತನಗರ, ಉಪ ಅಂಚೆ ಕಚೇರಿಗಳು ಹಾಗೂ ಸಂಬAಧಿತ ಶಾಖಾ ಅಂಚೆ ಕಚೇರಿಗಳಲ್ಲಿ ಜೂನ್ 20 ಮತ್ತು 21 ರಂದು ಯಾವುದೇ ವ್ಯವಹಾರ, ವಹಿವಾಟು ಇರುವುದಿಲ್ಲ. ಅಂಚೆ ಕಚೇರಿಯ ಗ್ರಾಹಕರು ಸಹಕರಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ------------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ