ಮಂಗಳವಾರ, ಜೂನ್ 17, 2025

ಜೂ.20 ರಂದು ವಿವಿಧ ಮಹನೀಯರ ಜಯಂತಿಯ ಪೂರ್ವಭಾವಿ ಸಭೆ

ಬಳ್ಳಾರಿ,ಜೂ.17(ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಜಿಲ್ಲಾ ಕೇಂದ್ರದಲ್ಲಿ ವಿವಿಧ ಮಹನೀಯರ ಜಯಂತಿ ಕಾರ್ಯಕ್ರಮ ಆಚರಣೆ ಕುರಿತು ಚರ್ಚಿಸಲು ಜೂ.20 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಹಳೆಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ಏರ್ಪಡಿಸಲಾಗಿದೆ. ಜೂ.27 ರಂದು ಕೆಂಪೇಗೌಡ ಜಯಂತಿ, ಜುಲೈ 02 ರಂದು ಡಾ.ಫ.ಗು.ಹಳಕಟ್ಟಿಯವರ ಜನ್ಮದಿನ ಅಂಗವಾಗಿ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಮತ್ತು ಜುಲೈ 10 ರಂದು ಹಡಪದ ಅಪ್ಪಣ್ಣ ಜಯಂತಿ ಕಾರ್ಯಕ್ರಮ ಆಚರಣೆ ಕುರಿತು ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ. ಸಭೆಗೆ ಸಮುದಾಯದ ಮುಖಂಡರು, ಜಿಲ್ಲಾ ಮಟ್ಟದ ಅಧಿಕಾರಿಗಳು ತಪ್ಪದೇ ಹಾಜರಾಗಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಅವರು ತಿಳಿಸಿದ್ದಾರೆ. --------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ