ಗುರುವಾರ, ಜೂನ್ 19, 2025
ಜೂ.20 ರಂದು ಕರ್ನಾಟಕ ರಾಜ್ಯ ಸರ್ಕಾರದ ಸಾಧನೆ ಬಿಂಬಿಸುವ ವಸ್ತು ಪ್ರದರ್ಶನ ಉದ್ಘಾಟನಾ ಕಾರ್ಯಕ್ರಮ
ಬಳ್ಳಾರಿ,ಜೂ.19(ಕರ್ನಾಟಕ ವಾರ್ತೆ):
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮತ್ತಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ, ಬಳ್ಳಾರಿ ವಿಭಾಗ ಇವರ ಸಂಯುಕ್ತಾಶ್ರಯದಲ್ಲಿ ಜೂ.20 ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಟ್ಯಾಂಕ್ ಬಂಡ್ ರಸ್ತೆಯ ಕೇಂದ್ರ ಬಸ್ ನಿಲ್ದಾಣದಲ್ಲಿ ಕರ್ನಾಟಕ ರಾಜ್ಯ ಸರ್ಕಾರದ ಸಾಧನೆ ಬಿಂಬಿಸುವ ವಸ್ತು ಪ್ರದರ್ಶನ ಉದ್ಘಾಟನಾ ಕಾರ್ಯಕ್ರಮ ಆಯೋಜಿಸಲಾಗಿದೆ.
ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಉಸ್ತುವಾರಿ ಸಚಿವ ಬಿ.ಝಡ್.ಜಮೀರ್ ಅಹ್ಮದ್ ಖಾನ್ ಅವರು ಕಾರ್ಯಕ್ರಮ ಉದ್ಘಾಟಿಸುವರು.
ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಅಧ್ಯಕ್ಷತೆ ವಹಿಸುವರು.
ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಹಾಗೂ ಶಾಸಕ ಜೆ.ಎನ್ ಗಣೇಶ್, ಸಂಸದರಾದ ಈ.ತುಕಾರಾಂ, ಕೆ.ರಾಜಶೇಖರ ಬಸವರಾಜ ಹಿಟ್ನಾಳ್, ಡಾ.ಸೈಯದ್ ನಾಸೀರ್ ಹುಸೇನ್, ಶಾಸಕರಾದ ಬಿ.ನಾಗೇಂದ್ರ, ವಿಧಾನಪರಿಷತ್ ಶಾಸಕರಾದ ಡಾ.ಚಂದ್ರಶೇಖರ್ ಬಿ.ಪಾಟೀಲ, ಶಾಸಕರಾದ ಬಿ.ಎಂ.ನಾಗರಾಜ, ಈ.ಅನ್ನಪೂರ್ಣ, ವಿಧಾನಪರಿಷತ್ ಶಾಸಕರಾದ ಶಶೀಲ್ ನಮೋಶಿ, ವೈ.ಎಂ.ಸತೀಶ್, ಡಾ.ಬಾಬು ಜಗಜೀವನ್‌ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ, ಮಹಾನಗರ ಪಾಲಿಕೆಯ ಮಹಾಪೌರರಾದ ಮುಲ್ಲಂಗಿ ನಂದೀಶ್, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯಲು, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ.ವಿ.ಜೆ., ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರೀಸ್ ಸುಮೈರ್, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝಬೇರ್.ಎನ್, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ವಿಭಾಗೀಯ ನಿಯಂತ್ರಣಾಧಿಕಾರಿ ಇನಾಯತ್ ಭಾಗವಾನ್ ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿರುವರು.
*ಜೂ.20 ರಿಂದ 26 ರ ವರೆಗೆ ವಿಕ್ಷೀಸಲು ಅವಕಾಶ:*
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ರಾಜ್ಯ ಸರ್ಕಾರದ ಎರಡು ವರ್ಷಗಳ ಸಾಧನೆ ಹಾಗೂ ಯೋಜನೆಗಳನ್ನು ಬಿಂಬಿಸುವ ವಸ್ತು ಪ್ರದರ್ಶನವನ್ನು ನಗರದ ಟ್ಯಾಂಕ್ ಬಂಡ್ ರಸ್ತೆಯ ಕೇಂದ್ರ ಬಸ್ ನಿಲ್ದಾಣದಲ್ಲಿ ಜೂ.20 ರಿಂದ 26 ರ ವರೆಗೆ ಏರ್ಪಡಿಸಲಾಗುತ್ತಿದೆ.
ಈ ವಸ್ತು ಪ್ರದರ್ಶನವು ಸಾರ್ವಜನಿಕರ ವೀಕ್ಷಣೆಗೆ ಅವಕಾಶ ಲಭ್ಯವಿರುತ್ತದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕರು ಬಿ.ವಿ. ತುಕಾರಾಂ ರಾವ್ ಅವರು ತಿಳಿಸಿದ್ದಾರೆ.
--------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ