ಬುಧವಾರ, ಜೂನ್ 18, 2025
ಜೂ.20 ರಂದು ಜಿಲ್ಲಾ ಮಟ್ಟದ ಜಾಥಾ ಮತ್ತು ಹದಿಹರೆಯದ ಹೆಣ್ಣುಮಕ್ಕಳ ಸಮಾವೇಶ
ಬಳ್ಳಾರಿ,ಡಿ.02(ಕರ್ನಾಟಕ ವಾರ್ತೆ):
ರೀಡ್ಸ್ ಸಂಸ್ಥೆ, ಮಕ್ಕಳ ವಿಶೇಷ ಪೊಲೀಸ್ ಘಟಕ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇವರ ಸಂಯುಕ್ತಾಶ್ರಯದಲ್ಲಿ ಜೂ.20 ರಂದು ಮಧ್ಯಾಹ್ನ 12 ಗಂಟೆಗೆ ನಗರದ ಬಿ.ಡಿ.ಎ.ಎ ಸಭಾಂಗಣದಲ್ಲಿ ಬಾಲ್ಯವಿವಾಹ ನಿಷೇಧ ಕಾಯ್ದೆ-2006, ಪೋಕ್ಸೋ ಕಾಯ್ದೆ ಮತ್ತು ಬಾಲ ಕಾರ್ಮಿಕ ಪದ್ದತಿ ನಿಷೇದದ ಬಗ್ಗೆ ಹದಿಹರೆಯದ ಹೆಣ್ಣುಮಕ್ಕಳಿಗೆ ಜಿಲ್ಲಾಮಟ್ಟದ ಸಮಾವೇಶ ಏರ್ಪಡಿಸಲಾಗಿದೆ.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್.ಎನ್.ಹೊಸಮನೆ ಅವರು ಅಂದು ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾಮಟ್ಟದ ಜಾಥಾವನ್ನು ಉದ್ಘಾಟನೆ ಮಾಡುವರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಡಾ.ಶೋಭಾರಾಣಿ ವಿ.ಜೆ ಅವರು ಸಮಾವೇಶ ಉದ್ಘಾಟಿಸುವರು.
ರೀಡ್ಸ್ ಸಂಸ್ಥೆಯ ಅಧ್ಯಕ್ಷ ಸಿ. ತಿಪ್ಪೇಶಪ್ಪ ಅವರು ಅಧ್ಯಕ್ಷತೆ ವಹಿಸುವರು.
ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ವಿಜಯಲಕ್ಷಿö್ಮ ಮೈದೂರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ರಾಮಕೃಷ್ಣ ನಾಯಕ್, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ರಕ್ಷಣಾಧಿಕಾರಿ ಎಳೆ ನಾಗಪ್ಪ ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ನಿಕಟಪೂರ್ವ ಸದಸ್ಯರಾದ ಡಾ.ಹೆಚ್.ಸಿ.ರಾಘವೇಂದ್ರ, ವಕೀಲರಾದ ಶಿವಲೀಲಾ, ಸೈಬರ್ ಕ್ರೆöÊಂ ಪೊಲೀಸ್ ಠಾಣೆಯ ಡಿ.ವೈ.ಎಸ್.ಪಿ. ಸಂತೋಷ್ ಚೌಹಾಣ್ ಸೇರಿದಂತೆ ರೀಡ್ಸ್ ಸಂಸ್ಥೆ ಸಿಬ್ಬಂದಿಗಳು ಹಾಗೂ ಮಕ್ಕಳ ವಿಶೇಷ ಘಟಕ ಸಿಬ್ಬಂದಿ ವರ್ಗ ಇತರರು ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.
-------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)


ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ