ಶುಕ್ರವಾರ, ಜೂನ್ 13, 2025

ಬಳ್ಳಾರಿ: ಜೂನ್ 21 ರಂದು ಅಂತರಾಷ್ಟಿçÃಯ ಯೋಗ ದಿನಾಚರಣೆ | ಕಾರ್ಯಕ್ರಮ ಅಚ್ಚುಕಟ್ಟಾಗಿ ಆಯೋಜಿಸುವಂತೆ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ನಿರ್ದೇಶನ

ಬಳ್ಳಾರಿ,ಜೂ.13(ಕರ್ನಾಟಕ ವಾರ್ತೆ): ಜಿಲ್ಲಾ ಕೇಂದ್ರದಲ್ಲಿ ಜೂನ್ 21 ರಂದು ಅಂತರಾಷ್ಟಿçÃಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಆಯೋಜಿಸಲು ಬೇಕಾದ ಅಗತ್ಯ ಸಿದ್ಧತೆ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಅಧಿಕಾರಿಗಳಿಗೆ ಸೂಚಿಸಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜೂ.21 ರಂದು ನಗರದ ಶೆಟ್ರ ಗುರುಶಾಂತಪ್ಪ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಅಂತರಾಷ್ಟಿçÃಯ ಯೋಗ ದಿನಾಚರಣೆ ನಡೆಸಲು ನಿರ್ಧರಿಸಲಾಗಿದ್ದು, ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳ ಒಳಗೂಡಿ ಸಮಿತಿ ರಚಿಸಿ, ಜವಾಬ್ದಾರಿಗಳನ್ನು ವಹಿಸಿಕೊಂಡು ಸಮರ್ಪಕವಾಗಿ ನಿರ್ವಹಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಮಳೆಗಾಲ ಹಿನ್ನಲೆಯಲ್ಲಿ ಮುಂಜಾಗರೂಕರಾಗಿ ಅಂತರಾಷ್ಟಿçÃಯ ಯೋಗ ದಿನಾಚರಣೆ ಕಾರ್ಯಕ್ರಮಕ್ಕೆ ಅಡ್ಡಿಯಾಗದಂತೆ ಪರ್ಯಾಯ ವ್ಯವಸ್ಥೆಗೆ ಕಾರ್ಯಪ್ರವೃತ್ತರಾಗಿರಬೇಕು ಎಂದು ತಿಳಿಸಿದರು. ಅಂದು ಬೆಳಿಗ್ಗೆ 07 ರಿಂದ ಯೋಗ ಕಾರ್ಯಕ್ರಮ ಜರುಗಲಿದ್ದು, ನಂತರ ಯೋಗ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಬಳಿಕ ಯೋಗಾಸನ ಮಾಡಲು ನಿರ್ದೇಶನ ಮಾಡಲಾಗುವುದು. ವೇದಿಕೆ ಸಿದ್ಧತೆಗೆ ಪರಿಶೀಲನೆ ಮಾಡಿಕೊಳ್ಳಬೇಕು ಎಂದು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು. ಜಿಲ್ಲಾ ಮಟ್ಟದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಹೆಚ್ಚಿನ ಜನ ಆಗಮಿಸುವಂತೆ ಪ್ರಚಾರ ಕೈಗೊಳ್ಳಬೇಕು. ಪತಂಜಲಿ ಯೋಗ ಕೇಂದ್ರ, ಆರ್ಟ್ ಆಫ್ ಲಿವಿಂಗ್ ಸೇರಿದಂತೆ ಯೋಗ ಕೇಂದ್ರಗಳು ಅಗತ್ಯವಾಗಿ ಸಹಕಾರ ನೀಡಬೇಕು ಎಂದರು. ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಹಾಸ್ಟೆಲ್‌ಗಳಲ್ಲಿರುವ ವಿದ್ಯಾರ್ಥಿಗಳು ಯೋಗಾಸನ ಕಾರ್ಯಕ್ರಮದಲ್ಲಿ ಭಾಗವಹಿಸುವ ನಿಟ್ಟಿನಲ್ಲಿ ಕ್ರಮವಹಿಸಲು ಶಿಕ್ಷಣ ಇಲಾಖೆಯ ಅಧಿಕಾರಿಗಳು ಹಾಗೂ ಸಮಾಜಕಲ್ಯಾಣ, ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿಗಳಿಗೆ ಸೂಚನೆ ನೀಡಿದರು. ಯೋಗ ದಿನಾಚರಣೆ ಕಾರ್ಯಕ್ರಮಕ್ಕೆ ಆಗಮಿಸುವವರಿಗೆ ಲಘು ಉಪಹಾರ ಮತ್ತು ನೀರಿನ ವ್ಯವಸ್ಥೆ, ಯೋಗಾಸನ ಮಾಡಲು ಗ್ರೀನ್ ಮ್ಯಾಟ್ ವ್ಯವಸ್ಥೆ ಮತ್ತು ವೇದಿಕೆ ಹಾಗೂ ಧ್ವನಿವರ್ಧಕ ವ್ಯವಸ್ಥೆ ಹಾಗೂ ಆವರಣದೊಳಗೆ ಸಂಪೂರ್ಣ ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದರು. ಕಾರ್ಯಕ್ರಮದಲ್ಲಿ ನುರಿತ ಯೋಗ ಶಿಕ್ಷಕರನ್ನು ನಿಯೋಜಿಸಬೇಕು. ಆರೋಗ್ಯ ಇಲಾಖೆಯಿಂದ ಅಗತ್ಯ ಚಿಕಿತ್ಸಾ ವ್ಯವಸ್ಥೆ ಸೇರಿದಂತೆ ಇನ್ನಿತರ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳಲು ಪೊಲೀಸ್ ಬಂದೋಬಸ್ತ್ ಒದಗಿಸಬೇಕು. ಒಟ್ಟಾರೆ ಕಾರ್ಯಕ್ರಮ ಶಿಸ್ತುಬದ್ಧವಾಗಿ ಯಾವುದೇ ಲೋಪ ಆಗದಂತೆ ನೋಡಿಕೊಳ್ಳಬೇಕು ಎಂದರು. ಯೋಗ ದಿನಾಚರಣೆ ಅಂಗವಾಗಿ ಯೋಗದ ಮಹತ್ವ ಸಾರುವ ಉದ್ದೇಶದಿಂದ ಬಳ್ಳಾರಿಯಲ್ಲಿ ಪೂರ್ವಭಾವಿ ಯೋಗ ಶಿಬಿರ ಕೈಗೊಳ್ಳಬೇಕು. ಅಂದು ನಡೆಯುವ ಕಾರ್ಯಕ್ರಮಕ್ಕೆ ಎಲ್ಲ ಇಲಾಖೆಗಳ ಅಧಿಕಾರಿಗಳು ಕಡ್ಡಾಯವಾಗಿ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕು. ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹೇಳಿದರು. ಯೋಗ ತರಬೇತಿಯು ಕೇವಲ ಒಂದು ದಿನಕ್ಕೆ ಸೀಮಿತವಾಗಬಾರದು. ಯೋಗವನ್ನು ಮಾಡುವುದರಿಂದ ವ್ಯಕ್ತಿಯು ಮಾನಸಿಕವಾಗಿ ಮತ್ತು ದೈಹಿಕವಾಗಿ ಸದೃಡನಾಗುತ್ತಾನೆ. ಪ್ರತಿದಿನ ಯೋಗ ಮಾಡಲು ರೂಢಿಸಿಕೊಳ್ಳಬೇಕು ಎಂದರು. ಜಿಲ್ಲಾ ಆಯುಷ್ ಅಧಿಕಾರಿ ಡಾ.ಎಂ.ವಿರುಪಾಕ್ಷ ಅವರು ಮಾತನಾಡಿ, ಈ ವರ್ಷದ ಒಂದು ಭೂಮಿ ಒಂದು ಆರೋಗ್ಯಕ್ಕಾಗಿ ಯೋಗ ಎಂಬ ಘೋಷವಾಕ್ಯದೊಂದಿಗೆ ಕಾರ್ಯಕ್ರಮ ಆಚರಿಸಲಾಗುವುದು ಎಂದರು. ಈ ಸಂದರ್ಭದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕರಾದ ಸಕೀನಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ವಿಜಯ್ ಕುಮಾರ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಲ್ಲಿಕಾರ್ಜುನ, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ದಿವಾಕರ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಜಿಲ್ಲೆಯ ವಿವಿಧ ಯೋಗ ಕೇಂದ್ರದ ಪ್ರತಿನಿಧಿಗಳು ಉಪಸ್ಥಿತರಿದ್ದರು. -------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ