ಶುಕ್ರವಾರ, ಜೂನ್ 20, 2025

ಜೂ.23 ರಂದು ಮಿನಿ ಉದ್ಯೋಗ ಮೇಳ

ಬಳ್ಳಾರಿ,ಜೂ.20(ಕರ್ನಾಟಕ ವಾರ್ತೆ): ನಗರದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಜೂ.23 ರಂದು ಮಿನಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದ್ದು, ಬೆಳಿಗ್ಗೆ 10 ರಿಂದ ಮಧ್ಯಾಹ್ನ 02 ಗಂಟೆಯವರೆಗೆ ನೇರ ಸಂದರ್ಶನ ಏರ್ಪಡಿಸಲಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಹಟ್ಟಪ್ಪ ಅವರು ತಿಳಿಸಿದ್ದಾರೆ. ಮೇಳದಲ್ಲಿ 3 ರಿಂದ 4 ಕಂಪನಿಗಳು ಭಾಗವಹಿಸಲಿದ್ದು, ಇವರು ತಮ್ಮಲ್ಲಿರುವ ಖಾಲಿ ಇರುವ ಹುದ್ದೆಗಳಿಗೆ ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳುವರು. ಸಂದರ್ಶನದಲ್ಲಿ ಭಾಗವಹಿಸಲು ಯಾವುದೇ ಶುಲ್ಕ ಇರುವುದಿಲ್ಲ. *ವಿದ್ಯಾರ್ಹತೆ:* ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಪದವಿ ವಿದ್ಯಾರ್ಹತೆ ಹೊಂದಿರಬೇಕು. ಆಸಕ್ತ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಭಾಗವಹಿಸಿ, ಇದರ ಸದುಪಯೋಗ ಪಡೆದುಕೊಳ್ಳಬೇಕು. ಪುರುಷರು ಮತ್ತು ಮಹಿಳೆಯರು ಭಾಗವಹಿಸಬಹುದು. ಸಂದರ್ಶನದಲ್ಲಿ ಭಾಗವಹಿಸುವ ಅಭ್ಯರ್ಥಿಗಳು ತಮ್ಮ ಆಧಾರ್ ಕಾರ್ಡ್ ಪ್ರತಿ ಮತ್ತು ಸ್ವ-ವಿವರ (ಬಯೋಡೇಟಾ) ಗಳೊಂದಿಗೆ ಅಂದು ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಅಥವಾ ಮೊ.9742718891, 9663263086, 9900827768, 6360408094 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. --------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ