ಗುರುವಾರ, ಜೂನ್ 12, 2025
ಜೂ.24 ರಂದು ವಾಕ್ ಇನ್ ಇಂಟರ್‌ವ್ಯೂ
ಬಳ್ಳಾರಿ,ಜೂ.12(ಕರ್ನಾಟಕ ವಾರ್ತೆ):
ತಾಲ್ಲೂಕಿನ ಕೊಳಗಲ್ಲು ಗ್ರಾಮದ ಏಕಲವ್ಯ ಮಾದರಿ ವಸತಿ ಶಾಲೆಯಲ್ಲಿ ವಿವಿಧ ಹುದ್ದೆಗಳಿಗೆ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲು ಜೂ.24 ರಂದು ಬೆಳಿಗ್ಗೆ 09 ಗಂಟೆಗೆ ಇದೇ ಶಾಲೆಯಲ್ಲಿ ವಾಕ್ ಇನ್ ಇಂಟರ್ ವ್ಯೂ ಏರ್ಪಡಿಸಲಾಗಿದೆ.
ಅರ್ಹ ಅನುಭವವುಳ್ಳ 21 ರಿಂದ 60 ವರ್ಷ ವಯೋಮಿತಿಯೊಳಗಿನ ನವೋದಯ, ಕೇಂದ್ರೀಯ ವಿದ್ಯಾಲಯ ಶಾಲೆಗಳಲ್ಲಿ ಉಪನ್ಯಾಸ ಮಾಡಿದ ಅನುಭವವುಳ್ಳ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.
*ಹುದ್ದೆ:*
ಜೀವಶಾಸ್ತç ಶಿಕ್ಷಕ-01, ಇಂಗ್ಲೀಷ್ ಶಿಕ್ಷಕ-01, ದೈಹಿಕ ಶಿಕ್ಷಕ(ಮಹಿಳೆ)-02 ಮತ್ತು ವಸತಿ ನಿಲಯಪಾಲಕ-01.
ಆಸಕ್ತ ಅಭ್ಯರ್ಥಿಗಳು ತಮ್ಮ ಮೂಲ ಶೈಕ್ಷಣಿಕ ದಾಖಲೆಗಳೊಂದಿಗೆ ನಿಗಧಿಪಡಿಸಿದ ದಿನದಂದು ಸಂದರ್ಶನಕ್ಕೆ ಹಾಜರಾಗಬಹುದು. ಹಾಜರಾದ ಅಭ್ಯರ್ಥಿಗಳಿಗೆ ಯಾವುದೇ ಭತ್ಯೆ ನೀಡಲಾಗುವುದಿಲ್ಲ ಎಂದು ಕೊಳಗಲ್ಲು ಗ್ರಾಮದ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ