ಬುಧವಾರ, ಜೂನ್ 18, 2025
ಜೂ.25 ರಂದು ಪಿಂಚಣಿ ಅದಾಲತ್
ಬಳ್ಳಾರಿ,ಜೂ.18(ಕರ್ನಾಟಕ ವಾರ್ತೆ):
ಅಂಚೆ ಇಲಾಖೆಯಿಂದ ನಿವೃತ್ತರಾದ ಸರ್ಕಾರದಿಂದ ಪಿಂಚಣಿ ಪಡೆಯುತ್ತಿರುವ ಇಲಾಖಾ ನೌಕರರಿಗಾಗಿ ಮತ್ತು ಕುಟುಂಬ ಪಿಂಚಣಿ ಪಡೆಯುತ್ತಿರುವ ನಿವೃತ್ತ ಅಂಚೆ ನೌಕರರ ಕುಟುಂಬದವರಿಗಾಗಿ ಜೂ.25 ರಂದು ಸಂಜೆ 04 ಗಂಟೆಗೆ ಬಳ್ಳಾರಿ ವಿಭಾಗೀಯ ಅಂಚೆ ಕಚೇರಿಯಲ್ಲಿ ಪಿಂಚಣಿ ಅದಾಲತ್ ಆಯೋಜಿಸಲಾಗಿದೆ.
ಪಿಂಚಣಿದಾರರು ತಮ್ಮ ಕುಂದು-ಕೊರತೆಗಳಿದ್ದಲ್ಲಿ ಬಳ್ಳಾರಿ ವಿಭಾಗದ ಕೋಟೆ ಪ್ರದೇಶದ ಅಂಚೆ ವಿಭಾಗೀಯ ಕಾರ್ಯಾಲಯ ಅಧೀಕ್ಷಕರ ಕಚೇರಿಗೆ ಜೂ.23 ರೊಳಗಾಗಿ ಮುಂಚಿತವಾಗಿ ತಲುಪುವಂತೆ ಪತ್ರ ಮೂಲಕ ಅಥವಾ doballari.ka@indiapost.gov.in ಗೆ ಇ-ಮೇಲ್ ಮುಖಾಂತರ ಕಳುಹಿಸಿಕೊಡಬಹುದು. ತಮ್ಮ ಅಹವಾಲುನೊಂದಿಗೆ ಜೂ.25 ರಂದು ನಡೆಯುವ ಪಿಂಚಣಿ ಅದಾಲತ್‌ನಲ್ಲಿ ಭಾಗವಹಿಸಬಹುದು.
ಅದಾಲತ್‌ನಲ್ಲಿ ಭಾಗವಹಿಸುವವರಿಗೆ ಯಾವುದೇ ತರಹದ ಭತ್ಯೆ ನೀಡಲಾಗುವುದಿಲ್ಲ ಎಂದು ಬಳ್ಳಾರಿ ವಿಭಾಗ ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ