ಶನಿವಾರ, ಜೂನ್ 21, 2025

ಜೂ.27 ರಂದು ನೀರಾವರಿ ಸಲಹಾ ಸಮಿತಿ ಸಭೆ

ಬಳ್ಳಾರಿ,ಜೂ.21(ಕರ್ನಾಟಕ ವಾರ್ತೆ): ತುಂಗಾಭದ್ರಾ ಯೋಜನೆಯ ಮತ್ತು ವಿಜಯನಗರ ಕಾಲುವೆಗಳ ಮುಂಗಾರು ಹಂಗಾಮಿಗೆ ಲಭ್ಯವಾಗುವ ನೀರನ್ನು ಒದಗಿಸುವ ಕುರಿತು ಚರ್ಚಿಸಲು ಜೂ.27 ರಂದು ಮಧ್ಯಾಹ್ನ 03 ಗಂಟೆಗೆ ಬೆಂಗಳೂರಿನ ವಿಧಾನಸೌಧದ 3 ನೇ ಮಹಡಿಯ ಕೊಠಡಿ ಸಂಖ್ಯೆ.334 ರ ಸಮ್ಮೇಳನ ಸಭಾಂಗಣದಲ್ಲಿ 124 ನೇ ನೀರಾವರಿ ಸಲಹಾ ಸಮಿತಿ ಸಭೆ ಆಯೋಜಿಸಲಾಗಿದೆ. ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಮತ್ತು ನೀರಾವರಿ ಸಲಹಾ ಸಮಿತಿಯ ಅಧ್ಯಕ್ಷರೂ ಆದ ಶಿವರಾಜ ಎಸ್.ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ತುಂಗಾಭದ್ರಾ ಯೋಜನೆ ಮತ್ತು ವಿಜಯನಗರ ಕಾಲುವೆಗಳ ನೀರಾವರಿ ಸಲಹಾ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ತಿಳಿಸಿದ್ದಾರೆ. ------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ