ಶುಕ್ರವಾರ, ಜೂನ್ 27, 2025
ಬಳ್ಳಾರಿಯಲ್ಲಿ ಸಂಭ್ರಮದ 516ನೇ ಕೆಂಪೇಗೌಡ ಜಯಂತಿ ಆಚರಣೆ | ಆಧುನಿಕ ಮಹಾನಗರ ನಿರ್ಮಾತೃ ನಾಡಪ್ರಭು ಕೆಂಪೇಗೌಡರ ಆದರ್ಶ ಪಾಲಿಸೋಣ: ಲಿಡ್‌ಕರ್ ಅಧ್ಯಕ್ಷ ಮುಂಡರಗಿ ನಾಗರಾಜ
ಬಳ್ಳಾರಿ,ಜೂ.27(ಕರ್ನಾಟಕ ವಾರ್ತೆ):
ಕೆಂಪೇಗೌಡರು ಬೆಂಗಳೂರು ಮಹಾನಗರ ಕಟ್ಟಿದ ಮಹಾನ್ ವೀರ, ವಿಜಯನಗರ ಸಾಮ್ರಾಜ್ಯದ ಸಾಮಂತ ರಾಜ್ಯವಾಗಿದ್ದ ಯಲಹಂಕ ನಾಡಿನ ಪಾಳೇಗಾರರಾಗಿದ್ದರು ಎಂದು ಡಾ.ಬಾಬು ಜಗಜೀವನ್‌ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಡಾ.ರಾಜ್ ಕುಮಾರ್ ರಸ್ತೆಯ ಸಾಂಸ್ಕೃತಿಕ ಸಮುಚ್ಚಯದ ಹೊಂಗಿರಣದಲ್ಲಿ ಮಂಗಳವಾರ ಆಯೋಜಿಸಿದ್ದ ನಾಡಪ್ರಭು ಕೆಂಪೇಗೌಡರ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಸನಾತನ ಹಿಂದೂ ಸಂಸ್ಕೃತಿಯ ಉಳಿವಿಗಾಗಿ ದೇವಾಲಯಗಳ ನಿರ್ಮಾಣ, ಹಳೆಯ ದೇವಾಲಯಗಳ ಜೀರ್ಣೋದ್ದಾರ ಕಾರ್ಯಗಳು, ಅರ್ಚಕರ ಜೀವನೋಪಾಯಕ್ಕಾಗಿ ಜಮೀನು ನೀಡಿರುವುದು, ರಾಜಧಾನಿಯ ಕೋಟೆ ನಿರ್ಮಾಣದ ಜೊತೆಗೆ ಕೆಂಪೇಗೌಡರು ಸುಮಾರು 64 ಪೇಟೆಗಳನ್ನು ನಿರ್ಮಿಸಿದರೆಂದು ತಿಳಿದುಬರುತ್ತದೆ. ಇವುಗಳಲ್ಲಿ 54 ಪೇಟೆಗಳ ಹೆಸರುಗಳು ಮಾತ್ರ ಇತಿಹಾಸಕಾರರಿಗೆ ಲಭ್ಯವಾಗಿವೆ ಎಂದು ಅವರ ಜೀವನದ ಬಗ್ಗೆ ವಿವರಿಸಿದರು.
ಮಹಾನಗರ ಪಾಲಿಕೆಯ ಮಹಾಪೌರರಾದ ಮುಲ್ಲಂಗಿ ನಂದೀಶ್ ಅವರು ಮಾತನಾಡಿ, ಕೆಂಪೇಗೌಡರು ಎಲ್ಲರಿಗೂ ಆದರ್ಶ ವ್ಯಕ್ತಿಯಾಗಿದ್ದು, ಅವರ ಕಾರ್ಯವು ಇಂದಿಗೂ ಜೀವಂತವಾಗಿದೆ. ಅಂತಹ ಮಹಾನ್ ವ್ಯಕ್ತಿಯ ಆಚಾರ ವಿಚಾರಗಳನ್ನು ನಾವೆಲ್ಲರೂ ಪಾಲಿಸೋಣ ಎಂದು ತಿಳಿಸಿದರು.
ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ ಮಾತನಾಡಿ, ಕೆಂಪೇಗೌಡರು ಸುಭದ್ರವಾದ ರಾಜಧಾನಿಯ ನಿರ್ಮಾಣದ ಜೊತೆಗೆ ಬೆಂಗಳೂರು ಸೇರಿದಂತೆ ನಾಡಿನ ತುಂಬಾ ಹಲವು ಕೆರೆ ಕಟ್ಟೆಗಳನ್ನು ನಿರ್ಮಿಸಿದ್ದರು. ಹಾಗೆಯೇ ಸುಮಾರು ಕೆರೆಗಳನ್ನು ಗ್ರಾಮೀಣ ಪ್ರದೇಶದ ಜನರಿಗಾಗಿ ಕುಡಿಯುವ ನೀರಿಗಾಗಿ ನಿರ್ಮಿಸಲಾಗಿದೆ. ಬೆಂಗಳೂರು ನಗರವು ಇತಿಹಾಸದ ಪುಟದಲ್ಲಿ ಸುವರ್ಣಾಕ್ಷರಗಳಲ್ಲಿ ದಾಖಲಾಗಿದೆ ಎಂದರು.
ಕನ್ನಡ ಸಾಹಿತ್ಯ ಪರಿಷತ್ತು ನಿಕಟಪೂರ್ವ ಅಧ್ಯಕ್ಷ ಸಿದ್ಧರಾಮ ಕಲ್ಮಠ ಅವರು ವಿಶೇಷ ಉಪನ್ಯಾಸದಲ್ಲಿ ಮಾತನಾಡಿ, ಕೆಂಪೇಗೌಡರು ಕೆಂಪನAಜೇಗೌಡ ಹಾಗೂ ಲಿಂಗಾAಬೆ ದಂಪತಿಗಳಿಗೆ 1510ರಲ್ಲಿ ಯಲಹಂಕದಲ್ಲಿ ಜನಿಸಿದರು. ಕುಲದೇವತೆಯಾದ ಕೆಂಪಮ್ಮ ಹಾಗೂ ಭೈರವರ ಅನುಗ್ರಹದಿಂದ ಜನಿಸಿದ ಕಾರಣ ಕೆಂಪನAಜೇಗೌಡ ದಂಪತಿಗಳು ಮಗುವಿಗೆ ಕೆಂಪ, ಕೆಂಪಯ್ಯ, ಕೆಂಪಣ್ಣ ಎಂಬ ಹೆಸರಿನಿಂದ ಕರೆಯುತ್ತಿದ್ದರು ಎಂದು ತಿಳಿಸಿದರು.
ಕ್ರಿ.ಶ.1509 ರಲ್ಲಿ ವಿಜಯನಗರದ ಸಿಂಹಾಸನವೇರಿದ್ದ ಶ್ರೀಕೃಷ್ಣದೇವರಾಯರ ಆಡಳಿತದಲ್ಲಿ ವಿಜಯನಗರ ಸಾಮ್ರಾಜ್ಯದ ವೈಭೋಗವನ್ನು ಅನಾವರಣಗೊಳಿಸಲು ಕ್ರಿ.ಶ.1515 ರಲ್ಲಿ ರಾಜಧಾನಿ ಹಂಪಿಯಲ್ಲಿ ಪ್ರಥಮ ಬಾರಿಗೆ ವಿಜಯದಶಮಿ ಉತ್ಸವವನ್ನು ಆರಂಭಿಸಿದರು ಎಂದು ವಿವರಿಸಿದರು.
ಐದು ವರ್ಷದ ಬಾಲಕನಿದ್ದ ಕೆಂಪೇಗೌಡರು ತಂದೆಯವರ ಜೊತೆ ಈ ಸಮಾರಂಭಕ್ಕೆ ಹೋಗಿದ್ದಾಗ ಬಾಲ್ಯದಿಂದ ಶ್ರೀಕೃಷ್ಣದೇವರಾಯರ ಆಡಳಿತಾವಧಿಯ ಧಾರ್ಮಿಕ ಹಾಗೂ ಸಾಂಸ್ಕೃತಿಕ ಸಿರಿಯನ್ನು ಕಣ್ಣಾರೆ ಕಂಡು ತಮ್ಮ ನಾಡಿನಲ್ಲೂ ಈ ಎಲ್ಲಾ ವೈಭವಗಳನ್ನು ಮರು ಪ್ರತಿಷ್ಠಾಪಿಸುವ ಬಯಕೆಯ ಕನಸು ಕಂಡು ಇದರಿಂದಾಗಿ ಹಲವು ಬಾರಿ ಹಂಪಿಗೆ ಭೇಟಿ ಕೊಟ್ಟು ಅಲ್ಲಿನ ವ್ಯವಸ್ಥೆಗಳೆಲ್ಲವನ್ನೂ ಮನದಟ್ಟು ಮಾಡಿಕೊಂಡು ದೂರದೃಷ್ಠಿಯಿಂದ ಬೆಂಗಳೂರು ಮಹಾನಗರವನ್ನು ನಿರ್ಮಿಸಿದರು ಎಂದು ಸವಿಸ್ತರವಾಗಿ ತಿಳಿಸಿದರು.
ಕಾರ್ಯಕ್ರಮದಲ್ಲಿ ಕಂಪ್ಲಿಯ ಜೆ.ಚಿನ್ಮಯ್ ತಂಡದಿAದ ಸುಗಮ ಸಂಗೀತ ಗಾಯನ ಪ್ರಸ್ತುತ ಪಡಿಸಿದರು.
ಈ ಸಂದರ್ಭದಲ್ಲಿ ಸಹಾಯಕ ಆಯುಕ್ತ ಪಿ.ಪ್ರಮೋದ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಸೇರಿದಂತೆ ಇಲಾಖೆಯ ಸಿಬ್ಬಂದಿಗಳು ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿ, ವಿದ್ಯಾರ್ಥಿನಿಯರು ಇನ್ನಿತರರು ಉಪಸ್ಥಿತರಿದ್ದರು.
--------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)








ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ